ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ‘ಆದಿಪುರುಷ್’ (Adipurush) ಚಿತ್ರದ ಹೆಸರು ಮುಂಚೂಣಿಯಲ್ಲಿದೆ. ಓಂ ರಾವತ್ ನಿರ್ದೇಶನದ ಈ ಸಿನಿಮಾ ಜೂನ್ 16ರಂದು ಬಿಡುಗಡೆ ಆಗಲಿದೆ. 3ಡಿ ಅವತರಣಿಕೆಯಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿದೆ ಎಂಬುದು ವಿಶೇಷ. ರಾಮಾಯಣದ ಕಥೆಯನ್ನು ಆಧರಿಸಿ ‘ಆದಿಪುರುಷ್’ ಸಿದ್ಧವಾಗಿದೆ. ಆದ್ದರಿಂದ ಜನರಿಗೆ ಮತ್ತು ಸೆಲೆಬ್ರಿಟಿಗಳಿಗೆ ಈ ಸಿನಿಮಾ ಮೇಲೆ ವಿಶೇಷವಾದ ಭಾವನೆ ಮೂಡಿದೆ. ಈ ಚಿತ್ರದಲ್ಲಿ ಪ್ರಭಾಸ್ (Prabhas) ಅವರು ರಾಮನಾಗಿ ನಟಿಸಿದ್ದು, ಸೀತೆ ಪಾತ್ರಕ್ಕೆ ಕೃತಿ ಸನೋನ್ ಬಣ್ಣ ಹಚ್ಚಿದ್ದಾರೆ. ಮೊದಲ ದಿನ ಈ ಚಿತ್ರ ಎಷ್ಟು ಕಲೆಕ್ಷನ್ ಮಾಡಬಹುದು ಎಂಬ ಕೌತುಕ ಮೂಡಿದೆ. ಈ ನಡುವೆ ಕೆಲವು ಸೆಲೆಬ್ರಿಟಿಗಳು ಸಾವಿರಾರು ಟಿಕೆಟ್‌ಗಳನ್ನು ಖರೀದಿಸಿ, ಅವುಗಳನ್ನು ಬಡಮಕ್ಕಳಿಗೆ ಉಚಿತವಾಗಿ ಹಂಚಲು ಮುಂದಾಗಿದ್ದಾರೆ. ನಟ ರಣಬೀರ್ ಕಪೂರ್ (Ranbir Kapoor) ಅವರು ಬರೋಬ್ಬರಿ 10 ಸಾವಿರ ಟಿಕೆಟ್‌ಗಳನ್ನು ಉಚಿತವಾಗಿ ನೀಡಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.
ಟ್ರೇಡ್ ವಿಶ್ಲೇಷಕ ತರಣ್ ಆದರ್ಶ್ ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈ ಸುದ್ದಿ ತಿಳಿಸುವ ಸಲುವಾಗಿ ಒಂದು ಪೋಸ್ಟರ್ ಶೇರ್ ಮಾಡಿಕೊಳ್ಳಲಾಗಿದೆ. ‘ಬಡ ಮಕ್ಕಳಿಗಾಗಿ ರಣಬೀರ್ ಕಪೂರ್ ಅವರು ಆದಿಪುರುಷ್ ಸಿನಿಮಾದ 10 ಸಾವಿರ ಟಿಕೆಟ್‌ಗಳನ್ನು ಬುಕ್ ಮಾಡಲಿದ್ದಾರೆ’ ಎಂದು ಈ ಪೋಸ್ಟರ್ನಲ್ಲಿ ಬರೆಯಲಾಗಿದೆ. ಅವರ ಈ ಕಾರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಣಬೀರ್ ಕಪೂರ್ ಅವರು ಈ ಸಿನಿಮಾದಲ್ಲಿ ನಟಿಸಿಲ್ಲ. ಹಾಗಿದ್ದರೂ ಕೂಡ ಅವರು ಈ ಕೆಲಸ ಮಾಡುತ್ತಿರುವುದು ಪ್ರಶಂಸೆಗೆ ಪಾತ್ರವಾಗಿದೆ.
#Xclusiv… RANBIR KAPOOR TO BOOK 10,000 TICKETS OF ‘ADIPURUSH’ FOR UNDERPRIVILEGED CHILDREN… OFFICIAL POSTER…#RanbirKapoor #Adipurush #Prabhas #KritiSanon #SaifAliKhan #SunnySingh #DevdattaNage pic.twitter.com/k30OUNvO9G
— taran adarsh (@taran_adarsh) June 8, 2023
ರಣಬೀರ್ ಕಪೂರ್ ರೀತಿಯೇ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಅವರು ‘ಆದಿಪುರುಷ್’ ಚಿತ್ರದ 10 ಸಾವಿರ ಟಿಕೆಟ್‌ಗಳನ್ನು ಉಚಿತವಾಗಿ ಹಂಚಲು ಮುಂದಾಗಿದ್ದಾರೆ. ಇದಕ್ಕೆ ಕಾರಣವನ್ನೂ ಅವರು ನೀಡಿದ್ದಾರೆ. ‘ಆದಿಪುರುಷ್ ಜೀವಮಾನದಲ್ಲಿ ಒಮ್ಮೆ ನೋಡಲೇಬೇಕಾದ ಸಿನಿಮಾ. ಇದನ್ನು ಎಲ್ಲರೂ ಸಂಭ್ರಮಿಸಲೇಬೇಕು. ಭಗವಾನ್ ಶ್ರೀರಾಮನ ಮೇಲಿನ ಅಪಾರ ಭಕ್ತಿಯಿಂದ ತೆಲಂಗಾಣದಾದ್ಯಂತ ಇರುವ ಸರ್ಕಾರಿ ಶಾಲೆಗಳು ಅನಾಥಾಶ್ರಮ ಮತ್ತು ವೃದ್ಧಾಶ್ರಮಗಳಿಗೆ 10,000+ ಟಿಕೆಟ್‌ಗಳನ್ನು ಉಚಿತವಾಗಿ ನೀಡಲು ನಿರ್ಧರಿಸಿದ್ದೇನೆ. ಟಿಕೆಟ್‌ಗಳನ್ನು ಪಡೆಯಲು ನಿಮ್ಮ ವಿವರಗಳೊಂದಿಗೆ ಗೂಗಲ್ ಫಾರ್ಮ್ ಅನ್ನು ಭರ್ತಿ ಮಾಡಿ. ಜೈ ಶ್ರೀರಾಮ್ ಘೋಷಣೆಗಳು ಎಲ್ಲಾ ದಿಕ್ಕುಗಳಲ್ಲಿಯೂ ಪ್ರತಿಧ್ವನಿಸಲಿ’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: Alia Bhatt: ರಾಮಾಯಣ ಕಥೆ ಆಧರಿತ ಸಿನಿಮಾದಲ್ಲಿ ಆಲಿಯಾ ಭಟ್ಗೆ ಸೀತೆ ಪಾತ್ರ; ರಾಮನಾಗಿ ರಣಬೀರ್ ಕಪೂರ್?
‘ಆದಿಪುರುಷ್’ ಸಿನಿಮಾ ಪ್ರದರ್ಶನ ಕಾಣುವ ಎಲ್ಲ ಚಿತ್ರಮಂದಿರಗಳಲ್ಲೂ ಆಂಜನೇಯನಿಗಾಗಿ ಒಂದು ಸೀಟ್ ಮೀಸಲಿಡಲು ತೀರ್ಮಾನಿಸಲಾಗಿದೆ. ಚಿತ್ರತಂಡದವರು ಈ ರೀತಿ ಮಾಡಲು ಒಂದು ಸ್ಪೆಷಲ್ ಕಾರಣ ಇದೆ. ಇದು ಅಪ್ಪಟ ನಂಬಿಕೆಗೆ ಸಂಬಂಧಿಸಿದ ವಿಚಾರ. ಎಲ್ಲಿ ರಾಮನ ಆರಾಧನೆ ಮಾಡಲಾಗುತ್ತೋ ಅಲ್ಲಿ ಆಂಜನೇಯ ಬರುತ್ತಾನೆ ಎಂಬ ನಂಬಿಕೆ ಇದೆ. ‘ಆದಿಪುರುಷ್’ ಸಿನಿಮಾದಲ್ಲೂ ಶ್ರೀರಾಮನ ಗುಣಗಾನ ಮಾಡಲಾಗುತ್ತದೆ. ರಾಮನ ಕುರಿತಾದ ಹಾಡುಗಳು ಇದರಲ್ಲಿ ಇವೆ. ಹಾಗಾಗಿ ಈ ಸಿನಿಮಾ ಪ್ರದರ್ಶನ ಆಗುವಾಗ ಚಿತ್ರಮಂದಿರಕ್ಕೆ ಹನುಮಂತ ಬರುತ್ತಾನೆ ಎಂಬ ನಂಬಿಕೆ ಹಲವರಿಗೆ ಇದೆ. ಆ ಕಾರಣದಿಂದ ಒಂದು ಸೀಟನ್ನು ಪವನ ಪುತ್ರನಿಗಾಗಿ ಮೀಸಲಿಡಲಾಗುವುದು.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.