AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧೂಮ್ 4’ ವದಂತಿಗಳಿಗೆ ಕೊನೆಗೂ ಬ್ರೇಕ್ ಹಾಕಿದ ರಣಬೀರ್ ಕಪೂರ್

'ರಾಮಾಯಣ' ಚಿತ್ರದ ಪ್ರಚಾರದಲ್ಲಿ ಬ್ಯುಸಿಯಾಗಿರುವ ನಟ ರಣಬೀರ್ ಕಪೂರ್, ತಾವು 'ಧೂಮ್ 4' ಚಿತ್ರದಲ್ಲಿ ನಟಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ರಾಮಾಯಣ ಹಾಗೂ 2027ರಲ್ಲಿ ರಿಲೀಸ್ ಆಗಲಿರುವ 'ಲವ್ ಅಂಡ್ ವಾರ್' ಸಿನಿಮಾಗಳಲ್ಲಿ ಮಾತ್ರ ಕೆಲಸ ಮಾಡುತ್ತಿರುವುದಾಗಿ ಅವರು ತಿಳಿಸಿದ್ದಾರೆ .

'ಧೂಮ್ 4' ವದಂತಿಗಳಿಗೆ ಕೊನೆಗೂ ಬ್ರೇಕ್ ಹಾಕಿದ ರಣಬೀರ್ ಕಪೂರ್
ರಣಬೀರ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Jul 27, 2026 | 11:00 AM

Share

ಮುಖ್ಯಾಂಶಗಳು

  • ಧೂಮ್ 4' ರೇಸ್‌ನಿಂದ ಹೊರಬಿದ್ದ ರಣಬೀರ್ ಕಪೂರ್
  • ವದಂತಿಗಳಿಗೆ ಬಿದ್ದಿತು ಪೂರ್ಣವಿರಾಮ
  • ಹೊಸ ಸಿನಿಮಾ ಡೇಟ್ ಅನೌನ್ಸ್ ಮಾಡಿದ ರಣಬೀರ್

ಬಾಲಿವುಡ್ ಸ್ಟಾರ್ ನಟ ರಣಬೀರ್ ಕಪೂರ್ ಸದ್ಯ ತಮ್ಮ ಮೋಸ್ಟ್ ಅಡ್ವೆಂಚರಸ್ ಪ್ರಾಜೆಕ್ಟ್ ‘ರಾಮಾಯಣ’ ಚಿತ್ರದ ಮೂಲಕ ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ಇತ್ತೀಚೆಗೆ ಸ್ಯಾನ್ ಡಿಯಾಗೋ ಕಾಮಿಕ್-ಕಾನ್ (SDCC) 2026 ಕಾರ್ಯಕ್ರಮದಲ್ಲಿ ನಿರ್ದೇಶಕ ನಿತೇಶ್ ತಿವಾರಿ, ನಿರ್ಮಾಪಕ ನಮಿತ್ ಮಲ್ಹೋತ್ರಾ ಹಾಗೂ ಸ್ಯಾಂಡಲ್‌ವುಡ್ ರಾಕಿಂಗ್ ಸ್ಟಾರ್ ಯಶ್ ಅವರೊಂದಿಗೆ ಭಾಗವಹಿಸಿ ಚಿತ್ರದ ಪ್ರಚಾರ ಮಾಡಿದ್ದರು. ಈ ಅದ್ಧೂರಿ ವೇದಿಕೆಯಲ್ಲಿ ರಣಬೀರ್ ಕಪೂರ್ ತಮ್ಮ ಮುಂಬರುವ ಸಿನಿಮಾಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಅವರು ‘ಧೂಮ್ 4’ ಚಿತ್ರದಲ್ಲಿ ನಟಿಸಲಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿದ್ದವು. ಈಗ ಸ್ವತಃ ರಣಬೀರ್ ಅವರೇ ಈ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ಅಭಿಮಾನಿಗಳ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.

ಸಂದರ್ಶನವೊಂದರಲ್ಲಿ ನಿರೂಪಕರು ನಟ ಯಶ್ ಅವರ ‘ಟಾಕ್ಸಿಕ್’ ಸಿನಿಮಾ ಹಾಗೂ ರಣಬೀರ್ ಅವರ ‘ಧೂಮ್ 4’ ಚಿತ್ರದ ಬಗ್ಗೆ ಪ್ರಸ್ತಾಪಿಸಿದರು. ಇದಕ್ಕೆ ತಕ್ಷಣವೇ ಪ್ರತಿಕ್ರಿಯಿಸಿದ ರಣಬೀರ್ ಕಪೂರ್, ‘ಸದ್ಯಕ್ಕೆ ನಾನು ಧೂಮ್ 4 ಚಿತ್ರದಲ್ಲಿ ನಟಿಸುತ್ತಿಲ್ಲ. ಈಗ ನನ್ನ ಗಮನವೇನಿದ್ದರೂ ನಿತೇಶ್ ತಿವಾರಿ ಅವರ ‘ರಾಮಾಯಣ’ ಮತ್ತು ಸಂಜಯ್ ಲೀಲಾ ಬನ್ಸಾಲಿ ಅವರ ‘ಲವ್ ಆ್ಯಂಡ್ ವಾರ್’ ಚಿತ್ರಗಳ ಮೇಲಷ್ಟೇ ಇದೆ. ‘ಲವ್ ಆ್ಯಂಡ್ ವಾರ್’ ಸಿನಿಮಾ 2027ರ ಜನವರಿಯಲ್ಲಿ ತೆರೆಗೆ ಬರಲಿದೆ’ ಎಂದು ಸ್ಪಷ್ಟಪಡಿಸಿದರು. ರಣಬೀರ್ ಅವರ ಈ ನೇರ ನುಡಿಯು ‘ಧೂಮ್ 4’ ಚಿತ್ರಕ್ಕೆ ಅವರು ಎಂಟ್ರಿ ಕೊಡಲಿದ್ದಾರೆ ಎಂಬ ಎಲ್ಲ ಚರ್ಚೆಗಳಿಗೂ ಪೂರ್ಣವಿರಾಮ ಇಟ್ಟಿದೆ.

‘ಅನಿಮಲ್ ಪಾರ್ಕ್’ ಬಗ್ಗೆಯೂ ಮೌನವಹಿಸಿದ ರಣಬೀರ್

ಇದೇ ಸಂದರ್ಭದಲ್ಲಿ ರಣಬೀರ್ ಕಪೂರ್ ತಮ್ಮ ಮುಂಬರುವ ಚಿತ್ರಗಳ ಪಟ್ಟಿಯನ್ನು ಹೇಳುವಾಗ ಸೂಪರ್ ಹಿಟ್ ‘ಅನಿಮಲ್’ ಚಿತ್ರದ ಸೀಕ್ವೆಲ್ ಆದ ‘ಅನಿಮಲ್ ಪಾರ್ಕ್’ ಬಗ್ಗೆ ಯಾವುದೇ ಉಲ್ಲೇಖ ಮಾಡದಿರುವುದು ಸಿನಿಪ್ರೇಮಿಗಳಲ್ಲಿ ಅಚ್ಚರಿ ಮೂಡಿಸಿದೆ. ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಈ ಸಿನಿಮಾದಲ್ಲಿ ರಣಬೀರ್ ನಟಿಸುವುದು ಪಕ್ಕಾ ಎನ್ನಲಾಗುತ್ತಿತ್ತಾದರೂ, ಈ ಪ್ರಾಜೆಕ್ಟ್ ಸದ್ಯ ಯಾವ ಹಂತದಲ್ಲಿದೆ ಎಂಬ ಬಗ್ಗೆ ನಟ ಯಾವುದೇ ಸುಳಿವು ಬಿಟ್ಟುಕೊಟ್ಟಿಲ್ಲ.

‘ಧೂಮ್ 4’ ಚರ್ಚೆಗಳು ಶುರುವಾಗಿದ್ದು ಹೇಗೆ?

2024ರಲ್ಲಿ ಹೊರಬಿದ್ದ ಕೆಲವು ಮಾಧ್ಯಮ ವರದಿಗಳ ಪ್ರಕಾರ, ನಿರ್ಮಾಪಕ ಆದಿತ್ಯ ಚೋಪ್ರಾ ಅವರು ‘ಧೂಮ್ 4’ ಚಿತ್ರದ ಖಳನಾಯಕನ ಪಾತ್ರಕ್ಕೆ ರಣಬೀರ್ ಕಪೂರ್ ಸೂಕ್ತ ಆಯ್ಕೆ ಎಂದು ಭಾವಿಸಿದ್ದರು ಎನ್ನಲಾಗಿತ್ತು. ಇದರ ಬೆನ್ನಲ್ಲೇ ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಆಲಿಮ್ ಹಕೀಮ್ ಅವರು ರಣಬೀರ್ ಅವರ ಹೊಸ ಸ್ಟೈಲಿಶ್ ಲುಕ್ ಒಂದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದನ್ನು ನೋಡಿದ ಅಭಿಮಾನಿಗಳು ಇದು ‘ಧೂಮ್ 4’ ಅಥವಾ ‘ಅನಿಮಲ್ ಪಾರ್ಕ್’ ಚಿತ್ರದ್ದೇ ಇರಬಹುದು ಎಂದು ಊಹಿಸಿದ್ದರು. ಇದರ ನಡುವೆ ವಿಕ್ಕಿ ಕೌಶಲ್ ಹೆಸರೂ ಕೂಡ ಕೇಳಿಬಂದಿತ್ತು. ಆದರೆ ಯಶ್ ರಾಜ್ ಫಿಲ್ಮ್ಸ್ ಈವರೆಗೂ ‘ಧೂಮ್ 4’ ಚಿತ್ರದ ತಾರಾಗಣದ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ.

ಇದನ್ನೂ ಓದಿ: ಧೂಮ್​ ಸಿನಿಮಾ ಪ್ರೇರಣೆ, ಶ್ರೀಮಂತರ ಮನೆಗಳೇ ಟಾರ್ಗೆಟ್​​: ಬೆಳಗಾವಿಯಲ್ಲೊಬ್ಬ ಖತರ್ನಾಕ್​ ಕಳ್ಳ

‘ಧೂಮ್’ ಫ್ರಾಂಚೈಸಿಯ ಯಶಸ್ವಿ ಪಯಣ

2004ರಲ್ಲಿ ತೆರೆಕಂಡ ‘ಧೂಮ್’ ಸಿನಿಮಾ ಬಾಲಿವುಡ್‌ನಲ್ಲಿ ಹೈ-ಸ್ಪೀಡ್ ಆಕ್ಷನ್ ಚಿತ್ರಗಳ ಹೊಸ ಟ್ರೆಂಡ್ ಸೃಷ್ಟಿಸಿತ್ತು. ಮೊದಲ ಭಾಗದಲ್ಲಿ ಜಾನ್ ಅಬ್ರಹಾಂ ಖಳನಾಯಕನಾಗಿ ಅಬ್ಬರಿಸಿದರೆ, ಅಭಿಷೇಕ್ ಬಚ್ಚನ್ ಮತ್ತು ಉದಯ್ ಚೋಪ್ರಾ ಪೋಲೀಸ್ ಅಧಿಕಾರಿಗಳಾಗಿ ಕಾಣಿಸಿಕೊಂಡಿದ್ದರು. ಆ ಬಳಿಕ ಹೃತಿಕ್ ರೋಷನ್ ಮತ್ತು ಐಶ್ವರ್ಯಾ ರೈ ನಟನೆಯ ‘ಧೂಮ್ 2’ ಪ್ರೇಕ್ಷಕರ ಹೃದಯ ಗೆದ್ದರೆ, ಆಮಿರ್ ಖಾನ್ ಅವರ ದ್ವಿಪಾತ್ರವಿದ್ದ ‘ಧೂಮ್ 3’ ಬಾಕ್ಸ್ ಆಫೀಸ್‌ನಲ್ಲಿ ದಾಖಲೆಯ ಕಲೆಕ್ಷನ್ ಮಾಡಿ ಇತಿಹಾಸ ಬರೆದಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ
ಶಿವಗಂಗೆ ಬೆಟ್ಟದಲ್ಲಿ ಮಂಗನ ಚೇಷ್ಟೆ: ಪ್ರವಾಸಿಗರ ಮೊಬೈಲ್ ಕಸಿದು ಪುಂಡಾಟ!
ಶಿವಗಂಗೆ ಬೆಟ್ಟದಲ್ಲಿ ಮಂಗನ ಚೇಷ್ಟೆ: ಪ್ರವಾಸಿಗರ ಮೊಬೈಲ್ ಕಸಿದು ಪುಂಡಾಟ!
ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!
ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!
ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
‘ದೇವಿ’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ವಿವರಿಸಿದ ನಟಿ ಭವ್ಯಾ
‘ದೇವಿ’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ವಿವರಿಸಿದ ನಟಿ ಭವ್ಯಾ
NEET ಹೋರಾಟದ ವಿಡಿಯೋ ಅಲ್ಲ, ಬಿಹಾರ ಅಪಘಾತದ್ದು: ಸಿಟಿ ರವಿ ಏನಂದ್ರು ನೋಡಿ
NEET ಹೋರಾಟದ ವಿಡಿಯೋ ಅಲ್ಲ, ಬಿಹಾರ ಅಪಘಾತದ್ದು: ಸಿಟಿ ರವಿ ಏನಂದ್ರು ನೋಡಿ
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್
ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್