AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಲ್ಲಿ ‘ರಾಮಾಯಣ’ ಪ್ರೀಮಿಯರ್? ಯಶ್, ರಣಬೀರ್ ಚಿತ್ರತಂಡದಿಂದ ಬಿಗ್ ಪ್ಲಾನ್

ಯಶ್, ರಣಬೀರ್ ಕಪೂರ್, ಸಾಯಿ ಪಲ್ಲವಿ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ರಾಮಾಯಣ’ ಸಿನಿಮಾದ ಬಿಡುಗಡೆಗೆ ದೊಡ್ಡ ಮಟ್ಟದ ಪ್ಲ್ಯಾನ್ ಸಿದ್ಧವಾಗುತ್ತಿದೆ. ಅದ್ದೂರಿಯಾಗಿ ಪ್ರೀಮಿಯರ್ ಶೋ ನಡೆಸಲು ದುಬೈನ ಹಲವು ಪ್ರಮುಖ ಸ್ಥಳಗಳನ್ನು ಈಗಾಗಲೇ ಪರಿಶೀಲಿಸಲಾಗುತ್ತಿದೆ ಎಂದು ವರದಿ ಆಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ದುಬೈನಲ್ಲಿ ‘ರಾಮಾಯಣ’ ಪ್ರೀಮಿಯರ್? ಯಶ್, ರಣಬೀರ್ ಚಿತ್ರತಂಡದಿಂದ ಬಿಗ್ ಪ್ಲಾನ್
Ramayana
ಮದನ್​ ಕುಮಾರ್​
|

Updated on: Jun 26, 2026 | 8:34 PM

Share

ಮುಖ್ಯಾಂಶಗಳು

  • ‘ರಾಮಾಯಣ’ ಸಿನಿಮಾಗೆ ದುಬೈನಲ್ಲಿ ಪ್ರೀಮಿಯರ್ ಮಾಡಲು ಸಿದ್ಧತೆ.
  • ಯಶ್, ರಣಬೀರ್ ಕಪೂರ್, ಸಾಯಿ ಪಲ್ಲವಿ ನಟನೆಯ ದೊಡ್ಡ ಸಿನಿಮಾ.
  • ಜಾಗತಿಕ ಮಟ್ಟದಲ್ಲಿ ಸದ್ದು ಮಾಡಲು ನಡೆಯುತ್ತಿದೆ ಚಿತ್ರತಂಡದ ತಯಾರಿ.

ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಬಜೆಟ್ ಚಿತ್ರವಾಗಿ ಮೂಡಿಬರುತ್ತಿರುವ ‘ರಾಮಾಯಣ’ (Ramayana) ಸಿನಿಮಾ ಈಗ ಮತ್ತೊಂದು ಮಹತ್ತರ ಯೋಜನೆಗೆ ಸಜ್ಜಾಗುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ನಿತೇಶ್ ತಿವಾರಿ ನಿರ್ದೇಶನದ ಈ ದೃಶ್ಯ ವೈಭವದ ಚಿತ್ರಕ್ಕೆ ದುಬೈನಲ್ಲಿ ಅತ್ಯಂತ ಅದ್ಧೂರಿಯಾದ ಅಂತಾರಾಷ್ಟ್ರೀಯ ಪ್ರೀಮಿಯರ್ ಶೋ (Ramayana Premiere Show) ಆಯೋಜಿಸಲು ಚಿತ್ರತಂಡ ಮಾತುಕತೆ ಪುನರಾರಂಭಿಸಿದೆ ಎಂದು ‘ಮಿಡ್-ಡೇ’ ವರದಿ ಮಾಡಿದೆ. ಈ ಪ್ರೀಮಿಯರ್ ಶೋವನ್ನು ಅಕ್ಟೋಬರ್ 28ರಂದು ನಡೆಸಲು ಯೋಜಿಸಲಾಗುತ್ತಿದ್ದು, ಚಿತ್ರತಂಡದವರು ಇದಕ್ಕೆ ‘ಡೆಸರ್ಟ್ ಪ್ರೀಮಿಯರ್’ ಎಂಬ ಕೋಡ್ ನೇಮ್ ಇಟ್ಟುಕೊಂಡಿದ್ದಾರೆ ಎನ್ನಲಾಗಿದೆ.

ವರದಿಗಳ ಪ್ರಕಾರ, ನಿರ್ದೇಶಕ ನಿತೇಶ್ ತಿವಾರಿ ಮತ್ತು ಪ್ರಸಿದ್ಧ ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರು ಆರಂಭದಲ್ಲೇ ದುಬೈನಲ್ಲಿ ಚಿತ್ರದ ಪ್ರೀಮಿಯರ್ ನಡೆಸಲು ಉದ್ದೇಶಿಸಿದ್ದರು. ಆದರೆ, ಇತ್ತೀಚಿನ ತಿಂಗಳುಗಳಲ್ಲಿ ಮಿಡಲ್ ಈಸ್ಟ್ ಭಾಗದಲ್ಲಿ ಉಂಟಾಗಿದ್ದ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಈ ಯೋಜನೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿತ್ತು. ಈಗ ಅಲ್ಲಿನ ಪರಿಸ್ಥಿತಿ ತಿಳಿಗೊಂಡಿರುವುದರಿಂದ, ಚಿತ್ರತಂಡವು ದುಬೈನಲ್ಲಿ ಈ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಸಾಧ್ಯತೆಗಳ ಬಗ್ಗೆ ಮರುಪರಿಶೀಲನೆ ನಡೆಸುತ್ತಿದೆ.

‘ದೊಡ್ಡ ಪ್ರಮಾಣದ ಈವೆಂಟ್‌ಗಳನ್ನು ಆಯೋಜಿಸಲು ದುಬೈ ಸೂಕ್ತ ಜಾಗವಾಗಿದೆ. ಅಲ್ಲದೆ ಅಲ್ಲಿ ಅಪಾರ ಸಂಖ್ಯೆಯ ಭಾರತೀಯರಿದ್ದಾರೆ. ಹೀಗಾಗಿ ಚಿತ್ರತಂಡದ ಮೊದಲ ಆದ್ಯತೆ ದುಬೈ ಆಗಿದೆ’ ಎಂದು ಸಿನಿಮಾದ ಆಪ್ತ ಮೂಲವೊಂದು ತಿಳಿಸಿರುವುದಾಗಿ ವರದಿ ಆಗಿದೆ. ಒಂದು ವೇಳೆ ಈ ಪ್ರೀಮಿಯರ್ ಅಧಿಕೃತಗೊಂಡರೆ, ಚಿತ್ರದ ಮುಖ್ಯ ತಾರಾಗಣವಾದ ಬಾಲಿವುಡ್ ನಟ ರಣಬೀರ್ ಕಪೂರ್, ದಕ್ಷಿಣದ ಸ್ಟಾರ್ ನಟಿ ಸಾಯಿ ಪಲ್ಲವಿ ಹಾಗೂ ರಾವಣನ ಪಾತ್ರದಲ್ಲಿ ಅಬ್ಬರಿಸಲಿರುವ ‘ರಾಕಿಂಗ್ ಸ್ಟಾರ್’ ಯಶ್ ಈ ರೆಡ್ ಕಾರ್ಪೆಟ್ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ‘ರಾಮಾಯಣ’, ‘ವಾರಣಾಸಿ’ ಚಿತ್ರಗಳ ಬಜೆಟ್ ಒಂದು ಗಿಮಿಕ್ ಎಂದ ಮನೋಜ್ ಬಾಜಪೇಯಿ

ಚಿತ್ರದಲ್ಲಿ ರಣಬೀರ್ ಕಪೂರ್ ಶ್ರೀರಾಮನಾಗಿ ಮತ್ತು ಸಾಯಿ ಪಲ್ಲವಿ ಸೀತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಆಸ್ಕರ್ ಪ್ರಶಸ್ತಿ ವಿಜೇತ ವಿಎಫ್‌ಎಕ್ಸ್ ಸಂಸ್ಥೆ ‘ಡಿಎನ್‌ಇಜಿ’ ಈ ಚಿತ್ರದ ದೃಶ್ಯ ವೈಭವವನ್ನು ರೂಪಿಸುತ್ತಿದ್ದು, ಜಾಗತಿಕ ಮಟ್ಟದಲ್ಲಿ ಚಿತ್ರವನ್ನು ಬಿಡುಗಡೆ ಮಾಡಲು ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಸದ್ಯಕ್ಕೆ ಚಿತ್ರತಂಡದಿಂದ ಈ ದುಬೈ ಪ್ರೀಮಿಯರ್ ಬಗ್ಗೆ ಅಧಿಕೃತ ಪ್ರಕಟಣೆ ಬಾಕಿ ಇದ್ದರೂ, ಈ ಸುದ್ದಿ ಮಾತ್ರ ದೊಡ್ಡ ಮಟ್ಟದಲ್ಲಿ ಭಾರಿ ಸೌಂಡ್ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ