AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಲನ್ ಪಾತ್ರದಲ್ಲಿ ನಟಿಸಲಿದ್ದಾರೆ ಸ್ಟಾರ್ ನಟ ರಣ್​​ಬೀರ್ ಕಪೂರ್: ಸಿನಿಮಾ ಯಾವುದು?

Ranbir Kapoor villain role: ಕಳೆದ ಕೆಲ ವರ್ಷಗಳಲ್ಲಿ ಒಂದರ ಹಿಂದೊಂದು ಹಿಟ್ ಸಿನಿಮಾಗಳನ್ನು ಇವರು ನೀಡಿದ್ದಾರೆ ನಟ ರಣ್​​ಬೀರ್ ಕಪೂರ್. ಪ್ರಸ್ತುತ ‘ರಾಮಾಯಣ’ ಸಿನಿಮಾನಲ್ಲಿ ಶ್ರೀರಾಮನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ‘ಅನಿಮಲ್ ಪಾರ್ಕ್’ ಚಿತ್ರೀಕರಣವೂ ಶೀಘ್ರವೇ ಪ್ರಾರಂಭ ಆಗಲಿದೆ. ಬಾಲಿವುಡ್​ನ ಸೂಪರ್ ಸ್ಟಾರ್ ಆಗಿರುವ ರಣ್​​ಬೀರ್ ಕಪೂರ್ ವಿಲನ್ ಪಾತ್ರದಲ್ಲಿ ನಟಿಸಲು ಸಜ್ಜಾಗಿದ್ದಾರೆ. ಆದರೆ ರಣ್​​ಬೀರ್ ನಟಿಸುತ್ತಿರುವುದು ಸಾಮಾನ್ಯ ವಿಲನ್ ಆಗಿ ಅಲ್ಲ.

ವಿಲನ್ ಪಾತ್ರದಲ್ಲಿ ನಟಿಸಲಿದ್ದಾರೆ ಸ್ಟಾರ್ ನಟ ರಣ್​​ಬೀರ್ ಕಪೂರ್: ಸಿನಿಮಾ ಯಾವುದು?
Ranbir Kapoor
ಮಂಜುನಾಥ ಸಿ.
|

Updated on: Feb 10, 2026 | 6:47 PM

Share

ರಣ್​​ಬೀರ್ ಕಪೂರ್ (Ranbir Kapoor) ಬಾಲಿವುಡ್​ನ ಸೂಪರ್ ಸ್ಟಾರ್ ನಟ. ಕಳೆದ ಕೆಲ ವರ್ಷಗಳಲ್ಲಿ ಒಂದರ ಹಿಂದೊಂದು ಹಿಟ್ ಸಿನಿಮಾಗಳನ್ನು ಇವರು ನೀಡಿದ್ದಾರೆ. ಪ್ರಸ್ತುತ ‘ರಾಮಾಯಣ’ ಸಿನಿಮಾನಲ್ಲಿ ಶ್ರೀರಾಮನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ‘ಅನಿಮಲ್ ಪಾರ್ಕ್’ ಚಿತ್ರೀಕರಣವೂ ಶೀಘ್ರವೇ ಪ್ರಾರಂಭ ಆಗಲಿದೆ. ಬಾಲಿವುಡ್​ನ ಸೂಪರ್ ಸ್ಟಾರ್ ಆಗಿರುವ ರಣ್​​ಬೀರ್ ಕಪೂರ್ ವಿಲನ್ ಪಾತ್ರದಲ್ಲಿ ನಟಿಸಲು ಸಜ್ಜಾಗಿದ್ದಾರೆ. ಆದರೆ ರಣ್​​ಬೀರ್ ನಟಿಸುತ್ತಿರುವುದು ಸಾಮಾನ್ಯ ವಿಲನ್ ಆಗಿ ಅಲ್ಲ.

ರಣ್​​ಬೀರ್ ಕಪೂರ್ ವಿಲನ್ ಆಗುತ್ತಿರುವುದು ‘ಧೂಮ್’ ಸಿನಿಮಾ ಸರಣಿಯ ಹೊಸ ಸಿನಿಮಾನಲ್ಲಿ. ‘ಧೂಮ್’ ಸಿನಿಮಾನಲ್ಲಿ ವಿಲನ್ ಪಾತ್ರವೇ ಪ್ರಮುಖವಾದುದು, ಹಾಗಾಗಿ ಈ ಸಿನಿಮಾ ಸರಣಿಯಲ್ಲಿ ಸ್ಟಾರ್ ನಟರೇ ವಿಲನ್ ಆಗಿ ನಟಿಸುತ್ತಾರೆ. ಈ ಹಿಂದೆ ಜಾನ್ ಅಬ್ರಹಾಂ, ಹೃತಿಕ್ ರೋಷನ್, ಆಮಿರ್ ಖಾನ್ ಅವರುಗಳು ವಿಲನ್​​ಗಳಾಗಿ ನಟಿಸಿದ್ದಾರೆ. ಇದೀಗ ‘ಧೂಮ್’ ಸಿನಿಮಾದ ಹೊಸ ಸಿನಿಮಾನಲ್ಲಿ ರಣ್​​ಬೀರ್ ಕಪೂರ್ ವಿಲನ್ ಆಗಿ ನಟಿಸಲಿದ್ದಾರೆ.

‘ಧೂಮ್’ ಸಿನಿಮಾ ಸರಣಿ ಭಾರತದ ಬಲು ಜನಪ್ರಿಯ ಮತ್ತು ಯಶಸ್ವಿ ಸಿನಿಮಾ ಸರಣಿಗಳಲ್ಲಿ ಒಂದಾಗಿದೆ. ಈ ಸರಣಿಯ ಕೊನೆಯ ಸಿನಿಮಾ ‘ಧೂಮ್ 3’ 2013 ರಲ್ಲಿ ಬಿಡುಗಡೆ ಆಗಿತ್ತು. ಇದೀಗ 13 ವರ್ಷಗಳ ಬಳಿಕ ‘ಧೂಮ್ 4’ಗೆ ಸಿದ್ಧತೆ ಆರಂಭವಾಗಿದೆ. ಸಿನಿಮಾದ ನಿರ್ಮಾಣ ಸಂಸ್ಥೆ ಆಗಿರುವ ಯಶ್ ರಾಜ್ ಫಿಲಮ್ಸ್, ‘ಧೂಮ್ 4’ ಬಗ್ಗೆ ಹೆಚ್ಚುವರಿ ಆಸಕ್ತಿ ವಹಿಸಿದ್ದು, ಈವರೆಗೆ ನಾಲ್ಕು ಚಿತ್ರಕತೆಗಳನ್ನು ನಿರಾಕರಿಸಿದೆಯಂತೆ. ಇದೀಗ ಒಂದು ಚಿತ್ರಕತೆ ಅಂತಿಮ ಹಂತ ತಲುಪಿದ್ದು, ಆ ಸಿನಿಮಾಕ್ಕೆ ರಣ್​​ಬೀರ್ ಕಪೂರ್ ಅನ್ನು ವಿಲನ್ ಆಗಿ ಆಯ್ಕೆ ಮಾಡುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ಬಾಲಿವುಡ್​ನ ಸ್ಟಾರ್ ನಿರ್ದೇಶಕನ ಜೊತೆ ಅಲ್ಲು ಅರ್ಜುನ್ ಸಿನಿಮಾ?

ಮತ್ತೊಂದು ವಿಶೇಷವೆಂದರೆ ‘ಧೂಮ್’ ಸಿನಿಮಾ ಪ್ರಾರಂಭ ಆದಾಗಿನಿಂದಲೂ ಸಿನಿಮಾದ ನಾಯಕ ಪಾತ್ರದಲ್ಲಿ ಅಂದರೆ ಎಸಿಪಿ ಜೈ ದೀಕ್ಷಿತ್ ಪಾತ್ರದಲ್ಲಿ ಅಭಿಷೇಕ್ ಬಚ್ಚನ್ ನಟಿಸುತ್ತಾ ಬಂದಿದ್ದಾರೆ. ಆದರೆ ಈ ಬಾರಿ ಎಸಿಪಿ ಪಾತ್ರವೂ ಸಹ ಬದಲಾಗುತ್ತಿದ್ದು, ಅಭಿಷೇಕ್ ಪಾತ್ರದಲ್ಲಿ ವಿಕ್ಕಿ ಕೌಶಲ್ ನಟಿಸುವ ಸಾಧ್ಯತೆ ಇದೆ.

ರಣ್​​ಬೀರ್ ಕಪೂರ್ ಅವರು ಪ್ರಸ್ತುತ ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ‘ರಾಮಾಯಣ’ ಸಿನಿಮಾದ ಚಿತ್ರೀಕರಣ ಚಾಲ್ತಿಯಲ್ಲಿದೆ. ಅದರ ಜೊತೆಗೆ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶಿಸುತ್ತಿರುವ ‘ಲವ್ ಆಂಡ್ ವಾರ್’ ಸಿನಿಮಾದ ಚಿತ್ರೀಕರಣವೂ ನಡೆಯುತ್ತಿದೆ. ಈ ಸಿನಿಮಾನಲ್ಲಿ ರಣ್​​ಬೀರ್ ಕಪೂರ್ ಜೊತೆಗೆ ಆಲಿಯಾ ಭಟ್ ಮತ್ತು ವಿಕ್ಕಿ ಕೌಶಲ್ ಸಹ ಇದ್ದಾರೆ. ಅದಾದ ಬಳಿಕ ‘ಬ್ರಹ್ಮಾಸ್ತ್ರ 2’ ಸಿನಿಮಾ ಶೂಟಿಂಗ್ ಶುರುವಾಗಲಿದೆ. ಅದರ ಬಳಿಕ ‘ಅನಿಮಲ್ ಪಾರ್ಕ್’ ಸಿನಿಮಾ ಶುರುವಾಗಲಿದೆ. ಈ ಎಲ್ಲ ಸಿನಿಮಾಗಳ ಬಳಿಕವಷ್ಟೆ ‘ಧೂಮ್ 4’ ಸಿನಿಮಾ ಪ್ರಾರಂಭ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್
ಡೈಮಂಡ್ ಟಾಸ್ಕ್​ ವಿಷಯದಲ್ಲಿ ಪಂಚಾಯ್ತಿ ಮಾಡಲು ಬಂದ ಸುದೀಪ್
ಡೈಮಂಡ್ ಟಾಸ್ಕ್​ ವಿಷಯದಲ್ಲಿ ಪಂಚಾಯ್ತಿ ಮಾಡಲು ಬಂದ ಸುದೀಪ್
ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಐಷಾರಾಮಿ ಪ್ರವಾಸಿ ರೈಲಿನಲ್ಲಿ ಪ್ರಯಾಣಿಸಿ ಖುಷಿ ಹಂಚಿಕೊಂಡ ಸಿಎಂ ಡಿಕೆಶಿ !
ಐಷಾರಾಮಿ ಪ್ರವಾಸಿ ರೈಲಿನಲ್ಲಿ ಪ್ರಯಾಣಿಸಿ ಖುಷಿ ಹಂಚಿಕೊಂಡ ಸಿಎಂ ಡಿಕೆಶಿ !
ಮಾವಿನಕೆರೆ ರಂಗನಾಥಸ್ವಾಮಿಗೆ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಮಾವಿನಕೆರೆ ರಂಗನಾಥಸ್ವಾಮಿಗೆ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ