Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್ ನಟನೆಯ ‘ರಾಮಾಯಣ’ ಸಿನಿಮಾದ ಸೆಟ್ ಫೋಟೋ ಲೀಕ್; ಸಖತ್ ಅದ್ದೂರಿ

‘ರಾಮಾಯಣ’ ಸೀರಿಸ್ ಬಗ್ಗೆ ಹಲವು ಸುದ್ದಿಗಳು ಹರಿದಾಡುತ್ತಿವೆ. ರಣಬೀರ್ ಕಪೂರ್ ರಾಮನ ಪಾತ್ರದಲ್ಲಿ ನಟಿಸಿದರೆ, ಸೀತೆ ಪಾತ್ರದಲ್ಲಿ ಸಾಯಿ ಪಲ್ಲವಿ ಬಣ್ಣ ಹಚ್ಚಲಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಯಶ್ ಅವರು ರಾವಣನ ಪಾತ್ರ ಮಾಡುತ್ತಿದ್ದಾರೆ.

ಯಶ್ ನಟನೆಯ ‘ರಾಮಾಯಣ’ ಸಿನಿಮಾದ ಸೆಟ್ ಫೋಟೋ ಲೀಕ್; ಸಖತ್ ಅದ್ದೂರಿ
ರಾಮಾಯಣ ಸೆಟ್​ ಫೋಟೋ
Follow us
ರಾಜೇಶ್ ದುಗ್ಗುಮನೆ
|

Updated on: Apr 04, 2024 | 10:29 AM

‘ರಾಮಾಯಣ’ (Ramayana Movie) ಹಾಗೂ ‘ಮಹಾ ಭಾರತ’ ಮಹಾಕಾವ್ಯ ಆಧರಿಸಿ ಹಲವು ಸಿನಿಮಾಗಳು ರಿಲೀಸ್ ಆಗಿವೆ. ಹಲವು ಧಾರಾವಾಹಿಗಳು ಬಂದಿವೆ. ಹೀಗಿದ್ದರೂ ಇವುಗಳನ್ನು ಆಧರಿಸಿ ಸಿನಿಮಾ, ಸೀರಿಸ್ ಮಾಡೋದು ನಿಂತಿಲ್ಲ. ಹೊಸ ಹೊಸ ತಂತ್ರಜ್ಞಾನಗಳ ಬಳಕೆಯೊಂದಿಗೆ ‘ರಾಮಾಯಣ’ ಮಾಡಲಾಗುತ್ತಿದೆ. ಈಗ ಬಾಲಿವುಡ್​ನಲ್ಲಿ ನಿತೇಶ್ ತಿವಾರಿ ಅವರು ‘ರಾಮಾಯಣ’ ಸಿನಿಮಾ ಮಾಡುತ್ತಿದ್ದಾರೆ. ಇದಕ್ಕೆ ಶೂಟಿಂಗ್ ಕೂಡ ಆರಂಭ ಆಗಿದೆ. ಇದಕ್ಕಾಗಿ ದೊಡ್ಡ ದೊಡ್ಡ ಸೆಟ್​ಗಳನ್ನು ಹಾಕಲಾಗಿದೆ. ಈ ಫೋಟೋ ಲೀಕ್ ಆಗಿದೆ.

‘ರಾಮಾಯಣ’ ಸೀರಿಸ್ ಬಗ್ಗೆ ಹಲವು ಸುದ್ದಿಗಳು ಹರಿದಾಡುತ್ತಿವೆ. ರಣಬೀರ್ ಕಪೂರ್ ರಾಮನ ಪಾತ್ರದಲ್ಲಿ ನಟಿಸಿದರೆ, ಸೀತೆ ಪಾತ್ರದಲ್ಲಿ ಸಾಯಿ ಪಲ್ಲವಿ ಬಣ್ಣ ಹಚ್ಚಲಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಯಶ್ ಅವರು ರಾವಣನ ಪಾತ್ರ ಮಾಡುತ್ತಿದ್ದಾರೆ. ಕೆಲವು ಮೂಲಗಳ ಪ್ರಕಾರ ಸಿನಿಮಾ ಮೂರು ಭಾಗಗಳಲ್ಲಿ ಬರಲಿದ್ದು, ರಾವಣನ ಎಂಟ್ರಿ ಎರಡನೇ ಪಾರ್ಟ್​​ನಲ್ಲಿ ಆಗಲಿದೆಯಂತೆ. ಈಗ ಸೆಟ್​ನ ಫೋಟೋಗಳು ವೈರಲ್ ಆಗಿವೆ.

Ramayana part 1- started the shoot yesterday byu/Glad-Ad5911 inBollyBlindsNGossip

ಮಂಗಳವಾರ (ಏಪ್ರಿಲ್ 3) ‘ರಾಮಾಯಣ’ ಸಿನಿಮಾದ ಶೂಟಿಂಗ್ ಆರಂಭ ಆಗಿದೆ. ಈ ಚಿತ್ರಕ್ಕೆ ಮುಂಬೈನಲ್ಲಿ ಬೃಹತ್ ಸೆಟ್​ಗಳನ್ನು ಹಾಕಲಾಗಿದೆ. ಪೂಜೆ ನಡೆಸಿ ನಂತರ ಶೂಟ್ ಆರಂಭಿಸಲಾಗಿದೆ. ಸದ್ಯ ಸಣ್ಣ ಪುಟ್ಟ ಪಾತ್ರಗಳ ಶೂಟಿಂಗ್ ನಡೆಯುತ್ತಿದೆ. ಶೀಘ್ರವೇ ರಣಬೀರ್ ಕಪೂರ್ ಅವರು ಸೆಟ್​ನ ಸೇರಿಕೊಳ್ಳಲಿದ್ದಾರೆ. ಈಗ ವೈರಲ್ ಆಗಿರೋ ಸೆಟ್​​ನ ಫೋಟೋ ಹೊರಗಿನಿಂದ ತೆಗೆದ ಫೋಟೋ ಆಗಿದೆ. ಒಳ ಭಾಗದಲ್ಲಿ ಯಾವ ರೀತಿಯಲ್ಲಿ ಇದೆ ಎಂಬ ವಿಚಾರ ರಿವೀಲ್ ಮಾಡಲಾಗಿಲ್ಲ.

ಇದನ್ನೂ ಓದಿ: ರಾಮಾಯಣ ಸಿನಿಮಾದ ಶೂಟಿಂಗ್​ ಶುರು: ಮೊದಲು ಚಿತ್ರೀಕರಣಕ್ಕೆ ಬರೋದು ಯಾರು?

‘ರಾಮಾಯಣ’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈಗಾಗಲೇ ‘ಆದಿಪುರುಷ್’ ಸಿನಿಮಾ ರಿಲೀಸ್ ಮಾಡಿ ಸಾಕಷ್ಟು ಟೀಕೆ ಎದುರಿಸಬೇಕಾಯಿತು. ಹೀಗಾಗಿ ನಿತೇಶ್ ತಿವಾರಿ ಅವರು ಸಾಕಷ್ಟು ಎಚ್ಚರಿಕೆ ವಹಿಸಬೇಕಾದ ಅನಿವಾರ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ