AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಸೋಮವಾರವೂ ಬಾಕ್ಸ್ ಆಫೀಸ್‌ನಲ್ಲಿ ‘ರಾಮಾಯಣ’ ಅಬ್ಬರ; 1,400 ಕೋಟಿ ರೂ. ಕ್ಲಬ್ ಸೇರಿದ ಸಿನಿಮಾ

ಬಾಕ್ಸ್ ಆಫೀಸ್‌ನಲ್ಲಿ ‘ರಾಮಾಯಣ’ ಚಿತ್ರದ ನಾಗಾಲೋಟ ಮುಂದುವರಿದಿದ್ದು, ಬಿಡುಗಡೆಯಾದ 12 ದಿನಗಳಲ್ಲಿ ವಿಶ್ವದಾದ್ಯಂತ 1,437.25 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ಎರಡನೇ ಸೋಮವಾರ ಭಾರತದಲ್ಲಿ 32 ಕೋಟಿ ರೂಪಾಯಿ ನೆಟ್ ಗಳಿಕೆ ಕಾಣುವ ಮೂಲಕ ಸಿನಿಮಾ ಹೊಸ ದಾಖಲೆ ಬರೆದಿದ್ದು, ಎರಡು ಸಾವಿರ ಕೋಟಿ ಕ್ಲಬ್‌ನತ್ತ ದಾಪುಗಾಲಿಟ್ಟಿದೆ.

ಎರಡನೇ ಸೋಮವಾರವೂ ಬಾಕ್ಸ್ ಆಫೀಸ್‌ನಲ್ಲಿ ‘ರಾಮಾಯಣ’ ಅಬ್ಬರ; 1,400 ಕೋಟಿ ರೂ. ಕ್ಲಬ್ ಸೇರಿದ ಸಿನಿಮಾ
ರಾಮಾಯಣ
ರಾಜೇಶ್ ದುಗ್ಗುಮನೆ
|

Updated on:Nov 17, 2026 | 7:33 AM

Share

ಮುಖ್ಯಾಂಶಗಳು

  • ಎರಡನೇ ಸೋಮವಾರವೂ ಬಾಕ್ಸ್ ಆಫೀಸ್‌ನಲ್ಲಿ ಗಟ್ಟಿ ಹಿಡಿತ ಸಾಧಿಸಿದ 'ರಾಮಾಯಣ'
  • ಭಾಷಾವಾರು ಕಲೆಕ್ಷನ್: ಹಿಂದಿ ಬೆಲ್ಟ್‌ನಲ್ಲಿ ಅಬ್ಬರ, ದಕ್ಷಿಣದಲ್ಲೂ ಉತ್ತಮ ಗಳಿಕೆ
  • 1,437 ಕೋಟಿ ರೂ. ದಾಟಿದ ವರ್ಲ್ಡ್‌ವೈಡ್ ಗ್ರಾಸ್

ಬಾಕ್ಸ್ ಆಫೀಸ್‌ನಲ್ಲಿ ‘ರಾಮಾಯಣ’ ಚಿತ್ರದ ನಾಗಾಲೋಟ ಮುಂದುವರಿದಿದೆ. ಬಿಡುಗಡೆಯಾಗಿ 12 ದಿನಗಳನ್ನು ಪೂರೈಸಿರುವ ಈ ಸಿನಿಮಾ ವಿಶ್ವದಾದ್ಯಂತ 1,437.25 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡುವ ಮೂಲಕ ಹೊಸ ದಾಖಲೆ ಬರೆದಿದೆ. ಭಾನುವಾರದ ಭರ್ಜರಿ ಗಳಿಕೆಗೆ ಹೋಲಿಸಿದರೆ 12ನೇ ದಿನವಾದ ಸೋಮವಾರ ಕಲೆಕ್ಷನ್‌ನಲ್ಲಿ ಕೊಂಚ ಇಳಿಕೆಯಾಗಿದೆ. ಆದರೂ ಎರಡನೇ ಸೋಮವಾರದ ಮಟ್ಟಿಗೆ ಇದು ಅತ್ಯುತ್ತಮ ಗಳಿಕೆಯೇ ಆಗಿದ್ದು, ಸಿನಿಮಾದ ಗಟ್ಟಿ ಹಿಡಿತಕ್ಕೆ ಸಾಕ್ಷಿಯಾಗಿದೆ.

ಭಾರತದ ಬಾಕ್ಸ್ ಆಫೀಸ್‌ನಲ್ಲಿ 12ನೇ ದಿನ ‘ರಾಮಾಯಣ’ ಚಿತ್ರವು ಒಟ್ಟು 32 ಕೋಟಿ ರೂಪಾಯಿ ನೆಟ್ ಗಳಿಕೆ ಕಂಡಿದೆ. ಭಾನುವಾರ 75 ಕೋಟಿ ರೂಪಾಯಿ ಬಾಚಿಕೊಂಡಿದ್ದ ಈ ಚಿತ್ರ, ಸೋಮವಾರ ಶೇ. 57.3 ರಷ್ಟು ಡ್ರಾಪ್ ಕಂಡರೂ 32 ಕೋಟಿ ರೂಪಾಯಿ ಗಳಿಸಿರುವುದು ಸಾಮಾನ್ಯ ಮಾತಲ್ಲ. ವಾರದ ದಿನವಾದ ಸೋಮವಾರ ದೇಶದಾದ್ಯಂತ 22,395 ಶೋಗಳಲ್ಲಿ ಪ್ರದರ್ಶನ ಕಂಡಿರುವ ಈ ಸಿನಿಮಾ, ಪ್ರತಿ ಶೋಗೆ ಸರಾಸರಿ 14,289 ರೂಪಾಯಿ ಕಲೆಕ್ಷನ್ ಮಾಡಿದೆ.

ಭಾಷಾವಾರು ಗಳಿಕೆಯನ್ನು ನೋಡುವುದಾದರೆ, ಹಿಂದಿ ಬೆಲ್ಟ್‌ನಲ್ಲಿ ‘ರಾಮಾಯಣ’ ತನ್ನ ಪ್ರಾಬಲ್ಯವನ್ನು ಮುಂದುವರಿಸಿದೆ. 12ನೇ ದಿನ ಹಿಂದಿಯಲ್ಲಿ ಬರೋಬ್ಬರಿ 23.75 ಕೋಟಿ ರೂಪಾಯಿ ಗಳಿಕೆಯಾಗಿದೆ. ಉಳಿದಂತೆ ಮಲಯಾಳಂನಲ್ಲಿ 2.85 ಕೋಟಿ, ಕನ್ನಡದಲ್ಲಿ 2 ಕೋಟಿ, ತಮಿಳಿನಲ್ಲಿ 1.90 ಕೋಟಿ ಹಾಗೂ ತೆಲುಗಿನಲ್ಲಿ 1.50 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಈ ಮೂಲಕ ಭಾರತದಲ್ಲಿ ಚಿತ್ರದ ಒಟ್ಟು ನೆಟ್ ಗಳಿಕೆ 792.60 ಕೋಟಿ ರೂಪಾಯಿಗೆ ತಲುಪಿದ್ದು, ಒಟ್ಟು ಗ್ರಾಸ್ ಕಲೆಕ್ಷನ್ 947.25 ಕೋಟಿ ರೂಪಾಯಿ ಆಗಿದೆ. ಶೀಘ್ರದಲ್ಲೇ ಭಾರತದಲ್ಲಿ ಸಾವಿರ ಕೋಟಿ ಗ್ರಾಸ್ ಕ್ಲಬ್ ಸೇರಲಿದೆ.

ವಿದೇಶಿ ಮಾರುಕಟ್ಟೆಯಲ್ಲೂ ‘ರಾಮಾಯಣ’ ಸಿನಿಮಾದ ಕ್ರೇಜ್ ಕಡಿಮೆಯಾಗಿಲ್ಲ. 12ನೇ ದಿನ ಓವರ್‌ಸೀಸ್ ಬಾಕ್ಸ್ ಆಫೀಸ್‌ನಲ್ಲಿ 10 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡಿದೆ. ಇದರೊಂದಿಗೆ ವಿದೇಶಿ ಗಳಿಕೆಯ ಒಟ್ಟು ಮೊತ್ತ 490 ಕೋಟಿ ರೂಪಾಯಿಗೆ ಏರಿಕೆಯಾಗಿದೆ. ಭಾರತದ 947.25 ಕೋಟಿ ಹಾಗೂ ವಿದೇಶದ 490 ಕೋಟಿ ರೂಪಾಯಿ ಸೇರಿ ಚಿತ್ರದ ಒಟ್ಟು ವರ್ಲ್ಡ್‌ವೈಡ್ ಗ್ರಾಸ್ ಕಲೆಕ್ಷನ್ 1,437.25 ಕೋಟಿ ರೂಪಾಯಿ ತಲುಪಿದೆ.

ಇದನ್ನೂ ಓದಿ: ‘ರಾಮಾಯಣ’ ಕಲೆಕ್ಷನ್: ‘ಧುರಂಧರ್’, ‘ಆರ್‌ಆರ್‌ಆರ್’, ‘ಕೆಜಿಎಫ್ 2’ ದಾಖಲೆ ಧೂಳೀಪಟ

ಮೊದಲ ವಾರದಲ್ಲಿ (8 ದಿನಗಳಿಗೆ) ಭಾರತದಲ್ಲಿ 564.60 ಕೋಟಿ ರೂಪಾಯಿ ನಿವ್ವಳ ಗಳಿಕೆ ಕಂಡಿದ್ದ ಈ ಸಿನಿಮಾ, ಎರಡನೇ ವಾರದ ಕೇವಲ ನಾಲ್ಕು ದಿನಗಳಲ್ಲಿ 228 ಕೋಟಿ ರೂಪಾಯಿ ಬಾಚಿಕೊಂಡಿದೆ. ವೀಕೆಂಡ್ ಮುಗಿದು ಕೆಲಸದ ದಿನಗಳು ಆರಂಭವಾಗಿದ್ದರೂ ಪ್ರೇಕ್ಷಕರು ಚಿತ್ರಮಂದಿರದತ್ತ ಹೆಜ್ಜೆ ಹಾಕುತ್ತಿರುವುದು ಚಿತ್ರತಂಡಕ್ಕೆ ದೊಡ್ಡ ಬಲ ತಂದಿದೆ. ಮುಂದಿನ ವಾರಾಂತ್ಯದ ವೇಳೆಗೆ ಈ ಸಿನಿಮಾ ಇನ್ನಷ್ಟು ದೊಡ್ಡ ಮೈಲಿಗಲ್ಲುಗಳನ್ನು ದಾಟುವ ನಿರೀಕ್ಷೆಯಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:32 am, Tue, 17 November 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ವೃತ್ತಿಯಲ್ಲಿ ಬಡ್ತಿ, ಆರ್ಥಿಕ ಪ್ರಗತಿ ಹಾಗೂ ಅಪವಾದಗಳಿಂದ ಮುಕ್ತಿ
ವೃತ್ತಿಯಲ್ಲಿ ಬಡ್ತಿ, ಆರ್ಥಿಕ ಪ್ರಗತಿ ಹಾಗೂ ಅಪವಾದಗಳಿಂದ ಮುಕ್ತಿ
ಧರ್ಮಸ್ಥಳಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಕುಟುಂಬಕ್ಕೆ ಪೂರ್ಣಕುಂಭ ಸ್ವಾಗತ
ಧರ್ಮಸ್ಥಳಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಕುಟುಂಬಕ್ಕೆ ಪೂರ್ಣಕುಂಭ ಸ್ವಾಗತ
ಒಂದೇ ಪ್ರಕರಣ, ಎರಡು FIR: ಮೈಸೂರಿನಲ್ಲಿ ಎರಡು ಕೋಮಿನ ಮಧ್ಯೆ ನಡೆದಿದ್ದೇನು?
ಒಂದೇ ಪ್ರಕರಣ, ಎರಡು FIR: ಮೈಸೂರಿನಲ್ಲಿ ಎರಡು ಕೋಮಿನ ಮಧ್ಯೆ ನಡೆದಿದ್ದೇನು?
ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಎಲ್ಲಾ ಆನೆಗಳನ್ನ ಓಡಿಸುತ್ತೇವೆ ಎಂದ ಸಚಿವ
ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಎಲ್ಲಾ ಆನೆಗಳನ್ನ ಓಡಿಸುತ್ತೇವೆ ಎಂದ ಸಚಿವ
ಪ್ರತಿಭಟನೆಕಾರರ ನಡವಳಿಕೆಗೆ ಹಾಸನ ಡಿಸಿ ಬೇಸರ
ಪ್ರತಿಭಟನೆಕಾರರ ನಡವಳಿಕೆಗೆ ಹಾಸನ ಡಿಸಿ ಬೇಸರ
ಸ್ಟಿಂಗ್ ಆಪರೇಷನ್ ಕೇಸ್​: ಸಿಸಿಬಿ ಮುಂದೆ ಕೃಪಾ ಆಳ್ವಾ ಹಾಜರ್
ಸ್ಟಿಂಗ್ ಆಪರೇಷನ್ ಕೇಸ್​: ಸಿಸಿಬಿ ಮುಂದೆ ಕೃಪಾ ಆಳ್ವಾ ಹಾಜರ್
ಸೋನಿಯಾ ಗಾಂಧಿಯ ಆತ್ಮಕತೆ ಇಂದು ಅಧಿಕೃತ ಬಿಡುಗಡೆ
ಸೋನಿಯಾ ಗಾಂಧಿಯ ಆತ್ಮಕತೆ ಇಂದು ಅಧಿಕೃತ ಬಿಡುಗಡೆ
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮದ್ಯ ಮಾರಾಟ ನಿಷೇಧ
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮದ್ಯ ಮಾರಾಟ ನಿಷೇಧ
ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಪತ್ತೆ: ತಪ್ಪಿದ ಅನಾಹುತ
ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಪತ್ತೆ: ತಪ್ಪಿದ ಅನಾಹುತ
‘ತಲೆ ಮೇಲೆ ಗಾನವಿ ಕಾಲಿಟ್ಟಳು’: ಬಿಗ್ ಬಾಸ್ ಒಳಗಿನ ವಿಷಯ ತೆರೆದಿಟ್ಟ ಸೋನಿಕಾ
‘ತಲೆ ಮೇಲೆ ಗಾನವಿ ಕಾಲಿಟ್ಟಳು’: ಬಿಗ್ ಬಾಸ್ ಒಳಗಿನ ವಿಷಯ ತೆರೆದಿಟ್ಟ ಸೋನಿಕಾ