AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ ಕಾಲಿಗೆ ನಮಸ್ಕರಿಸಿದ ರಣಬೀರ್ ಕಪೂರ್; ನಟನ ಬಗ್ಗೆ ಮೆಚ್ಚುಗೆ

ಸೋಮವಾರ ಅದ್ದೂರಿಯಾಗಿ ಹೈದರಾಬಾದ್​ನಲ್ಲಿ ‘ಅನಿಮಲ್’ ಸಿನಿಮಾ ಇವೆಂಟ್ ನಡೆದಿದೆ. ಈ ಕಾರ್ಯಕ್ರಮಕ್ಕೆ ಹಲವು ದಿಗ್ಗಜರು ಬಂದಿದ್ದರು. ಎಸ್​ಎಸ್​ ರಾಜಮೌಳಿ ಕಾಲಿಗೆ ರಣಬೀರ್ ನಮಸ್ಕರಿಸಿದ್ದಾರೆ.

ರಾಜಮೌಳಿ ಕಾಲಿಗೆ ನಮಸ್ಕರಿಸಿದ ರಣಬೀರ್ ಕಪೂರ್; ನಟನ ಬಗ್ಗೆ ಮೆಚ್ಚುಗೆ
ಅನಿಮಲ್ ಟೀಂ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on:Nov 28, 2023 | 10:02 AM

ಹಿರಿಯರನ್ನು ಕಂಡರೆ ನಮಸ್ಕರಿಸಿ ಅವರಿಂದ ಆಶೀರ್ವಾದ ಪಡೆಯುವ ಸಂಪ್ರದಾಯ ಮೊದಲಿನಿಂದಲೂ ಚಾಲ್ತಿಯಲ್ಲಿ ಇದೆ. ಅನೇಕ ಹೀರೋಗಳು ಇದನ್ನು ಫಾಲೋ ಮಾಡುವುದಿಲ್ಲ. ನಾವು ಉನ್ನತ ಸ್ಥಾನದಲ್ಲಿ ಇದ್ದೇವೆ, ನಮಗೆ ಯಾರ ಆಶೀರ್ವಾದವೂ ಬೇಡ ಎಂಬ ಅಹಂನಲ್ಲಿ ಓಡಾಡುತ್ತಿರುತ್ತಾರೆ. ಆದರೆ, ರಣಬೀರ್ ಕಪೂರ್ ಅವರು ಇದಕ್ಕೆ ಭಿನ್ನ. ಅವರು ನಿರ್ದೇಶಕ ಎಸ್​ಎಸ್ ರಾಜಮೌಳಿ (SS Rajamouli) ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಎಲ್ಲರೂ ನಟನ ಬಗ್ಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ರಣಬೀರ್ ಕಪೂರ್, ರಶ್ಮಿಕಾ ಮಂದಣ್ಣ, ಅನಿಲ್ ಕಪೂರ್, ಬಾಬಿ ಡಿಯೋಲ್ ಮೊದಲಾದವರು ನಟಿಸಿರುವ ‘ಅನಿಮಲ್’ ಸಿನಿಮಾ ಡಿಸೆಂಬರ್ 1ರಂದು ರಿಲೀಸ್ ಆಗುತ್ತಿದೆ. ಭೂಷಣ್ ಕುಮಾರ್ ನಿರ್ಮಾಣದ ಈ ಚಿತ್ರವನ್ನು ಸಂದೀಪ್ ರೆಡ್ಡಿ ವಂಗ ನಿರ್ದೇಶನ ಮಾಡಿದ್ದಾರೆ. ಸೋಮವಾರ (ನವೆಂಬರ್ 27) ಅದ್ದೂರಿಯಾಗಿ ಹೈದರಾಬಾದ್​ನಲ್ಲಿ ಪ್ರಿರಿಲೀಸ್ ಇವೆಂಟ್ ಹಮ್ಮಿ ಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಮಹೇಶ್ ಬಾಬು ಹಾಗೂ ಎಸ್​ಎಸ್​ ರಾಜಮೌಳಿ ಅತಿಥಿಗಳಾಗಿ ಆಗಮಿಸಿದ್ದರು.

ರಾಜಮೌಳಿ ಅವರು ಕುರ್ಚಿ ಮೇಲೆ ಕುಳಿತಿಕೊಳ್ಳಲು ಬಂದರು. ಆಗ ರಣಬೀರ್ ಅವರು ರಾಜಮೌಳಿ ಕಾಲಿಗೆ ನಮಸ್ಕರಿಸಿದರು. ಅವರ ನಡುವಳಿಕೆಯನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಸ್ಟಾರ್ ಹಿರೋ ಆದರೂ ರಣಬೀರ್ ಅವರು ತಗ್ಗಿ ಬಗ್ಗಿ ನಡೆಯುತ್ತಾರೆ ಎಂದು ಅನೇಕರು ಮಾತನಾಡಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಅವರು ಕೂಡ ಕಾರ್ಯಕ್ರಮದಲ್ಲಿ ಹಾಜರಿದ್ದರು. ಹಳದಿ ಸೀರೆಯಲ್ಲಿ ಅವರು ಗಮನ ಸೆಳೆದಿದ್ದಾರೆ.

ಅನಿಲ್ ಕಪೂರ್ ಅವರು ಬಾಬಿ ಡಿಯೋಲ್​ಗೆ ನಾಚಿಕೆ ಇಲ್ಲದವರು ಎಂದು ಕರೆದಿದ್ದಾರೆ. ಇದಕ್ಕೆ ಕಾರಣವೂ ಇದೆ. ಬಾಬಿ ಡಿಯೋಲ್ ಅವರನ್ನು ಮಧ್ಯರಾತ್ರಿ ಕರೆದು ಎಬ್ಬಿಸಿ ಡ್ಯಾನ್ಸ್ ಮಾಡೋಣ ಎಂದರೂ ಅವರು ಸಿದ್ಧರಿರುತ್ತಾರಂತೆ. ಈ ಕಾರಣಕ್ಕೆ ಅನಿಲ್ ಕಪೂರ್ ಈ ರೀತಿ ಹೇಳಿದ್ದಾರೆ. ಅನಿಲ್ ಕಪೂರ್, ಬಾಬಿ ಡಿಯೋಲ್ ಹಾಗೂ ಮಹೇಶ್ ಬಾಬು ಡ್ಯಾನ್ಸ್ ಮಾಡೋಕೆ ಮುಂದಾದರು. ಈ ವೇಳೆ ರಣಬೀರ್ ಅವರಿಗೂ ಆಮಂತ್ರಣ ನೀಡಲಾಯಿತು. ಆದರೆ, ಅವರು ನೋ ಎಂದರು. ‘ನೀವು ನೋ ಅನ್ನೋ ಹಾಗಿಲ್ಲ, ನಾನು ನಿಮ್ಮ ಸೀನಿಯರ್’ ಎಂದರು ಅನಿಲ್ ಕಪೂರ್. ಈ ಮೂಲಕ ಹಲವು ವಿಶೇಷ ಕ್ಷಣಗಳಿಗೆ ಈ ಇವೆಂಟ್ ಸಾಕ್ಷಿ ಆಯಿತು.

ಇದನ್ನೂ ಓದಿ: ಪತಿ ರಣಬೀರ್ ಕಪೂರ್​ ಬಗ್ಗೆ ಟಾಕ್ಸಿಕ್​ ಎಂದವರಿಗೆ ತಿರುಗೇಟು ನೀಡಿದ ಆಲಿಯಾ ಭಟ್​

ರಣಬೀರ್ ಕಪೂರ್ ಅವರು ‘ಅನಿಮಲ್’ ಸಿನಿಮಾದಲ್ಲಿ ಎರಡು ಶೇಡ್​ನ ಪಾತ್ರ ಮಾಡಿದ್ದಾರೆ. ರಣಬೀರ್ ಪತ್ನಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ಟ್ರೇಲರ್ ಗಮನ ಸೆಳೆದಿದ್ದು, ಕೋಟ್ಯಂತರ ಬಾರಿ ವೀಕ್ಷಣೆ ಕಂಡಿದೆ. ಈ ಚಿತ್ರದಲ್ಲಿ ಬಾಬಿ ಡಿಯೋಲ್ ಅವರದ್ದು ನೆಗೆಟಿವ್ ಪಾತ್ರ ಎನ್ನಲಾಗಿದೆ. ಈ ಚಿತ್ರದ ಅವಧಿ 3 ಗಂಟೆ 21 ನಿಮಿಷ ಇರುವುದು ಅಭಿಮಾನಿಗಳ ಚಿಂತೆಗೆ ಕಾರಣ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:06 am, Tue, 28 November 23

ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ