ನಟ ರಣವೀರ್ ಸಿಂಗ್ (Ranveer Singh) ಅವರು ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಆ ಸಿನಿಮಾ ಜುಲೈ 28ರಂದು ಬಿಡುಗಡೆ ಆಗಿದೆ. ಈ ಚಿತ್ರದ ವಿಶೇಷ ಪ್ರದರ್ಶನ ಆಯೋಜಿಸಲಾಗಿತ್ತು. ಆದರೆ ಅದನ್ನು ರಣವೀರ್ ಸಿಂಗ್ ಪತ್ನಿ ದೀಪಿಕಾ ಪಡುಕೋಣೆ (Deepika Padukone) ಮಿಸ್ ಮಾಡಿಕೊಂಡಿದ್ದರು. ಹಾಗಾಗಿ ಪತ್ನಿಯನ್ನು ವೀಕೆಂಡ್ನಲ್ಲಿ ರಣವೀರ್ ಸಿಂಗ್ ಅವರು ಸಿನಿಮಾಗೆ ಕರೆದುಕೊಂಡು ಹೋಗಿದ್ದಾರೆ. ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ (Rocky Aur Rani Ki Prem Kahani) ಸಿನಿಮಾ ನೋಡಿದ ಬಳಿಕ ದೀಪಿಕಾ ಪಡುಕೋಣೆಯ ಪ್ರತಿಕ್ರಿಯೆ ಹೇಗಿರಬಹುದು ಎಂಬ ಪ್ರಶ್ನೆ ರಣವೀರ್ ಸಿಂಗ್ಗೆ ಮೂಡಿದೆ. ಅದನ್ನು ಅವರು ಜನರ ಮುಂದಿಟ್ಟಿದ್ದಾರೆ ಹಾಗೂ ಮೂರು ಆಯ್ಕೆ ನೀಡಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಅವರು ಹಂಚಿಕೊಂಡ ಈ ಫನ್ನಿ ಪಶ್ನೆ ವೈರಲ್ ಆಗಿದೆ.
ಹೀಗೆ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ರಣವೀರ್ ಸಿಂಗ್ ಅವರು ಪೋಸ್ಟ್ ಮಾಡಿದ್ದಾರೆ. ಲಕ್ಷಾಂತರ ಜನರು ಅದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಭಾನುವಾರ (ಜುಲೈ 30) ಬೆಳಗ್ಗೆ 7.50ರ ವೇಳೆಗೆ ಶೇಕಡ 28ರಷ್ಟು ಜನರು ‘ಆಕೆಗೆ ಇಷ್ಟ ಆಗುತ್ತದೆ’ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿದ್ದಾರೆ. ‘ಆಕೆಗೆ ತುಂಬಾ ಇಷ್ಟ ಆಗುತ್ತದೆ’ ಎಂದು ಶೇಕಡ 38ರಷ್ಟು ಜನರು ಹೇಳಿದ್ದಾರೆ. ‘ಸುಮ್ಮನೆ ಇರು, ಚಪ್ಪಲಿ ಏಟು ತಿಂತೀಯ’ ಎಂಬ ಆಯ್ಕೆಯನ್ನು ಶೇಕಡ 34ರಷ್ಟು ಮಂದಿ ಕ್ಲಿಕ್ ಮಾಡಿದ್ದಾರೆ.
ಕರಣ್ ಜೋಹರ್ ಅವರ ನಿರ್ದೇಶನದಲ್ಲಿ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಮೂಡಿಬಂದಿದೆ. ರಣವೀರ್ ಸಿಂಗ್ಗೆ ಜೋಡಿಯಾಗಿ ಆಲಿಯಾ ಭಟ್ ನಟಿಸಿದ್ದಾರೆ. ಬಾಲಿವುಡ್ನ ಅನೇಕ ಕಲಾವಿದರು ಈ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಮೊದಲ ದಿನ ಭರ್ಜರಿ ಕಲೆಕ್ಷನ್ ಆಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ಸಾಧ್ಯವಾಗಿಲ್ಲ. ಕೇವಲ 11 ಕೋಟಿ ರೂಪಾಯಿ ಗಳಿಕೆ ಆಗಿದೆ. ಮಿಶ್ರ ಪ್ರತಿಕ್ರಿಯೆ ಸಿಕ್ಕಿರುವುದರಿಂದ ವಾರದ ದಿನಗಳಲ್ಲಿ ಕಲೆಕ್ಷನ್ ಕುಸಿಯುವ ಸಾಧ್ಯತೆ ಇದೆ. ಆಲಿಯಾ ಭಟ್ ಮತ್ತು ರಣವೀರ್ ಸಿಂಗ್ ಅವರು ‘ಗಲ್ಲಿ ಬಾಯ್’ ಸಿನಿಮಾದಲ್ಲಿ ಜೋಡಿಯಾಗಿ ನಟಿಸಿದ್ದರು. ಈಗ ಅವರು ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಚಿತ್ರದಲ್ಲಿ ಮತ್ತೊಮ್ಮೆ ತೆರೆ ಹಂಚಿಕೊಂಡಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.