AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕುಲ್ ಪ್ರೀತ್ ಸಿಂಗ್ ಮದುವೆ ಆಗುತ್ತಿರೋ ಹೋಟೆಲ್​ ಎಷ್ಟು ದುಬಾರಿ ಗೊತ್ತಾ?

ಗೋವಾದ ಐಟಿಸಿ ಗ್ರ್ಯಾಂಡ್ ಹೋಟೆಲ್​ನಲ್ಲಿ ಬರೋಬ್ಬರಿ 246 ರೂಂಗಳು ಇವೆ. ಇದು ಐಷಾರಾಮಿ ಹೋಟೆಲ್ ಆಗಿದೆ. 45 ಎಕರೆ ಭೂಮಿಯಲ್ಲಿ ಹರಡಿರುವ ಈ ಹೋಟೆಲ್ ಅತ್ಯಂತ ಶಾಂತ ಪ್ರದೇಶದಲ್ಲಿ ಇದೆ. ಜಾಕಿ ಮತ್ತು ರಕುಲ್ ಈ ಹೋಟೆಲ್ ಆಯ್ಕೆ ಮಾಡಿದ ಬಳಿಕ ಅದರ ಬಗ್ಗೆ ತಿಳಿಯುವ ಕುತೂಹಲ ಅನೇಕರಿಗೆ ಮೂಡಿದೆ.

ರಕುಲ್ ಪ್ರೀತ್ ಸಿಂಗ್ ಮದುವೆ ಆಗುತ್ತಿರೋ ಹೋಟೆಲ್​ ಎಷ್ಟು ದುಬಾರಿ ಗೊತ್ತಾ?
ರಕುಲ್-ಜಾಕಿ
 ಶ್ರೀಲಕ್ಷ್ಮೀ ಎಚ್
| Edited By: |

Updated on:Feb 15, 2024 | 2:53 PM

Share

ನಟಿ ರಕುಲ್ ಪ್ರೀತ್ ಸಿಂಗ್ (Rakul Preet Singh) ಮತ್ತು ನಿರ್ಮಾಪಕ ಜಾಕಿ ಭಗ್ನಾನಿ ಫೆಬ್ರವರಿ 21ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಈ ಮೊದಲು ವಿದೇಶದಲ್ಲಿ ಇವರು ಡೆಸ್ಟಿನೇಶನ್ ವೆಡ್ಡಿಂಗ್ ಆಗಲು ನಿರ್ಧರಿಸಿದ್ದರು. ಆದರೆ ಅದೇ ಸಮಯಕ್ಕೆ ಮದುವೆ ಸ್ಥಳವನ್ನು ಬದಲಾಯಿಸಿ ಗೋವಾದ ಐಷಾರಾಮಿ ಹೋಟೆಲ್​ನಲ್ಲಿ ಮದುವೆಯಾಗುವ ನಿರ್ಧಾರಕ್ಕೆ ಇವರು ಬಂದಿದ್ದಾರೆ. ರಕುಲ್ ಮತ್ತು ಜಾಕಿ ದಕ್ಷಿಣ ಗೋವಾದ ಐಟಿಸಿ ಗ್ರ್ಯಾಂಡ್‌ ಹೋಟೆಲ್​ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಕೆಲವೇ ಅತಿಥಿಗಳು ಮತ್ತು ಕುಟುಂಬದವರು ಈ ಮದುವೆಗೆ ಹಾಜರಿ ಹಾಕುತ್ತಿದ್ದಾರೆ. ಈ ಹೋಟೆಲ್ ಬಾಡಿಗೆ ಅನೇಕರಿಗೆ ಅಚ್ಚರಿ ತಂದಿದೆ.

ಐಟಿಸಿ ಗ್ರ್ಯಾಂಡ್ ಹೋಟೆಲ್​ನಲ್ಲಿ ಬರೋಬ್ಬರಿ 246 ರೂಂಗಳು ಇವೆ. ಇದು ಐಷಾರಾಮಿ ಹೋಟೆಲ್. 45 ಎಕರೆ ಭೂಮಿಯಲ್ಲಿ ಹರಡಿರುವ ಈ ಹೋಟೆಲ್ ಅತ್ಯಂತ ಶಾಂತ ಪ್ರದೇಶದಲ್ಲಿದೆ. ಜಾಕಿ ಮತ್ತು ರಕುಲ್ ಈ ಹೋಟೆಲ್ ಆಯ್ಕೆ ಮಾಡಿದ ಬಳಿಕ ಅದರ ಬಗ್ಗೆ ತಿಳಿಯುವ ಕುತೂಹಲ ಅನೇಕರಿಗೆ ಮೂಡಿದೆ.

‘ಮೇಕ್ ಮೈ ಟ್ರಿಪ್’ ಪ್ರಕಾರ ಗೋವಾದ ಐಟಿಸಿ ಗ್ರ್ಯಾಂಡ್ ಹೋಟೆಲ್‌ನಲ್ಲಿ ಪ್ರತಿ ರೂಂನ ಬೆಲೆ ಒಂದು ರಾತ್ರಿಗೆ 19 ಸಾವಿರ ರೂಪಾಯಿ ಇಂದ ಆರಂಭ ಆಗಿ 75 ಸಾವಿರ ರೂಪಾಯಿವರೆಗೆ ಇದೆ. ಇದರ ಜೊತೆಗೆ ಒಂದಷ್ಟು ತೆರಿಗೆಗಳನ್ನು ಕೂಡ ಇದು ಒಳಗೊಂಡಿದೆ. ಗೋವಾದ ಈ ಹೋಟೆಲ್‌ನಲ್ಲಿ ಮದುವೆಗೆ  ಎಲ್ಲಾ ಸಿದ್ಧತೆಗಳನ್ನು ಏರ್ಪಡಿಸಲಾಗಿದೆ. ಮೂರು ದಿನಗಳ ಕಾಲ ಗೋವಾದಲ್ಲಿ ಮದುವೆ ನಡೆಯಲಿದೆ.

ಫೆಬ್ರವರಿ 19ರಿಂದ ವಿವಾಹ ಪೂರ್ವ ಕಾರ್ಯಕ್ರಮಗಳು ಪ್ರಾರಂಭವಾಗಲಿವೆ. ಈ ಮದುವೆ ಸಂಪೂರ್ಣ ಪರಿಸರ ಸ್ನೇಹಿಯಾಗಿ ಇರಲಿದೆ. ರಕುಲ್ ಮತ್ತು ಜಾಕಿ ಯಾವುದೇ ಅತಿಥಿಗೆ ಪ್ರಿಂಟ್ ಮಾಡಿದ ಮದುವೆ ಪ್ರಮಾಣಪತ್ರವನ್ನು ನೀಡಿಲ್ಲ. ಎಲ್ಲವೂ ಡಿಜಿಟಲ್ ಇನ್ವಿಟೇಷನ್ ಆಗಿದೆ. ಅದೇ ರೀತಿ ಮದುವೆ ಸ್ಥಳದಲ್ಲಿ ಪಟಾಕಿ ಸಿಡಿಸುವುದಿಲ್ಲ ಎಂದು ಈವೆಂಟ್ ಮ್ಯಾನೇಜರ್ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಅವರು ಅನೇಕರಿಗೆ ಮಾದರಿ ಆಗಿದ್ದಾರೆ.

ರಕುಲ್ ಪ್ರೀತ್ ಸಿಂಗ್ ಮತ್ತು ಜಾಕಿ ಹಲವು ವರ್ಷಗಳಿಂದ ಒಟ್ಟಾಗಿ ಸಮಯ ಕಳೆಯುತ್ತಿದ್ದಾರೆ. ಇಬ್ಬರೂ ವಿವಿಧ ಪಾರ್ಟಿಗಳು ಮತ್ತು ಕಾರ್ಯಕ್ರಮಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಲಾಕ್‌ಡೌನ್ ಸಮಯದಲ್ಲಿ ಇಬ್ಬರೂ ಒಟ್ಟಿಗೆ ಇದ್ದರು ಎನ್ನಲಾಗಿದೆ.

ಇದನ್ನೂ ಓದಿ: ಒಂದು ಒಳ್ಳೆಯ ಕಾರಣಕ್ಕೆ ಮದುವೆಯಲ್ಲಿ ಆ ಪದ್ಧತಿಯೇ ಬೇಡ ಎಂದ ರಕುಲ್ ಪ್ರೀತ್ ಸಿಂಗ್

ರಕುಲ್ ಪ್ರೀತ್ ಸಿಂಗ್ ಕನ್ನಡದ ‘ಗಿಲ್ಲಿ’ ಚಿತ್ರದಿಂದ ಬಣ್ಣದ ಬದುಕು ಆರಂಭಿಸಿದರು. ನಂತರ ಹಿಂದಿ, ತೆಲುಗು ಭಾಷೆಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ಅವರ ಅಭಿಮಾನಿ ಬಳಗ ದಿನ ಕಳೆದಂತೆ ಹಿರಿದಾಗುತ್ತಲೇ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:42 pm, Thu, 15 February 24

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ