AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವದ ಪ್ರಭಾವಶಾಲಿ 100 ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ನಟ

Ranbir Kapoor movie: ಅಂತರಾಷ್ಟ್ರೀಯ ಮ್ಯಾಗಜೀನ್ ‘ಟೈಮ್ಸ್’ ಪ್ರತಿ ವರ್ಷದಂತೆ ಈ ವರ್ಷವೂ ವಿಶ್ವದ ಅತ್ಯಂತ ಪ್ರಭಾವಶಾಲಿ 100 ಮಂದಿಯ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಟೈಮ್ಸ್ 100 ಪಟ್ಟಿಯಲ್ಲಿ ಪ್ರತಿಬಾರಿಯಂತೆ ಈ ಬಾರಿಯೂ ಸಹ ಕೆಲವು ಭಾರತೀಯರು ಸ್ಥಾನ ಪಡೆದಿದ್ದಾರೆ. ಆದರೆ ಈ ಬಾರಿ ಈ ಪಟ್ಟಿಯಲ್ಲಿ ಕೇವಲ ಒಬ್ಬ ಭಾರತೀಯ ನಟ ಮಾತ್ರವೇ ಸ್ಥಾನ ಪಡೆದಿದ್ದಾರೆ.

ವಿಶ್ವದ ಪ್ರಭಾವಶಾಲಿ 100 ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ ನಟ
Ranbir Dis
ಮಂಜುನಾಥ ಸಿ.
|

Updated on: Apr 16, 2026 | 1:03 PM

Share

ಪ್ರತಿಷ್ಠಿತ ಅಂತರಾಷ್ಟ್ರೀಯ ಮ್ಯಾಗಜೀನ್ ‘ಟೈಮ್ಸ್’ ಪ್ರತಿ ವರ್ಷದಂತೆ ಈ ವರ್ಷವೂ ವಿಶ್ವದ ಅತ್ಯಂತ ಪ್ರಭಾವಶಾಲಿ 100 ಮಂದಿಯ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಟೈಮ್ಸ್ 100 ಪಟ್ಟಿಯಲ್ಲಿ ಪ್ರತಿಬಾರಿಯಂತೆ ಈ ಬಾರಿಯೂ ಸಹ ಕೆಲವು ಭಾರತೀಯರು ಸ್ಥಾನ ಪಡೆದಿದ್ದಾರೆ. ಆದರೆ ಈ ಬಾರಿ ಈ ಪಟ್ಟಿಯಲ್ಲಿ ಕೇವಲ ಒಬ್ಬ ಭಾರತೀಯ ನಟ ಮಾತ್ರವೇ ಸ್ಥಾನ ಪಡೆದಿರುವುದು ವಿಶೇಷ. ಅದುವೇ ರಣ್​​ಬೀರ್ ಕಪೂರ್.

ಬಾಲಿವುಡ್​​ನ ಸ್ಟಾರ್ ನಟ, ಇದೀಗ ‘ರಾಮಾಯಣ’ ಸಿನಿಮಾ ಮೂಲಕ ಹಾಲಿವುಡ್​​ಗೂ ಹಾರುತ್ತಿರುವ ರಣ್​​ಬೀರ್ ಕಪೂರ್ ಅವರು ವಿಶ್ವದ 100 ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇವರೊಟ್ಟಿಗೆ ಪ್ರಖ್ಯಾತ ಭಾರತೀಯ ಶೆಫ್ ವಿಕಾಸ್ ಖನ್ನಾ ಅವರು ಸಹ 100 ಪ್ರಭಾವಶಾಲಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು ವಿಶೇಷ. ವಿಕಾಸ್ ಖನ್ನಾ ಅವರು ಅಂತರಾಷ್ಟ್ರೀಯ ಜನಪ್ರಿಯತೆ ಇರುವ ಬಾಣಸಿಗ ಆಗಿದ್ದು, ಹಲವು ದೇಶಗಳಲ್ಲಿ ತಮ್ಮ ರೆಸ್ಟೊರೆಂಟ್​​ಗಳನ್ನು ಹೊಂದಿದ್ದಾರೆ. ಹಲವು ವಿಶ್ವ ನಾಯಕರುಗಳಿಗೆ ವಿಶೇಷ ಖಾದ್ಯಗಳನ್ನು ಸಹ ಅವರು ಮಾಡಿದ್ದಾರೆ.

Ranbir Kapoor

Ranbir Kapoor

ಟೈಮ್ಸ್ 100 ಪಟ್ಟಿಯಲ್ಲಿ ಈ ಬಾರಿ ಮೂವರು ಭಾರತೀಯರು ಮಾತ್ರವೇ ಸ್ಥಾನ ಪಡೆದಿದ್ದು, ರಣ್​​ಬೀರ್ ಕಪೂರ್, ವಿಕಾಸ್ ಖನ್ನಾ ಬಳಿಕ ಗೂಗಲ್​​ನ ಸಿಇಓ ಸುಂದರ್ ಪಿಚಾಯ್ ಅವರು ಸಹ ಈ ಪಟ್ಟಿಯಲ್ಲಿ ಒಬ್ಬರಾಗಿದ್ದಾರೆ. ಸುಂದರ್ ಪಿಚಾಯ್ ಅಮೆರಿಕ ನಿವಾಸಿ ಆಗಿದ್ದರೂ ಸಹ ಅವರ ಮೂಲ ಭಾರತವೇ ಆಗಿದೆ. ವಿಶ್ವದ ಅತ್ಯಂತ ದೊಡ್ಡ ಮತ್ತು ಜನಪ್ರಿಯ ಸಂಸ್ಥೆಗಳಲ್ಲಿ ಒಂದಾಗಿರುವ ಗೂಗಲ್​​ನ ಸಿಇಓ ಆಗಿದ್ದಾರೆ ಸುಂದರ್ ಪಿಚಾಯ್.

ಇದನ್ನೂ ಓದಿ:‘ಆಪರೇಷನ್ ಸಿಂಧೂರ್’ ಚಿತ್ರಕ್ಕೆ ಸಿಕ್ಕರು ಹೀರೋ; ಬಾಲಿವುಡ್ ನಟನಿಗೆ ಆಫರ್

ಟೈಮ್ ಪಟ್ಟಿಯಲ್ಲಿ ಸ್ಥಾನ ಪಡೆಯುವುದು ಒಬ್ಬ ಕಲಾವಿದನಿಗೆ ಜಾಗತಿಕ ಮಟ್ಟದಲ್ಲಿ ಸಿಗುವ ಅತ್ಯುನ್ನತ ಮನ್ನಣೆಗಳಲ್ಲಿ ಒಂದಾಗಿದೆ. ಈ ಹಿಂದೆ ಬಾಲಿವುಡ್‌ನ ಶಾರುಖ್ ಖಾನ್ ಮತ್ತು ಆಮೀರ್ ಖಾನ್ ಅಂತಹ ನಟರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು. ಆದರೆ ಈ ಬಾರಿ ರಣ್​​ಬೀರ್ ಕಪೂರ್ ಅವರು ಸ್ಥಾನ ಪಡೆದಿದ್ದು, ಈ ಪಟ್ಟಿಯಲ್ಲಿ ರಣ್​​ಬೀರ್ ಕಪೂರ್ ಹೆಸರು ಸೇರಿಕೊಳ್ಳುತ್ತಿರುವುದು ಇದು ಮೊದಲೇ ಬಾರಿ ಆಗಿದೆ.

ರಣ್​​ಬೀರ್ ಕಪೂರ್ ನಟಿಸಿರುವ ಭಾರಿ ಬಜೆಟ್ ಸಿನಿಮಾ ‘ರಾಮಾಯಣ’ ಸಿನಿಮಾ ಇದೇ ದೀಪಾವಳಿಗೆ ಬಿಡುಗಡೆ ಆಗಲಿದೆ. ಅದರ ಜೊತೆಗೆ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನ ಮಾಡುತ್ತಿರುವ ‘ಲವ್ ಆಂಡ್ ವಾರ್’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಅದಾದ ಬಳಿಕ ‘ಬ್ರಹ್ಮಾಸ್ತ್ರ 2’ ಮತ್ತು ‘ಅನಿಮಲ್ ಪಾರ್ಕ್’ ಸಿನಿಮಾಗಳಲ್ಲಿ ರಣ್​​ಬೀರ್ ಕಪೂರ್ ನಟಿಸಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!