100 ರೂಪಾಯಿಗೆ ಇಳಿಕೆ ಆಯಿತು ‘ಅನಿಮಲ್​’ ಸಿನಿಮಾ ಟಿಕೆಟ್​ ಬೆಲೆ; ಕಾರಣ ಏನು?

ಬಿಡುಗಡೆಯಾಗಿ ಒಂದು ತಿಂಗಳ ಮೇಲಾಗಿದ್ದರೂ ಕೂಡ ಇನ್ನೂ ಕೆಲವು ಕಡೆಗಳಲ್ಲಿ ‘ಅನಿಮಲ್​’ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಅನೇಕ ಹೊಸ ಸಿನಿಮಾಗಳು ರಿಲೀಸ್​ ಆಗುತ್ತಿವೆ. ಈ ಸಂದರ್ಭದಲ್ಲಿ ಪ್ರೇಕ್ಷಕರನ್ನು ಸೆಳೆದುಕೊಳ್ಳಲು ‘ಅನಿಮಲ್​’ ತಂಡ ಬೆಲೆ ಇಳಿಕೆಯ ತಂತ್ರ ರೂಪಿಸಿದೆ.

100 ರೂಪಾಯಿಗೆ ಇಳಿಕೆ ಆಯಿತು ‘ಅನಿಮಲ್​’ ಸಿನಿಮಾ ಟಿಕೆಟ್​ ಬೆಲೆ; ಕಾರಣ ಏನು?
ರಣಬೀರ್​ ಕಪೂರ್​
Follow us
ಮದನ್​ ಕುಮಾರ್​
|

Updated on: Jan 09, 2024 | 7:05 PM

ಬಾಲಿವುಡ್​ನಲ್ಲಿ ‘ಅನಿಮಲ್​’ ಸಿನಿಮಾದ ಯಶಸ್ಸಿನಿಂದ ರಣಬೀರ್​ ಕಪೂರ್ (Ranbir Kapoor) ಅವರ ಡಿಮ್ಯಾಂಡ್​ ಹೆಚ್ಚಾಗಿದೆ. ಅವರ ಜೊತೆ ನಟಿಸಿದ ರಶ್ಮಿಕಾ ಮಂದಣ್ಣ ಅವರ ಜನಪ್ರಿಯತೆ ಕೂಡ ಹೆಚ್ಚಾಗಿದೆ. ಭಾರತದ ಗಲ್ಲಾಪೆಟ್ಟಿಗೆಯಲ್ಲಿ ಈ ಚಿತ್ರಕ್ಕೆ 550 ಕೋಟಿ ರೂಪಾಯಿ ಗಳಿಕೆ ಆಗಿದೆ. ವಿಶ್ವ ಬಾಕ್ಸ್​ ಆಫೀಸ್​ನ ಕಲೆಕ್ಷನ್​ ಕೂಡ ಸೇರಿಸಿದರೆ ‘ಅನಿಮಲ್​’ ಸಿನಿಮಾದ (Animal Movie) ಒಟ್ಟು ಗಳಿಕೆ ಅಂದಾಜು 900 ಕೋಟಿ ರೂಪಾಯಿ ಆಗಲಿದೆ. ಈಗ ಸಿನಿಪ್ರಿಯರಿಗೆ ಒಂದು ಗುಡ್​ ನ್ಯೂಸ್​ ಸಿಕ್ಕಿದೆ. ಈ ಸಿನಿಮಾದ ಟಿಕೆಟ್​ ಬೆಲೆಯನ್ನು 100 ರೂಪಾಯಿಗೆ ಇಳಿಸಲಾಗಿದೆ.

‘ಅನಿಮಲ್​’ ಸಿನಿಮಾ ಬಿಡುಗಡೆ ಆದಾಗ ಟಿಕೆಟ್​ ಬೆಲೆ ಮುಗಿಲು ಮುಟ್ಟಿತ್ತು. ಆದರೂ ಕೂಡ ಅಭಿಮಾನಿಗಳು ಮುಗಿಬಿದ್ದು ಟಿಕೆಟ್​ ಖರೀದಿ ಮಾಡಿದ್ದರು. ಸಾವಿರ ರೂಪಾಯಿಯ ಟಿಕೆಟ್​ಗಳು ಕೂಡ ಸೋಲ್ಡ್​ ಔಟ್​ ಆಗಿದ್ದವು. ಈಗ ಈ ಚಿತ್ರದ ಟಿಕೆಟ್​ ಬೆಲೆ ಕಡಿಮೆ ಮಾಡಿರುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ. ಸೋಶಿಯಲ್​ ಮೀಡಿಯಾ ಪೋಸ್ಟ್​ ಮೂಲಕ ಅಭಿಮಾನಿಗಳಿಗೆ ಈ ಖುಷಿಯ ಸಮಾಚಾರವನ್ನು ತಿಳಿಸಲಾಗಿದೆ.

View this post on Instagram

A post shared by tseriesfilms (@tseriesfilms)

ಬಿಡುಗಡೆಯಾಗಿ ಒಂದು ತಿಂಗಳ ಮೇಲಾಗಿದ್ದರೂ ಕೂಡ ಇನ್ನೂ ಕೆಲವು ಕಡೆಗಳಲ್ಲಿ ‘ಅನಿಮಲ್​’ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಅನೇಕ ಹೊಸ ಸಿನಿಮಾಗಳು ರಿಲೀಸ್​ ಆಗುತ್ತಿವೆ. ಈ ಸಂದರ್ಭದಲ್ಲಿ ಪ್ರೇಕ್ಷಕರನ್ನು ಸೆಳೆದುಕೊಳ್ಳಲು ‘ಅನಿಮಲ್​’ ತಂಡ ಬೆಲೆ ಇಳಿಕೆಯ ತಂತ್ರ ರೂಪಿಸಿದೆ. ಆ ಮೂಲಕ ಇನ್ನಷ್ಟು ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಕರೆ ತರಲು ಪ್ಲ್ಯಾನ್​ ಮಾಡಲಾಗಿದೆ. ಈ ತಂತ್ರಕ್ಕೆ ಪ್ರೇಕ್ಷಕರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇದನ್ನೂ ಓದಿ: ‘ಅನಿಮಲ್​’ ಸಿನಿಮಾ ಗೆಲುವು ಅಪಾಯಕಾರಿ ಎಂದ ಜಾವೇದ್​ ಅಖ್ತರ್​; ಪ್ರೇಕ್ಷಕರಿಗೆ ಕಿವಿಮಾತು

ಸಂದೀಪ್​ ರೆಡ್ಡಿ ವಂಗ ಅವರು ‘ಅನಿಮಲ್​’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಕೆಲವು ದೃಶ್ಯಗಳಿಗೆ ಅನೇಕರಿಂದ ಆಕ್ಷೇಪ ವ್ಯಕ್ತವಾಗಿದೆ. ಮಹಿಳೆಯರನ್ನು ಅವಹೇಳನ ಮಾಡುವಂತಹ ದೃಶ್ಯಗಳು ಇವೆ, ಕ್ರೌರ್ಯದ ವೈಭವೀಕರಣ ಆಗಿದೆ, ಡೈಲಾಗ್​ಗಳು ಅಸಭ್ಯವಾಗಿವೆ ಎಂಬಿತ್ಯಾದಿ ಟೀಕೆಗಳು ಬಂದಿವೆ. ಅವುಗಳ ನಡುವೆಯೂ ಸಿನಿಮಾ ಸೂಪರ್​ ಹಿಟ್​ ಆಗಿದೆ. ರಣಬೀರ್​ ಕಪೂರ್​, ರಶ್ಮಿಕಾ ಮಂದಣ್ಣ ಜೊತೆ ಅನಿಲ್​ ಕಪೂರ್​, ಬಾಬಿ ಡಿಯೋಲ್​ ಮುಂತಾದವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್