AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ’ ವಿಡಿಯೋ ವೈರಲ್ ಮಾಡುವವರಿಗೆ ಚಿತ್ರತಂಡದಿಂದ ಕ್ರಿಮಿನಲ್ ಪ್ರಕರಣದ ಎಚ್ಚರಿಕೆ

ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾದ ದೃಶ್ಯಗಳನ್ನು ಅಪ್‌ಲೋಡ್ ಮಾಡಿರುವವರು ತಕ್ಷಣವೇ ಅವುಗಳನ್ನು ಡಿಲೀಟ್ ಮಾಡುವಂತೆ ಸೂಚಿಸಲಾಗಿದೆ. ಪೈರಸಿ ಕ್ಲಿಪ್‌ಗಳನ್ನು ಹಂಚಿಕೊಳ್ಳುವವರ ವಿರುದ್ಧ ಯಾವುದೇ ಮುನ್ಸೂಚನೆ ನೀಡದೆ ಸಿವಿಲ್, ಕ್ರಿಮಿನಲ್ ಮತ್ತು ನ್ಯಾಯಾಂಗ ನಿಂದನೆ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದು ‘ರಾಮಾಯಣ’ ಚಿತ್ರತಂಡ ಎಚ್ಚರಿಕೆ ನೀಡಿದೆ.

‘ರಾಮಾಯಣ’ ವಿಡಿಯೋ ವೈರಲ್ ಮಾಡುವವರಿಗೆ ಚಿತ್ರತಂಡದಿಂದ ಕ್ರಿಮಿನಲ್ ಪ್ರಕರಣದ ಎಚ್ಚರಿಕೆ
Ramayana Movie Poster
ಮದನ್​ ಕುಮಾರ್​
|

Updated on: Nov 08, 2026 | 7:46 PM

Share

ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿರುವ ‘ರಾಮಾಯಣ: ಪಾರ್ಟ್ 1’ ಸಿನಿಮಾವನ್ನು ಪೈರಸಿ ಮಾಡುವವರಿಗೆ ನಿರ್ಮಾಪಕರು ಲೀಗಲ್ ನೋಟಿಸ್ ನೀಡಿದ್ದಾರೆ. ಚಿತ್ರಮಂದಿರಗಳಲ್ಲಿ ಅನಧಿಕೃತವಾಗಿ ವಿಡಿಯೋ ರೆಕಾರ್ಡ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ. ನವೆಂಬರ್ 5ರಂದು ತೆರೆಕಂಡ ಈ ಚಿತ್ರದ ದೃಶ್ಯಗಳು ಜಾಲತಾಣಗಳಲ್ಲಿ ಲೀಕ್ ಆಗುತ್ತಿರುವುದಕ್ಕೆ ಚಿತ್ರತಂಡ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಇಂತಹ ಕೃತ್ಯದಲ್ಲಿ ತೊಡಗಿರುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ತಿಳಿಸಿದೆ. ನಿತೇಶ್ ತಿವಾರಿ ನಿರ್ದೇಶನದ ಈ ಬಿಗ್ ಬಜೆಟ್ ಸಿನಿಮಾದಲ್ಲಿ ರಣಬೀರ್ ಕಪೂರ್, ಸಾಯಿ ಪಲ್ಲವಿ ಮತ್ತು ರಾಕಿಂಗ್ ಸ್ಟಾರ್ ಯಶ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಚಿತ್ರಮಂದಿರಗಳಲ್ಲಿ ಕೆಲವರು ಸಿನಿಮಾದ ದೃಶ್ಯಗಳನ್ನು ಮೊಬೈಲ್‌ನಲ್ಲಿ ಚಿತ್ರಿಸಿ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಮೆಸೇಜಿಂಗ್ ಆ್ಯಪ್‌ಗಳಲ್ಲಿ ಶೇರ್ ಮಾಡುತ್ತಿರುವುದು ತಮ್ಮ ಗಮನಕ್ಕೆ ಬಂದಿದೆ ಎಂದು ‘ರಾಮಾಯಣ’ ಚಿತ್ರತಂಡದ ಅಧಿಕೃತ ಸಾಮಾಜಿಕ ಜಾಲತಾಣದ ಪೇಜ್‌ಗಳ ಮೂಲಕ ನೀಡಿರುವ ಕಾನೂನು ನೋಟೀಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಈ ನೋಟೀಸ್‌ನಲ್ಲಿ ಮುಂಬೈ ಹೈಕೋರ್ಟ್ ನೀಡಿರುವ ಇತ್ತೀಚಿನ ಎರಡು ಆದೇಶಗಳನ್ನು (ನವೆಂಬರ್ 2 ಮತ್ತು ನವೆಂಬರ್ 6) ಪ್ರಸ್ತಾಪಿಸಲಾಗಿದೆ. ಅನುಮತಿಯಿಲ್ಲದೆ ಸಿನಿಮಾದ ಯಾವುದೇ ಭಾಗವನ್ನು ರೆಕಾರ್ಡ್ ಮಾಡುವುದು, ಅಪ್‌ಲೋಡ್ ಮಾಡುವುದು ಅಥವಾ ಶೇರ್ ಮಾಡುವುದನ್ನು ಮುಂಬೈ ಹೈಕೋರ್ಟ್ ಕಟ್ಟುನಿಟ್ಟಾಗಿ ನಿಷೇಧಿಸಿದೆ.

ಇದು ಕೇವಲ ಕಾಪಿರೈಟ್ ಉಲ್ಲಂಘನೆ ಅಷ್ಟೇ ಅಲ್ಲದೆ, ಕ್ರಿಮಿನಲ್ ಅಪರಾಧವೂ ಹೌದು ಎಂದು ನಿರ್ಮಾಪಕರು ನೆನಪಿಸಿದ್ದಾರೆ. ‘ಕಾಪಿರೈಟ್ ಕಾಯ್ದೆ 1957, ಸಿನಿಮಟೋಗ್ರಾಫ್ ಕಾಯ್ದೆ 1952, ಬಿಎನ್‌ಎಸ್ 2023 ಮತ್ತು ಐಟಿ ಕಾಯ್ದೆ 2000ರ ಅಡಿಯಲ್ಲಿ ಇದು ದಂಡ ಸಹಿತ ಜೈಲು ಶಿಕ್ಷೆಗೆ ಅರ್ಹವಾದ ಅಪರಾಧವಾಗಿದೆ. ಜೊತೆಗೆ ಇದು ನ್ಯಾಯಾಲಯದ ನಿಂದನೆಯೂ ಆಗುತ್ತದೆ’ ಎಂದು ನೋಟೀಸ್‌ನಲ್ಲಿ ಸ್ಪಷ್ಟಪಡಿಸಲಾಗಿದೆ.

ಇದನ್ನೂ ಓದಿ: Ramayana Review: ಯಶ್, ರಣಬೀರ್, ಸಾಯಿ ಪಲ್ಲವಿ ನಟನೆಯಿಂದ ಕಣ್ಮನ ಸೆಳೆದ ‘ರಾಮಾಯಣ’

ಸಿನಿಮಾ ಬಿಡುಗಡೆಯಾದ ದಿನದಂದು ಸನ್ನಿ ಡಿಯೋಲ್ ಅವರ ಹನುಮಾನ್ ಪಾತ್ರದ ಪೋಸ್ಟ್-ಕ್ರೆಡಿಟ್ ದೃಶ್ಯ ಹಾಗೂ ಹನುಮಾನ್ ಚಾಲೀಸಾ ಹಾಡನ್ನು ಚಿತ್ರತಂಡವೇ ಅಧಿಕೃತವಾಗಿ ಬಿಡುಗಡೆ ಮಾಡಿತ್ತು. ಆದರೆ, ಇದೀಗ ಜಾಲತಾಣಗಳಲ್ಲಿ ಅಂತಾರಾಷ್ಟ್ರೀಯ ಆವೃತ್ತಿಯ ದೃಶ್ಯವೊಂದು ಲೀಕ್ ಆಗಿದ್ದು ವೈರಲ್ ಆಗಿದೆ. ಹಿಂದಿ ಆವೃತ್ತಿಯಲ್ಲಿ ಕಟ್ ಮಾಡಲಾಗಿದ್ದ ದೃಶ್ಯ ಇದಾಗಿದೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಹೆಚ್​​ಡಿಕೆ ಆರೋಪಕ್ಕೆ ಡಿಸಿ ತಿರುಗೇಟು! ತನಿಖೆ ಮಾಡಿಸ್ತೇನೆ ಎಂದ ಅಧಿಕಾರಿ
ಹೆಚ್​​ಡಿಕೆ ಆರೋಪಕ್ಕೆ ಡಿಸಿ ತಿರುಗೇಟು! ತನಿಖೆ ಮಾಡಿಸ್ತೇನೆ ಎಂದ ಅಧಿಕಾರಿ
ಎಥೆನಾಲ್​ ಉತ್ಪಾದಿಸಲು ಹೇಳಿ, ಇದೀಗ ಖರೀದಿಸ್ತಿಲ್ಲ: ಸಚಿವ ಎಂಬಿ ಪಾಟೀಲ್​
ಎಥೆನಾಲ್​ ಉತ್ಪಾದಿಸಲು ಹೇಳಿ, ಇದೀಗ ಖರೀದಿಸ್ತಿಲ್ಲ: ಸಚಿವ ಎಂಬಿ ಪಾಟೀಲ್​
ದೇವಿರಮ್ಮ ದರ್ಶನಕ್ಕೆ ಭಕ್ತಸಾಗರ! ಬೆಟ್ಟದ ತುದಿಯಲ್ಲಿ ಕಂಬಿ ಮುರಿದು ದುರಂತ
ದೇವಿರಮ್ಮ ದರ್ಶನಕ್ಕೆ ಭಕ್ತಸಾಗರ! ಬೆಟ್ಟದ ತುದಿಯಲ್ಲಿ ಕಂಬಿ ಮುರಿದು ದುರಂತ
ಹಾಸನಾಂಬೆ ದರ್ಶನ ಪಡೆದ ಹೆಚ್​ಡಿಕೆ ದಂಪತಿ
ಹಾಸನಾಂಬೆ ದರ್ಶನ ಪಡೆದ ಹೆಚ್​ಡಿಕೆ ದಂಪತಿ
ಕುಟುಂಬ ಸಮೇತ ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್
ಕುಟುಂಬ ಸಮೇತ ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಲ್ಲಿ ವಿಮಾನ ಕ್ಯಾನ್ಸಲ್‌ಗೆ ಪ್ರಯಾಣಿಕರು ಗರಂ, ಸಿಬ್ಬಂದಿಗೆ ತರಾಟೆ
ಬೆಂಗಳೂರಲ್ಲಿ ವಿಮಾನ ಕ್ಯಾನ್ಸಲ್‌ಗೆ ಪ್ರಯಾಣಿಕರು ಗರಂ, ಸಿಬ್ಬಂದಿಗೆ ತರಾಟೆ
ಶಿವಮೊಗ್ಗದ ಬಿಜೆಪಿ ಕಚೇರಿ, ವಿಜಯೇಂದ್ರ ನಿವಾಸದ ಮುಂದೂ ಪೋಸ್ಟರ್​
ಶಿವಮೊಗ್ಗದ ಬಿಜೆಪಿ ಕಚೇರಿ, ವಿಜಯೇಂದ್ರ ನಿವಾಸದ ಮುಂದೂ ಪೋಸ್ಟರ್​
'ಹೌದು.. ನಾನು ಬಲಿತ ದಲಿತನೇ ಸುಮಾರಣ್ಣ': JDSಗೆ ಕಾಂಗ್ರೆಸ್​​ ಕೌಂಟರ್​
'ಹೌದು.. ನಾನು ಬಲಿತ ದಲಿತನೇ ಸುಮಾರಣ್ಣ': JDSಗೆ ಕಾಂಗ್ರೆಸ್​​ ಕೌಂಟರ್​
ಮಂಜನ ಮತ್ತೆ ಬಿಗ್​​ಬಾಸ್​ಗೆ ಸ್ವಾಗತಿಸಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಮಂಜನ ಮತ್ತೆ ಬಿಗ್​​ಬಾಸ್​ಗೆ ಸ್ವಾಗತಿಸಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಹಾಸನಾಂಬೆ ದರ್ಶನಕ್ಕೆ ಬೆಳಿಗ್ಗೆಯಿಂದಲೇ ಮುಗಿಬಿದ್ದ ಭಕ್ತರು
ಹಾಸನಾಂಬೆ ದರ್ಶನಕ್ಕೆ ಬೆಳಿಗ್ಗೆಯಿಂದಲೇ ಮುಗಿಬಿದ್ದ ಭಕ್ತರು