‘ರಾಮಾಯಣ ಚಿತ್ರದಲ್ಲಿ ಸೀತೆ ಪಾತ್ರ ಮಾಡಲು ನಾನು ಶುದ್ಧವಾಗಿದ್ದೆ’: ಸಾಯಿ ಪಲ್ಲವಿ

ದೆಹಲಿಯಲ್ಲಿ ‘ರಾಮಾಯಣ’ ಸಿನಿಮಾದ ಅದ್ದೂರಿ ಕಾರ್ಯಕ್ರಮ ನಡೆದಿದೆ. ಈ ಸಮಾರಂಭದಲ್ಲಿ ಅತಿಥಿಗಳಿಗಾಗಿ ಚಿತ್ರದ ಟ್ರೇಲರ್ ಪ್ರದರ್ಶಿಸಲಾಯಿತು. ಚಿತ್ರದಲ್ಲಿ ಸೀತೆಯ ಪಾತ್ರ ನಿರ್ವಹಿಸಿರುವ ಸಾಯಿ ಪಲ್ಲವಿ ಅವರು ಮನಬಿಚ್ಚಿ ಮಾತನಾಡಿದೆ. ಸೀತೆಯ ಪಾತ್ರ ಮಾಡಿದ್ದ ತಮ್ಮ ಪಾಲಿಗೆ ಬಹಳ ವಿಶೇಷವಾಗಿತ್ತು ಎಂದು ಅವರು ಹೇಳಿದ್ದಾರೆ.

‘ರಾಮಾಯಣ ಚಿತ್ರದಲ್ಲಿ ಸೀತೆ ಪಾತ್ರ ಮಾಡಲು ನಾನು ಶುದ್ಧವಾಗಿದ್ದೆ’: ಸಾಯಿ ಪಲ್ಲವಿ
Sai Pallavi
Edited By:

Updated on: Jul 30, 2026 | 10:07 AM

ದೇಶಾದ್ಯಂತ ಭಾರಿ ಕುತೂಹಲ ಮೂಡಿಸಿರುವ ನಿತೇಶ್ ತಿವಾರಿ ನಿರ್ದೇಶನದ ಬಹುಕೋಟಿ ವೆಚ್ಚದ ‘ರಾಮಾಯಣ’ (Ramayana: Part 1) ಚಿತ್ರದ ಪ್ರಚಾರ ಕಾರ್ಯಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ಶನಿವಾರ (ಜುಲೈ 18) ದೆಹಲಿಯಲ್ಲಿ ನಡೆದ ‘ಪ್ರಥಮ ಸಂಕಲ್ಪ’ (Pratham Sankalp) ಕಾರ್ಯಕ್ರಮದಲ್ಲಿ ಚಿತ್ರದ ತಾರಾಗಣ ಹಾಗೂ ತಾಂತ್ರಿಕ ತಂಡದೊಂದಿಗೆ ಸಿನಿಮಾ ಮತ್ತು ಆಧ್ಯಾತ್ಮಿಕ ಕ್ಷೇತ್ರದ ಗಣ್ಯರು ಭಾಗವಹಿಸಿದ್ದರು. ಈ ವೇಳೆ ನಟಿ ಸಾಯಿ ಪಲ್ಲವಿ (Sai Pallavi) ಅವರು ತಾವು ಮಾಡಿರುವ ಸೀತಾ ಮಾತೆಯ ಪಾತ್ರದ ಬಗ್ಗೆ ಮಾತನಾಡಿದರು.

ಚಿತ್ರದಲ್ಲಿ ಸೀತೆಯ ಪಾತ್ರ ನಿರ್ವಹಿಸಿದ ಅನುಭವದ ಬಗ್ಗೆ ಮಾತನಾಡಿದ ಸಾಯಿ ಪಲ್ಲವಿ, ‘ನಟರಿಗೆ ಇಂತಹ ಪಾತ್ರಗಳು ಸಿಗುವುದು ಸುಲಭವಲ್ಲ. ಯಾಕೆಂದರೆ ದೇವತೆಯ ಪಾತ್ರವನ್ನು ಮಾಡುವುದು ಅಷ್ಟು ಸುಲಭದ ಮಾತಲ್ಲ. ಇದರ ಹಿಂದೆ ಇಡೀ ತಂಡದ ಶ್ರಮ ಮತ್ತು ಆತ್ಮ ಅಡಗಿರುತ್ತದೆ. ನಾನು ಸೀತಾ ಮಾತೆಯ ಪಾತ್ರವನ್ನು ನಾನಾಗಿಯೇ ಆರಿಸಿಕೊಂಡೆ ಎಂದು ನಾನು ಭಾವಿಸುವುದಿಲ್ಲ. ಈ ಪಾತ್ರವನ್ನು ಮಾಡಲು ನನಗೆ ಆಶೀರ್ವಾದ ಸಿಕ್ಕಿದೆ ಅಷ್ಟೇ. ಇದು ನಾವು ಹುಡುಕಿಕೊಂಡು ಹೋಗುವ ಅಥವಾ ಹೀಗೆಯೇ ನಟಿಸಬೇಕು ಎಂದು ಮೊದಲೇ ಬರೆದಿಡುವ ಪಾತ್ರವಲ್ಲ’ ಎಂದಿದ್ದಾರೆ.

‘ಆಲೋಚನೆಗಳಲ್ಲಿ ಅತ್ಯಂತ ಶುದ್ಧ’

‘ನಾನು ಶೂಟಿಂಗ್ ಸಮಯದಲ್ಲಿ ಧ್ಯಾನದಲ್ಲಿ ಕುಳಿತು, ‘ಸೀತಾ ಮಾತೆ, ನೀನೇ ನನ್ನ ಮೂಲಕ ನಟಿಸು. ನನ್ನಿಂದ ಏನನ್ನು ನಿರೀಕ್ಷಿಸುತ್ತೀಯೋ ಅದು ಈ ಚಿತ್ರಕ್ಕೆ ಸಿಗಲಿ’ ಎಂದು ಪ್ರಾರ್ಥಿಸುತ್ತಿದ್ದೆ. ಈ ಪಾತ್ರಕ್ಕಾಗಿ ನನ್ನ ಆಲೋಚನೆಗಳಲ್ಲಿ, ನನ್ನನ್ನು ನಾನು ಅತ್ಯಂತ ಶುದ್ಧವಾಗಿಟ್ಟುಕೊಳ್ಳಲು ಪ್ರಯತ್ನಿಸಿದ್ದೇನೆ. ನನ್ನ ಅತ್ಯುತ್ತಮ ಆವೃತ್ತಿಯನ್ನು ಸೀತೆಯಾಗಿ ಪರದೆಯ ಮೇಲೆ ತರಲು ಶ್ರಮಿಸಿದ್ದೇನೆ’ ಎಂದು ಭಾವುಕರಾಗಿ ನುಡಿದರು.

‘ರಣಬೀರ್ ಕಣ್ಣಲ್ಲಿ ರಾಮ, ಸಾಯಿ ಕಣ್ಣಲ್ಲಿ ಸೀತೆ ಕಂಡೆ’

ನಿರ್ದೇಶಕ ನಿತೇಶ್ ತಿವಾರಿ ಅವರು ಮುಖ್ಯ ಭೂಮಿಕೆಯ ನಟರನ್ನು ಶ್ಲಾಘಿಸುತ್ತಾ, ‘ನಟರ ಕಣ್ಣುಗಳು ಯಾವಾಗಲೂ ಸತ್ಯವನ್ನು ಹೇಳುತ್ತವೆ. ನಾನು ರಣಬೀರ್ ಕಪೂರ್ ಕಣ್ಣುಗಳಲ್ಲಿ ಶ್ರೀರಾಮನನ್ನು ಮತ್ತು ಸಾಯಿ ಪಲ್ಲವಿ ಕಣ್ಣುಗಳಲ್ಲಿ ಸೀತಾ ಮಾತೆಯನ್ನು ಕಂಡೆ. ನಾನು ಪಾತ್ರಕ್ಕಾಗಿ ಹುಡುಕುತ್ತಿದ್ದ ಪ್ರಾಮಾಣಿಕತೆ ಈ ಇಬ್ಬರಲ್ಲಿ ನನಗೆ ಸಿಕ್ಕಿತು. ಸಿನಿಮಾದಲ್ಲಿ ನನಗೆ ರಣಬೀರ್ ಮತ್ತು ಸಾಯಿ ಪಲ್ಲವಿ ಕಾಣಿಸುವುದಿಲ್ಲ, ಕೇವಲ ರಾಮ ಮತ್ತು ಸೀತೆ ಮಾತ್ರ ಕಾಣಿಸುತ್ತಾರೆ’ ಎಂದು ಪ್ರಶಂಸಿಸಿದರು.

ಇದನ್ನೂ ಓದಿ: ಸೀತೆ ಪಾತ್ರಕ್ಕೆ ಸಾಯಿ ಪಲ್ಲವಿ ಧ್ವನಿ ಇಲ್ಲ? ‘ಏಕ್ ದಿನ್’ ಸೋಲಿನ ಬಳಿಕ ನಟಿಗೆ ಮತ್ತೊಂದು ಹಿನ್ನಡೆ

ದೀಪಾವಳಿಗೆ ‘ರಾಮಾಯಣ’ ದರ್ಶನ:

ನಮಿತ್ ಮಲ್ಹೋತ್ರಾ ನಿರ್ಮಾಣ ಮಾಡುತ್ತಿರುವ ‘ರಾಮಾಯಣ’ ಚಿತ್ರವು ಎರಡು ಭಾಗಗಳಲ್ಲಿ ಮೂಡಿಬರಲಿದೆ. ಚಿತ್ರದಲ್ಲಿ ರಣಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ನಟಿಸುತ್ತಿದ್ದರೆ, ರಾಕಿಂಗ್ ಸ್ಟಾರ್ ಯಶ್ ಅವರು ರಾವಣನ ಪಾತ್ರದಲ್ಲಿ ಅಬ್ಬರಿಸಲಿದ್ದಾರೆ. ಇವರೊಂದಿಗೆ ಲಕ್ಷ್ಮಣನಾಗಿ ರವಿ ದುಬೆ, ಹನುಮಂತನಾಗಿ ಸನ್ನಿ ಡಿಯೋಲ್ ಅಭಿನಯಿಸಿದ್ದಾರೆ. ಕಾಜಲ್ ಅಗರ್ವಾಲ್, ವಿವೇಕ್ ಒಬೆರಾಯ್ ಕೂಡ ಪ್ರಮುಖ ಪಾತ್ರಗಳಲ್ಲಿದ್ದಾರೆ. ಚಿತ್ರದ ಮೊದಲ ಭಾಗವು 2026ರ ದೀಪಾವಳಿ ಹಬ್ಬಕ್ಕೆ ತೆರೆಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:42 am, Sun, 19 July 26

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us