AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ’ ಚಿತ್ರದ ಸೀತೆ ಪಾತ್ರಕ್ಕೆ ಟೀಕೆ; ಪ್ರತಿಕ್ರಿಯೆ ನೀಡಿದ ನಿರ್ದೇಶಕ ನಿತೇಶ್ ತಿವಾರಿ

ಸಾಯಿ ಪಲ್ಲವಿ ಅವರು ‘ರಾಮಾಯಣ’ ಸಿನಿಮಾದಲ್ಲಿ ಸೀತೆಯ ಪಾತ್ರವನ್ನು ಮಾಡಿದ್ದಾರೆ. ಈ ಪಾತ್ರವನ್ನು ಚಿತ್ರಿಸಿರುವ ರೀತಿಯ ಬಗ್ಗೆ ಕೆಲವರಿಗೆ ಅಸಮಾಧಾನ ಇದೆ. ಆ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಪರ-ವಿರೋಧದ ಚರ್ಚೆ ನಡೆಯುತ್ತಿದೆ. ಟೀಕೆಗಳ ಬಗ್ಗೆ ನಿರ್ದೇಶಕ ನಿತೇಶ್ ತಿವಾರಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

‘ರಾಮಾಯಣ’ ಚಿತ್ರದ ಸೀತೆ ಪಾತ್ರಕ್ಕೆ ಟೀಕೆ; ಪ್ರತಿಕ್ರಿಯೆ ನೀಡಿದ ನಿರ್ದೇಶಕ ನಿತೇಶ್ ತಿವಾರಿ
Sai Pallavi
ಮದನ್​ ಕುಮಾರ್​
|

Updated on: Nov 15, 2026 | 2:25 PM

Share

ರಣಬೀರ್ ಕಪೂರ್, ಯಶ್ ಮತ್ತು ಸಾಯಿ ಪಲ್ಲವಿ ಅಭಿನಯದ ‘ರಾಮಾಯಣ: ಪಾರ್ಟ್ 1’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಾಣುತ್ತಿರುವ ಬೆನ್ನಲ್ಲೇ, ಚಿತ್ರದಲ್ಲಿ ಸೀತೆಯ ಪಾತ್ರವನ್ನು ಚಿತ್ರಿಸಿರುವ ರೀತಿಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಶುರುವಾಗಿದೆ. ಚಿತ್ರದಲ್ಲಿ ಸಾಯಿ ಪಲ್ಲವಿ ಅವರು ಆ್ಯಕ್ಷನ್ ದೃಶ್ಯಗಳಲ್ಲಿ ಯೋಧಳಂತೆ ಕಾಣಿಸಿಕೊಂಡಿರುವುದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದು, ಇದಕ್ಕೆ ನಿರ್ದೇಶಕ ನಿತೇಶ್ ತಿವಾರಿ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ನಿತೇಶ್ ತಿವಾರಿ ಅವರು, ಸೀತೆಯನ್ನು ಯೋಧೆಯಾಗಿ ತೋರಿಸಿರುವುದು ತಮ್ಮ ಕಲ್ಪನೆಯಲ್ಲ, ಬದಲಾಗಿ ಭಾರತದ ಕೆಲವು ಅಪರೂಪದ ರಾಮಾಯಣ ಗ್ರಂಥಗಳಿಂದ ಸ್ಫೂರ್ತಿ ಪಡೆದಿದ್ದೇನೆ ಎಂದು ತಿಳಿಸಿದ್ದಾರೆ.

ಸಂಸ್ಕೃತದ ‘ಅದ್ಭುತ ರಾಮಾಯಣ’ ಮತ್ತು 15ನೇ ಶತಮಾನದ ಒಡಿಯಾ ಭಾಷೆಯ ‘ಬಿಲಂಕಾ ರಾಮಾಯಣ’ ಗ್ರಂಥಗಳನ್ನು ಉಲ್ಲೇಖಿಸಿದ ಅವರು, ‘ಜನಸಾಮಾನ್ಯರಿಗೆ ತಿಳಿದಿರುವ ರಾಮಾಯಣಕ್ಕಿಂತ ಭಿನ್ನವಾಗಿ ಈ ಗ್ರಂಥಗಳಲ್ಲಿ ಸೀತೆಯನ್ನು ಚಿತ್ರಿಸಲಾಗಿದೆ. ಇವುಗಳಲ್ಲಿ ಸೀತೆಯು ಕೇವಲ ಕಷ್ಟಗಳನ್ನು ಸಹಿಸಿಕೊಳ್ಳುವ ಪಾತ್ರವಲ್ಲ, ಬದಲಾಗಿ ಸಕ್ರಿಯ ಯೋಧೆ ಮತ್ತು ಆದಿಶಕ್ತಿಯ ರೂಪವಾಗಿ ಕಾಣಿಸಿಕೊಂಡಿದ್ದಾರೆ’ ಎಂದಿದ್ದಾರೆ.

ಈ ಗ್ರಂಥಗಳ ಕಥೆಯನ್ನು ವಿವರಿಸಿದ ತಿವಾರಿ, ‘ಶ್ರೀರಾಮನಿಗೆ ಯುದ್ಧ ಮಾಡಲು ಸಾಧ್ಯವಾಗದ ಸಂದರ್ಭ ಎದುರಾದಾಗ, ಸೀತೆಯು ಉಗ್ರ ಮಹಾಕಾಳಿಯ ರೂಪ ತಾಳಿ ಸಾವಿರ ತಲೆಗಳ ರಾಕ್ಷಸ ರಾಜನಾದ ಸಹಸ್ರ ರಾವಣನನ್ನು ಸಂಹರಿಸುತ್ತಾಳೆ ಎಂಬ ಉಲ್ಲೇಖ ಈ ರಾಮಾಯಣಗಳಲ್ಲಿದೆ’ ಎಂದು ವಿವರಿಸಿದ್ದಾರೆ. ಅಲ್ಲದೆ, ಸೀತೆಯನ್ನು ಯೋಧೆಯಾಗಿ ತೋರಿಸಿರುವುದನ್ನು ಕೇವಲ ಆಧುನಿಕ ಸ್ತ್ರೀವಾದದ ದೃಷ್ಟಿಕೋನದಿಂದ ನೋಡಬಾರದು. ಭಾರತದ ವಿವಿಧ ರಾಮಾಯಣ ಕಥನಗಳಲ್ಲಿ ಈ ರೀತಿಯ ಚಿತ್ರಣ ಮೊದಲಿನಿಂದಲೂ ಅಸ್ತಿತ್ವದಲ್ಲಿದೆ. ಹಾಗಾಗಿ ಇದು ಹೊಸತೂ ಅಲ್ಲ ಅಥವಾ ಅಪ್ರಸ್ತುತವೂ ಅಲ್ಲ ಎಂದು ನಿತೇಶ್ ತಿವಾರಿ ಅವರು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ನಿತೇಶ್ ತಿವಾರಿ ಅವರಿಗೂ ಮುನ್ನ, ಚಿತ್ರದಲ್ಲಿ ಕೈಕೇಯಿ ಪಾತ್ರ ನಿರ್ವಹಿಸಿರುವ ನಟಿ ಲಾರಾ ದತ್ತಾ ಕೂಡ ಈ ಟೀಕೆಗಳಿಗೆ ಪ್ರತಿಕ್ರಿಯಿಸಿದ್ದರು. ಎನ್‌ಡಿಟಿವಿ ಜೊತೆ ಮಾತನಾಡಿದ್ದ ಅವರು, ‘ಸಿನಿಮೀಯ ಅನುಭವವನ್ನು ಆನಂದಿಸಿ. ಆ ಕಾಲದ ರಾಜಮನೆತನಗಳಲ್ಲಿ ಹುಟ್ಟಿದ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಕಲೆಗಳ ಜೊತೆಗೆ ಶಸ್ತ್ರಾಸ್ತ್ರ ತರಬೇತಿಯನ್ನೂ ನೀಡಲಾಗುತ್ತಿತ್ತು’ ಎಂದಿದ್ದರು.

ಇದನ್ನೂ ಓದಿ: ‘ರಾಮಾಯಣ’ ಸಿನಿಮಾ ಮಾಡಿದ್ದರಿಂದ ಹಣ ವ್ಯರ್ಥ ಎಂದ ನಟ ಮುಖೇಶ್ ಖನ್ನಾ

‘ಹಾಗಾಗಿ ಸೀತೆಗೆ ಯುದ್ಧಕಲೆಯ ತರಬೇತಿ ಇತ್ತು ಎಂದು ಭಾವಿಸುವುದು ಅಸಂಭವವೇನಲ್ಲ. ಅಂತಹ ಕಠಿಣ ಪರಿಸ್ಥಿತಿಗೆ ಸಿಲುಕಿದಾಗ ಯಾವ ಮಹಿಳೆಯೂ ಅಸಹಾಯಕಳಾಗಿ ಕೂರುವುದಿಲ್ಲ’ ಎಂದು ಹೇಳುವ ಮೂಲಕ ಲಾರಾ ದತ್ತಾ ಕೂಡ ಸಾಯಿ ಪಲ್ಲವಿ ಪಾತ್ರಕ್ಕೆ ಬೆಂಬಲ ಸೂಚಿಸಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು
ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು
ಕಾಡಾನೆ ದಾಳಿಗೆ ಮಹಿಳೆ ಬಲಿ: ತೀವ್ರಗೊಂಡ ಚೌಡಹಳ್ಳಿ ಗ್ರಾಮಸ್ಥರ ಪ್ರತಿಭಟನೆ
ಕಾಡಾನೆ ದಾಳಿಗೆ ಮಹಿಳೆ ಬಲಿ: ತೀವ್ರಗೊಂಡ ಚೌಡಹಳ್ಳಿ ಗ್ರಾಮಸ್ಥರ ಪ್ರತಿಭಟನೆ
ಕೆಎಎಸ್ ಪರೀಕ್ಷೆ: ಅಕ್ರಮ ತಡೆಯಲು ಬೆಂಗಳೂರು ಕೇಂದ್ರಗಳಲ್ಲಿ ಬಿಗಿ ಭದ್ರತೆ
ಕೆಎಎಸ್ ಪರೀಕ್ಷೆ: ಅಕ್ರಮ ತಡೆಯಲು ಬೆಂಗಳೂರು ಕೇಂದ್ರಗಳಲ್ಲಿ ಬಿಗಿ ಭದ್ರತೆ
ಹಿರಿಯೂರು ಉಪಚುನಾವಣೆಗೆ NDA ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲ
ಹಿರಿಯೂರು ಉಪಚುನಾವಣೆಗೆ NDA ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲ
ಕೆಎಎಸ್ ಪರೀಕ್ಷೆಗೆ ವಿಎಓ ಹಾಲ್ ಟಿಕೆಟ್ ತಂದ ಮಹಿಳಾ ಅಭ್ಯರ್ಥಿ
ಕೆಎಎಸ್ ಪರೀಕ್ಷೆಗೆ ವಿಎಓ ಹಾಲ್ ಟಿಕೆಟ್ ತಂದ ಮಹಿಳಾ ಅಭ್ಯರ್ಥಿ
ಸಿಎಂ ಸ್ಥಾನ ಸಿಗದಿದ್ದಕ್ಕೆ ಡಿಸಿಎಂ ಡಾ.ಜಿ. ಪರಮೇಶ್ವರ್​​ ಬೇಸರ
ಸಿಎಂ ಸ್ಥಾನ ಸಿಗದಿದ್ದಕ್ಕೆ ಡಿಸಿಎಂ ಡಾ.ಜಿ. ಪರಮೇಶ್ವರ್​​ ಬೇಸರ
ನವೆಂಬರ್ 16 ರಿಂದ 22ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ನವೆಂಬರ್ 16 ರಿಂದ 22ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಬೆಂಗಳೂರು ಪಿಂಕ್ ಲೈನ್ ಮೆಟ್ರೋಗೆ ಮೊದಲ ದಿನವೇ ಭರ್ಜರಿ ಸ್ಪಂದನೆ
ಬೆಂಗಳೂರು ಪಿಂಕ್ ಲೈನ್ ಮೆಟ್ರೋಗೆ ಮೊದಲ ದಿನವೇ ಭರ್ಜರಿ ಸ್ಪಂದನೆ
ಇಂದು ಈ ರಾಶಿಯವರಿಗೆ ಆರ್ಥಿಕವಾಗಿ ಅಧಿಕ ಲಾಭ
ಇಂದು ಈ ರಾಶಿಯವರಿಗೆ ಆರ್ಥಿಕವಾಗಿ ಅಧಿಕ ಲಾಭ
ನಿಗಮ ಮಂಡಳಿಗಳಲ್ಲಿ ಆರ್‌ಎಸ್‌ಎಸ್ ನಂಟು ಇರುವವರು ಸ್ವತಃ ರಾಜೀನಾಮೆ ನೀಡಬೇಕು
ನಿಗಮ ಮಂಡಳಿಗಳಲ್ಲಿ ಆರ್‌ಎಸ್‌ಎಸ್ ನಂಟು ಇರುವವರು ಸ್ವತಃ ರಾಜೀನಾಮೆ ನೀಡಬೇಕು