Ranbir Kapoor: ‘ಅನಿಮಲ್​’ ಸಿನಿಮಾದಲ್ಲಿ ಹೇಗಿರತ್ತೆ ರಣಬೀರ್​ ಕಪೂರ್​ ಅಬ್ಬರ? ಇಲ್ಲಿದೆ ನೋಡಿ ಝಲಕ್​

Animal Movie Pre Teaser: ಶೀಘ್ರದಲ್ಲೇ ಟೀಸರ್​ ಬಿಡುಗಡೆ ಮಾಡಲು ‘ಅನಿಮಲ್​’ ಚಿತ್ರತಂಡ ಸಕಲ ಸಿದ್ಧತೆ ಮಾಡಿಕೊಂಡಿದೆ. ಅದಕ್ಕೂ ಮುನ್ನ ಕೌತುಕ ಹೆಚ್ಚಿಸುವ ಪ್ರಯತ್ನ ಮಾಡಲಾಗಿದೆ.

Ranbir Kapoor: ‘ಅನಿಮಲ್​’ ಸಿನಿಮಾದಲ್ಲಿ ಹೇಗಿರತ್ತೆ ರಣಬೀರ್​ ಕಪೂರ್​ ಅಬ್ಬರ? ಇಲ್ಲಿದೆ ನೋಡಿ ಝಲಕ್​
ರಣಬೀರ್​ ಕಪೂರ್​

Updated on: Jun 11, 2023 | 12:28 PM

ನಟ ರಣಬೀರ್​ ಕಪೂರ್​ (Ranbir Kapoor) ಅವರು ಈವರೆಗೂ ಲವರ್​ ಬಾಯ್​ ರೀತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇ ಹೆಚ್ಚು. ಆದರೆ ಇತ್ತೀಚಿನ ವರ್ಷಗಳಲ್ಲಿ ಅವರು ಬೇರೆ ಬೇರೆ ರೀತಿಯ ಪಾತ್ರಗಳನ್ನು ಪ್ರಯತ್ನಿಸುತ್ತಿದ್ದಾರೆ. ಈಗ ಅವರು ನಟಿಸಿರುವ ‘ಅನಿಮಲ್​’ ಚಿತ್ರ (Animal Movie) ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ ಅವರು ರಗಡ್​ ಆದಂತಹ ಪಾತ್ರ ಮಾಡಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಈ ಮೊದಲು ಒಂದು ಪೋಸ್ಟರ್​ ರಿಲೀಸ್​ ಮಾಡಲಾಗಿತ್ತು. ಈಗ ಚಿಕ್ಕದೊಂದು ವಿಡಿಯೋ ಹಂಚಿಕೊಳ್ಳಲಾಗಿದ್ದು, ಇದನ್ನು ‘ಪ್ರೀ ಟೀಸರ್​’ (Animal pre teaser) ಎಂದು ಕರೆಯಲಾಗಿದೆ. ಇದರಲ್ಲಿ ರಣಬೀರ್​ ಕಪೂರ್​ ಅವರು ಅಬ್ಬರಿಸಿದ್ದಾರೆ. ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್​ ದೃಶ್ಯಗಳು ಇರಲಿವೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ ಒದಗಿಸುತ್ತಿದೆ. ‘ಅನಿಮಲ್​’ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಲು ಈ ಚಿಕ್ಕ ವಿಡಿಯೋ ಕಾರಣ ಆಗಿದೆ.

‘ಅನಿಮಲ್​’ ಸಿನಿಮಾದಲ್ಲಿ ರಣಬೀರ್ ಕಪೂರ್​ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಟಾಲಿವುಡ್​ನ ಖ್ಯಾತ ನಿರ್ದೇಶಕ ಸಂದೀಪ್​ ರೆಡ್ಡಿ ವಂಗ ಅವರು ಈ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ‘ಅರ್ಜುನ್​ ರೆಡ್ಡಿ’ ಮತ್ತು ‘ಕಬೀರ್​ ಸಿಂಗ್​’ ಸಿನಿಮಾದಿಂದ ಖ್ಯಾತಿ ಪಡೆದ ಅವರು ಈಗ ‘ಅನಿಮಲ್​’ ಸಿನಿಮಾದಲ್ಲಿ ಯಾವ ಕಥೆ ಹೇಳಲು ಬರುತ್ತಿದ್ದಾರೆ ಎಂಬುದನ್ನು ತಿಳಿಯುವ ಕುತೂಹಲ ಮೂಡಿದೆ. ಅನೇಕ ಸೆಲೆಬ್ರಿಟಿಗಳು ಪ್ರೀ-ಟೀಸರ್​ ಶೇರ್​ ಮಾಡಿಕೊಂಡಿದ್ದಾರೆ.

ಈ ಸಿನಿಮಾದ ಪ್ರೀ-ಟೀಸರ್​ ವಿಡಿಯೋದಲ್ಲಿ ಹಿನ್ನೆಲೆ ಸಂಗೀತ ಹೈಲೈಟ್​ ಆಗಿದೆ. ಪಂಜಾಬಿ ಸಾಂಗ್​ ಕೂಡ ಗಮನ ಸೆಳೆಯುತ್ತಿದೆ. ಶೀಘ್ರದಲ್ಲೇ ಟೀಸರ್​ ಬಿಡುಗಡೆ ಮಾಡಲು ‘ಅನಿಮಲ್​’ ಚಿತ್ರತಂಡ ಸಕಲ ಸಿದ್ಧತೆ ಮಾಡಿಕೊಂಡಿದೆ. ಅದಕ್ಕೂ ಮುನ್ನ ಕೌತುಕ ಹೆಚ್ಚಿಸುವ ಪ್ರಯತ್ನ ಮಾಡಲಾಗಿದೆ. ಈ ಸಿನಿಮಾ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗಲಿದೆ. ಹಿಂದಿ ಜೊತೆಗೆ ಕನ್ನಡ, ತಮಿಳು, ಮಲಯಾಳಂ ಹಾಗೂ ತೆಲುಗಿನಲ್ಲಿ ‘ಅನಿಮಲ್​’ ಬಿಡುಗಡೆ ಆಗಲಿದೆ. ಈ ಚಿತ್ರದಿಂದ ರಶ್ಮಿಕಾ ಮಂದಣ್ಣ ಅವರಿಗೆ ದೊಡ್ಡ ಗೆಲುವು ಸಿಗುವ ನಿರೀಕ್ಷೆ ಇದೆ.

ಇದನ್ನೂ ಓದಿ: Ranbir Kapoor: ಬಡ ಮಕ್ಕಳಿಗಾಗಿ ‘ಆದಿಪುರುಷ್​’ ಚಿತ್ರದ 10 ಸಾವಿರ ಟಿಕೆಟ್​ ಉಚಿತವಾಗಿ ನೀಡಲು ಮುಂದಾದ ನಟ ರಣಬೀರ್​ ಕಪೂರ್​

ಆಗಸ್ಟ್​ 11ರಂದು ‘ಅನಿಮಲ್​’ ಸಿನಿಮಾ ತೆರೆಕಾಣಲಿದೆ. ಅದಕ್ಕೆ ಇನ್ನು 2 ಎರಡು ತಿಂಗಳು ಬಾಕಿ ಇದೆ. ಈಗಾಗಲೇ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಚಿತ್ರತಂಡದವರು ಇಷ್ಟು ತೀವ್ರವಾಗಿ ಪ್ರಮೋಷನ್​ ಆರಂಭಿಸಿರುವುದಕ್ಕೆ ಕಾರಣ ಕೂಡ ಇದೆ. ಅದೇನೆಂದರೆ, ಆಗಸ್ಟ್​ ತಿಂಗಳಲ್ಲಿ ಅನೇಕ ಬಹುನಿರೀಕ್ಷಿತ ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಅಕ್ಷಯ್​ ಕುಮಾರ್​ ನಟನೆಯ ‘ಓಹ್​ ಮೈ ಗಾಡ್​ 2’, ಸನ್ನಿ ಡಿಯೋಲ್​ ಅಭಿನಯದ ‘ಗದರ್​ 2’ ಕೂಡ ಆಗಸ್ಟ್​ 11ರಂದು ತೆರೆಕಾಣಲಿದೆ. ಹಾಗಾಗಿ ಪೈಪೋಟಿ ತುಂಬ ಜೋರಾಗಿದೆ. ಅದಕ್ಕೆ ತಕ್ಕಂತೆಯೇ ‘ಅನಿಮಲ್​’ ಚಿತ್ರತಂಡ ಪ್ರಚಾರ ನಡೆಸುತ್ತಿದೆ.

ಇದನ್ನೂ ಓದಿ: Alia Bhatt: ರಾಮಾಯಣ ಕಥೆ ಆಧರಿತ ಸಿನಿಮಾದಲ್ಲಿ ಆಲಿಯಾ ಭಟ್​ಗೆ ಸೀತೆ ಪಾತ್ರ; ರಾಮನಾಗಿ ರಣಬೀರ್​ ಕಪೂರ್​?

ರಣಬೀರ್​ ಕಪೂರ್​, ರಶ್ಮಿಕಾ ಮಂದಣ್ಣ ಮಾತ್ರವಲ್ಲದೇ ಅನಿಲ್​ ಕಪೂರ್​, ಬಾಬಿ ಡಿಯೋಲ್​ ಮುಂತಾದ ಜನಪ್ರಿಯರ ಕಲಾವಿದರು ಕೂಡ ‘ಅನಿಮಲ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಮೇಕಿಂಗ್​ ಗುಣಮಟ್ಟ ಗಮನ ಸೆಳೆಯುತ್ತಿದೆ. ಪ್ರೀ-ಟೀಸರ್​ ವಿಡಿಯೋದಲ್ಲಿ ರಣಬೀರ್​ ಕಪೂರ್​ ಅವರ ಮುಖ ಪೂರ್ತಿಯಾಗಿ ಕಾಣಿಸಿಲ್ಲ. ಟೀಸರ್​ನಲ್ಲಿ ಅವರನ್ನು ನೋಡಲು ಫ್ಯಾನ್ಸ್​ ಕಾದಿದ್ದಾರೆ. ಟೀಸರ್​ ರಿಲೀಸ್​ ಡೇಟ್​ ಬಗ್ಗೆ ಇನ್ನಷ್ಟೇ ಮಾಹಿತಿ ಸಿಗಬೇಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us