AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ 2’ ಚಿತ್ರದಲ್ಲಿ ಹನುಮಂತನ ಪಾತ್ರಕ್ಕಾಗಿ ಕಾಯುತ್ತಿರುವ ಅಭಿಮಾನಿಗಳಿಗೆ ಗುಡ್ ನ್ಯೂಸ್

ರಾಮಾಯಣ ಪಾರ್ಟ್ 2 ಸಿನಿಮಾದಲ್ಲಿ ಹನುಮಂತನ ಪಾತ್ರದ ಚಿತ್ರೀಕರಣ ಭರಾಟೆಯಿಂದ ಸಾಗುತ್ತಿದೆ. ಈಗಾಗಲೇ ಶೇಕಡಾ 60ರಷ್ಟು ಶೂಟಿಂಗ್ ಮುಕ್ತಾಯಗೊಂಡಿದೆ. ಅತ್ಯುತ್ತಮ ವಿಎಫ್‌ಎಕ್ಸ್ ಹಾಗೂ ಗುಣಮಟ್ಟಕ್ಕಾಗಿ ಚಿತ್ರದ ಬಿಡುಗಡೆಯನ್ನು ಮುಂದೂಡಲಾಗಿದ್ದು, 2028ರ ದೀಪಾವಳಿಗೆ ಈ ಬ್ರಹ್ಮಾಂಡ ಸಿನಿಮಾ ತೆರೆಕಾಣಲಿದೆ ಎಂದು ನಿರ್ಮಾಪಕರು ಅಧಿಕೃತವಾಗಿ ಖಚಿತಪಡಿಸಿದ್ದಾರೆ.

‘ರಾಮಾಯಣ 2’ ಚಿತ್ರದಲ್ಲಿ ಹನುಮಂತನ ಪಾತ್ರಕ್ಕಾಗಿ ಕಾಯುತ್ತಿರುವ ಅಭಿಮಾನಿಗಳಿಗೆ ಗುಡ್ ನ್ಯೂಸ್
ರಾಮಾಯಣ
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 18, 2026 | 8:07 AM

Share

ಬಾಲಿವುಡ್‌ನ ಬಹುನಿರೀಕ್ಷಿತ ‘ರಾಮಾಯಣ‘ ಚಿತ್ರದ ಎರಡನೇ ಭಾಗದ ಕುರಿತು ರೋಚಕ ಮಾಹಿತಿ ಹೊರಬಂದಿದೆ. ಸಿನಿಮಾದಲ್ಲಿ ಹನುಮಂತನ ಪಾತ್ರದಲ್ಲಿ ನಟಿಸಲಿರುವ ಸನ್ನಿ ಡಿಯೋಲ್ ಅವರ ಅಭಿನಯವು ಪ್ರೇಕ್ಷಕರಿಗೆ ಭರ್ಜರಿ ಮನೋರಂಜನೆ ನೀಡಲಿದೆ. ಮೊದಲ ಭಾಗದ ಕೊನೆಯಲ್ಲಿ ಹನುಮಂತನ ಸಣ್ಣ ಝಲಕ್ ಮಾತ್ರ ತೋರಿಸಲಾಗಿತ್ತು. ಆದರೆ ಎರಡನೇ ಭಾಗದಲ್ಲಿ ಹನುಮಂತನ ಸಾಹಸಗಳು ಮತ್ತು ದೃಶ್ಯಗಳು ಪ್ರಮುಖ ಆಕರ್ಷಣೆಯಾಗಲಿವೆ ಎಂದು ಚಿತ್ರತಂಡ ತಿಳಿಸಿದೆ.

ಸಿನಿಮಾದ ಚಿತ್ರೀಕರಣ ಈಗಾಗಲೇ ಭರಾಟೆಯಿಂದ ಸಾಗುತ್ತಿದೆ. ಈಗಾಗಲೇ ಶೇಕಡಾ 60ರಷ್ಟು ಶೂಟಿಂಗ್ ಮುಕ್ತಾಯಗೊಂಡಿದೆ ಎಂದು ಚಿತ್ರದ ನುರಿತ ಸಿನಿಮಾಟೋಗ್ರಾಫರ್ ಪಂಕಜ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಪ್ರಮುಖ ದೃಶ್ಯಗಳ ಚಿತ್ರೀಕರಣ ಪೂರ್ಣಗೊಂಡಿದ್ದರೂ, ವಿಎಫ್‌ಎಕ್ಸ್ ಮತ್ತು ಮೋಷನ್ ಕ್ಯಾಪ್ಚರ್ ಕೆಲಸಗಳು ಬಾಕಿ ಇವೆ. ಮೊದಲ ಭಾಗಕ್ಕಿಂತ ಎರಡನೇ ಭಾಗವು ಅತ್ಯಂತ ಭವ್ಯವಾಗಿ ಮೂಡಿಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚಿತ್ರದಲ್ಲಿ ಹನುಮಂತನ ಪಾತ್ರದ ಮೇಲಿರುವ ನಿರೀಕ್ಷೆಗಳು ಬಹಳಷ್ಟಿವೆ. ವಾನರ ಸೇನೆ ಮತ್ತು ಸಿಜಿ (CG) ಪಾತ್ರಗಳ ನಿರ್ಮಾಣಕ್ಕೆ ಹೆಚ್ಚಿನ ಮುನ್ನಡೆ ನೀಡಲಾಗುತ್ತಿದೆ. ಅಚ್ಚುಕಟ್ಟಾದ ಕೆಲಸಕ್ಕಾಗಿ ಚಿತ್ರತಂಡ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದೆ. ಕಥೆಯು ಸುಂದರವಾಗಿ ತೆರೆದುಕೊಳ್ಳಲು ವಿಳಂಬವಾದರೂ ಪರವಾಗಿಲ್ಲ ಎಂದು ನಿರ್ಮಾಪಕರು ಅಭಿಪ್ರಾಯಪಟ್ಟಿದ್ದಾರೆ.

ನಿತೇಶ್ ತಿವಾರಿ ನಿರ್ದೇಶನದಲ್ಲಿ ಈ ಕಥೆಯು ಮೂಡಿಬರುತ್ತಿದೆ. ರಣಬೀರ್ ಕಪೂರ್ ರಾಮನಾಗಿ ಹಾಗೂ ಸಾಯಿ ಪಲ್ಲವಿ ಸೀತೆಯಾಗಿ ನಟಿಸುತ್ತಿದ್ದಾರೆ. ರಾವಣನ ಪಾತ್ರದಲ್ಲಿ ಯಶ್ ಕಾಣಿಸಿಕೊಳ್ಳಲಿದ್ದಾರೆ. ಲಕ್ಷಣನಾಗಿ ರವಿ ದುಬೆ ಅಭಿನಯಿಸುತ್ತಿದ್ದು, ತಾರಾಗಣದಲ್ಲಿ ದಿಗ್ಗಜ ಕಲಾವಿದರು ಸಾಥ್ ನೀಡಿದ್ದಾರೆ.

ಇದನ್ನೂ ಓದಿ: ‘ರಾಮಾಯಣ’ ಕಲೆಕ್ಷನ್: ‘ಧುರಂಧರ್’, ‘ಆರ್‌ಆರ್‌ಆರ್’, ‘ಕೆಜಿಎಫ್ 2’ ದಾಖಲೆ ಧೂಳೀಪಟ

ಚಿತ್ರದ ಅಂತಿಮ ಹಂತದ ಕೆಲಸಗಳು ವಿಳಂಬವಾಗದಂತೆ ನೋಡಿಕೊಳ್ಳಲಾಗುತ್ತಿದೆ. ಯಾವುದೆ ತರಾತುರಿ ನಿರ್ಧಾರಗಳನ್ನು ಕೈಗೊಳ್ಳದೆ ಗುಣಮಟ್ಟಕ್ಕೆ ಒತ್ತು ನೀಡಲಾಗಿದೆ. 2028ರ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಈ ಭವ್ಯ ಸಿನಿಮಾವು ತೆರೆಕಾಣಲಿದೆ. ಅದ್ದೂರಿ ದೃಶ್ಯಕಾವ್ಯವನ್ನು ಬೆಳ್ಳಿ ಪರದೆ ಮೇಲೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಕಾಮರ್ಸ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಫ್ರೀಲ್ಯಾನ್ಸಿಂಗ್ ಮಾಡುತ್ತಿದ್ದು, ಟಿವಿ9 ಕನ್ನಡದಲ್ಲಿಯೂ ಬರೆಯುತ್ತಿದ್ದೇನೆ.

Read More
ಇಂದು ಈ ರಾಶಿಯವರು ಜೊತೆಗಿರುವವರಿಂದ ಏನನ್ನೂ ನಿರೀಕ್ಷಿಸದಿರಿ
ಇಂದು ಈ ರಾಶಿಯವರು ಜೊತೆಗಿರುವವರಿಂದ ಏನನ್ನೂ ನಿರೀಕ್ಷಿಸದಿರಿ
16 ಲಕ್ಷ ರೂಪಾಯಿ ಮೌಲ್ಯದ 753 ಗ್ರಾಂ ಚರಸ್ ಜಪ್ತಿ: ಆರೋಪಿಗಳ ಬಂಧನ
16 ಲಕ್ಷ ರೂಪಾಯಿ ಮೌಲ್ಯದ 753 ಗ್ರಾಂ ಚರಸ್ ಜಪ್ತಿ: ಆರೋಪಿಗಳ ಬಂಧನ
ಫಿಲಿಪೈನ್ಸ್ ಭೇಟಿ ಮುಗಿಸಿ ಭಾರತಕ್ಕೆ ಹೊರಟ ಪ್ರಧಾನಿ ನರೇಂದ್ರ ಮೋದಿ
ಫಿಲಿಪೈನ್ಸ್ ಭೇಟಿ ಮುಗಿಸಿ ಭಾರತಕ್ಕೆ ಹೊರಟ ಪ್ರಧಾನಿ ನರೇಂದ್ರ ಮೋದಿ
‘ಶಂಕರಾಭರಣ’ ಬಸ್ ಸಿಕ್ಕ ಬಳಿಕ ಶೈನ್ ಶೆಟ್ಟಿ ಬದುಕಿನಲ್ಲಿ ಚಮತ್ಕಾರ
‘ಶಂಕರಾಭರಣ’ ಬಸ್ ಸಿಕ್ಕ ಬಳಿಕ ಶೈನ್ ಶೆಟ್ಟಿ ಬದುಕಿನಲ್ಲಿ ಚಮತ್ಕಾರ
ಯಲ್ಲಮ್ಮ ದೇಗುಲದ ಗೋಡೆ ಮೇಲೆ ಅಶ್ಲೀಲ ಚಿಹ್ನೆ ಬಿಡಿಸಿ ವಿಕೃತಿ
ಯಲ್ಲಮ್ಮ ದೇಗುಲದ ಗೋಡೆ ಮೇಲೆ ಅಶ್ಲೀಲ ಚಿಹ್ನೆ ಬಿಡಿಸಿ ವಿಕೃತಿ
ಶಿವಣ್ಣನ ಜೊತೆ ಶಬರಿಮಲೆಗೆ ಹೋದ ಘಟನೆ ನೆನಪಿಸಿಕೊಂಡ ಪ್ರೇಮ್ ಪುತ್ರಿ ಅಮೃತಾ
ಶಿವಣ್ಣನ ಜೊತೆ ಶಬರಿಮಲೆಗೆ ಹೋದ ಘಟನೆ ನೆನಪಿಸಿಕೊಂಡ ಪ್ರೇಮ್ ಪುತ್ರಿ ಅಮೃತಾ
ಚಿಕಿತ್ಸೆಗೆ 5 ಸಾವಿರ ರೂ. ಕಡಿಮೆ ಇದ್ದಿದ್ದಕ್ಕೆ ಮೊಬೈಲ್ ನೀಡುವಂತೆ ಒತ್ತಾಯ
ಚಿಕಿತ್ಸೆಗೆ 5 ಸಾವಿರ ರೂ. ಕಡಿಮೆ ಇದ್ದಿದ್ದಕ್ಕೆ ಮೊಬೈಲ್ ನೀಡುವಂತೆ ಒತ್ತಾಯ
ದೇವಸ್ಥಾನದೊಳಗೆ ಹೋಗದಂತೆ ನಿಖಿಲ್​​ಗೆ​​ ಅಡ್ಡಿ: ಕ್ಷಮೆಯಾಚಿಸಿದ ಕೈ ಮುಖಂಡ!
ದೇವಸ್ಥಾನದೊಳಗೆ ಹೋಗದಂತೆ ನಿಖಿಲ್​​ಗೆ​​ ಅಡ್ಡಿ: ಕ್ಷಮೆಯಾಚಿಸಿದ ಕೈ ಮುಖಂಡ!
‘ಪ್ರೇಮದ ಊರಲಿ’ ಸಿನಿಮಾದ ಯಶಸ್ಸಿನ ಬಗ್ಗೆ ರಂಗಾಯಣ ರಘು ಪತ್ನಿ ಮನದ ಮಾತು
‘ಪ್ರೇಮದ ಊರಲಿ’ ಸಿನಿಮಾದ ಯಶಸ್ಸಿನ ಬಗ್ಗೆ ರಂಗಾಯಣ ರಘು ಪತ್ನಿ ಮನದ ಮಾತು
ಮಂಜನನ್ನೇ ನಾಮಿನೇಟ್ ಮಾಡಿ ಸಗಣಿ ಸುರಿದ ‘ಮಂಜಿ’: ವಿಡಿಯೋ
ಮಂಜನನ್ನೇ ನಾಮಿನೇಟ್ ಮಾಡಿ ಸಗಣಿ ಸುರಿದ ‘ಮಂಜಿ’: ವಿಡಿಯೋ