AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಲ್ಲಲೇಬೇಕು ಎನ್ನುವ ನಿರ್ಧಾರಕ್ಕೆ ಬಂದ ರಣವೀರ್ ಸಿಂಗ್; ದಕ್ಷಿಣದತ್ತ ಮುಖ ಮಾಡಿದ ನಟ

ಅಟ್ಲಿ ನಿರ್ದೇಶನದ ‘ಜವಾನ್’ ಸಿನಿಮಾ ಮೂಲಕ ಶಾರುಖ್ ಖಾನ್ ದೊಡ್ಡ ಗೆಲುವು ಕಂಡರು. ಸಂದೀಪ್ ರೆಡ್ಡಿ ವಂಗ ನಿರ್ದೇಶನದ ‘ಅನಿಮಲ್’ ಚಿತ್ರದ ಮೂಲಕ ರಣಬೀರ್ ಕಪೂರ್ ಗೆದ್ದು ಬೀಗಿದರು. ಈ ನಿರ್ದೇಶಕರ ಜೊತೆ ಸಿನಿಮಾ ಮಾಡಲು ರಣವೀರ್ ಸಿಂಗ್ ಮುಂದಾಗಿದ್ದಾರೆ

ಗೆಲ್ಲಲೇಬೇಕು ಎನ್ನುವ ನಿರ್ಧಾರಕ್ಕೆ ಬಂದ ರಣವೀರ್ ಸಿಂಗ್; ದಕ್ಷಿಣದತ್ತ ಮುಖ ಮಾಡಿದ ನಟ
ರಣವೀರ್ ಸಿಂಗ್
ರಾಜೇಶ್ ದುಗ್ಗುಮನೆ
|

Updated on: Jan 28, 2024 | 2:20 PM

Share

ನಟ ರಣವೀರ್ ಸಿಂಗ್ (Ranveer Singh) ಅವರಿಗೆ ಇತ್ತೀಚೆಗೆ ದೊಡ್ಡ ಗೆಲುವು ಸಿಗಲಿಲ್ಲ. ಅವರು ದೊಡ್ಡ ಯಶಸ್ಸಿಗಾಗಿ ಕಾಯುತ್ತಿದ್ದಾರೆ. ‘ಡಾನ್ 3’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜೊತೆ ಅವರು ಹೊಸ ಸಿನಿಮಾ ಒಪ್ಪಿಕೊಂಡು ನಟಿಸಲು ರೆಡಿ ಆಗುತ್ತಿದ್ದಾರೆ. ಅವರಿಗೆ ದಕ್ಷಿಣ ಭಾರತದ ನಿರ್ದೇಶಕರ ಬಗ್ಗೆ ನಂಬಿಕೆ ಬಂದಿದೆ. ಈ ಕಾರಣದಿಂದ ಅವರು ಹಲವು ಸ್ಟಾರ್ ಡೈರೆಕ್ಟರ್ ಜೊತೆ ಮಾತುಕತೆ ನಡೆಸಲು ಆರಂಭಿಸಿದ್ದಾರೆ ಎಂದು ವರದಿ ಆಗಿದೆ. ಶೀಘ್ರದಲ್ಲೇ ಅವರು ಒಂದು ಸಿನಿಮಾ ಫೈನಲ್ ಮಾಡುವ ನಿರೀಕ್ಷೆ ಇದೆ.

ಅಟ್ಲಿ ನಿರ್ದೇಶನದ ‘ಜವಾನ್’ ಸಿನಿಮಾ ಮೂಲಕ ಶಾರುಖ್ ಖಾನ್ ದೊಡ್ಡ ಗೆಲುವು ಕಂಡರು. ಸಂದೀಪ್ ರೆಡ್ಡಿ ವಂಗ ನಿರ್ದೇಶನದ ‘ಅನಿಮಲ್’ ಚಿತ್ರದ ಮೂಲಕ ರಣಬೀರ್ ಕಪೂರ್ ಗೆದ್ದು ಬೀಗಿದರು. ಇಬ್ಬರೂ ದಕ್ಷಿಣ ಭಾರತದ ನಿರ್ದೇಶಕರು. ಹೀಗಾಗಿ, ರಣವೀರ್ ಸಿಂಗ್ ಅವರಿಗೆ ದಕ್ಷಿಣ ಭಾರತದ ನಿರ್ದೇಶಕರ ಮೇಲೆ ಭರವಸೆ ಮೂಡಿದೆ. ಅಟ್ಲಿ ಜೊತೆ ಕೆಲಸ ಮಾಡಬೇಕು ಎಂಬುದು ರಣವೀರ್ ಸಿಂಗ್ ಆಸೆ ಎನ್ನಲಾಗಿದೆ.

ಅಟ್ಲಿ ಅವರು ವರುಣ್ ಧವನ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಆ ಬಳಿಕ ಅಲ್ಲು ಅರ್ಜುನ್ ಜೊತೆ ಅವರು ಸಿನಿಮಾ ಮಾಡಬೇಕಿದೆ. ಈ ಮಧ್ಯೆ ರಣವೀರ್ ಸಿಂಗ್ ಕೂಡ ಅವಕಾಶ ಕೇಳಲು ಮುಂದೆ ಬಂದಿದ್ದಾರೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮಾತುಕತೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದರ ಜೊತೆಗೆ ‘ಜೈಲರ್’ ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್​, ‘ಘಜಿನಿ’ ಡೈರೆಕ್ಟರ್ ಎಆರ್​ ಮುರುಗದಾಸ್ ಜೊತೆಗೂ ರಣವೀರ್ ಸಿಂಗ್ ಮಾತುಕತೆ ನಡೆಸುವ ಉದ್ದೇಶ ಇಟ್ಟುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಈ ಮಾತುಕತೆಗಳು ನಡೆಯಲಿವೆ. ಹಿಂದಿ ಜೊತೆ ದಕ್ಷಿಣ ಭಾರತದ ಭಾಷೆಗಳಲ್ಲೂ ಸಿನಿಮಾ ಬರಲಿದೆ. ಲೋಕೇಶ್ ಕನಗರಾಜ್ ಅವರು ರಜನಿಕಾಂತ್ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ರಣವೀರ್ ಸಿಂಗ್ ಅವರು ಅತಿಥಿ ಪಾತ್ರ ಮಾಡಿದ್ದಾರೆ.

ಇದನ್ನೂ ಓದಿ: ಸ್ಮಶಾನವಾದ ಮದುವೆ ಮನೆ; ರಣವೀರ್ ಸಿಂಗ್ ಸಿನಿಮಾದಲ್ಲಿ ಬಳಕೆ ಆಗಿದ್ದ ಮನೆಯಲ್ಲಿ ಶೂಟೌಟ್​

ರಣವೀರ್ ಸಿಂಗ್ ನಟಿಸುತ್ತಿರುವ ‘ಡಾನ್ 3’ ಚಿತ್ರಕ್ಕೆ ಫರ್ಹಾನ್ ಅಖ್ತರ್ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ನಿರೀಕ್ಷೆ ಇದೆ. ಮುಂದಿನ ವರ್ಷ ಸಿನಿಮಾ ರಿಲೀಸ್ ಆಗಲಿದೆ. ಶಾರುಖ್ ಖಾನ್ ಬದಲು ರಣವೀರ್ ಸಿಂಗ್ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್