AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brahmastra: ಶಿವ ಎಂಬ ಪಾತ್ರ ಮಾಡಿ, ಶೂ ಧರಿಸಿ ದೇವಸ್ಥಾನ ಪ್ರವೇಶಿಸಿದ ರಣಬೀರ್​; ಇದು ‘ಬ್ರಹ್ಮಾಸ್ತ್ರ’ ಎಡವಟ್ಟು

Brahmastra Trailer Troll: ಟ್ರೇಲರ್​ನಲ್ಲಿನ ದೃಶ್ಯವೊಂದರಲ್ಲಿ ರಣಬೀರ್​ ಕಪೂರ್​ ಅವರು ಶೂ ಧರಿಸಿ ದೇಗುಲ ಪ್ರವೇಶಿಸಿರುವುದು ಕಾಣಿಸಿದೆ. ಅದನ್ನು ಕಂಡು ಜನರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Brahmastra: ಶಿವ ಎಂಬ ಪಾತ್ರ ಮಾಡಿ, ಶೂ ಧರಿಸಿ ದೇವಸ್ಥಾನ ಪ್ರವೇಶಿಸಿದ ರಣಬೀರ್​; ಇದು ‘ಬ್ರಹ್ಮಾಸ್ತ್ರ’ ಎಡವಟ್ಟು
ರಣಬೀರ್ ಕಪೂರ್
TV9 Web
| Updated By: ಮದನ್​ ಕುಮಾರ್​|

Updated on: Jun 17, 2022 | 8:48 AM

Share

ಅಯಾನ್​ ಮುಖರ್ಜಿ ನಿರ್ದೇಶನ ಮಾಡುತ್ತಿರುವ ‘ಬ್ರಹ್ಮಾಸ್ತ್ರ’ (Brahmastra) ಸಿನಿಮಾ ಹಲವು ಕಾರಣದಿಂದ ಸುದ್ದಿ ಆಗುತ್ತಿದೆ. ಇತ್ತೀಚೆಗಷ್ಟೇ ಈ ಚಿತ್ರದ ಟ್ರೇಲರ್​ ರಿಲೀಸ್​ ಆಯಿತು. ಅದನ್ನು ಕಂಡು ನೆಟ್ಟಿಗರು ಹಲವು ಬಗೆಯಲ್ಲಿ ಪ್ರತಿಕ್ರಿಯಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ ಮತ್ತು ಆಲಿಯಾ ಭಟ್​ ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ಅವರ ಅಪ್ಪಟ ಅಭಿಮಾನಿಗಳಿಗೆ ‘ಬ್ರಹ್ಮಾಸ್ತ್ರ’ ಟ್ರೇಲರ್​ (Brahmastra Trailer) ಇಷ್ಟ ಆಗಿದೆ. ಆದರೆ ಇನ್ನೊಂದು ವರ್ಗದ ನೆಟ್ಟಿಗರು ಇದನ್ನು ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಿನಿಮಾದಲ್ಲಿ ರಣಬೀರ್​ ಕಪೂರ್​ ಅವರು ಶಿವ ಎಂಬ ಪಾತ್ರ ಮಾಡಿದ್ದಾರೆ. ಕೆಲವು ಸೀನ್​ಗಳಲ್ಲಿ ತ್ರಿಶೂಲ ಹಿಡಿದು ಕೂಡ ಪೋಸ್​ ನೀಡಿದ್ದಾರೆ. ಆದರೆ ಇದರ ನಡುವೆ ಒಂದು ಎಡವಟ್ಟು ಕೂಡ ಆಗಿದೆ. ರಣಬೀರ್​ ಕಪೂರ್​ (Ranbir Kapoor) ಅವರು ಶೂ ಧರಿಸಿ ದೇವಸ್ಥಾನದ ಒಳಗೆ ಪ್ರವೇಶಿಸುತ್ತಿರುವ ದೃಶ್ಯ ಕೂಡ ಟ್ರೇಲರ್​ನಲ್ಲಿ ಕಾಣಿಸಿದೆ. ಇದರಿಂದ ಹಿಂದೂಗಳ ಭಾವನೆಗೆ ಧಕ್ಕೆ ಆಗಿದೆ ಎಂದು ಅನೇಕರು ಆರೋಪಿಸಿದ್ದಾರೆ.

‘ಬ್ರಹ್ಮಾಸ್ತ್ರ’ ಸಿನಿಮಾದ ಕಥೆ ಏನು ಎಂಬುದರ ಸುಳಿವನ್ನು ಈ ಟ್ರೇಲರ್​ನಲ್ಲಿ ಬಿಟ್ಟುಕೊಡಲಾಗಿದೆ. ಸೂಪರ್​ ಹೀರೋ ರೀತಿ ಇರುವ ಶಿವ ಎಂಬ ವ್ಯಕ್ತಿಯಾಗಿ ರಣಬೀರ್​ ಕಪೂರ್​ ಕಾಣಿಸಿಕೊಳ್ಳಲಿದ್ದಾರೆ. ಆದರೆ ಅವರು ಶೂ ಧರಿಸಿ ದೇಗುಲ ಪ್ರವೇಶಿಸಿದ್ದು ಯಾಕೆ ಎಂಬ ಪ್ರಶ್ನೆ ಎದುರಾಗಿದೆ. ಅದಕ್ಕೆ ಚಿತ್ರತಂಡದಿಂದ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಜನರಿಂದ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ. ಆ ದೃಶ್ಯವನ್ನು ಬದಲಾಯಿಸಬೇಕು ಎಂಬ ಒತ್ತಾಯ ಕೂಡ ಕೇಳಿಬಂದಿದೆ.

ಇದನ್ನೂ ಓದಿ
Image
​‘ಬ್ರಹ್ಮಾಸ್ತ್ರ’ ಟ್ರೇಲರ್​ನಲ್ಲಿ ಗಮನ ಸೆಳೆದ ಪಾತ್ರವರ್ಗ; ಆಲಿಯಾ, ರಣಬೀರ್​ ಜತೆ ಬಚ್ಚನ್​, ನಾಗಾರ್ಜುನ ಮಿಂಚಿಂಗ್​
Image
Brahmastra Trailer: ಬೆಂಕಿಯೂ ಸುಡಲಾರದ ವ್ಯಕ್ತಿಯ ಪಾತ್ರದಲ್ಲಿ ರಣಬೀರ್​ ಕಪೂರ್​; ಹೇಗಿದೆ ‘ಬ್ರಹ್ಮಾಸ್ತ್ರ’ ಟ್ರೇಲರ್​?
Image
ಆಲಿಯಾ-ರಣಬೀರ್​ ಜತೆಯಾಗಿ ‘ಬ್ರಹ್ಮಾಸ್ತ್ರ’ ಚಿತ್ರಕ್ಕೆ ಪಡೆದ ಸಂಬಳ 42 ಕೋಟಿ ರೂ; ಇದರಲ್ಲಿ ಯಾರ ಪಾಲು ಹೆಚ್ಚು?
Image
ಕನ್ನಡದಲ್ಲಿ ಟ್ವೀಟ್​ ಮಾಡಿ ‘ಬ್ರಹ್ಮಾಸ್ತ್ರ’ ರಿಲೀಸ್​ ಡೇಟ್​ ತಿಳಿಸಿದ ಆಲಿಯಾ ಭಟ್​; ಶಿವನ ಗೆಟಪ್​ನಲ್ಲಿ ರಣಬೀರ್​

ರಣಬೀರ್​ ಕಪೂರ್​, ಆಲಿಯಾ ಭಟ್​ ಮಾತ್ರವಲ್ಲದೇ ಅಕ್ಕಿನೇನಿ ನಾಗಾರ್ಜುನ, ಅಮಿತಾಭ್​ ಬಚ್ಚನ್​, ಮೌನಿ ರಾಯ್​ ಕೂಡ ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳನ್ನು ನಿಭಾಯಿಸುತ್ತಿದ್ದಾರೆ. ಚಿತ್ರದ ಟ್ರೇಲರ್​ನಲ್ಲಿ ಗ್ರಾಫಿಕ್ಸ್​ ದೃಶ್ಯಗಳು ಹೈಲೈಟ್​ ಆಗಿವೆ. ಆದರೆ ಗ್ರಾಫಿಕ್ಸ್​ ಗುಣಮಟ್ಟ ಕಳಪೆ ಆಗಿದೆ ಎಂಬ ಕಾರಣದಿಂದಲೂ ಚಿತ್ರತಂಡವನ್ನು ಟ್ರೋಲ್​ ಮಾಡಲಾಗುತ್ತಿದೆ.

ಸೆಪ್ಟೆಂಬರ್​ 9ರಂದು ‘ಬ್ರಹ್ಮಾಸ್ತ್ರ’ ಸಿನಿಮಾ ರಿಲೀಸ್​ ಆಗಲಿದೆ. ಮೂರು ಪಾರ್ಟ್​ನಲ್ಲಿ ಈ ಚಿತ್ರ ಮೂಡಿಬರುತ್ತಿದೆ. ಮೊದಲ ಭಾಗಕ್ಕೆ ‘ಬ್ರಹ್ಮಾಸ್ತ್ರ ಪಾರ್ಟ್​ 1: ಶಿವ’ ಎಂದು ಶೀರ್ಷಿಕೆ ಇಡಲಾಗಿದೆ. ನಟಿ ಮೌನಿ ರಾಯ್​ ಅವರು ಈ ಸಿನಿಮಾದಲ್ಲಿ ನೆಗೆಟಿವ್​ ಶೇಡ್ ಇರುವ ಪಾತ್ರ ಮಾಡಿದ್ದಾರೆ. ಅವರ ಲುಕ್​ ಬಗ್ಗೆಯೂ ಕೆಲವರು ಲೇವಡಿ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಈ ಸಿನಿಮಾ ಸಖತ್​ ಚರ್ಚೆ ಹುಟ್ಟುಹಾಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ