AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ ಸಿನಿಮಾ ನೋಡಬೇಡಿ’; ಆಸ್ಟ್ರೇಲಿಯಾದಲ್ಲಿ 15 ವರ್ಷದೊಳಗಿನ ಮಕ್ಕಳಿಗೆ ಸಲಹೆ; ಕಾರಣ ಏನು?

‘ಆಸ್ಟ್ರೇಲಿಯಾ ಕ್ಲಾಸಿಫಿಕೇಷನ್ ಬೋರ್ಡ್’ ಇತ್ತೀಚೆಗೆ ‘ರಾಮಾಯಣ’ ಚಿತ್ರದ 34 ನಿಮಿಷಗಳ ವಿಶೇಷ ವಿಡಿಯೋ ಪ್ಯಾಕೇಜ್ ಪರಿಶೀಲಿಸಿದ್ದು, ಅದಕ್ಕೆ ‘ಮೆಚ್ಯೂರ್’ ರೇಟಿಂಗ್ ಕೊಟ್ಟಿದೆ. ಹಿಂದೂ ಪುರಾಣ ಆಧಾರಿತ ಸಿನಿಮಾವಾಗಿದ್ದರೂ ಸಹ, ಈ ರೇಟಿಂಗ್ ಸಿಕ್ಕಿರುವುದು ಈಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಆ ಬಗ್ಗೆ ಇಲ್ಲಿದೆ ವಿವರ..

‘ರಾಮಾಯಣ ಸಿನಿಮಾ ನೋಡಬೇಡಿ’; ಆಸ್ಟ್ರೇಲಿಯಾದಲ್ಲಿ 15 ವರ್ಷದೊಳಗಿನ ಮಕ್ಕಳಿಗೆ ಸಲಹೆ; ಕಾರಣ ಏನು?
Ranbir Kapoor
ಮದನ್​ ಕುಮಾರ್​
| Edited By: |

Updated on:Jul 30, 2026 | 10:07 AM

Share

ಮುಖ್ಯಾಂಶಗಳು

  • ಆಸ್ಟ್ರೇಲಿಯಾದಲ್ಲಿ ‘ರಾಮಾಯಣ’ ಸಿನಿಮಾಗೆ ಆಗಬಹುದು ಹಿನ್ನೆಡೆ.
  • 15 ವರ್ಷದ ಒಳಗಿನ ಮಕ್ಕಳು ಈ ಸಿನಿಮಾ ನೋಡದಂತೆ ಶಿಫಾರಸು.
  • ಆದರೆ ಪೋಷಕರ ಮಾರ್ಗದರ್ಶನದಲ್ಲಿ ಸಿನಿಮಾವನ್ನು ನೋಡಬಹುದು.

ರಣಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ಮುಂತಾದವರು ನಟಿಸಿರುವ, ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ (Ramayana) ಸಿನಿಮಾ ಸದ್ಯ ಜಾಗತಿಕ ಮಟ್ಟದಲ್ಲಿ ಭಾರಿ ಸೌಂಡ್ ಮಾಡುತ್ತಿದೆ. ಶೀಘ್ರದಲ್ಲೇ ಈ ಸಿನಿಮಾದ ಟ್ರೇಲರ್ ಅದ್ದೂರಿಯಾಗಿ ಲಾಂಚ್ ಆಗಲಿದ್ದು, ಇದಕ್ಕೂ ಮುನ್ನ ಚಿತ್ರದ ಬಗ್ಗೆ ಒಂದು ಪ್ರಮುಖ ಮಾಹಿತಿ ಹೊರಬಿದ್ದಿದೆ. ಆಸ್ಟ್ರೇಲಿಯಾದ ಸೆನ್ಸಾರ್ ಮಂಡಳಿಯು (Australian Classification Board) ಈ ಚಿತ್ರದ ಸ್ಪೆಷಲ್ ವಿಡಿಯೋ ಪ್ಯಾಕೇಜ್‌ಗೆ ‘M’ (Mature) ರೇಟಿಂಗ್ ನೀಡಿದೆ. ಇದರಿಂದ ಸಿನಿಮಾಗೆ ಹಿನ್ನಡೆ ಆಗುವ ಸಾಧ್ಯತೆ ಇದೆ.

‘M’ ರೇಟಿಂಗ್ ನೀಡಲು ಕಾರಣವೇನು?

ಆಸ್ಟ್ರೇಲಿಯಾದ ಸೆನ್ಸಾರ್ ಮಂಡಳಿಯ ವೆಬ್‌ಸೈಟ್ ನೀಡಿರುವ ಮಾಹಿತಿ ಪ್ರಕಾರ, ಈ ಚಿತ್ರದಲ್ಲಿ ಮಧ್ಯಮ ಪ್ರಮಾಣದ ಹಿಂಸಾಚಾರ ಇರುವುದರಿಂದ ಇದಕ್ಕೆ ‘M’ ರೇಟಿಂಗ್ ನೀಡಲಾಗಿದೆ. ಆಸ್ಟ್ರೇಲಿಯಾದ ನಿಯಮಗಳ ಪ್ರಕಾರ, ‘M’ ರೇಟಿಂಗ್ ಹೊಂದಿರುವ ಸಿನಿಮಾಗಳನ್ನು 15 ವರ್ಷದೊಳಗಿನ ಮಕ್ಕಳು ವೀಕ್ಷಿಸುವುದನ್ನು ಶಿಫಾರಸು ಮಾಡುವುದಿಲ್ಲ. ಆದರೆ, ಇದು ಕೇವಲ ಒಂದು ಸಲಹೆಯಾಗಿದ್ದು, ಕಾನೂನುಬದ್ಧವಾಗಿ ಮಕ್ಕಳು ಚಿತ್ರಮಂದಿರಕ್ಕೆ ಹೋಗಿ ಸಿನಿಮಾ ನೋಡುವುದಕ್ಕೆ ಯಾವುದೇ ನಿಷೇಧ ಇರುವುದಿಲ್ಲ. ಪೋಷಕರ ಮಾರ್ಗದರ್ಶನದಲ್ಲಿ ಮಕ್ಕಳು ಇದನ್ನು ವೀಕ್ಷಿಸಬಹುದಾಗಿದೆ.

ಸಿನಿಮಾದ ಕಥಾಹಂದರ ಹೀಗಿದೆ:

ಸೆನ್ಸಾರ್ ಮಂಡಳಿಯ ವೆಬ್‌ಸೈಟ್‌ನಲ್ಲಿ ಚಿತ್ರದ ಸಂಕ್ಷಿಪ್ತ ಕಥೆಯನ್ನು ಬರೆಯಲಾಗಿದೆ. ‘ಇದು ಯುವ ರಾಜಕುಮಾರ ಮತ್ತು ರಾಜಕುಮಾರಿಯ ಪುರಾತನ ಮಹಾಕಾವ್ಯವಾಗಿದೆ. ಇವರ ವಿವಾಹ ಮತ್ತು ತದನಂತರದ ವನವಾಸವು ಒಂದು ಐತಿಹಾಸಿಕ ಪ್ರಯಾಣಕ್ಕೆ ನಾಂದಿ ಹಾಡುತ್ತದೆ. ಕರ್ತವ್ಯ, ಪ್ರೀತಿ ಮತ್ತು ವಿಧಿಯ ಈ ಕಥೆಯು ಮುಂದೆ ಎದುರಾಗಲಿರುವ ದೊಡ್ಡ ಸವಾಲುಗಳಿಗೆ ಸಾಕ್ಷಿಯಾಗಲಿದೆ’ ಎಂದು ವಿವರ ನೀಡಲಾಗಿದೆ.

ಚೀನಾ ಮಾರುಕಟ್ಟೆ ಮೇಲೆ ಕಣ್ಣಿಟ್ಟ ಚಿತ್ರತಂಡ:

ಮತ್ತೊಂದೆಡೆ, ನಿರ್ದೇಶಕ ನಿತೇಶ್ ತಿವಾರಿ ಮತ್ತು ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರು ‘ರಾಮಾಯಣ: ಪಾರ್ಟ್ 1’ ಚಿತ್ರವನ್ನು ಚೀನಾದಲ್ಲಿ ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡಲು ಪ್ಲ್ಯಾನ್ ಮಾಡುತ್ತಿದ್ದಾರೆ. 2020ರ ನಂತರ ಚೀನಾದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಸೂಕ್ತ ಮಾರುಕಟ್ಟೆ ಸಿಕ್ಕಿರಲಿಲ್ಲ. ಆದರೆ, ರಾಮಾಯಣ ಚಿತ್ರದ ಮೂಲಕ ಚೀನಾ ಮಾರುಕಟ್ಟೆಯನ್ನು ಮತ್ತೊಮ್ಮೆ ವಶಪಡಿಸಿಕೊಳ್ಳಲು ಚಿತ್ರತಂಡ ಸಜ್ಜಾಗಿದೆ.

ಇದನ್ನೂ ಓದಿ: ದೆಹಲಿಯ ಭಾರತ್ ಮಂಟಪದಲ್ಲಿ ರಣಬೀರ್ ಕಪೂರ್ ನಟನೆಯ ‘ರಾಮಾಯಣ’ ಟ್ರೇಲರ್ ಲಾಂಚ್?

ಜುಲೈ 11ರಂದು ಘೋಷಣೆ ಮಾಡಿರುವಂತೆ, ‘ರಾಮಾಯಣ’ ಚಿತ್ರತಂಡವು ಜುಲೈ 24ರಂದು ಜಾಗತಿಕವಾಗಿ ಸಿನಿಮಾದ ಅಧಿಕೃತ ಟ್ರೇಲರ್ ಬಿಡುಗಡೆ ಮಾಡಲಿದೆ. ಅದಕ್ಕೂ ಮುನ್ನ ದೆಹಲಿಯಲ್ಲಿ ದೊಡ್ಡ ಇವೆಂಟ್ ನಡೆಸುವ ಪ್ಲ್ಯಾನ್ ಕೂಡ ಇದೆ ಎನ್ನಲಾಗಿದೆ. ಈ ಸಿನಿಮಾಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:54 pm, Thu, 16 July 26

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ