AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ’ ಎಐ ಎಂದವರಿಗೆ ಉತ್ತರಿಸಲು ಬಿಟಿಎಸ್​ ವಿಡಿಯೋ ರಿಲೀಸ್ ಮಾಡಿದ ತಂಡ?

ಯಶ್, ರಣಬೀರ್ ಕಪೂರ್ ನಟನೆಯ ‘ರಾಮಾಯಣ’ ಸಿನಿಮಾದ ಟೀಸರ್‌ಗೆ ‘AI’ ಆರೋಪ ಎದುರಾಗಿದೆ. ಟೀಸರ್ ಕಳಪೆ ಗುಣಮಟ್ಟದ್ದು ಎಂದು ಕೆಲವರು ಟೀಕಿಸಿದ್ದರೆ, ಮತ್ತೆ ಕೆಲವರು ಇದು AI ನಿರ್ಮಿತ ಎಂದಿದ್ದರು. ಇದಕ್ಕೆ ಉತ್ತರವಾಗಿ ಬಿಡುಗಡೆಯಾದ ‘ಬಿಹೈಂಡ್ ದಿ ಸೀನ್’ (BTS) ವಿಡಿಯೋ ಕೂಡ AI ನಿರ್ಮಿತ ಎಂದು ಈಗ ಚರ್ಚೆ ನಡೆಯುತ್ತಿದೆ.

‘ರಾಮಾಯಣ’ ಎಐ ಎಂದವರಿಗೆ ಉತ್ತರಿಸಲು ಬಿಟಿಎಸ್​ ವಿಡಿಯೋ ರಿಲೀಸ್ ಮಾಡಿದ ತಂಡ?
ರಾಮಾಯಣ
ರಾಜೇಶ್ ದುಗ್ಗುಮನೆ
|

Updated on: Apr 04, 2026 | 7:11 AM

Share

ಯಶ್, ರಣಬೀರ್ ಕಪೂರ್ ಮೊದಲಾದವರು ನಟಿಸಿರುವ ‘ರಾಮಾಯಣ’ ಸಿನಿಮಾ (Ramayana Movie) ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ಚಿತ್ರದ ಟೀಸರ್ ಏಪ್ರಿಲ್ 2ರಂದು ರಿಲೀಸ್ ಆಗಿದ್ದು ಕೆಲವರಿಂದ ಟೀಕೆ ಎದುರಿಸುತ್ತಿದೆ. ಸಿನಿಮಾದ ಟೀಸರ್ ಉತ್ತಮವಾಗಿಲ್ಲ ಎಂದು ಕೆಲವರು ಹೇಳಿದರೆ, ಇನ್ನೂ ಕೆಲವರು ಇದು ಎಐ ಎಂದಿದ್ದಾರೆ. ಅದಕ್ಕೆ ಪೂರಕವಾದ ಕೆಲವು ಸಾಕ್ಷಿಗಳನ್ನು ಕೂಡ ಒದಗಿಸಲಾಗಿದೆ. ಹೀಗಿರುವಾಗಲೇ ‘ರಾಮಾಯಣ’ ಬಿಹೈಂಡ್​​ ದಿ ಸೀನ್ (ಬಿಟಿಎಸ್​) ವಿಡಿಯೋ ವೈರಲ್ ಆಗಿದೆ. ಇದರ ಅಸಲಿಯತ್ತು ಏನು ಎಂಬ ಬಗ್ಗೆ ಇಲ್ಲಿದೆ ವಿವರ.

‘ರಾಮಾಯಣ’ ಸಿನಿಮಾದಲ್ಲಿ ರಾಮನಾಗಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ ಹಾಗು ರಾವಣನಾಗಿ ಯಶ್ ಕಾಣಿಸಿಕೊಳ್ಳುತ್ತಿದ್ದಾರೆ. ‘ಚಿಲ್ಲರ್ ಪಾರ್ಟಿ’, ‘ದಂಗಲ್’ ರೀತಿಯ ಸಿನಿಮಾ ನೀಡಿದ ನಿತೇಶ್ ತಿವಾರಿ ಅವರು ‘ರಾಮಾಯಣ’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ದೊಡ್ಡ ಬಜೆಟ್​​ನಲ್ಲಿ ಸಿನಿಮಾ ಮೂಡಿ ಬರುತ್ತಿದೆ. ಹನುಮ ಜಯಂತಿ ಪ್ರಯುಕ್ತ ರಿಲೀಸ್ ಆದ ಟೀಸರ್​​ಗೆ ಸಾಕಷ್ಟು ಟೀಕೆ ವ್ಯಕ್ತವಾಗಿದೆ.

ಈ ಟೀಕೆಯ ಬೆನ್ನಲ್ಲೇ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ‘ರಾಮಾಯಣ’ ಸಿನಿಮಾದ ಶೂಟ್ ಯಾವ ರೀತಿ ಮಾಡಲಾಗಿದೆ ಎಂಬುದನ್ನು ತೋರಿಸಲಾಗಿದೆ. ಸೆಟ್​​​ಗಳಲ್ಲಿ ಅದ್ದೂರಿತನ ಕಾಣಿಸಿದೆ. ಇದು ನಿಜವಾದ ವಿಡಿಯೋ ಎಂದು ಕೆಲವರು ನಂಬಿದ್ದಾರೆ! ಅಸಲಿಗೆ ಇದು ನಿಜವಾದ ವಿಡಿಯೋ ಅಲ್ಲ. ಇದು ಎಐನಿಂದ ಮಾಡಲ್ಪಟ್ಟಿದ್ದಾಗಿದೆ.

ಇದನ್ನೂ ಓದಿ: ಕನ್ನಡದಿಂದ ಬಣ್ಣದ ಬದುಕು ಆರಂಭಿಸಿದ ನಟಿ ‘ರಾಮಾಯಣ’ದಲ್ಲಿ ಶೂರ್ಪನಖಿ

ಈ ವಿಡಿಯೋಗೆ ಕೆಲವರು ಕಮೆಂಟ್ ಮಾಡಿದ್ದಾರೆ. ವಿಡಿಯೋದ ಅಸಲಿಯತ್ತೇನು ಎಂಬುದನ್ನು ಹೇಳಿದ್ದಾರೆ. ‘ಟೀಸರ್ ಎಐನಲ್ಲಿ ಮಾಡಲಾಗಿದೆ. ಅದನ್ನು ಸಮರ್ಥಿಸಿಕೊಳ್ಳಲು ಮಾಡಿದ ವಿಡಿಯೋ ಕೂಡ ಎಐನದ್ದು’ ಎಂದು ಕೆಲವರು ಹೇಳಿದ್ದಾರೆ. ಈ ವಿಡಿಯೋ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಕೆಲವರು ಇದನ್ನು ನಿಜ ಎಂದು ನಂಬಿದ್ದಾರೆ.

‘ರಾಮಾಯಣ’ ಸಿನಿಮಾದ ಬಜೆಟ್ 4 ಸಾವಿರ ಕೋಟಿ ರೂಪಾಯಿ ಎಂದೆಲ್ಲ ವರದಿ ಆಗಿದೆ. ಈ ವರ್ಷದ ದೀಪಾವಳಿಗೆ ಮೊದಲ ಭಾಗ ಹಾಗೂ ಮುಂದಿನ ವರ್ಷದ ದೀಪಾವಳಿಗೆ ಎರಡನೇ ಭಾಗ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು