AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೆಂಬರ್ 5ರಂದು ‘ರಾಮಾಯಣ’ ರಿಲೀಸ್; ದಸರಾ ಹಬ್ಬಕ್ಕೆ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ಓಪನ್

ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ರಾಮಾಯಣ ಸಿನಿಮಾದ ಮೊದಲ ಭಾಗವು ನವೆಂಬರ್ 5ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ರಣಬೀರ್ ಕಪೂರ್ ರಾಮನಾಗಿ ಹಾಗೂ ಯಶ್ ರಾವಣನಾಗಿ ಕಾಣಿಸಿಕೊಳ್ಳಲಿದ್ದಾರೆ. ನವರಾತ್ರಿಯ ಶುಭ ದಿನದಂದು ಚಿತ್ರತಂಡವು ಹೊಸ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಅಧಿಕೃತವಾಗಿ ದಿನಾಂಕವನ್ನು ಘೋಷಿಸಿದೆ.

ನವೆಂಬರ್ 5ರಂದು ‘ರಾಮಾಯಣ’ ರಿಲೀಸ್; ದಸರಾ ಹಬ್ಬಕ್ಕೆ ಅಡ್ವಾನ್ಸ್ ಟಿಕೆಟ್ ಬುಕ್ಕಿಂಗ್ ಓಪನ್
ರಾಮಾಯಣ ಸಿನಿಮಾ Image Credit source: Ramayana Movie
ರಾಜೇಶ್ ದುಗ್ಗುಮನೆ
|

Updated on:Oct 12, 2026 | 7:27 AM

Share

ನವರಾತ್ರಿಯ ಸಮಯದಲ್ಲಿ’ರಾಮಾಯಣ’ ಸಿನಿಮಾದ ಬಿಡುಗಡೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ. ನಿತೇಶ್ ತಿವಾರಿ ನಿರ್ದೇಶನದ ಈ ಸಿನಿಮಾ ಎರಡು ಭಾಗಗಳಲ್ಲಿ ತೆರೆಗೆ ಬರಲಿದೆ. ಇದರ ಮೊದಲ ಭಾಗವುನವೆಂಬರ್ 5ರಂದು ವಿಶ್ವದಾದ್ಯಂತ ಅದ್ಧೂರಿಯಾಗಿ ಬಿಡುಗಡೆಗೊಳ್ಳಲಿದೆ. ಚಿತ್ರತಂಡವು ಹೊಸ ಪೋಸ್ಟರ್ ಮೂಲಕ ಈ ಮಾಹಿತಿಯನ್ನು ರಿವೀಲ್ ಮಾಡಿದೆ.

ರಣಬೀರ್ ಕಪೂರ್ ಅವರು ರಾಮನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಾಯಿ ಪಲ್ಲವಿ ಸೀತೆಯಾಗಿ ಮತ್ತು ರವಿ ದುಬೆ ಲಕ್ಷ್ಮಣನಾಗಿ ಅಭಿನಯಿಸಿದ್ದಾರೆ. ನಟ ಯಶ್ ಅವರು ರಾವಣನ ಪಾತ್ರಕ್ಕೆ ಜೀವ ತುಂಬಿದ್ದಾರೆ. ಹೊಸದಾಗಿ ಬಿಡುಗಡೆಯಾಗಿರುವ ಪೋಸ್ಟರ್‌ನಲ್ಲಿ ಈ ಎಲ್ಲಾ ಪ್ರಮುಖ ಪಾತ್ರಗಳು ಅದ್ಭುತವಾಗಿ ಮೂಡಿಬಂದಿವೆ. ವಸ್ತ್ರವಿನ್ಯಾಸ ಹಾಗೂ ಸೆಟ್‌ಗಳು ಎಲ್ಲರ ಕಣ್ಮನ ಸೆಳೆಯುವಂತಿದೆ.

ಈ ಚಿತ್ರದಲ್ಲಿ ಸನ್ನಿ ಡಿಯೋಲ್ ಅವರು ಹನುಮಂತನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಅರುಣ್ ಗೋವಿಲ್ ದಶರಥನಾಗಿ ಮತ್ತು ಲಾರಾ ದತ್ತಾ ಅವರು ಕೈಕೇಯಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ದೊಡ್ಡ ತಾರಾಗಣವೇ ಈ ಚಿತ್ರದಲ್ಲಿದೆ. ನಮಿತ್ ಮಲ್ಹೋತ್ರಾ ಮತ್ತು ಯಶ್ ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ದಸರಾ ಹಬ್ಬದ ಸಮಯದಲ್ಲೇ ಚಿತ್ರದ ಮುಂಗಡ ಬುಕಿಂಗ್ ಆರಂಭವಾಗಲಿದೆ.

ಚಿತ್ರವು ಹಿಂದಿ, ತಮಿಳು, ತೆಲುಗು, ಕನ್ನಡ ಹಾಗೂ ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಐಮ್ಯಾಕ್ಸ್ ಸೇರಿದಂತೆ ಹಲವು ಪ್ರೀಮಿಯಂ ಫಾರ್ಮ್ಯಾಟ್‌ಗಳಲ್ಲಿ ಚಿತ್ರ ಮೂಡಿಬರಲಿದೆ. ಸೋನಿ ಪಿಕ್ಚರ್ಸ್ ಸಂಸ್ಥೆಯು ಭಾರತದ ಹೊರಗೆ ವಿಶ್ವದಾದ್ಯಂತ ಚಿತ್ರವನ್ನು ವಿತರಣೆ ಮಾಡಲಿದೆ. ಹಿಂದಿ ಮಾರುಕಟ್ಟೆಯಲ್ಲಿ ಧರ್ಮ ಪ್ರೊಡಕ್ಷನ್ಸ್ ಮೂಲಕ ಚಿತ್ರವು ಪ್ರೇಕ್ಷಕರನ್ನು ತಲುಪಲಿದೆ.

ಇದನ್ನೂ ಓದಿ:  ರಾಮಾಯಣ ಸಿನಿಮಾ ನಿರ್ಮಾಪಕ ನಮಿತ್ ಮಲ್ಹೋತ್ರಾ ಕಚೇರಿ, ಮನೆ ಮೇಲೆ ಐಟಿ ದಾಳಿ

ರಾಮಾಯಣ ಚಿತ್ರದ ಎರಡನೇ ಭಾಗವು 2027ರ ದೀಪಾವಳಿಗೆ ಬಿಡುಗಡೆಯಾಗಲಿದೆ. ಭಾರತೀಯ ಸಿನಿಮಾಗಳಲ್ಲೇ ಅತ್ಯಂತ ದೊಡ್ಡ ಬಜೆಟ್ ಹಾಗೂ ತಂತ್ರಜ್ಞಾನದ ಬಳಕೆಯಿಂದ ಈ ಮಹಾಕಾವ್ಯ ತಯಾರಾಗುತ್ತಿದೆ. ರಾಮನನ್ನು ಕಣ್ತುಂಬಿಕೊಳ್ಳಲು ಸಿನಿಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:24 am, Mon, 12 October 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕಲಬುರ್ಗಿಯಲ್ಲಿ ನಾಳೆ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಕೇಸರಿ ಕಹಳೆ
ಕಲಬುರ್ಗಿಯಲ್ಲಿ ನಾಳೆ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಕೇಸರಿ ಕಹಳೆ
ಹಿರಿಯೂರು ಬೈ ಎಲೆಕ್ಷನ್ ಟಿಕೆಟ್ ಫೈಟ್:ನಿಲುವು ಪ್ರಕಟಿಸಿದ ಹೆಚ್​​ಡಿಕೆ
ಹಿರಿಯೂರು ಬೈ ಎಲೆಕ್ಷನ್ ಟಿಕೆಟ್ ಫೈಟ್:ನಿಲುವು ಪ್ರಕಟಿಸಿದ ಹೆಚ್​​ಡಿಕೆ
ಹಾಸನ ಪೊಲೀಸ್ ನೋಟಿಸ್​​​ಗೆ ಕುಮಾರಸ್ವಾಮಿ ಕೆಂಡಾಮಂಡಲ
ಹಾಸನ ಪೊಲೀಸ್ ನೋಟಿಸ್​​​ಗೆ ಕುಮಾರಸ್ವಾಮಿ ಕೆಂಡಾಮಂಡಲ
ಬ್ಯಾಂಕ್, ಇತರ ಹಣಕಾಸು ಸಂಸ್ಥೆಗಳ ನೋಟಿಸ್ ಬಂದ್ರೆ ಏನು ಮಾಡಬೇಕು?
ಬ್ಯಾಂಕ್, ಇತರ ಹಣಕಾಸು ಸಂಸ್ಥೆಗಳ ನೋಟಿಸ್ ಬಂದ್ರೆ ಏನು ಮಾಡಬೇಕು?
ಧಾರಾಕಾರ ಮಳೆಯ ನಡುವೆಯೂ ಆಶಾ ಕಾರ್ಯಕರ್ತೆಯರ ಹೋರಾಟ
ಧಾರಾಕಾರ ಮಳೆಯ ನಡುವೆಯೂ ಆಶಾ ಕಾರ್ಯಕರ್ತೆಯರ ಹೋರಾಟ
ಗೊರಗುಂಟೆಪಾಳ್ಯದಿಂದ ಬೊಮ್ಮಸಂದ್ರಕ್ಕೆ ಹೃದಯ ಸಾಗಣೆ
ಗೊರಗುಂಟೆಪಾಳ್ಯದಿಂದ ಬೊಮ್ಮಸಂದ್ರಕ್ಕೆ ಹೃದಯ ಸಾಗಣೆ
ರಾಜೀನಾಮೆ ನೀಡಲು ಮುಂದಾಗಿದ್ದ ಕೈ ಶಾಸಕರನ್ನು ತಡೆದ ಕೆಪಿಸಿಸಿ ಅಧ್ಯಕ್ಷ
ರಾಜೀನಾಮೆ ನೀಡಲು ಮುಂದಾಗಿದ್ದ ಕೈ ಶಾಸಕರನ್ನು ತಡೆದ ಕೆಪಿಸಿಸಿ ಅಧ್ಯಕ್ಷ
‘100 ವರ್ಷ ಆದರೂ ಮರೆಯೋಕೆ ಸಾಧ್ಯವಿಲ್ಲ’: ಅಂಬರೀಷ್ ಬಗ್ಗೆ ಸುಮಲತಾ ಮಾತು
‘100 ವರ್ಷ ಆದರೂ ಮರೆಯೋಕೆ ಸಾಧ್ಯವಿಲ್ಲ’: ಅಂಬರೀಷ್ ಬಗ್ಗೆ ಸುಮಲತಾ ಮಾತು
ಕೆಲಸಕ್ಕೆ ಬಾರದವರೆಂದು ಕುಮಾರಸ್ವಾಮಿಯ ನಾಮಫಲಕ ತೆಗೆಸಿದ ಕಾಂಗ್ರೆಸ್ ಶಾಸಕ
ಕೆಲಸಕ್ಕೆ ಬಾರದವರೆಂದು ಕುಮಾರಸ್ವಾಮಿಯ ನಾಮಫಲಕ ತೆಗೆಸಿದ ಕಾಂಗ್ರೆಸ್ ಶಾಸಕ
ಜಪಾನ್‌ನಿಂದಲೇ ಆಶಾ ಕಾರ್ಯಕರ್ತೆಯರಿಗೆ ವಿಡಿಯೋ ಕಾಲ್ ಮಾಡಿದ ಸಿಎಂ!
ಜಪಾನ್‌ನಿಂದಲೇ ಆಶಾ ಕಾರ್ಯಕರ್ತೆಯರಿಗೆ ವಿಡಿಯೋ ಕಾಲ್ ಮಾಡಿದ ಸಿಎಂ!