‘ಸಲ್ಮಾನ್ ಖಾನ್ ತಿರುಗೇಟು ನೀಡಬೇಕು’: ಲಾರೆನ್ಸ್ ಬಿಷ್ಣೋಯ್ ವಿಚಾರಕ್ಕೆ ತಲೆ ಹಾಕಿದ ಆರ್​ಜಿವಿ

ಮಾಜಿ ಸಚಿವ ಬಾಬಾ ಸಿದ್ಧಿಕಿ ಹತ್ಯೆ ಹಿಂದೆ ಗ್ಯಾಂಗ್​ಸ್ಟರ್​ ಲಾರೆನ್ಸ್ ಬಿಷ್ಣೋಯ್ ಕೈವಾಡ ಇದೆ ಎನ್ನಲಾಗಿದೆ. ಸಲ್ಮಾನ್​ ಖಾನ್​ಗೆ ಬಾಬಾ ಸಿದ್ಧಿಕಿ ಆಪ್ತವಾಗಿದ್ದರು. ಆ ಕಾರಣದಿಂದಲೇ ಹತ್ಯೆ ನಡೆಯಿತು ಎಂಬ ಮಾತು ಕೇಳಿಬಂದಿದೆ. ಈ ಎಲ್ಲ ವಿಚಾರಗಳ ಬಗ್ಗೆ ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ ಅವರು ತಮ್ಮ ಅನಿಸಿಕೆ ತಿಳಿಸಲು ಶುರು ಮಾಡಿದ್ದಾರೆ.

‘ಸಲ್ಮಾನ್ ಖಾನ್ ತಿರುಗೇಟು ನೀಡಬೇಕು’: ಲಾರೆನ್ಸ್ ಬಿಷ್ಣೋಯ್ ವಿಚಾರಕ್ಕೆ ತಲೆ ಹಾಕಿದ ಆರ್​ಜಿವಿ
ರಾಮ್​ ಗೋಪಾಲ್ ವರ್ಮಾ, ಸಲ್ಮಾನ್​ ಖಾನ್​, ಲಾರೆನ್ಸ್​ ಬಿಷ್ಣೋಯ್
Follow us
ಮದನ್​ ಕುಮಾರ್​
|

Updated on: Oct 16, 2024 | 10:09 PM

ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ತಮಗೆ ಸಂಬಂಧ ಇಲ್ಲದ ವಿಚಾರಗಳಿಗೂ ತಲೆ ಹಾಕುತ್ತಾರೆ. ಈಗ ಅವರು ಸಲ್ಮಾನ್​ ಖಾನ್​ ಮತ್ತು ಲಾರೆನ್ಸ್​ ಬಿಷ್ಣೋಯ್ ವಿಚಾರದಲ್ಲಿ ಬಗ್ಗೆ ತಮ್ಮ ಮೂಗು ತೂರಿಸಿದ್ದಾರೆ. ಸಿನಿಮಾದಲ್ಲಿ ಅಂಡರ್​ವರ್ಲ್ಡ್​ ಕಥೆಯನ್ನು ತೋರಿಸಿದ್ದ ರಾಮ್​ ಗೋಪಾಲ್​ ವರ್ಮಾ ಅವರು ಈಗ ರಿಯಲ್ ಅಂಡರ್​ವರ್ಲ್ಡ್​ ಮಂದಿಯ ಬಗ್ಗೆ ಮಾತನಾಡುತ್ತಿದ್ದಾರೆ. ಇದರಿಂದ ಗ್ಯಾಂಗ್​ಸ್ಟರ್​ ಲಾರೆನ್ಸ್ ಬಿಷ್ಣೋಯ್ ಕೋಪಗೊಳ್ಳುವ ಸಾಧ್ಯತೆ ಕೂಡ. ಆದರೆ ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳದೇ ಆರ್​ಜಿವಿ ಬಾಯಿಗೆ ಬಂದಂತೆ ‘ಎಕ್ಸ್​’ (ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.

ಇತ್ತೀಚೆಗಷ್ಟೇ ಬಾಬಾ ಸಿದ್ಧಿಕಿ ಅವರ ಹತ್ಯೆ ನಡೆಯಿತು. ಸಲ್ಮಾನ್​ ಖಾನ್​ ಜೊತೆ ಬಾಬಾ ಸಿದ್ಧಿಕಿ ಅವರಿಗೆ ಆಪ್ತ ಒಡನಾಟ ಇತ್ತು. ಆ ಕಾರಣದಿಂದಲೇ ಬಾಬಾ ಸಿದ್ಧಿಕಿಯನ್ನು ಗುಂಡಿಕ್ಕಿ ಕೊಲ್ಲಲಾಯಿತು ಎಂದು ಗ್ಯಾಂಗ್​ಸ್ಟರ್​ ಲಾರೆನ್ಸ್ ಬಿಷ್ಣೋಯ್ ಕಡೆಯವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲದೇ, ಸಲ್ಮಾನ್ ಖಾನ್​ಗೆ ಯಾರೆಲ್ಲ ಸಹಾಯ ಮಾಡುತ್ತಾರೋ ಅವರನ್ನು ಕೂಡ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ರಾಮ್​ ಗೋಪಾಲ್ ವರ್ಮಾ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

‘ಬಿಷ್ಣೋಯ್​ಗೆ ಸಲ್ಮಾನ್​ ಖಾನ್​ ಅವರು ತಿರುಗೇಟು ನೀಡಬೇಕು. ಇಲ್ಲದಿದ್ದರೆ ಇದು ಸ್ಟಾರ್​ ನಟನ ಹೇಡಿತನದ ರೀತಿ ಕಾಣುತ್ತದೆ. ಬಿಷ್ಣೋಯ್​ಗೆ ಹೋಲಿಸಿದರೆ ತಾವು ದೊಡ್ಡ ಸೂಪರ್​ ಹೀರೋ ಎಂಬುದನ್ನು ಸಲ್ಮಾನ್​ ಖಾನ್ ಅವರು ತಮ್ಮ ಅಭಿಮಾನಿಗಳಿಗಾಗಿ ಎದ್ದು ನಿಲ್ಲಬೇಕು’ ಎಂದು ರಾಮ್​ ಗೋಪಾಲ್ ವರ್ಮಾ ಅವರು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ಸಲ್ಮಾನ್ ಖಾನ್​ಗೆ ಸಹಾಯ ಮಾಡುವವರಿಗೆ ಎಚ್ಚರಿಕೆ ನೀಡಿದ ಬಾಬಾ ಸಿದ್ಧಿಕಿ ಹಂತಕರು

ಅಷ್ಟೇ ಅಲ್ಲದೇ ಲಾರೆನ್ಸ್ ಬಿಷ್ಣೋಯ್​ನ ವ್ಯಕ್ತಿತ್ವವನ್ನು ವಿಶ್ಲೇಷಣೆ ಮಾಡುವಂತಹ ಪೋಸ್ಟ್​ಗಳನ್ನು ಕೂಡ ರಾಮ್​ ಗೋಪಾಲ್ ವರ್ಮಾ ಮಾಡಿದ್ದಾರೆ. ಆತನ ರೂಪ ಚೆನ್ನಾಗಿದೆ ಎಂದು ಹೊಗಳಿದ್ದಾರೆ. ಅಲ್ಲದೇ ಆತನನ್ನು ಹಿಂದೂ ಡಾನ್ ಎಂದು ಕೂಡ ಕರೆದಿದ್ದಾರೆ. ರಣಬೀರ್ ಕಪೂರ್ ನಟನೆಯ ಅನಿಮಲ್​ಗಿಂತಲೂ ಕ್ರೂರಿ ಆತ ಎಂದು ಆರ್​ಜಿವಿ ಹೇಳಿದ್ದಾರೆ. ಅವರ ಪೋಸ್ಟ್​ಗೆ ಅನೇಕರು ಬೇರೆ ಬೇರೆ ರೀತಿಯಲ್ಲಿ ಕಮೆಂಟ್​ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್