AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rakhi Sawant: ತಪ್ಪಾಗಿ ನಮಾಜ್​ ಮಾಡಿದ ರಾಖಿ ಸಾವಂತ್​; ವಿಡಿಯೋ ವೈರಲ್​ ಆದ ಬಳಿಕ ಹಿಗ್ಗಾಮುಗ್ಗಾ ಟ್ರೋಲ್​

Rakhi Sawant Namaz Video: ರಾಖಿ ಸಾವಂತ್​ ಅವರು ಇಸ್ಲಾಂ ಧರ್ಮವನ್ನು ಒಪ್ಪಿಕೊಂಡಿದ್ದಾರೆ. ನಮಾಜ್​ ಮಾಡಿದ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ. ಆದರೆ ಅದಕ್ಕೆ ವಿರೋಧ ವ್ಯಕ್ತವಾಗಿದೆ.

Rakhi Sawant: ತಪ್ಪಾಗಿ ನಮಾಜ್​ ಮಾಡಿದ ರಾಖಿ ಸಾವಂತ್​; ವಿಡಿಯೋ ವೈರಲ್​ ಆದ ಬಳಿಕ ಹಿಗ್ಗಾಮುಗ್ಗಾ ಟ್ರೋಲ್​
ರಾಖಿ ಸಾವಂತ್
ಮದನ್​ ಕುಮಾರ್​
|

Updated on:Feb 22, 2023 | 4:38 PM

Share

ನಟಿ ರಾಖಿ ಸಾವಂತ್​ (Rakhi Sawant) ಅವರು ತಮ್ಮ ಸಂಸಾರದ ಗಲಾಟೆಯ ಕಾರಣದಿಂದ ಆಗಾಗ ಸುದ್ದಿ ಆಗುತ್ತಾ ಇರುತ್ತಾರೆ. ಕಿರುತೆರೆ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡು ಫೇಮಸ್​ ಆಗಿದ್ದ ಅವರ ಸುತ್ತ ಈಗ ವಿವಾದಗಳು ಹೆಚ್ಚಾಗಿವೆ. ಮೈಸೂರು ಮೂಲದ ಆದಿಲ್​ ಖಾನ್​ (Adil Khan) ಜೊತೆ ರಾಖಿ ಸಾವಂತ್​ ಮದುವೆ ಆಗಿದೆ. ಆ ಬಳಿಕ ಅವರು ಇಸ್ಲಾಂ ಧರ್ಮಕ್ಕೆ ಮತಾಂತರ ಆಗಿದ್ದಾರೆ. ಫಾತೀಮಾ ಎಂದು ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ, ನಮಾಜ್ ಕೂಡ ಮಾಡುತ್ತಿದ್ದಾರೆ. ಆದರೆ ಸರಿಯಾಗಿ ನಮಾಜ್​ (Namaz) ಮಾಡಿಲ್ಲ ಎಂಬ ಕಾರಣಕ್ಕೆ ಅವರನ್ನು ಟ್ರೋಲ್​ ಮಾಡಲಾಗಿದೆ. ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಆದಿಲ್​ ಖಾನ್​ ಮತ್ತು ರಾಖಿ ಸಾವಂತ್​ ಅವರು ಮದುವೆ ಆದ ವಿಚಾರ ಒಂದಷ್ಟು ದಿನಗಳ ಕಾಲ ಗೌಪ್ಯವಾಗಿತ್ತು. ಆದರೆ ನಂತರ ರಾಖಿ ಸಾವಂತ್ ಅವರೇ ಸುದ್ದಿ ಬ್ರೇಕ್​ ಮಾಡಿದರು. ತಮ್ಮ ಮದುವೆ ನೋಂದಣಿಯ ಪ್ರಮಾಣಪತ್ರವನ್ನೂ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡರು. ಅದರಲ್ಲಿ ಫಾತೀಮಾ ಎಂದು ರಾಖಿ ಸಾವಂತ್​ ಸಹಿ ಮಾಡಿರುವುದು ಬೆಳಕಿಗೆ ಬಂದಿತ್ತು. ನಂತರ ಮಾಧ್ಯಮಗಳ ಮುಂದೆ ಮಾತನಾಡಿದ್ದ ಅವರು ಇಸ್ಲಾಂ ಧರ್ಮವನ್ನು ಒಪ್ಪಿಕೊಂಡಿರುವುದಾಗಿ ತಿಳಿಸಿದರು.

ಇದನ್ನೂ ಓದಿ: Rakhi Sawant: ‘ನಾನು ಹಿಂದೂ ಅಂತ ಆದಿಲ್​ ಖಾನ್​ ಮನೆಯವರು ನನ್ನ ಸೇರಿಸಿಕೊಳ್ತಿಲ್ಲ’; ಮೈಸೂರಲ್ಲಿ ರಾಖಿ ಸಾವಂತ್​ ಕಣ್ಣೀರು

ಇದನ್ನೂ ಓದಿ
Image
Rakhi Sawant Detained: ಕಾಂಟ್ರವರ್ಸಿ ನಟಿ ರಾಖಿ ಸಾವಂತ್​ ಅರೆಸ್ಟ್​; ಶೆರ್ಲಿನ್​ ಚೋಪ್ರಾ ಹಾಕಿದ್ದ ಕೇಸ್​ನಲ್ಲಿ ಹೆಚ್ಚಿತು ಸಂಕಷ್ಟ
Image
Rakhi Sawant Marriage: ರಾಖಿ ಸಾವಂತ್​ ಜೊತೆ ಮದುವೆ ಆಗಿದ್ದು ನಿಜ ಎಂದು ಒಪ್ಪಿಕೊಂಡ ಆದಿಲ್ ಖಾನ್​
Image
Rakhi Sawant: ಫಾತಿಮಾ ಅಂತ ಹೆಸರು ಬದಲಿಸಿಕೊಂಡ ರಾಖಿ ಸಾವಂತ್​; ಆದಿಲ್​​ ಜತೆಗಿನ ಶಾದಿ ರಹಸ್ಯ ಬಹಿರಂಗ
Image
Rakhi Sawant: ಮತ್ತೊಂದು ವಿವಾಹ ಆದ ರಾಖಿ ಸಾವಂತ್; ಆದಿಲ್ ಜತೆಗಿನ ಮದುವೆ ಫೋಟೋ ವೈರಲ್

ಇಸ್ಲಾಂ ಧರ್ಮಕ್ಕೆ ಮತಾಂತರ ಆಗಿರುವುದರಿಂದ ರಾಖಿ ಸಾವಂತ್​ ಅವರು ನಮಾಜ್​ ಮಾಡಿ, ಅದರ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಆದರೆ ಅವರು ನೈಲ್​ ಪಾಲಿಶ್​ ಹಚ್ಚಿಕೊಂಡು ನಮಾಜ್​ ಮಾಡಿದ್ದನ್ನು ನೆಟ್ಟಿಗರು ವಿರೋಧಿಸಿದ್ದಾರೆ. ‘ನೀವು ನಿಜವಾಗಿ ಪ್ರಾರ್ಥನೆ ಮಾಡುವುದೇ ಹೌದಾದರೆ ಅದಕ್ಕೆ ಗೌರವ ನೀಡಿ. ಜಗತ್ತಿಗೆ ತೋರಿಸುವ ಸಲುವಾಗಿ ವಿಡಿಯೋ ಮಾಡಬೇಡಿ. ಅದು ನಾಟಕದ ರೀತಿ ಕಾಣುತ್ತದೆ. ನೀವು ನಿಮ್ಮ ನೋವುಗಳನ್ನು ಹಂಚಿಕೊಳ್ಳಬೇಕಾಗಿರುವುದು ದೇವರ ಜೊತೆ’ ಎಂಬ ಕಮೆಂಟ್​ ಕೂಡ ಬಂದಿದೆ.

ಇದನ್ನೂ ಓದಿ  ರಾಖಿ ಸಾವಂತ್ ಪತಿ ವಿರುದ್ಧ ಮತ್ತೊಂದು FIR ದಾಖಲು: ಅತ್ಯಾಚಾರ ಕೇಸ್​ ದಾಖಲಿಸಿದ ಇರಾನಿ ಮೂಲದ ಯುವತಿ

ನೆಟ್ಟಿಗರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಖಿ ಸಾವಂತ್​ ಅವರು ನಮಾಜ್​ ವಿಡಿಯೋವನ್ನು ಡಿಲೀಟ್​ ಮಾಡಿದ್ದಾರೆ. ಪ್ರಸ್ತುತ ಅವರು ಮೈಸೂರಿಗೆ ಬಂದು ನ್ಯಾಯಾಲಯದ ಮೆಟ್ಟಲು ಹತ್ತಿದ್ದಾರೆ. ಅದಕ್ಕೂ ಮುನ್ನ ಆದಿಲ್ ಖಾನ್​ ಕುಟುಂಬದವರನ್ನು ರಾಖಿ ಭೇಟಿ ಆಗಿದ್ದಾರೆ. ಆದರೆ ಹಿಂದೂ ಎಂಬ ಕಾರಣಕ್ಕೆ ಆದಿಲ್​ ಮನೆಯವರು ತಮ್ಮನ್ನು ಸೇರಿಸಿಕೊಳ್ಳುತ್ತಿಲ್ಲ ಎಂದು ಮೈಸೂರಿನಲ್ಲಿ ಮಾಧ್ಯಮಗಳ ಎದುರು ರಾಖಿ ಸಾವಂತ್ ಕಣ್ಣೀರು ಸುರಿಸಿದ್ದಾರೆ.

ಆದಿಲ್​ ಖಾನ್​ಗೆ ಬೇರೆ ಯುವತಿಯ ಜೊತೆ ಅಫೇರ್​ ಇದೆ ಎಂಬ ಕಾರಣದಿಂದ ರಾಖಿ ಸಾವಂತ್​ ಗರಂ ಆಗಿದ್ದಾರೆ. ಅಲ್ಲದೇ ತಮ್ಮ ಬಳಿಕ ಇದ್ದ ಕೋಟ್ಯಂತರ ರೂಪಾಯಿ ಹಣವನ್ನೂ ಆದಿಲ್​ ಖಾನ್​ ತೆಗೆದುಕೊಂಡಿದ್ದಾನೆ ಎಂದು ಅವರು ಆರೋಪಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:16 pm, Wed, 22 February 23

ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ