
ಬಾಲಿವುಡ್ನಲ್ಲಿ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ (Sanjay Leela Bhansali) ಅವರು ಗಮನಾರ್ಹ ಸಿನಿಮಾಗಳನ್ನು ಮಾಡಿದ್ದಾರೆ. ಅವರ ಸಿನಿಮಾಗಳಲ್ಲಿ ನಟಿಸುವ ಕಲಾವಿದರಿಗೆ ಸಿಕ್ಕಾಪಟ್ಟೆ ಖ್ಯಾತಿ ಹೆಚ್ಚಾಗುತ್ತದೆ. ‘ದೇವದಾಸ್’, ‘ಪದ್ಮಾವತ್’, ‘ಬಾಜಿರಾವ್ ಮಸ್ತಾನಿ’ ಮುಂತಾದ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಸಂಜಯ್ ಲೀಲಾ ಬನ್ಸಾಲಿ ಅವರು ಈಗ ‘ಲವ್ ಆ್ಯಂಡ್ ವಾರ್’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ವಿಕ್ಕಿ ಕೌಶಲ್ (Vicky Kaushal), ಆಲಿಯಾ ಭಟ್, ರಣಬೀರ್ ಕಪೂರ್ ಅವರು ಪ್ರಮುಖ ಪಾತ್ರಗಳನ್ನು ಮಾಡುತ್ತಿದ್ದಾರೆ, ಪಾತ್ರಕ್ಕಾಗಿ ವಿಕ್ಕಿ ಕೌಶಲ್ ಹಾಗೂ ರಣಬೀರ್ ಕಪೂರ್ (Ranbir Kapoor) ಅವರು ಸಖತ್ ಸ್ಲಿಮ್ ಆಗಿದ್ದಾರೆ.
ಎಲ್ಲ ಪಾತ್ರಗಳು ತುಂಬ ಫರ್ಫೆಕ್ಟ್ ಆಗಿ ಕಾಣಬೇಕು ಎಂದು ಸಂಜಯ್ ಲೀಲಾ ಬನ್ಸಾಲಿ ನಿರೀಕ್ಷಿಸುತ್ತಾರೆ. ಅದಕ್ಕಾಗಿ ಅವರು ತಮ್ಮ ಸಿನಿಮಾದ ಕಲಾವಿದರಿಗೆ ಟಾಸ್ಕ್ ನೀಡುತ್ತಾರೆ. ಆ ಪ್ರಕಾರ, ‘ಲವ್ ಆ್ಯಂಡ್ ವಾರ್’ ಸಿನಿಮಾದಲ್ಲಿ ರಣಬೀರ್ ಕಪೂರ್ ಅವರು 12 ಕೆಜಿ ದೇಹದ ತೂಕ ಕಡಿಮೆ ಮಾಡಿಕೊಂಡಿದ್ದಾರೆ. ಅದೇ ರೀತಿ, ವಿಕ್ಕಿ ಕೌಶಲ್ ಅವರು 15 ಕೆಜಿ ದೇಹದ ತೂಕ ಇಳಿಸಿಕೊಂಡಿದ್ದಾರೆ.
‘ಲವ್ ಆ್ಯಂಡ್ ವಾರ್’ ಸಿನಿಮಾದಲ್ಲಿ ವಿಕ್ಕಿ ಕೌಶಲ್ ಮತ್ತು ರಣಬೀರ್ ಕಪೂರ್ ಅವರು ಮಿಲಿಟರಿ ಅಧಿಕಾರಿಗಳ ಪಾತ್ರ ಮಾಡುತ್ತಿದ್ದಾರೆ. ಪಾತ್ರಕ್ಕೆ ತಕ್ಕಂತೆ ಫಿಟ್ ಆಗಿ ಕಾಣಿಸಲು ಅವರಿಬ್ಬರು ಸ್ಲಿಮ್ ಆಗಿದ್ದಾರೆ. ಅವರ ಫಸ್ಟ್ ಲುಕ್ ಇನ್ನೂ ಬಿಡುಗಡೆ ಆಗಿಲ್ಲ. ಸ್ಲಿಮ್ ಗೆಟಪ್ನಲ್ಲಿ ಅವರು ಯಾವ ರೀತಿ ಕಾಣುತ್ತಾರೆ ಎಂಬುದನ್ನು ತಿಳಿಯಲು ಫ್ಯಾನ್ಸ್ ಉತ್ಸುಕರಾಗಿದ್ದಾರೆ.
ಸಿನಿಮಾದ ಶೀರ್ಷಿಕೆಯೇ ಹೇಳುವಂತೆ ‘ಲವ್ ಆ್ಯಂಡ್ ವಾರ್’ ಚಿತ್ರದಲ್ಲಿ ಪ್ರೀತಿ ಮತ್ತು ಯುದ್ಧದ ಕಹಾನಿ ಇರಲಿದೆ. ಇದು ತ್ರಿಕೋನ ಪ್ರೇಮಕಥೆ ಆಗಿರಲಿದೆ. ಸಂಜಯ್ ಲೀಲಾ ಬನ್ಸಾಲಿ ಅವರು ಎಮೋಷನಲ್ ದೃಶ್ಯಗಳನ್ನು ತುಂಬ ಚೆನ್ನಾಗಿ ಕಟ್ಟಿಕೊಡುತ್ತಾರೆ. ಆ ಕಾರಣದಿಂದ ‘ಲವ್ ಆ್ಯಂಡ್ ವಾರ್’ ಸಿನಿಮಾ ಮೇಲೆ ನಿರೀಕ್ಷೆ ಮೂಡಿದೆ. ಸಿನಿಮಾದ ಚಿತ್ರೀಕರಣ ಪ್ರಗತಿಯಲ್ಲಿದೆ.
ಇದನ್ನೂ ಓದಿ: ಮಗಳ ಫೋಟೋ ತೆಗೆದರೆ ಕಾನೂನು ಕ್ರಮ: ಎಚ್ಚರಿಕೆ ನೀಡಿದ ರಣಬೀರ್, ಆಲಿಯಾ ಭಟ್
2026ರ ಮಾರ್ಚ್ ವೇಳೆಗೆ ‘ಲವ್ ಆ್ಯಂಡ್ ವಾರ್’ ಸಿನಿಮಾ ಬಿಡುಗಡೆ ಆಗಲಿದೆ. ಇತ್ತೀಚೆಗಷ್ಟೇ ಆಲಿಯಾ ಭಟ್, ವಿಕ್ಕಿ ಕೌಶಲ್ ಮತ್ತು ರಣಬೀರ್ ಕಪೂರ್ ಅವರು ಒಟ್ಟಾಗಿ ಶೂಟಿಂಗ್ನಲ್ಲಿ ಭಾಗಿಯಾಗಿದ್ದಾರೆ. ಈ ಮೂವರ ಕಾಂಬಿನೇಷನ್ ಹಾಗೂ ಸಂಜಯ್ ಲೀಲಾ ಬನ್ಸಾಲಿ ಅವರ ನಿರ್ದೇಶನ ಎಂಬ ಕಾರಣಕ್ಕೆ ಸಿನಿಪ್ರಿಯರ ನಿರೀಕ್ಷೆ ಡಬಲ್ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.