AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಕಿಂಗ್​; ಒಂದು ತಪ್ಪಿನಿಂದ ನಿಂತುಹೋಯ್ತು ‘ರಾಮಾಯಣ’ ಸಿನಿಮಾ ಶೂಟಿಂಗ್​

800 ಕೋಟಿ ರೂಪಾಯಿಗೂ ಅಧಿಕ ಬಜೆಟ್​ ಹಾಕಿ ‘ರಾಮಾಯಣ’ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ರಣಬೀರ್​ ಕಪೂರ್​, ಸಾಯಿ ಪಲ್ಲವಿ ಮುಂತಾದವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆದರೆ ಈಗ ಸಿನಿಮಾದ ಶೂಟಿಂಗ್​ ನಿಂತುಹೋಗಿದೆ. ಈ ವಿಷಯ ಕೇಳಿ ಅಭಿಮಾನಿಗಳಿಗೆ ಬೇಸರ ಆಗಿದೆ. ಶೂಟಿಂಗ್​ ನಿಲ್ಲಲು ಕಾರಣ ಏನು ಎಂಬ ಬಗ್ಗೆ ಇಲ್ಲಿದೆ ವಿವರ..

ಶಾಕಿಂಗ್​; ಒಂದು ತಪ್ಪಿನಿಂದ ನಿಂತುಹೋಯ್ತು ‘ರಾಮಾಯಣ’ ಸಿನಿಮಾ ಶೂಟಿಂಗ್​
ಸಾಯಿ ಪಲ್ಲವಿ, ರಣಬೀರ್​ ಕಪೂರ್​
ಮದನ್​ ಕುಮಾರ್​
|

Updated on: May 21, 2024 | 7:39 PM

Share

ಬಾಲಿವುಡ್​ನಲ್ಲಿ ತಯಾರಾಗುತ್ತಿರುವ ‘ರಾಮಾಯಣ’ (Ramayana) ಸಿನಿಮಾದ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಮನೆ ಮಾಡಿದೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ (Ranbir Kapoor) ಅವರು ರಾಮನಾಗಿ ನಟಿಸುತ್ತಿದ್ದಾರೆ. ಸೀತೆಯ ಪಾತ್ರಕ್ಕೆ ಸಾಯಿ ಪಲ್ಲವಿ ಅವರು ಬಣ್ಣ ಹಚ್ಚುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ‘ರಾಮಾಯಣ’ ಸಿನಿಮಾದ ಶೂಟಿಂಗ್ ಆರಂಭ ಆಗಿತ್ತು. ಅಲ್ಲದೇ, ಚಿತ್ರೀಕರಣದ ಸೆಟ್​ನಿಂದ ಕೆಲವು ಫೋಟೋಗಳು ಲೀಕ್​ ಆಗಿದ್ದವು. ಈಗ ಒಂದು ಬೇಸರದ ಸುದ್ದಿ ಕೇಳಿಬಂದಿದೆ. ಈ ಸಿನಿಮಾದ ಶೂಟಿಂಗ್​ ನಿಂತಿದೆ. ನಿರ್ಮಾಪಕರು ಕಾಪಿರೈಟ್​ (Copyright) ನಿಯಮವನ್ನು ಉಲ್ಲಂಘನೆ ಮಾಡಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ.

ನಿತೇಶ್​ ತಿವಾರಿ ಅವರು ‘ರಾಮಾಯಣ’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಈ ಸಿನಿಮಾ ತಂಡಕ್ಕೆ ‘ಅಲ್ಲು ಮಂಟೇನಾ ಮೀಡಿಯಾ ವೆಂಚರ್ಸ್​ ಎಲ್​ಎಲ್​ಪಿ’ ಕಂಪನಿಯು ನೋಟಿಸ್​ ಕಳಿಸಿತ್ತು. ಅದರ ಅನ್ವಯ ‘ರಾಮಾಯಣ’ ಸಿನಿಮಾದ ನಿರ್ಮಾಪಕರು ಈ ಕಂಪನಿಯ ಜೊತೆ ಮಾಡಿಕೊಂಡ ಒಪ್ಪಂದದ ಪ್ರಕಾರ ಸ್ಕ್ರಿಪ್ಟ್​ಗೆ ಸಂಬಂಧಿಸಿದ ಕೆಲವು ಹಕ್ಕುಗಳನ್ನು ಖರೀದಿಸಬೇಕಿತ್ತು. ಆ ಪ್ರಕ್ರಿಯೆ ಪೂರ್ಣಗೊಳ್ಳದ ಕಾರಣ ನೋಟಿಸ್​ ಕಳಿಸಲಾಗಿತ್ತು.

‘ರಾಮಾಯಣ’ ಚಿತ್ರತಂಡಕ್ಕೆ ನೋಟಿಸ್ ಬಂದ ನಂತರವೂ ಕೆಲವು ದಿನಗಳ ಕಾಲ ಶೂಟಿಂಗ್​ ಮುಂದುವರಿಸಲಾಯಿತು. ಆದರೆ ಕಳೆದ ವಾರದಿಂದ ಶೂಟಿಂಗ್​ ನಿಲ್ಲಿಸಲಾಗಿದೆ. ಕಾನೂನಿನ ತೊಡಕುಗಳು ಬಗೆಹರಿದ ನಂತರವೇ ಶೂಟಿಂಗ್​ ಮುಂದುವರಿಸಲು ತೀರ್ಮಾನಿಸಲಾಗಿದೆ ಅಂತ ಮೂಲಗಳು ಹೇಳಿರುವುದಾಗಿ ಬಾಲಿವುಡ್​ ಹಂಗಾಮಾ ವರದಿ ಮಾಡಿದೆ.

ಇದನ್ನೂ ಓದಿ: ‘ರಾಮಾಯಣ’ ಸಿನಿಮಾಕ್ಕೆ ಹತ್ತು ಪಟ್ಟು ಹೆಚ್ಚು ಸಂಭಾವನೆ ಪಡೆದ ಸಾಯಿ ಪಲ್ಲವಿ

ಈ ಸಿನಿಮಾದಲ್ಲಿ ಅನೇಕ ಸ್ಟಾರ್​ ಕಲಾವಿದರ ನಟಿಸುತ್ತಿದ್ದಾರೆ. ಶೂಟಿಂಗ್​ಗೆ ಸಂಬಂಧಿಸಿದಂತೆ ಈ ಮೊದಲೇ ಡೇಟ್ಸ್​ ಬಗ್ಗೆ ಮಾತುಕಥೆ ಆಗಿರುತ್ತದೆ. ಆದರೆ ಈಗ ಚಿತ್ರೀಕರಣ ನಿಂತಿರುವುದರಿಂದ ಎಲ್ಲ ಡೇಟ್ಸ್​ ಬದಲಾವಣೆ ಆಗಲಿದೆ. ಇದರಿಂದ ಕಲಾವಿದರಿಗೆ ಮತ್ತು ಚಿತ್ರದ ನಿರ್ಮಾಪಕರಿಗೆ ಖಂಡಿತಾ ತೊಂದರೆ ಆಗಲಿದೆ. ರಣಬೀರ್​ ಕಪೂರ್​, ಸಾಯಿ ಪಲ್ಲವಿ, ಯಶ್​, ಸನ್ನಿ ಡಿಯೋಲ್​ ಮುಂತಾದವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ