ಸಾವರ್ಕರ್ ಮೇಲಿನ ಗೌರವಕ್ಕೆ ಈ ರೀತಿ ಬದಲಾದ ನಟ ರಣದೀಪ್ ಹೂಡಾ
ಕೆಲವೇ ದಿನಗಳ ಹಿಂದೆ ‘ಸ್ವಾತಂತ್ರ್ಯ ವೀರ ಸಾವರ್ಕರ್’ ಚಿತ್ರದ ಟ್ರೇಲರ್ ಬಿಡುಗಡೆ ಆಯಿತು. ಆ ಮೂಲಕ ನಿರೀಕ್ಷೆ ಹೆಚ್ಚಿಸಲಾಗಿತ್ತು. ಈಗ ನಟ ರಣದೀಪ್ ಹೂಡಾ ಅವರ ಹೊಸ ಫೋಟೋ ವೈರಲ್ ಆಗಿದೆ. ಇದನ್ನು ಕಂಡ ಬಳಿಕ ಸಿನಿಮಾ ಮೇಲಿನ ನಿರೀಕ್ಷೆ ಡಬಲ್ ಆಗಿದೆ. ಹಿಂದಿ, ಮರಾಠಿ ಭಾಷೆಯಲ್ಲಿ ಮಾರ್ಚ್ 22ರಂದು ಈ ಸಿನಿಮಾ ತೆರೆಕಾಣಲಿದೆ.

ಬಹುನಿರೀಕ್ಷಿತ ‘ಸ್ವಾತಂತ್ರ್ಯ ವೀರ ಸಾವರ್ಕರ್’ (Swatantrya Veer Savarkar) ಸಿನಿಮಾ ಪ್ರಮೋಷನ್ನಲ್ಲಿ ನಟ ರಣದೀಪ್ ಹೂಡಾ ಅವರು ಬ್ಯುಸಿ ಆಗಿದ್ದಾರೆ. ಈ ಸಿನಿಮಾದಲ್ಲಿ ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಅಲ್ಲದೇ ನಿರ್ದೇಶನ ಕೂಡ ಅವರೇ ಮಾಡಿದ್ದಾರೆ. ಇದು ವಿನಾಯಕ್ ದಾಮೋದರ್ ಸಾವರ್ಕರ್ (Vinayak Damodar Savarkar) ಅವರ ಬದುಕಿನ ವಿವರವನ್ನು ಆಧರಿಸಿ ತಯಾರಾದ ಸಿನಿಮಾ. ಹಾಗಾಗಿ ಪ್ರೇಕ್ಷಕರಿಗೆ ಹೆಚ್ಚು ನಿರೀಕ್ಷೆ ಇದೆ. ಈ ಸಿನಿಮಾದಲ್ಲಿ ಸಾವರ್ಕರ್ ಪಾತ್ರಕ್ಕೆ ರಣದೀಪ್ ಹೂಡಾ (Randeep Hooda) ಬಣ್ಣ ಹಚ್ಚಿದ್ದಾರೆ. ಆ ಪಾತ್ರದ ಮೇಲಿನ ಗೌರವ ಮತ್ತು ಬದ್ಧತೆಗಾಗಿ ರಣದೀಪ್ ಹೂಡಾ ಅವರು ಬಾಡಿ ಟ್ರಾನ್ಸ್ಫಾರ್ಮೇಷನ್ ಮಾಡಿಕೊಂಡಿದ್ದಾರೆ. ಅವರು ಬದಲಾದ ಪರಿ ಕಂಡು ಅಭಿಮಾನಿಗಳಿಗೆ ಅಚ್ಚರಿ ಆಗಿದೆ.
‘ಸ್ವಾತಂತ್ರ್ಯ ವೀರ ಸಾವರ್ಕರ್’ ಸಿನಿಮಾ ಮಾರ್ಚ್ 22ರಂದು ಬಿಡುಗಡೆ ಆಗಲಿದೆ. ಪ್ರಚಾರ ಕಾರ್ಯದಲ್ಲಿ ಇಡೀ ತಂಡ ನಿರತವಾಗಿದೆ. ಸಿನಿಮಾದ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಇರುವಾಗ ರಣದೀಪ್ ಹೂಡಾ ಅವರು ಒಂದು ಫೋಟೋ ಹಂಚಿಕೊಂಡಿದ್ದಾರೆ. ಅದರಲ್ಲಿ ಅವರನ್ನು ಗುರುತು ಹಿಡಿಯುವುದೇ ಕಷ್ಟವಾಗಿದೆ. ಅಷ್ಟರಮಟ್ಟಿಗೆ ಅವರು ಬದಲಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋ ವೈರಲ್ ಆಗಿದೆ.
View this post on Instagram
ಕಟ್ಟುಮಸ್ತಾದ ಬಾಡಿ ಹೊಂದಿದ್ದ ರಣದೀಪ್ ಹೂಡಾ ಅವರು ಸಾವರ್ಕರ್ ಪಾತ್ರಕ್ಕಾಗಿ ಸಿಕ್ಕಾಪಟ್ಟೆ ತೆಳ್ಳಗಾಗಿದ್ದಾರೆ. ಅಂದಾಜು 30 ಕೆಜಿ ದೇಹದ ತೂಕವನ್ನು ಅವರು ಕಡಿಮೆ ಮಾಡಿಕೊಂಡಿದ್ದಾರೆ. ಎದೆಗೂಡಿನ ಮೂಳೆಗಳು ಕಾಣುವ ರೀತಿಯಲ್ಲಿ ಪೋಸ್ ನೀಡಿದ್ದಾರೆ. ಅವರ ಬದ್ಧತೆಗೆ ಅಭಿಮಾನಿಗಳು ಭೇಷ್ ಎನ್ನುತ್ತಿದ್ದಾರೆ. ನೀವು ಯಾವ ಹಾಲಿವುಡ್ ಹೀರೋಗೂ ಕಮ್ಮಿ ಇಲ್ಲ ಎಂದು ಅಭಿಮಾನಿಗಳು ಹೊಗಳುತ್ತಿದ್ದಾರೆ. ವೈರಲ್ ಫೋಟೋಗೆ ನೆಟ್ಟಿಗರು ಕಮೆಂಟ್ ಮಾಡಿ ಮೆಚ್ಚುಗೆ ಸೂಚಿಸುತ್ತಿದ್ದಾರೆ.
ಇದನ್ನೂ ಓದಿ: ‘ಸ್ವಾತಂತ್ರ್ಯ ವೀರ ಸಾವರ್ಕರ್’ ಟ್ರೇಲರ್ ಬಿಡುಗಡೆ; ಇದು ಬೇರೆಯದೇ ಕಥೆ
ಈ ಸಿನಿಮಾದಲ್ಲಿ ರಣದೀಪ್ ಹೂಡಾ ಜೊತೆ ನಟಿ ಅಂಕಿತಾ ಲೋಖಂಡೆ ಕೂಡ ಒಂದು ಪ್ರಮುಖ ಪಾತ್ರ ಮಾಡಿದ್ದಾರೆ. ಮಾರ್ಚ್ 22ರಂದು ಹಿಂದಿ ಮಾತ್ರವಲ್ಲದೇ ಮರಾಠಿ ಭಾಷೆಯಲ್ಲೂ ಈ ಸಿನಿಮಾ ಬಿಡುಗಡೆ ಆಗಲಿದೆ. ಮಹಾತ್ಮ ಗಾಂಧಿ, ಬಾಲ ಗಂಗಾಧರ್ ತಿಲಕ್, ಡಾ. ಬಿ.ಆರ್. ಅಂಬೇಡ್ಕರ್, ಸುಭಾಷ್ ಚಂದ್ರ ಬೋಸ್, ಜವಹರ್ ಲಾಲ್ ನೆಹರು, ಮದನ್ ಲಾಲ್ ಧಿಂಗ್ರ, ಭಗತ್ ಸಿಂಗ್ ಸೇರಿದಂತೆ ಅನೇಕ ಸ್ವಾತಂತ್ರ್ಯ ಹೋರಾಟಗಾರರ ಪಾತ್ರಗಳು ‘ಸ್ವಾತಂತ್ರ್ಯ ವೀರ ಸಾವರ್ಕರ್’ ಸಿನಿಮಾದಲ್ಲಿವೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.