AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನಲ್ಲಿ ‘ರಾಮಾಯಣ 2’ ಶೂಟಿಂಗ್ ಶುರು ಮಾಡಿದ ನಟ ರಣಬೀರ್ ಕಪೂರ್

ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದ ಎರಡನೇ ಪಾರ್ಟ್​​ಗೆ ಮುಂಬೈನಲ್ಲಿ ಚಿತ್ರೀಕರಣ ಶುರುವಾಗಿದೆ. ರಾಮನ ಪಾತ್ರ ಮಾಡುತ್ತಿರುವ ರಣಬೀರ್ ಕಪೂರ್ ಅವರು ಈಗ ಶೂಟಿಂಗ್​ನಲ್ಲಿ ಪಾಲ್ಗೊಂಡಿದ್ದಾರೆ. ಹನುಮಂತನ ಪಾತ್ರ ಮಾಡುತ್ತಿರುವ ಸನ್ನಿ ಡಿಯೋಲ್ ಅವರು ಶೀಘ್ರದಲ್ಲೇ ಚಿತ್ರೀಕರಣಕ್ಕೆ ಬರಲಿದ್ದಾರೆ. ಆ ಬಗ್ಗೆ ಇಲ್ಲಿದೆ ಇನ್ನಷ್ಟು ವಿವರ.

ಮುಂಬೈನಲ್ಲಿ ‘ರಾಮಾಯಣ 2’ ಶೂಟಿಂಗ್ ಶುರು ಮಾಡಿದ ನಟ ರಣಬೀರ್ ಕಪೂರ್
Ramayana Poster
ಮದನ್​ ಕುಮಾರ್​
|

Updated on: Mar 05, 2026 | 9:31 PM

Share

ನಟ ರಣಬೀರ್ ಕಪೂರ್ ಅವರು ಈಗಾಗಲೇ ‘ರಾಮಾಯಣ’ ಸಿನಿಮಾದ ಮೊದಲ ಪಾರ್ಟ್ ಚಿತ್ರೀಕರಣ ಮುಗಿಸಿದ್ದಾರೆ. ಈಗ ಅವರು ‘ರಾಮಾಯಣ 2’ (Ramayana 2) ಚಿತ್ರೀಕರಣ ಶುರು ಮಾಡಿದ್ದಾರೆ. ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾ ಎರಡು ಪಾರ್ಟ್​​ಗಳಲ್ಲಿ ರಿಲೀಸ್ ಆಗಲಿದೆ. ಶ್ರೀರಾಮನ ಪಾತ್ರದಲ್ಲಿ ನಟಿಸುತ್ತಿರುವ ರಣಬೀರ್ ಕಪೂರ್ (Ranbir Kapoor) ಈಗಾಗಲೇ ‘ರಾಮಾಯಣ 2’ ಸೆಟ್‌ಗೆ ಬಂದಿದ್ದು, ಚಿತ್ರದ ಪ್ರಮುಖ ದೃಶ್ಯಗಳ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಶೀಘ್ರದಲ್ಲೇ ಸನ್ನಿ ಡಿಯೋಲ್ ಕೂಡ ಶೂಟಿಂಗ್ ಸೆಟ್ ಸೇರಿಕೊಳ್ಳಲಿದ್ದಾರೆ.

ರಣಬೀರ್ ಕಪೂರ್ ಮಾರ್ಚ್ ತಿಂಗಳಲ್ಲಿ ಸಂಜಯ್ ಲೀಲಾ ಬನ್ಸಾಲಿ ಅವರ ‘ಲವ್ ಆ್ಯಂಡ್ ವಾರ್’ ಚಿತ್ರದ ಶೂಟಿಂಗ್‌ನಲ್ಲಿ ಭಾಗವಹಿಸಬೇಕಿತ್ತು. ಆದರೆ, ಬನ್ಸಾಲಿ ಅವರ ಆರೋಗ್ಯ ಸಮಸ್ಯೆಯ ಕಾರಣದಿಂದಾಗಿ ಆ ಚಿತ್ರದ ಚಿತ್ರೀಕರಣವು ಮೇ ತಿಂಗಳಿಗೆ ಮುಂದೂಡಲ್ಪಟ್ಟಿದೆ. ಈ ಬಿಡುವಿನ ಸಮಯವನ್ನು ಸದುಪಯೋಗಪಡಿಸಿಕೊಳ್ಳಲು ನಿರ್ಧರಿಸಿರುವ ರಣಬೀರ್, ತಮ್ಮ ಸಂಪೂರ್ಣ ಗಮನವನ್ನು ಈಗ ‘ರಾಮಾಯಣ 2’ ಕಡೆಗೆ ಹರಿಸಿದ್ದಾರೆ.

‘ರಾಮಾಯಣ’ ಚಿತ್ರದ ಎರಡನೇ ಭಾಗದಲ್ಲಿ ಶ್ರೀರಾಮ ಮತ್ತು ಹನುಮಂತನ ಭೇಟಿಯ ದೃಶ್ಯಗಳು ಅತ್ಯಂತ ಪ್ರಮುಖವಾಗಿವೆ. ಹನುಮಂತನ ಪಾತ್ರದಲ್ಲಿ ಬಾಲಿವುಡ್‌ನ ಹಿರಿಯ ನಟ ಸನ್ನಿ ಡಿಯೋಲ್ ಕಾಣಿಸಿಕೊಳ್ಳುತ್ತಿದ್ದು, ಅವರು ಮಾರ್ಚ್ 20ರ ಸುಮಾರಿಗೆ ಚಿತ್ರೀಕರಣಕ್ಕೆ ಬರಲಿದ್ದಾರೆ. ಮಾರ್ಚ್‌ನಿಂದ ಮೇ ತಿಂಗಳವರೆಗೆ ರಣಬೀರ್ ಮತ್ತು ಸನ್ನಿ ಡಿಯೋಲ್ ಅವರ ಕಾಂಬಿನೇಶನ್ ದೃಶ್ಯಗಳನ್ನು ಚಿತ್ರೀಕರಿಸಲು ಪ್ಲಾನ್ ಮಾಡಲಾಗಿದೆ ಎಂಬ ಮಾಹಿತಿ ಕೇಳಿಬಂದಿದೆ.

ನಿತೇಶ್ ತಿವಾರಿ ನಿರ್ದೇಶನದ ಈ ಸಿನಿಮಾದಲ್ಲಿ ರಣಬೀರ್ ಕಪೂರ್ ಅವರಿಗೆ ಜೋಡಿಯಾಗಿ ಸಾಯಿ ಪಲ್ಲವಿ ಅವರು ನಟಿಸುತ್ತಿದ್ದು, ಸೀತೆಯ ಪಾತ್ರ ಮಾಡುತ್ತಿದ್ದಾರೆ. ನಮಿತ್ ಮಲ್ಹೋತ್ರಾ ಅವರು ಈ ಬೃಹತ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಚಿತ್ರದ ಮೊದಲ ಭಾಗ ಈ ವರ್ಷ ದೀಪಾವಳಿ ಹಬ್ಬದ ಪ್ರಯುಕ್ತ ಅದ್ದೂರಿಯಾಗಿ ಬಿಡುಗಡೆ ಆಗಲಿದೆ.

ಇದನ್ನೂ ಓದಿ: ನಾನ್ ವೆಜ್ ತಿನ್ನಲ್ಲ ಎಂದು ಸುಳ್ಳು ಹೇಳಿದ್ರಾ ರಣಬೀರ್? ಫೋಟೋ ವೈರಲ್

ಘಟಾನುಘಟಿ ಕಲಾವಿದರು ‘ರಾಮಾಯಣ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ನಟ ಯಶ್ ಅವರು ರಾವಣನ ಪಾತ್ರ ಮಾಡುತ್ತಿರುವುದು ವಿಶೇಷ. ಈ ಸಿನಿಮಾದಲ್ಲಿ ಗ್ರಾಫಿಕ್ಸ್ ದೃಶ್ಯಗಳು ಹೇರಳವಾಗಿರಲಿವೆ. ಹಾಲಿವುಡ್ ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಅವರು ಈ ಸಿನಿಮಾದ ಫೈನಲ್ ಕಟ್ ನೋಡಿ ಸಲಹೆ ನೀಡಲಿದ್ದಾರೆ ಎಂಬ ಸುದ್ದಿ ಕೂಡ ಹರಿದಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು