Rakhi Sawant Detained: ಕಾಂಟ್ರವರ್ಸಿ ನಟಿ ರಾಖಿ ಸಾವಂತ್​ ಅರೆಸ್ಟ್​; ಶೆರ್ಲಿನ್​ ಚೋಪ್ರಾ ಹಾಕಿದ್ದ ಕೇಸ್​ನಲ್ಲಿ ಹೆಚ್ಚಿತು ಸಂಕಷ್ಟ

Rakhi Sawant | Sherlyn Chopra: 2022ರ ನವೆಂಬರ್​ನಲ್ಲಿ ರಾಖಿ ಸಾವಂತ್​ ವಿರುದ್ಧ ಶೆರ್ಲಿನ್​ ಚೋಪ್ರಾ ದೂರು ದಾಖಲಿಸಿದ್ದರು. ಆ ಸಂಬಂಧ ಮುಂಬೈ ಪೊಲೀಸರು ಈಗ ರಾಖಿ ಸಾವಂತ್​ ಅವರನ್ನು ವಶಕ್ಕೆ ಪಡೆದಿದ್ದಾರೆ.

Rakhi Sawant Detained: ಕಾಂಟ್ರವರ್ಸಿ ನಟಿ ರಾಖಿ ಸಾವಂತ್​ ಅರೆಸ್ಟ್​; ಶೆರ್ಲಿನ್​ ಚೋಪ್ರಾ ಹಾಕಿದ್ದ ಕೇಸ್​ನಲ್ಲಿ ಹೆಚ್ಚಿತು ಸಂಕಷ್ಟ
ರಾಖಿ ಸಾವಂತ್, ಶೆರ್ಲಿನ್ ಚೋಪ್ರಾ
Follow us
TV9 Web
| Updated By: ಮದನ್​ ಕುಮಾರ್​

Updated on:Jan 19, 2023 | 3:02 PM

ಬಾಲಿವುಡ್​ ನಟಿ ರಾಖಿ ಸಾವಂತ್​ (Rakhi Sawant) ಅವರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ. ಮುಂಬೈ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ನಟಿ ಶೆರ್ಲಿನ್​ ಚೋಪ್ರಾ (Sherlyn Chopra) ಅವರು ನೀಡಿದ್ದ ದೂರಿನ ಅನ್ವಯ ರಾಖಿ ಸಾವಂತ್​ ಅವರ ಬಂಧನ ಆಗಿದೆ ಎಂದು ವರದಿ ಆಗಿದೆ. ಈ ವಿಚಾರವನ್ನು ಶೆರ್ಲಿನ್​ ಚೋಪ್ರಾ ಅವರು ಟ್ವಿಟರ್​ ಮೂಲಕ ಬಹಿರಂಗಪಡಿಸಿದ್ದಾರೆ. ರಾಖಿ ಸಾವಂತ್​ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ ಎಂದು ಕೂಡ ಶೆರ್ಲಿನ್​ ಚೋಪ್ರಾ ಟ್ವೀಟ್​ ಮಾಡಿದ್ದಾರೆ. ರಾಖಿ ಸಾವಂತ್ ಅವರ ವೈಯಕ್ತಿಕ ಬದುಕಿನಲ್ಲಿ ಅನೇಕ ವಿವಾದಗಳು ಎದುರಾಗುತ್ತಿವೆ. ಆದಿಲ್​ ಖಾನ್​ ಜೊತೆಗಿನ ಮದುವೆ ಕುರಿತಂತೆ ಅವರು ಇತ್ತೀಚೆಗೆ ಕಣ್ಣೀರು ಹಾಕಿದ್ದರು. ಇನ್ನೇನು ಎಲ್ಲವೂ ಸರಿ ಆಯಿತು ಎನ್ನುವಾಗಲೇ ಅವರ ಬಂಧನವಾಗಿದೆ.

ಮೀ ಟೂ ಕೇಸ್​ನಲ್ಲಿ ಶೆರ್ಲಿನ್​ ಚೋಪ್ರಾ-ರಾಖಿ ಸಾವಂತ್​ ಕಿತ್ತಾಟ:

ಅಶ್ಲೀಲ ಸಿನಿಮಾ ನಿರ್ಮಾಣದಲ್ಲಿ ಶೆರ್ಲಿನ್​ ಚೋಪ್ರಾ ಅವರು ತೊಡಗಿಕೊಂಡಿದ್ದರು ಎಂಬ ಆರೋಪ ಇದೆ. ಹಾಗೆಯೇ ಅವರು ಈ ಹಿಂದೆ ನಿರ್ದೇಶಕ ಸಾಜಿದ್​ ಖಾನ್​ ಮೇಲೆ ಮೀ ಟೂ ಆರೋಪ ಹೊರಿಸಿದ್ದರು. ಸಾಜಿದ್​ ಖಾನ್​ ಅವರನ್ನು ಸಲ್ಮಾನ್​ ಖಾನ್​ ರಕ್ಷಿಸುತ್ತಿದ್ದಾರೆ ಎಂದು ಶೆರ್ಲಿನ್​ ಚೋಪ್ರಾ ಹೇಳಿದ್ದರು. ಈ ವಿಚಾರದಲ್ಲಿ ತಲೆ ಹಾಕಿದ್ದ ರಾಖಿ ಸಾವಂತ್​ ಅವರು ಶೆರ್ಲಿನ್​ ವಿರುದ್ಧ ಮಾತನಾಡಿದ್ದರು. ಆಗ ರಾಖಿ ವಿರುದ್ಧ ಶೆರ್ಲಿನಾ ಚೋಪ್ರಾ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಇದನ್ನೂ ಓದಿ: Rakhi Sawant Marriage: ರಾಖಿ ಸಾವಂತ್​ ಜೊತೆ ಮದುವೆ ಆಗಿದ್ದು ನಿಜ ಎಂದು ಒಪ್ಪಿಕೊಂಡ ಆದಿಲ್ ಖಾನ್​

ಡಾನ್ಸ್​ ಅಕಾಡೆಮಿ ಶುರು ಮಾಡಲು ಹೊರಟಿದ್ದ ರಾಖಿ ಸಾವಂತ್:

ನಟಿ ರಾಖಿ ಸಾವಂತ್​ ಅವರು ಪ್ರಿಯಕರ ಆದಿಲ್​ ಖಾನ್​ ಜೊತೆ ಮದುವೆ ಆಗಿರುವ ವಿಚಾರ ಇತ್ತೀಚೆಗೆ ಬಹಿರಂಗ ಆಯಿತು. ಲೇಟೆಸ್ಟ್​ ನ್ಯೂಸ್​ ಏನೆಂದರೆ ಪತಿ ಜೊತೆ ಸೇರಿ ಅವರು ಒಂದು ಡ್ಯಾನ್ಸ್​ ಅಕಾಡೆಮಿ ಶುರು ಮಾಡಲು ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಜ.19ರ ಮಧ್ಯಾಹ್ನ 3 ಗಂಟೆ ಅದು ಉದ್ಘಾಟನೆಗೊಳ್ಳಬೇಕಿತ್ತು. ಆದರೆ ಅದಕ್ಕೂ ಮುನ್ನವೇ ಅವರ ಬಂಧನ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:44 pm, Thu, 19 January 23

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ