AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ತಿಂಗಳು ಜೈಲು ಶಿಕ್ಷೆ: ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ ದೆಹಲಿ ಹೈಕೋರ್ಟ್ ಬಿಗ್ ಶಾಕ್

ಚೆಕ್ ಬೌನ್ಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಾಲಿವುಡ್ ಖ್ಯಾತ ಹಾಸ್ಯ ನಟ ರಾಜ್‌ಪಾಲ್ ಯಾದವ್‌ಗೆ ದೆಹಲಿ ಹೈಕೋರ್ಟ್ 3 ತಿಂಗಳ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ನಟನಿಗೆ ನ್ಯಾಯಾಲಯವು 2 ತಿಂಗಳ ಕಾಲಾವಕಾಶ ನೀಡಿದೆ.

3 ತಿಂಗಳು ಜೈಲು ಶಿಕ್ಷೆ: ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ ದೆಹಲಿ ಹೈಕೋರ್ಟ್ ಬಿಗ್ ಶಾಕ್
Rajpal YadavImage Credit source: PTI
ಮದನ್​ ಕುಮಾರ್​
|

Updated on:Jul 10, 2026 | 3:25 PM

Share

ಮುಖ್ಯಾಂಶಗಳು

  • ನಟ ರಾಜ್‌ಪಾಲ್ ಯಾದವ್‌ಗೆ ದೆಹಲಿ ಹೈಕೋರ್ಟ್ 3 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.
  • ದೂರುದಾರ ಕಂಪನಿಗೆ ಕೋಟ್ಯಂತರ ರೂ. ದಂಡ ಪಾವತಿಸುವಂತೆ ನ್ಯಾಯಾಲಯ ಆದೇಶಿಸಿದೆ.
  • ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು 2 ತಿಂಗಳ ಕಾಲಾವಕಾಶ ಇದೆ.

ನವದೆಹಲಿ: ಬಾಲಿವುಡ್​ನ ಖ್ಯಾತ ಹಾಸ್ಯ ನಟ ರಾಜ್‌ಪಾಲ್ ಯಾದವ್ ಅವರಿಗೆ ದೆಹಲಿ ಹೈಕೋರ್ಟ್ ಭಾರಿ ಆಘಾತ ನೀಡಿದೆ. ಹಲವು ಚೆಕ್ ಬೌನ್ಸ್ (Cheque Bounce) ಪ್ರಕರಣಗಳಿಗೆ ಸಂಬಂಧಿಸಿದಂತೆ ನಟನಿಗೆ ವಿಧಿಸಲಾಗಿದ್ದ ಮೂರು ತಿಂಗಳ ಜೈಲು (Jail) ಶಿಕ್ಷೆಯನ್ನು ಹೈಕೋರ್ಟ್ ಎತ್ತಿಹಿಡಿದಿದೆ. ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರಿದ್ದ ಪೀಠವು ಈ ತೀರ್ಪು ನೀಡಿದ್ದು, ರಾಜ್‌ಪಾಲ್ ಯಾದವ್ (Rajpal Yadav) ವಿರುದ್ಧದ 7 ಪ್ರಕರಣಗಳಲ್ಲಿ ತಲಾ 3 ತಿಂಗಳ ಸಾದಾ ಜೈಲು ಶಿಕ್ಷೆಯನ್ನು ವಿಧಿಸಿದೆ. ಎಲ್ಲಾ ಶಿಕ್ಷೆಗಳು ಏಕಕಾಲದಲ್ಲಿ ಚಾಲ್ತಿಯಲ್ಲಿರಲಿವೆ ಎಂದು ಕೋರ್ಟ್ ತಿಳಿಸಿದೆ. ಇದರೊಂದಿಗೆ, ಪ್ರತಿ ಪ್ರಕರಣದಲ್ಲೂ ದೂರುದಾರರಿಗೆ ತಲಾ 1.05 ಕೋಟಿ ರೂಪಾಯಿ ಪಾವತಿಸುವಂತೆ ನಟನಿಗೆ ಆದೇಶಿಸಲಾಗಿದೆ.

ಪತ್ನಿಗೂ ದಂಡದ ಬಿಸಿ:

ಕೇವಲ ರಾಜ್‌ಪಾಲ್ ಯಾದವ್ ಮಾತ್ರವಲ್ಲದೆ, ಅವರ ಪತ್ನಿ ರಾಧಾ ಯಾದವ್ ಅವರಿಗೂ ಕೋರ್ಟ್ ಭಾರಿ ಮೊತ್ತದ ದಂಡ ವಿಧಿಸಿದೆ. ಪ್ರತಿ ಪ್ರಕರಣದಲ್ಲೂ ದೂರುದಾರರಿಗೆ ತಲಾ 5 ಕೋಟಿ 51 ಲಕ್ಷದ 380 ರೂಪಾಯಿಗಳನ್ನು ಪಾವತಿಸುವಂತೆ ರಾಧಾ ಯಾದವ್ ಅವರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಹಿಂದೆ ರಾಜ್‌ಪಾಲ್ ಯಾದವ್ ಪಾವತಿಸಿದ್ದ 2.25 ಕೋಟಿ ರೂಪಾಯಿಗಳನ್ನು ಬಾಕಿ ಮೊತ್ತದಲ್ಲಿ ಕಡಿತಗೊಳಿಸಿ ಹೊಂದಾಣಿಕೆ ಮಾಡಲಾಗುವುದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಜೈಲಿಗೆ ಹೋಗಲು ಸಿದ್ಧ ಎಂದಿದ್ದ ನಟ

ಸಂಧಾನದ ಮೂಲಕ ಹಣ ಪಾವತಿಸುವುದಾಗಿ ರಾಜ್‌ಪಾಲ್ ಯಾದವ್ ಕೋರ್ಟ್‌ಗೆ ಈ ಹಿಂದೆ ಹಲವು ಬಾರಿ ಭರವಸೆ ನೀಡಿದ್ದರು. ಸೆಟಲ್‌ಮೆಂಟ್ ಮಾಡಿಕೊಳ್ಳಲು ನ್ಯಾಯಾಲಯವು ಅವರಿಗೆ ಹತ್ತಾರು ಬಾರಿ ಅವಕಾಶಗಳನ್ನು ನೀಡಿತ್ತಾದರೂ, ಅವರು ತಮ್ಮ ಮಾತನ್ನು ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದರು. ವಿಚಾರಣೆಯ ಕೊನೆಯ ಹಂತದಲ್ಲಿ, ದೂರುದಾರ ಕಂಪನಿಯಾದ ‘ಮೆಸರ್ಸ್ ಮುರಳಿ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್’ಗೆ ಇನ್ನು ಮುಂದೆ ಯಾವುದೇ ಹಣ ಪಾವತಿಸಲು ಸಾಧ್ಯವಿಲ್ಲ, ಬದಲಿಗೆ ತಾವು ಜೈಲಿಗೆ ಹೋಗಲು ಸಿದ್ಧ ಎಂದು ರಾಜ್‌ಪಾಲ್ ಯಾದವ್ ಹೇಳಿಕೆ ನೀಡಿದ್ದರು ಎನ್ನಲಾಗಿದೆ.

ಸುಪ್ರೀಂ ಕೋರ್ಟ್ ಮೆಟ್ಟಿಲೇರಲು 2 ತಿಂಗಳ ಕಾಲಾವಕಾಶ:

ಸದ್ಯ ದೆಹಲಿ ಹೈಕೋರ್ಟ್ ನೀಡಿರುವ ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ರಾಜ್‌ಪಾಲ್ ಯಾದವ್ ಅವರಿಗೆ ನ್ಯಾಯಾಲಯವು 2 ತಿಂಗಳ ಕಾಲಾವಕಾಶ ನೀಡಿದೆ. ಅಲ್ಲಿಯವರೆಗೆ ಅವರ ಶಿಕ್ಷೆ ಜಾರಿಗೆ ತಡೆ ಇರಲಿದ್ದು, ಸುಪ್ರೀಂ ಕೋರ್ಟ್‌ನಲ್ಲಿ ಅವರಿಗೆ ಪರಿಹಾರ ಸಿಗಲಿದೆಯೇ ಅಥವಾ ಜೈಲು ಪಾಲಾಗಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಜೈಲಿನಲ್ಲಿ ಧೂಮಪಾನಕ್ಕೆ ಪ್ರತ್ಯೇಕ ಜಾಗ ಬೇಕು: ರಾಜ್​ಪಾಲ್ ಯಾದವ್ ಬೇಡಿಕೆ

‘ಯಾವುದೇ ವ್ಯಕ್ತಿ ಒಂದು ನಿರ್ದಿಷ್ಟ ರಂಗ ಅಥವಾ ಸಿನಿಮಾ ಉದ್ಯಮಕ್ಕೆ ಸೇರಿದವನು ಎಂಬ ಕಾರಣಕ್ಕೆ ನ್ಯಾಯಾಲಯವು ಅವರಿಗಾಗಿ ವಿಶೇಷ ರಿಯಾಯಿತಿ ಅಥವಾ ನಿಯಮಗಳನ್ನು ಸೃಷ್ಟಿಸಲು ಸಾಧ್ಯವಿಲ್ಲ’ ಎಂದು ಈ ಹಿಂದೆ ಕೋರ್ಟ್ ಕಠಿಣವಾಗಿ ಹೇಳಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:25 pm, Fri, 10 July 26

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ