AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

60 ಕೋಟಿ ರೂಪಾಯಿಗೆ ಏರಿತು ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಕಲೆಕ್ಷನ್​; ಶೀಘ್ರದಲ್ಲೇ ಸೆಂಚುರಿ

Rocky Aur Rani Ki Prem Kahani Collection: ರಣವೀರ್​ ಸಿಂಗ್​ ನಟನೆಯ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಚಿತ್ರ ಉತ್ತಮವಾಗಿ ಕಲೆಕ್ಷನ್​ ಮಾಡುತ್ತಿದೆ. ಕೆಲವೇ ದಿನಗಳಲ್ಲಿ ಈ ಸಿನಿಮಾ 100 ಕೋಟಿ ರೂಪಾಯಿ ಗಡಿ ಮುಟ್ಟುವ ಸಾಧ್ಯತೆ ದಟ್ಟವಾಗಿದೆ.

60 ಕೋಟಿ ರೂಪಾಯಿಗೆ ಏರಿತು ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಕಲೆಕ್ಷನ್​; ಶೀಘ್ರದಲ್ಲೇ ಸೆಂಚುರಿ
ರಣವೀರ್​ ಸಿಂಗ್​, ಆಲಿಯಾ ಭಟ್​
ಮದನ್​ ಕುಮಾರ್​
|

Updated on: Aug 02, 2023 | 10:59 AM

Share

ಆಲಿಯಾ ಭಟ್​ ಮತ್ತು ರಣವೀರ್​ ಸಿಂಗ್ (Ranveer Singh)​ ಅವರು ಈ ಹಿಂದೆ ‘ಗಲ್ಲಿ ಬಾಯ್​’ ಸಿನಿಮಾದಲ್ಲಿ ಜೋಡಿಯಾಗಿ ನಟಿಸಿದ್ದರು. ಈಗ ಅವರು ಮತ್ತೊಮ್ಮೆ ತೆರೆಹಂಚಿಕೊಂಡಿರುವ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ (Rocky Aur Rani Ki Prem Kahani) ಸಿನಿಮಾ ಕೂಡ ಸದ್ದು ಮಾಡುತ್ತಿದೆ. ಬಜೆಟ್​ಗೆ ಹೋಲಿಸಿದರೆ ನಿರೀಕ್ಷಿತ ಮಟ್ಟದಲ್ಲಿ ಈ ಚಿತ್ರಕ್ಕೆ ಕಲೆಕ್ಷನ್​ ಆಗಿಲ್ಲ ಎಂಬುದು ನಿಜ. ಆದರೆ ನೂರು ಕೋಟಿ ರೂಪಾಯಿ ಕ್ಲಬ್​ ಸೇರಲು ಈ ಚಿತ್ರ ಪ್ರಯತ್ನಿಸುತ್ತಿದೆ. ಹಲವು ಕಾರಣಗಳಿಂದಾಗಿ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಚಿತ್ರ ನಿರೀಕ್ಷೆ ಮೂಡಿಸಿತ್ತು. 5 ದಿನಕ್ಕೆ ಈ ಸಿನಿಮಾ 60 ಕೋಟಿ ರೂಪಾಯಿ ಗಳಿಸಿದೆ. ಇದರಿಂದ ಚಿತ್ರತಂಡದವರ ಮುಖದಲ್ಲಿ ಸಣ್ಣ ನಗು ಮೂಡಿದೆ. ಕರಣ್​ ಜೋಹರ್​ (Karan Johar) ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬಂದಿದೆ.

‘ಪದ್ಮಾವತ್​’, ‘ಬಾಜಿರಾವ್​ ಮಸ್ತಾನಿ’ ಇತ್ಯಾದಿ ಸಿನಿಮಾಗಳ ಮೂಲಕ ದೊಡ್ಡ ಗೆಲುವು ಕಂಡಿದ್ದ ರಣವೀರ್​ ಸಿಂಗ್​ ಅವರು ನಂತರ ‘83’, ‘ಜಯೇಶ್​ ಬಾಯ್​ ಜೋರ್ದಾರ್​’ ಮುಂತಾದ ಸಿನಿಮಾಗಳಿಂದ ಸೋಲುಂಡಿದ್ದರು. ಈಗ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾದಿಂದ ಅವರು ನಿಟ್ಟುಸಿರು ಬಿಡುವಂತಾಗಿದೆ. 5 ದಿನಕ್ಕೆ 60 ಕೋಟಿ ರೂಪಾಯಿ ಕಲೆಕ್ಷನ್​ ಮಾಡುವುದು ಎಂದರೆ ಸಣ್ಣ ಮಾತೇನೂ ಅಲ್ಲ. ಆದರೆ, ಚಿತ್ರದ ಬಜೆಟ್​ ಜಾಸ್ತಿ ಆಗಿದ್ದರಿಂದ ಅದರ ಎದುರು 60 ಕೋಟಿ ರೂಪಾಯಿ ಕಲೆಕ್ಷನ್​ ಬಹಳ ಚಿಕ್ಕದು ಎನಿಸುತ್ತಿದೆ.

ಇದನ್ನೂ ಓದಿ: ವಿಡಿಯೋ ಸಮೇತ ಕರಣ್​ ಜೋಹರ್​ ಬಣ್ಣ ಬಯಲು ಮಾಡಿದ ನಟಿ ಕಂಗನಾ ರಣಾವತ್​

ಟ್ರೇಲರ್​ ಮೂಲಕ ಗಮನ ಸೆಳೆದಿದ್ದ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾ ಜುಲೈ 28ರಂದು ಬಿಡುಗಡೆ ಆಯಿತು. ಈ ಸಿನಿಮಾ ಮೊದಲ ದಿನ 11.10 ಕೋಟಿ ರೂ. ಗಳಿಸಿತು. 2ನೇ ದಿನ 16.05 ಕೋಟಿ ರೂಪಾಯಿ ಕಲೆಕ್ಷನ್​ ಆಗಿದ್ದರಿಂದ ಆಶಾಭಾವ ಮೂಡಿತು. ಮೂರನೇ ದಿನವಾದ ಭಾನುವಾರ (ಜುಲೈ 30) 18.75 ಕೋಟಿ ರೂಪಾಯಿ ಆದಾಯ ಹರಿದು ಬಂತು. ಸೋಮವಾರ ಸ್ವಲ್ಪ ಕುಸಿತ (7 ಕೋಟಿ ರೂ.) ಉಂಟಾಯಿತು. ಬಾಕ್ಸ್​ ಆಫೀಸ್​ನಲ್ಲಿ 5ನೇ ದಿನ 7.25 ಕೋಟಿ ರೂಪಾಯಿ ಸಂಗ್ರಹ ಆಗಿದೆ. ಬುಧವಾರ ಕೂಡ ಅನೇಕ ಕಡೆಗಳಲ್ಲಿ ಚೆನ್ನಾಗಿ ಪ್ರದರ್ಶನ ಆಗುತ್ತಿದ್ದು, ಈ ಸಿನಿಮಾ 60 ಕೋಟಿ ರೂಪಾಯಿ ಗಡಿ ಮುಟ್ಟಿರುವುದು ಚಿತ್ರತಂಡಕ್ಕೆ ಸಮಾಧಾನ ಉಂಟುಮಾಡಿದೆ.

ಇದನ್ನೂ ಓದಿ: ಬಿಡುಗಡೆಗೂ ಮುನ್ನವೇ ‘ಜವಾನ್​’ ಚಿತ್ರವನ್ನು ಬ್ಲಾಕ್​ ಬಸ್ಟರ್​ ಎಂದು ಘೋಷಿಸಿದ ಕರಣ್​ ಜೋಹರ್​

‘ಆಪನ್​ಹೈಮರ್​’, ‘ಬಾರ್ಬಿ’, ‘ಕೌಸಲ್ಯ ಸುಪ್ರಜಾ ರಾಮ’, ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’, ‘ಬೇಬಿ’, ‘ಆಚಾರ್​ ಆ್ಯಂಡ್​ ಕೋ’ ಮುಂತಾದ ಸಿನಿಮಾಗಳು ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಚಿತ್ರಕ್ಕೆ ಪೈಪೋಟಿ ನೀಡುತ್ತಿವೆ. ಆಗಸ್ಟ್​ ತಿಂಗಳಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಒಂದಷ್ಟು ಬಹುನಿರೀಕ್ಷಿತ ಸಿನಿಮಾಗಳು ಬಿಡುಗಡೆ ಆಗಲಿವೆ. ಆಗ ಸಹಜವಾಗಿಯೇ ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಚಿತ್ರದ ಹವಾ ತಣ್ಣಗಾಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ