ಸಾಮಾನ್ಯ ವ್ಯಕ್ತಿ ಅನಿಮಲ್ ಆಗುವ ಕಥೆ; ರಣಬೀರ್ ಬರ್ತ್​ಡೇಗೆ ಟೀಸರ್ ಗಿಫ್ಟ್

Animal Movie Teaser: ರಣಬೀರ್ ಕಪೂರ್ ಅವರು ‘ಅನಿಮಲ್’ ಸಿನಿಮಾದಲ್ಲಿ ಎರಡು ಶೇಡ್​ನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಾಮಾನ್ಯ ವ್ಯಕ್ತಿಯಂತಿರುವ ಕಥಾ ನಾಯಕ ಅನಿಮಲ್ ರೀತಿ ಆಗುತ್ತಾನೆ. ಇದಕ್ಕೆ ಕಾರಣ ಏನು ಎಂಬುದನ್ನು ವಿವರಿಸುವ ರೀತಿಯಲ್ಲಿ ಟೀಸರ್ ಮೂಡಿ ಬಂದಿದೆ. ಡಿಸೆಂಬರ್ 1ರಂದು ಈ ಚಿತ್ರ ರಿಲೀಸ್ ಆಗಲಿದೆ. ಸದ್ಯ ಟೀಸರ್ ಎಲ್ಲರ ಗಮನ ಸೆಳೆಯುತ್ತಿದೆ.

ಸಾಮಾನ್ಯ ವ್ಯಕ್ತಿ ಅನಿಮಲ್ ಆಗುವ ಕಥೆ; ರಣಬೀರ್ ಬರ್ತ್​ಡೇಗೆ ಟೀಸರ್ ಗಿಫ್ಟ್
ರಣಬೀರ್ ಕಪೂರ್

Updated on: Sep 28, 2023 | 12:29 PM

‘ಅನಿಮಲ್’ ಸಿನಿಮಾ (Animal Movie) ಘೋಷಣೆ ಆದಾಗಿನಿಂದಲೂ ಸಾಕಷ್ಟು ಕುತೂಹಲ ಮೂಡಿಸಿತ್ತು. ರಣಬೀರ್ ಕಪೂರ್ ಹಾಗೂ ರಶ್ಮಿಕಾ ಮಂದಣ್ಣ ಅವರು ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಇಂದು (ಸೆಪ್ಟೆಂಬರ್ 28) ರಣಬೀರ್ ಕಪೂರ್ ಜನ್ಮದಿನ. ಈ ವಿಶೇಷ ದಿನದಂದು ನಿರ್ದೇಶಕ ಸಂದೀಪ್ ರೆಡ್ಡಿ ವಂಗ ‘ಅನಿಮಲ್’ ಚಿತ್ರದ ಟೀಸರ್ ರಿಲೀಸ್ ಮಾಡಿದ್ದಾರೆ. ಸಿನಿಮಾ ಬಗ್ಗೆ ಇರುವ ನಿರೀಕ್ಷೆಯನ್ನು ಈ ಟೀಸರ್ ಹೆಚ್ಚಿಸಿದೆ.

ರಣಬೀರ್ ಕಪೂರ್ ಅವರು ‘ಅನಿಮಲ್’ ಸಿನಿಮಾದಲ್ಲಿ ಎರಡು ಶೇಡ್​ನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಾಮಾನ್ಯ ವ್ಯಕ್ತಿಯಂತಿರುವ ಕಥಾ ನಾಯಕ ಅನಿಮಲ್ ರೀತಿ ಆಗುತ್ತಾನೆ. ಇದಕ್ಕೆ ಕಾರಣ ಏನು ಎಂಬುದನ್ನು ವಿವರಿಸುವ ರೀತಿಯಲ್ಲಿ ಟೀಸರ್ ಮೂಡಿ ಬಂದಿದೆ. ಡಿಸೆಂಬರ್ 1ರಂದು ಈ ಚಿತ್ರ ರಿಲೀಸ್ ಆಗಲಿದೆ. ಸದ್ಯ ಟೀಸರ್ ಎಲ್ಲರ ಗಮನ ಸೆಳೆಯುತ್ತಿದೆ.

ಕಥಾ ನಾಯಕ (ರಣಬೀರ್ ಕಪೂರ್) ಶ್ರೀಮಂತ ಕುಟುಂಬದವನು. ‘ವಿಶ್ವ ಸುತ್ತು, ಎರಡು-ಮೂರು ಸ್ಪೋರ್ಟ್ಸ್ ಕಾರ್​ನ ಆ್ಯಕ್ಸಿಡೆಂಟ್ ಮಾಡು, ಅಫೇರ್ ಇಟ್ಟುಕೋ. ಆಗ ನಿನ್ನ ಕಣ್ಣು ತೆರೆಯಬಹುದು’ ಎಂಬ ಮಾತನ್ನು ಕಥಾ ನಾಯಕ ಗಂಭಿರವಾಗಿ ತೆಗೆದುಕೊಳ್ಳುತ್ತಾನೆ. ಅಲ್ಲಿಂದ ಕಥೆ ಶುರು.

ರಣಬೀರ್ ಹಾಗೂ ರಶ್ಮಿಕಾ ‘ಅನಿಮಲ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಅನಿಲ್ ಕಪೂರ್, ಬಾಬಿ ಡಿಯೋಲ್ ಮೊದಲಾದವರ ಪಾತ್ರವೂ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಬರುವ ಆ್ಯಕ್ಷನ್ ದೃಶ್ಯಗಳು ಮೈ ನವಿರೇಳಿಸುವಂತಿದೆ. ಅತಿಯಾದ ರಕ್ತವನ್ನೂ ತೋರಿಸಲಾಗಿದೆ.

ಇದನ್ನೂ ಓದಿ: ರಣಬೀರ್ ಕಪೂರ್ ಜೊತೆ ಆಪ್ತವಾಗಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ; ಇಲ್ಲಿದೆ ಫೋಟೋ ಆಲ್ಬಂ

‘ಅನಿಮಲ್’ ಟೀಸರ್ ನೋಡಿದ ಅನೇಕರು ವಿವಿಧ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ‘ಬಿರುಗಾಳಿ ಬರುವ ಸೂಚನೆ’ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ. ‘ರಣಬೀರ್ ಮತ್ತೊಂದು ಗೆಲುವು ಕಾಣೋದು ಪಕ್ಕಾ’ ಎಂದು ಕೆಲವರು ಬರೆದುಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಮೊದಲಾದವರು ಟೀಸರ್ ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us