AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಲಾರ್​’ ಬಿಡುಗಡೆ ಮುಂದಕ್ಕೆ ಹೋಗಿದ್ದಕ್ಕೆ ರಣಬೀರ್​ ಕಪೂರ್​ಗೆ ಲಾಭ; ಏನಿದು ಲೆಕ್ಕಾಚಾರ?

ಸೆ.28ರಂದು ರಣಬೀರ್​ ಕಪೂರ್​ ಅವರ ಜನ್ಮದಿನ. ಅಂದು ಸಿಂಪಲ್​ ಪೋಸ್ಟರ್​ ಬಿಡುಗಡೆ ಮಾಡಿ ಸುಮ್ಮನಾಗಬೇಕು ಎಂಬುದು ‘ಅನಿಮಲ್​’ ಬಳಗದ ನಿರ್ಧಾರ ಆಗಿತ್ತು. ಆದರೆ ಆ ನಿರ್ಧಾರದಲ್ಲಿ ಈಗ ಬದಲಾವಣೆ ಆಗಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

‘ಸಲಾರ್​’ ಬಿಡುಗಡೆ ಮುಂದಕ್ಕೆ ಹೋಗಿದ್ದಕ್ಕೆ ರಣಬೀರ್​ ಕಪೂರ್​ಗೆ ಲಾಭ; ಏನಿದು ಲೆಕ್ಕಾಚಾರ?
ರಣಬೀರ್​ ಕಪೂರ್​, ಪ್ರಭಾಸ್​
ಮದನ್​ ಕುಮಾರ್​
|

Updated on: Sep 09, 2023 | 1:23 PM

Share

ಸಿನಿಪ್ರಿಯರು ಅತಿ ಹೆಚ್ಚು ನಿರೀಕ್ಷೆಯಿಂದ ಕಾಯುತ್ತಿರುವ ಸಿನಿಮಾಗಳ ಪಟ್ಟಿಯಲ್ಲಿ ‘ಸಲಾರ್​’ (Salaar) ಚಿತ್ರಕ್ಕೆ ಮೊದಲ ಸ್ಥಾನ ಇದೆ ಎನ್ನಬಹುದು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಸೆಪ್ಟೆಂಬರ್​ 28ರಂದು ಈ ಸಿನಿಮಾ ಬಿಡುಗಡೆ ಆಗಬೇಕಿತ್ತು. ಆದರೆ ‘ಸಲಾರ್​’ ಬಿಡುಗಡೆ ದಿನಾಂಕ (Salaar Release Date) ಮುಂದಕ್ಕೆ ಹೋಗಿದೆ ಎಂಬ ಸುದ್ದಿ ಹೊರಬಿದ್ದಿದೆ. ಹಾಗಾಗಿ ಸೆ.28ರಂದು ಇನ್ನುಳಿದ ಕೆಲವು ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಅದೇ ದಿನಾಂಕವನ್ನು ಬೇರೆ ರೀತಿಯಲ್ಲಿ ಉಪಯೋಗಿಸಿಕೊಳ್ಳಲು ರಣಬೀರ್​ ಕಪೂರ್​ ನಟನೆಯ ‘ಅನಿಮಲ್​’ ಸಿನಿಮಾ (Animal Movie) ತಂಡ ನಿರ್ಧರಿಸಿದೆ ಎನ್ನಲಾಗಿದೆ. ಹಾಗಂತ ಸೆಪ್ಟೆಂಬರ್​ 28ಕ್ಕೆ ‘ಅನಿಮಲ್​’ ಬಿಡುಗಡೆ ಆಗುವುದಿಲ್ಲ. ಅದರ ಬದಲು ಅಂದು ಅಭಿಮಾನಿಗಳಿಗೆ ಭರ್ಜರಿ ಸರ್ಪೈಸ್​ ನೀಡಲು ನಿರ್ದೇಶಕ ಸಂದೀಪ್​ ರೆಡ್ಡಿ ವಂಗ ತೀರ್ಮಾನಿಸಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ಬಹಳ ದಿನಗಳ ಹಿಂದೆ ‘ಅನಿಮಲ್​’ ಸಿನಿಮಾದ ಪ್ರೀ-ಟೀಸರ್​ ವಿಡಿಯೋ ಬಿಡುಗಡೆ ಮಾಡಲಾಗಿತ್ತು. ಅದನ್ನು ನೋಡಿದ ರಣಬೀರ್​ ಕಪೂರ್​ ಅಭಿಮಾನಿಗಳು ವಾವ್​ ಎಂದಿದ್ದರು. ಅದರ ಬೆನ್ನಲ್ಲೇ ಟೀಸರ್​ ಬಿಡುಗಡೆ ಆಗಬೇಕಿತ್ತು. ಆದರೆ ಸಿನಿಮಾದ ರಿಲೀಸ್​ ಡೇಟ್​ ಮುಂದಕ್ಕೆ ಹೋಗಿದ್ದರಿಂದ ಟೀಸರ್​ ಅನಾವರಣ ಆಗಲೇ ಇಲ್ಲ. ಇನ್ನು, ಸೆ.28ರಂದು ರಣಬೀರ್​ ಕಪೂರ್​ ಅವರ ಜನ್ಮದಿನ. ಅಂದು ಸಿಂಪಲ್​ ಪೋಸ್ಟರ್​ ಬಿಡುಗಡೆ ಮಾಡಿ ಸುಮ್ಮನಾಗಬೇಕು ಎಂಬುದು ‘ಅನಿಮಲ್​’ ಬಳಗದ ನಿರ್ಧಾರ ಆಗಿತ್ತು. ಆದರೆ ಆ ನಿರ್ಧಾರದಲ್ಲಿ ಈಗ ಬದಲಾವಣೆ ಆಗಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: Animal Release Date: ‘ಅನಿಮಲ್​’ ಆಗಮನಕ್ಕೆ ಹೊಸ ದಿನಾಂಕ ನಿಗದಿ: ಡಿ.1ಕ್ಕೆ ಬರಲಿದೆ ರಶ್ಮಿಕಾ-ರಣಬೀರ್​ ಜೋಡಿಯ ಚಿತ್ರ

ಒಂದು ವೇಳೆ ಸೆಪ್ಟೆಂಬರ್​ 28ರಂದು ‘ಸಲಾರ್​’ ಬಿಡುಗಡೆ ಆಗುವುದಾಗಿದ್ದರೆ ಅಂದು ಬೇರೆ ಯಾವುದೇ ಸಿನಿಮಾದ ಸದ್ದು ಇರುವುದಿಲ್ಲ. ಅದೇ ದಿನ ‘ಅನಿಮಲ್​’ ಟೀಸರ್​ ಬಿಡುಗಡೆ ಆದರೆ ಹೆಚ್ಚು ಗಮನ ಸೆಳೆಯುತ್ತಿರಲಿಲ್ಲ. ಆ ಕಾರಣಕ್ಕಾಗಿ ಸಿಂಪಲ್​ ಆದಂತಹ ಒಂದು ಪೋಸ್ಟರ್​ ಹಂಚಿಕೊಂಡು ರಣಬೀರ್​ ಕಪೂರ್​ ಅವರ ಬರ್ತ್​ಡೇ ಆಚರಿಸಬೇಕು ಎಂದು ‘ಅನಿಮಲ್​’ ಬಳಗ ತೀರ್ಮಾನಿಸಿತ್ತು. ಆದರೆ ಈಗ ‘ಸಲಾರ್​’ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿರುವುದರಿಂದ ಸೆ.28ರಂದು ಅದ್ದೂರಿಯಾಗಿ ಟೀಸರ್​ ಅನಾವರಣ ಮಾಡಬೇಕು ಎಂದು ಸಂದೀಪ್​ ರೆಡ್ಡಿ ವಂಗ ಅವರು ಆಲೋಚಿಸಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಚಿತ್ರತಂಡದಿಂದ ಇನ್ನಷ್ಟೇ ಅಧಿಕೃತ ಮಾಹಿತಿ ಸಿಗಬೇಕಿದೆ.

ಇದನ್ನೂ ಓದಿ: ‘ರಣಬೀರ್​ ಕಪೂರ್​ ಬೇಡ, ನೀವು ಮಾತ್ರ ಪೋಸ್​ ನೀಡಿ’: ಪಾಪರಾಜಿ ಮನವಿಗೆ ಆಲಿಯಾ ಪ್ರತಿಕ್ರಿಯೆ ಏನು?

‘ಅರ್ಜುನ್​ ರೆಡ್ಡಿ’ ಮತ್ತು ‘ಕಬೀರ್​ ಸಿಂಗ್​’ ಸಿನಿಮಾಗಳ ಯಶಸ್ಸಿನ ಬಳಿಕ ಸಂದೀಪ್​ ರೆಡ್ಡಿ ವಂಗ ಅವರ ಬೇಡಿಕೆ ಹೆಚ್ಚಿದೆ. ಹಾಗಾಗಿ ‘ಅನಿಮಲ್​’ ಸಿನಿಮಾ ಮೇಲೆ ನಿರೀಕ್ಷೆ ಜೋರಾಗಿದೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಸಖತ್​ ಮಾಸ್​ ಆಗಿ ಮೂಡಿಬರುತ್ತಿರುವ ಈ ಚಿತ್ರ ಡಿಸೆಂಬರ್​ 1ರಂದು ಬಿಡುಗಡೆ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
ಎಸ್​ಐಆರ್​ನಲ್ಲಿ 1.7 ಕೋಟಿ ಹೆಸರು ತೆಗೆದಿದ್ದಾರೆ: ಸಚಿವ ರಿಜ್ವಾನ್ ಆರೋಪ
ಎಸ್​ಐಆರ್​ನಲ್ಲಿ 1.7 ಕೋಟಿ ಹೆಸರು ತೆಗೆದಿದ್ದಾರೆ: ಸಚಿವ ರಿಜ್ವಾನ್ ಆರೋಪ