AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಯಾ-ರಣಬೀರ್ ಹೊಸ ಮನೆಯಲ್ಲಿ ಕಂಗೊಳಿಸಲಿದೆ ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿದ ಗಣಪತಿ ಮೂರ್ತಿ

ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ಮುಂಬೈನಲ್ಲಿ ಹೊಸ ಮನೆ ನಿರ್ಮಾಣ ಮಾಡಿದ್ದಾರೆ. ರಹಾ ಹೆಸರಲ್ಲಿ ಈ ಮನೆ ಇದೆ. ಈಗ ಆಲಿಯಾ ಭಟ್ ಅವರು ಅರುಣ್ ಯೋಗಿರಾಜ್ ಬಳಿ ಗಣಪನ ಮೂರ್ತಿ ಕೆತ್ತಿಸಿದ್ದಾರೆ. ಆ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.

ಆಲಿಯಾ-ರಣಬೀರ್ ಹೊಸ ಮನೆಯಲ್ಲಿ ಕಂಗೊಳಿಸಲಿದೆ ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿದ ಗಣಪತಿ ಮೂರ್ತಿ
ಆಲಿಯಾ ಮನೆ ಗಣಪತಿ ಮೂರ್ತಿ
ರಾಮ್​, ಮೈಸೂರು
| Updated By: ರಾಜೇಶ್ ದುಗ್ಗುಮನೆ|

Updated on:Oct 16, 2025 | 9:56 AM

Share

ಅರುಣ್ ಯೋಗಿರಾಜ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ‌. ಅಯೋಧ್ಯೆ ರಾಮಲಲ್ಲಾನ ವಿಗ್ರಹ ಕೆತ್ತನೆ ಮಾಡಿ ವಿಶ್ವದಲ್ಲೇ ಮನೆ ಮಾತಾಗಿದ್ದಾರೆ. ಇದೀಗ ಅರುಣ್ ಯೋಗಿರಾಜ್ ಬಾಲಿವುಡ್ ಸ್ಟಾರ್ ದಂಪತಿ ರಣಬೀರ್ ಹಾಗೂ ಆಲಿಯಾ ಮನೆಗಾಗಿವಿಶೇಷ ಗಣಪತಿ ವಿಗ್ರಹವನ್ನು ಕೆತ್ತನೆ ಮಾಡಿಕೊಟ್ಟಿದ್ದಾರೆ. ಅತ್ಯಂತ ಆಕರ್ಷಕವಾಗಿರುವ ವಿಘ್ನ ನಿವಾರಕನ ಮೂರ್ತಿ ಈಗ ಎಲ್ಲರ ಗಮನ ಸೆಳೆಯುತ್ತಿದೆ‌.

ಬಾಲಿವುಡ್‌ ತಾರ ದಂಪತಿ ರಣಬೀರ್‌ ಕಪೂರ್‌ ಹಾಗೂ ಆಲಿಯಾ ಭಟ್‌ ಹೊಸ ಮನೆ ಗೃಹ ಪ್ರವೇಶ ಶೀಘ್ರವೇ ನಡೆಯಲಿದೆ. ಈ ಮನೆ ಅವರ ಮಗಳು ರಹಾ ಹೆಸರಲ್ಲಿದೆ. ನೂರಾರು ಕೋಟಿ ಬೆಲೆ ಬಾಳುವ ಹೊಸ ಮನೆಯಲ್ಲಿ ಗಣಪನ ವಿಗ್ರಹ ಪ್ರತಿಷ್ಠಾಪನೆ ಮಾಡಲು ಅಲಿಯಾ ಹಾಗೂ ರಣಬೀರ್ ನಿರ್ಧಾರ ಮಾಡಿದ್ದರು. ಶಿಲ್ಪಿ ಅರುಣ್‌ ಯೋಗಿರಾಜ್‌ ಅವರೇ ಆ ಗಣಪನ ವಿಗ್ರಹ ಕೆತ್ತನೆ ಮಾಡಬೇಕೆಂಬುದು ಅವರ ಆಸೆಯಾಗಿತ್ತು. ಅದರಂತೆ ದಂಪತಿ 6 ತಿಂಗಳ ಹಿಂದೆ ಅರುಣ್ ಯೋಗಿರಾಜ್ ಅವರನ್ನು ಸಂಪರ್ಕಿಸಿದ್ದರು. ದಂಪತಿ ಆಸೆಯಂತೆ ಶಿಲ್ಪಿ ಅರುಣ್ ಯೋಗಿರಾಜ್ ಅವರ ಅವಶ್ಯಕತೆಯ ಎಲ್ಲಾ ಮಾಹಿತಿ ಪಡೆದುಕೊಂಡು ಕೆಲಸ ಆರಂಭಿಸಿದರು. ಹಗಲು ರಾತ್ರಿ ಕೆತ್ತನೆ ಕೆಲಸ ಮಾಡಿದ ಅರುಣ್ ಕೈ ಚಳಕದಲ್ಲಿ ಗಣಪನ ಅದ್ಬುತ ಕಲಾಕೃತಿ ಮೂಡಿಬಂದಿದೆ. ನಾಲ್ಕು ಅಡಿ ಎತ್ತರವಿರುವ ಗಣಪನ ವಿಗ್ರಹದ ಪೀಠ ಮೂರು ಅಡಿ ಎತ್ತರವಿದೆ. ಹೊಯ್ಸಳ ಹಾಗೂ ಮೈಸೂರು ಶೈಲಿಯಲ್ಲಿ ಗಣಪನ ವಿಗ್ರಹವನ್ನು ಕೆತ್ತನೆ ಮಾಡಲಾಗಿದೆ‌‌. ಅ 17 ರಂದು ಆಲಿಯಾ ಭಟ್ ಕುಟುಂಬಸ್ಥರಿಂದ ಗಣಪತಿಗೆ ಪೂಜೆ ನಡೆಯಲಿದೆ.

ಇದನ್ನೂ ಓದಿ:  ಕಾನ್ ಚಿತ್ರೋತ್ಸವದಲ್ಲಿ ದಕ್ಷಿಣದ ನಟನ ಬಗ್ಗೆ ಆಲಿಯಾ ಭಟ್ ಮಾತು

ಇದನ್ನೂ ಓದಿ
Image
ಸಪ್ತಪದಿ ತುಳಿಯುವಾಗಲೇ ಕರ್ಣನಿಗೆ ಗೊತ್ತಾಯ್ತು ನಿಧಿ ಪ್ರೆಗ್ನೆನ್ಸಿ ವಿಚಾರ
Image
ಬಕ್ರಾ ಮಾಡಲು ಬಂದ ಜಾನ್ವಿ-ಅಶ್ವಿನಿಗೆ ಮಣ್ಣು ಮುಕ್ಕಿಸಿದ ರಕ್ಷಿತಾ ಶೆಟ್ಟಿ
Image
ಬಿಗ್ ಬಾಸ್ ಮನೆಯಲ್ಲಿ ಮಿಡ್ ವೀಕ್ ಎಲಿಮಿನೇಷನ್; ಆ ಇಬ್ಬರು ಔಟ್?
Image
ಸ್ಪರ್ಧಿಗಳಿಗೆ ಕೊನೆಯ ಅವಕಾಶ ಕೊಟ್ಟ ‘ಬಿಗ್ ಬಾಸ್​’; ಮಾಡು ಇಲ್ಲವೇ ಮಡಿ

ಅಯೋಧ್ಯೆಯ ಶ್ರೀರಾಮಲಲ್ಲಾ ಮೂರ್ತಿ ಕೆತ್ತನೆಗೆ ಮನಸೋತ ಆಲಿಯಾ ಹಾಗೂ ರಣಬೀರ್, ಗಣಪ‌ ಮೂರ್ತಿ ಮಾಡಿಕೊಡುವಂತೆ ಅರುಣ್ ಯೋಗಿರಾಜ್‌ಗೆ ಮನವಿ ಮಾಡಿದ್ದರು. ಅರುಣ್ ಅವರನ್ನು ಮುಂಬೈಗೆ ಕರೆಸಿಕೊಂಡು ಈ ಬಗ್ಗೆ ಚರ್ಚೆ ಸಹ ನಡೆಸಿದ್ದರು. ಇದರ ಫಲವಾಗಿ ಆಕರ್ಷಕ  ವಿನಾಯಕನ ಮೂರ್ತಿ ರೂಪುಗೊಂಡಿದೆ. ಕನ್ನಡಿಗ ಶಿಲ್ಪಿ ಅರುಣ್ ಯೋಗಿರಾಜ್ ಹಿರಿಮೆ ಗರಿಮೆ ಬಾಲಿವುಡ್ ಅಂಗಳವನ್ನು ತಲುಪಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:53 am, Thu, 16 October 25

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ