ಸೈಲೆಂಟ್​ ಆಗಿ 100 ಕೋಟಿ ರೂ. ಗಳಿಸಿದ ರಣಬೀರ್​ ಕಪೂರ್​ ಸಿನಿಮಾ ‘ತು ಜೂಟಿ ಮೈ ಮಕ್ಕಾರ್​’

Ranbir Kapoor | Tu Jhoothi Main Makkaar: ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ 13 ದಿನಗಳ ಕಾಲ ಯಶಸ್ವಿಯಾಗಿ ಪ್ರದರ್ಶನ ಕಂಡಿದೆ. ಎರಡನೇ ವೀಕೆಂಡ್​ನಲ್ಲೂ ಪ್ರೇಕ್ಷಕರನ್ನು ಸೆಳೆಯುವಲ್ಲಿ ಈ ಚಿತ್ರ ಯಶಸ್ವಿ ಆಗಿದೆ.

ಸೈಲೆಂಟ್​ ಆಗಿ 100 ಕೋಟಿ ರೂ. ಗಳಿಸಿದ ರಣಬೀರ್​ ಕಪೂರ್​ ಸಿನಿಮಾ ‘ತು ಜೂಟಿ ಮೈ ಮಕ್ಕಾರ್​’
ಶ್ರದ್ಧಾ ಕಪೂರ್, ರಣಬೀರ್ ಕಪೂರ್

Updated on: Mar 20, 2023 | 3:41 PM

ನಟ ರಣಬೀರ್​ ಕಪೂರ್​ (Ranbir Kapoor) ಅವರು ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. 2022ರಲ್ಲಿ ಅವರು ‘ಬ್ರಹ್ಮಾಸ್ತ್ರ’ ಸಿನಿಮಾದಿಂದ ಭಾರಿ ಯಶಸ್ಸು ಕಂಡಿದ್ದರು. ಈ ವರ್ಷ ‘ತು ಜೂಟಿ ಮೈ ಮಕ್ಕಾರ್​’ (Tu Jhoothi Main Makkaar) ಸಿನಿಮಾ ಕೂಡ ಸೂಪರ್​ ಹಿಟ್​ ಆಗಿದೆ. ಹೆಚ್ಚೇನೂ ಅಬ್ಬರ ಮಾಡದೇ ಸೈಲೆಂಟ್​ ಆಗಿ ಬಂದ ಈ ಸಿನಿಮಾ ಬರೋಬ್ಬರಿ 100 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಈ ಚಿತ್ರದಲ್ಲಿ ರಣಬೀರ್​ ಕಪೂರ್​ಗೆ ಜೋಡಿಯಾಗಿ ಶ್ರದ್ಧಾ ಕಪೂರ್​ (Shraddha Kapoor) ನಟಿಸಿದ್ದಾರೆ. ಲವ್​ ರಂಜನ್​ ಅವರು ನಿರ್ದೇಶನ ಮಾಡಿದ್ದಾರೆ. ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾದ ಯಶಸ್ಸಿನಿಂದಾಗಿ ರಣಬೀರ್​ ಕಪೂರ್​ ಅವರ ಚಾರ್ಮ್​ ಹೆಚ್ಚಿದೆ. ಹೊಸ ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ.

ಬಾಲಿವುಡ್​ನಲ್ಲಿ ರಣಬೀರ್ ಕಪೂರ್​ ಅವರು ಸ್ಟಾರ್​ ನಟನಾಗಿ ನೆಲೆ ಕಂಡುಕೊಂಡಿದ್ದಾರೆ. ಹಿಂದಿಯ ಸ್ಟಾರ್​ ಹೀರೋಗಳ ಚಿತ್ರಗಳು ಎರಡು ಅಥವಾ ಮೂರು ದಿನಕ್ಕೆ 100 ಕೋಟಿ ರೂಪಾಯಿ ಗಳಿಸುವುದು ವಾಡಿಕೆ. ಆದರೆ ರಣಬೀರ್​ ಕಪೂರ್​ ಅವರ ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾ 13 ದಿನಗಳ ಕಾಲ ಪ್ರದರ್ಶನ ಕಂಡಿದ್ದು, ಎರಡನೇ ವೀಕೆಂಡ್​ನಲ್ಲೂ ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿ ಆಗಿದೆ. ಆ ಮೂಲಕ ಶತಕೋಟಿ ರೂಪಾಯಿ ಬಾಚಿಕೊಂಡಿದೆ.

ಇದನ್ನೂ ಓದಿ: Ranbir Kapoor: ಮಗಳ ಮೇಲಿನ ಪ್ರೀತಿಗೆ ಸಿನಿಮಾ ಕೆಲಸಗಳಿಂದ ದೂರ ಇರಲು ನಿರ್ಧರಿಸಿದ ರಣಬೀರ್​ ಕಪೂರ್​

ಇದನ್ನೂ ಓದಿ
Alia Bhatt: ಪತ್ನಿ ಆಲಿಯಾ ಗರ್ಭಿಣಿ, ಆದ್ರೆ ಬೇರೆ ನಟಿ ಜೊತೆ ಹೆಚ್ಚಿತು ರಣಬೀರ್​ ಹಾಟ್ನೆಸ್​; ಎಚ್ಚರಿಕೆ ನೀಡಿದ ಫ್ಯಾನ್ಸ್
Brahmastra: ಶಿವ ಎಂಬ ಪಾತ್ರ ಮಾಡಿ, ಶೂ ಧರಿಸಿ ದೇವಸ್ಥಾನ ಪ್ರವೇಶಿಸಿದ ರಣಬೀರ್​; ಇದು ‘ಬ್ರಹ್ಮಾಸ್ತ್ರ’ ಎಡವಟ್ಟು
Brahmastra Trailer: ಬೆಂಕಿಯೂ ಸುಡಲಾರದ ವ್ಯಕ್ತಿಯ ಪಾತ್ರದಲ್ಲಿ ರಣಬೀರ್​ ಕಪೂರ್​; ಹೇಗಿದೆ ‘ಬ್ರಹ್ಮಾಸ್ತ್ರ’ ಟ್ರೇಲರ್​?
ರಣಬೀರ್​​-ಆಲಿಯಾ ಮದುವೆಗೆ ದೀಪಿಕಾ, ಕತ್ರಿನಾ ಗಿಫ್ಟ್​ ಏನು? ದಂಪತಿಗೆ ಕೋಟ್ಯಂತರ ರೂ. ಬೆಲೆಯ ಉಡುಗೊರೆ

ಮಾರ್ಚ್​ 8ರ ಬುಧವಾರ ‘ತು ಜೂಟಿ ಮೈ ಮಕ್ಕಾರ್​’ ತೆರೆಕಂಡಿತು. ಮೊದಲ ದಿನ ಈ ಸಿನಿಮಾ ಗಳಿಸಿದ್ದು 15.73 ಕೋಟಿ ರೂಪಾಯಿ. ಮಿಶ್ರ ಪ್ರತಿಕ್ರಿಯೆ ಸಿಕ್ಕಿದ್ದರಿಂದ 2ನೇ ದಿನ ಕಲೆಕ್ಷನ್​ ಕೊಂಚ ತಗ್ಗಿತು. 2ನೇ ದಿನ 10.34 ಕೋಟಿ ರೂಪಾಯಿ ಹಾಗೂ ಮೂರನೇ ದಿನ 10.52 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿತು. ವಾರಾಂತ್ಯದಲ್ಲಿ ಮತ್ತೆ ಏರಿಕೆ ಕಂಡಿತು. ಶನಿವಾರ (ಮಾರ್ಚ್​ 11) 15.57 ಕೋಟಿ ರೂಪಾಯಿ ಮತ್ತು ಭಾನುವಾರ (ಮಾರ್ಚ್​ 12) 17.08 ಕೋಟಿ ರೂಪಾಯಿ ಆದಾಯ ಹರಿದುಬಂತು. ಎರಡನೇ ವೀಕೆಂಡ್​ನಲ್ಲಿ ಭರ್ಜರಿ ಕಲೆಕ್ಷನ್​ ಆಗಿದ್ದರಿಂದ ಈ ಸಿನಿಮಾ 100 ಕೋಟಿ ರೂಪಾಯಿ ಕ್ಲಬ್​ ಸೇರಿದೆ.

ಇದನ್ನೂ ಓದಿ: KRK: ಶ್ರದ್ಧಾ ಕಪೂರ್​ಗೆ ಬಾಡಿ ಶೇಮಿಂಗ್​ ಮಾಡಿದ ಕಾಂಟ್ರವರ್ಸಿ ವಿಮರ್ಶಕ ಕಮಾಲ್​ ಆರ್​. ಖಾನ್​

ನಟಿ ಶ್ರದ್ಧಾ ಕಪೂರ್​ ಅವರು ‘ತು ಜೂಟಿ ಮೈ ಮಕ್ಕಾರ್​’ ಸಿನಿಮಾದಲ್ಲಿ ಸಖತ್​ ಗ್ಲಾಮರಸ್​ ಆಗಿ ಕಾಣಿಸಿಕೊಂಡಿದ್ದಾರೆ. ವಿವಾದಾತ್ಮಕ ವಿಮರ್ಶಕ ಕಮಾಲ್ ಆರ್​. ಖಾನ್​ ಅವರು ಈ ಸಿನಿಮಾದ ವಿಮರ್ಶೆ ಮಾಡುವಾಗ ಶ್ರದ್ಧಾ ಕಪೂರ್​ ಮತ್ತು ರಣಬೀರ್​ ಕಪೂರ್​ಗೆ ಬಾಡಿ ಶೇಮಿಂಗ್​ ಮಾಡಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:41 pm, Mon, 20 March 23

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us