ರಣಬೀರ್ ಮಾತ್ರ ಹಾಗೆ ಕರೆಯುತ್ತಾರೆ, ಅದು ನನಗೆ ಕೊಂಚವೂ ಇಷ್ಟವಿಲ್ಲ ಎಂದ ರಶ್ಮಿಕಾ ಮಂದಣ್ಣ
‘ಅನಿಮಲ್’ ಚಿತ್ರದಲ್ಲಿ ರಣಬೀರ್ ಹಾಗೂ ರಶ್ಮಿಕಾ ನಟಿಸುತ್ತಿದ್ದಾರೆ. ಅನೀಲ್ ಕಪೂರ್, ಬಾಬಿ ಡಿಯೋಲ್ ಕೂಡ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.
ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ‘ಮಿಷನ್ ಮಜ್ನು’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಈ ಸಿನಿಮಾ ಮೂಲಕ ಅವರು ಬಾಲಿವುಡ್ಗೆ ಕಾಲಿಡುತ್ತಿದ್ದಾರೆ. ಈ ಚಿತ್ರ ತೆರೆಗೆ ಬರುವುದಕ್ಕೂ ಮೊದಲೇ ಅವರಿಗೆ ಬಾಲಿವುಡ್ನಿಂದ ಸಾಕಷ್ಟು ಆಫರ್ಗಳು ಬರುತ್ತಿವೆ. ಅಮಿತಾಭ್ ಬಚ್ಚನ್ ಜತೆ ‘ಗುಡ್ಬೈ’ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಇದಲ್ಲದೆ, ರಣಬೀರ್ ಕಪೂರ್ (Ranbir Kapoor) ಚಿತ್ರಕ್ಕೂ ರಶ್ಮಿಕಾ ನಾಯಕಿ ಆಗಿದ್ದಾರೆ. ಈ ಚಿತ್ರದ ಸೆಟ್ನ ಅನುಭವವನ್ನು ರಶ್ಮಿಕಾ ಹಂಚಿಕೊಂಡಿದ್ದಾರೆ. ರಶ್ಮಿಕಾ ಅವರನ್ನು ರಣಬೀರ್ ‘ಮ್ಯಾಮ್’ ಎಂದು ಕರೆಯುತ್ತಾರೆ. ರಣಬೀರ್ ಬಗ್ಗೆ ಇದ್ದ ಗೌರವ ರಶ್ಮಿಕಾಗೆ ಹೆಚ್ಚಿದೆ. ಈ ಬಗ್ಗೆ ಅವರು ಮಾತನಾಡಿದ್ದಾರೆ.
‘ರಣಬೀರ್ ತುಂಬಾನೇ ಲವೆಬಲ್. ಅವರನ್ನು ಮೊದಲ ಬಾರಿ ಭೇಟಿ ಮಾಡುವಾಗ ನಾನು ನರ್ವಸ್ ಆಗಿದ್ದೆ. ಆದರೆ, ಐದೇ ನಿಮಿಷಗಳಲ್ಲಿ ಅವರ ಜತೆ ಒಳ್ಳೆಯ ಬಾಂಧವ್ಯ ಬೆಳೆಯಿತು. ಇಡೀ ಇಂಡಸ್ಟ್ರಿಯಲ್ಲಿ ಅವರು ಮಾತ್ರ ನನ್ನನ್ನು ಮ್ಯಾಮ್ ಎಂದು ಸಂಭೋದಿಸುತ್ತಾರೆ. ನನಗೆ ಅದು ಇಷ್ಟ ಆಗುವುದಿಲ್ಲ’ ಎಂದಿದ್ದಾರೆ ರಶ್ಮಿಕಾ.
‘ಅನಿಮಲ್’ ಚಿತ್ರದಲ್ಲಿ ರಣಬೀರ್ ಹಾಗೂ ರಶ್ಮಿಕಾ ನಟಿಸುತ್ತಿದ್ದಾರೆ. ಅನಿಲ್ ಕಪೂರ್, ಬಾಬಿ ಡಿಯೋಲ್ ಕೂಡ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಸಿನಿಮಾ ಕ್ರೈಮ್ ಕಥೆಯನ್ನುಹೊಂದಿದೆ. ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ.
ರಶ್ಮಿಕಾ ಮಂದಣ್ಣ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ‘ಗುಡ್ಬೈ’ ಹಾಗೂ ‘ಮಿಷನ್ ಮಜ್ನು’ ರಿಲೀಸ್ಗೆ ರೆಡಿ ಇದೆ. ತಮಿಳಿನ ದಳಪತಿ ವಿಜಯ್ ಚಿತ್ರಕ್ಕೆ ರಶ್ಮಿಕಾ ನಾಯಕಿ. ‘ಪುಷ್ಪ 2’ ಚಿತ್ರದ ಶೂಟಿಂಗ್ ಜುಲೈ ತಿಂಗಳಿಂದ ಆರಂಭಗೊಳ್ಳಲಿದೆ. ‘ಪುಷ್ಪ’ ಹಿಟ್ ಆದ ನಂತರದಲ್ಲಿ ಈ ಚಿತ್ರದ ಬಗ್ಗೆ ನಿರೀಕ್ಷೆ ಮೂಡಿದೆ. ಫಿಲ್ಮ್ಫೇರ್ ಮ್ಯಾಗಜಿನ್ಗಾಗಿ ರಶ್ಮಿಕಾ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳು ಸಖತ್ ವೈರಲ್ ಆಗಿದೆ. ರಣಬೀರ್ ‘ಬ್ರಹ್ಮಾಸ್ತ್ರ’ ಸಿನಿಮಾದ ಕೊನೆಯ ಹಂತದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದಲ್ಲಿ ಆಲಿಯಾಗೆ ಜತೆಯಾಗಿ ಅವರು ಕಾಣಿಸಿಕೊಂಡಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.