ಎರಡನೇ ಭಾನುವಾರವೂ ‘ಅನಿಮಲ್’ ಸಿನಿಮಾ ಅಬ್ಬರ; 400 ಕೋಟಿ ರೂಪಾಯಿ ದಾಟಿದ ಕಲೆಕ್ಷನ್
‘ಅನಿಮಲ್’ ಸಿನಿಮಾ ಎರಡನೇ ಭಾನುವಾರ (ಡಿಸೆಂಬರ್ 10) 37 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಚಿತ್ರದ ಗಳಿಕೆ 430 ಕೋಟಿ ರೂಪಾಯಿ ಆಗಿದೆ. ಹಿಂದಿಯ ಜೊತೆ ತೆಲುಗಿನಲ್ಲೂ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ
‘ಅನಿಮಲ್’ ಸಿನಿಮಾ (Animal Movie) ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇತ್ತು. ಟ್ರೇಲರ್ ಮೂಲಕ ಸಿನಿಮಾ ಅಬ್ಬರಿಸುವ ಸೂಚನೆ ನೀಡಿತ್ತು. ಈಗ ಈ ಸಿನಿಮಾ ಅಂದುಕೊಂಡಿದ್ದಕ್ಕಿಂತಲೂ ದೊಡ್ಡ ಯಶಸ್ಸು ಕಂಡಿದೆ. ಈ ಚಿತ್ರ ಎರಡನೇ ಭಾನುವಾರವೂ ಅಬ್ಬರಿಸಿದೆ. ಈ ಮೂಲಕ ಚಿತ್ರದ ಗಳಿಕೆ 430 ಕೋಟಿ ರೂಪಾಯಿ ದಾಟಿದೆ. ವಿಶ್ವ ಮಟ್ಟದಲ್ಲಿ ಸಿನಿಮಾದ ಕಲೆಕ್ಷನ 700 ಕೋಟಿ ರೂಪಾಯಿ ಆಗಿದೆ. ಕೇವಲ 10 ದಿನಕ್ಕೆ ಸಿನಿಮಾ ಇಷ್ಟು ದೊಡ್ಡ ಮಟ್ಟದ ಗಳಿಕೆ ಮಾಡಿದ್ದು ತಂಡದ ಖುಷಿ ಹೆಚ್ಚಿಸಿದೆ. ಈ ಚಿತ್ರದಿಂದ ರಣಬೀರ್ ಕಪೂರ್ ಅವರು ದೊಡ್ಡ ಗೆಲುವು ಕಂಡಿದ್ದಾರೆ.
‘ಅನಿಮಲ್’ ಚಿತ್ರಕ್ಕೆ ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ. ಈ ಸಿನಿಮಾದಲ್ಲಿ ಪುರುಷರ ಡಾಮಿನೇಷನ್ ಬಗ್ಗೆ ಮಾತನಾಡಲಾಗಿದೆ ಎಂದು ಕೆಲವರು ಅಪಸ್ವರ ತೆಗೆದಿದ್ದಾರೆ. ವೈಲೆನ್ಸ್ ವಿಚಾರವನ್ನೂ ಕೆಲವರು ಹೈಲೈಟ್ ಮಾಡಿದ್ದಾರೆ. ಆದರೆ, ಇದಕ್ಕೆಲ್ಲ ಸಿನಿಪ್ರಿಯರು ಹೆಚ್ಚು ಪ್ರಾಮುಖ್ಯತೆ ನೀಡಿಲ್ಲ. ಹೀಗಾಗಿ, ಭಾರತದ ಬಾಕ್ಸ್ ಆಫೀಸ್ನಲ್ಲಿ ಸಿನಿಮಾದ ಗಳಿಕೆ 400 ಕೋಟಿ ರೂಪಾಯಿ ದಾಟಿದೆ.
‘ಅನಿಮಲ್’ ಸಿನಿಮಾ ಎರಡನೇ ಭಾನುವಾರ (ಡಿಸೆಂಬರ್ 10) 37 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಚಿತ್ರದ ಗಳಿಕೆ 430 ಕೋಟಿ ರೂಪಾಯಿ ಆಗಿದೆ. ಹಿಂದಿಯ ಜೊತೆ ತೆಲುಗಿನಲ್ಲೂ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ನಿರ್ದೇಶಕ ಸಂದೀಪ್ ರೆಡ್ಡಿ ವಂಗ ಅವರು ಈ ಚಿತ್ರದ ಮೂಲಕ ಬಾಲಿವುಡ್ನಲ್ಲಿ ಎರಡನೇ ಗೆಲುವು ಕಂಡಿದ್ದಾರೆ.
ಇದನ್ನೂ ಓದಿ: ರಾಜಮೌಳಿ ಕಾಲಿಗೆ ನಮಸ್ಕರಿಸಿದ ರಣಬೀರ್ ಕಪೂರ್; ನಟನ ಬಗ್ಗೆ ಮೆಚ್ಚುಗೆ
‘ಅನಿಮಲ್’ ಸಿನಿಮಾದಲ್ಲಿ ರಣಬೀರ್ ಕಪೂರ್ ಎರಡು ಶೇಡ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ, ತೃಪ್ತಿ ದಿಮ್ರಿ, ಅನಿಲ್ ಕಪೂರ್, ಬಾಬಿ ಡಿಯೋಲ್ ಮೊದಲಾದವರು ನಟಿಸಿದ್ದಾರೆ. ರಶ್ಮಿಕಾಗಿಂತ ತೃಪ್ತಿ ದಿಮ್ರಿ ಅವರ ಪಾತ್ರ ಹೆಚ್ಚು ಗಮನ ಸೆಳೆಯುತ್ತಿದೆ. ಅವರು ಸಾಕಷ್ಟು ಸುದ್ದಿ ಆಗುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರ ಹಿಂಬಾಲಕರ ಸಂಖ್ಯೆ ಹೆಚ್ಚುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ