83 Movie: ‘83’ ಚಿತ್ರಕ್ಕೆ ಬಂಪರ್ ಕೊಡುಗೆ ಘೋಷಿಸಿದ ದೆಹಲಿ ಸರ್ಕಾರ; ಹಿರಿಹಿರಿ ಹಿಗ್ಗಿದ ಚಿತ್ರತಂಡ

Ranveer Singh | Deepika Padukone: ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ಬಹುನಿರೀಕ್ಷಿತ ಚಿತ್ರ ‘83’ಗೆ ಬಂಪರ್ ಕೊಡುಗೆಯೊಂದನ್ನು ದೆಹಲಿ ಸರ್ಕಾರ ಘೋಷಿಸಿದೆ. ಇದರಿಂದ ಚಿತ್ರತಂಡ ಸಖತ್ ಖುಷಿಯಲ್ಲಿದೆ.

83 Movie: ‘83’ ಚಿತ್ರಕ್ಕೆ ಬಂಪರ್ ಕೊಡುಗೆ ಘೋಷಿಸಿದ ದೆಹಲಿ ಸರ್ಕಾರ; ಹಿರಿಹಿರಿ ಹಿಗ್ಗಿದ ಚಿತ್ರತಂಡ
‘83’ ಸಿನಿಮಾ ಪೋಸ್ಟರ್​
Follow us
TV9 Web
| Updated By: shivaprasad.hs

Updated on: Dec 22, 2021 | 3:32 PM

ಭಾರತೀಯ ಕ್ರಿಕೆಟ್​ಗೆ ಮಹತ್ವದ ತಿರುವು ನೀಡಿದ ಘಟನೆಯೆಂದು ಕರೆಯಲಾಗುವ, ಅಭಿಮಾನಿಗಳು ಈಗಲೂ ಪ್ರೀತಿಯಿಂದ ನೆನಪಿಸಿಕೊಳ್ಳುವ ‘1983’ರ ವಿಶ್ವಕಪ್ ವಿಜಯ ಬೆಳ್ಳೆತೆರೆಯ ಮೇಲೆ ಬರಲು ಸಿದ್ಧವಾಗಿದೆ. ವಿಶ್ವಕಪ್ ಗೆಲ್ಲಿಸಿಕೊಟ್ಟ ಕಪ್ತಾನ ಕಪಿಲ್ ದೇವ್ (Kapil Dev) ಪಾತ್ರವನ್ನು ರಣವೀರ್ ಸಿಂಗ್ (Ranveer Singh) ನಿರ್ವಹಿಸಿದ್ದು, ಅವರ ಪತ್ನಿಯ ಪಾತ್ರದಲ್ಲಿ ನಿಜ ಜೀವನದಲ್ಲೂ ಪತ್ನಿಯಾಗಿರುವ ದೀಪಿಕಾ ಪಡುಕೋಣೆ (Deepika Padukone) ನಿರ್ವಹಿಸಿದ್ದಾರೆ. ಸದ್ಯ ಚಿತ್ರದ ಸೆಲೆಬ್ರಿಟಿ ಪ್ರೀಮಿಯರ್​ಗಳು ನಡೆಯುತ್ತಿದ್ದು, ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿತ್ರತಂಡ ಈ ಸಂತಸದಲ್ಲಿರುವಾಗಲೇ ದೆಹಲಿ ಸರ್ಕಾರ ಚಿತ್ರಕ್ಕೆ ಬಂಪರ್ ಕೊಡುಗೆ ಘೋಷಿಸಿದೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ‘83’ ಚಿತ್ರ ದೆಹಲಿಯಲ್ಲಿ ತೆರಿಗೆ ಮುಕ್ತವಾಗಿದೆ ಎಂದು ತಿಳಿಸಿದೆ. ಇದು ಚಿತ್ರತಂಡದ ಸಂತಸಕ್ಕೆ ಕಾರಣವಾಗಿದ್ದು, ನಿರ್ದೇಶಕ ಕಬೀರ್ ಖಾನ್ (Kabir Khan) ದೆಹಲಿ ಸರ್ಕಾರಕ್ಕೆ, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ಗೆ (Arvind Kejrival) ಧನ್ಯವಾದ ಹೇಳಿದ್ದಾರೆ.

ದೆಹಲಿ ಸರ್ಕಾರದ ನಿರ್ಧಾರಕ್ಕೆ ಧನ್ಯವಾದ ತಿಳಿಸಿರುವ ನಿರ್ದೇಶಕ ಕಬೀರ್ ಖಾನ್, ಇದರಿಂದ ಚಿತ್ರ ಇನ್ನಷ್ಟು ಜನರಿಗೆ ತಲುಪಲು ಸಾಧ್ಯವಾಗುತ್ತದೆ. ಎಲ್ಲರಿಗೂ ವಂದನೆಗಳು ಎಂದು ಇನ್ಸ್ಟಾಗ್ರಾಂನಲ್ಲಿ ಬರೆದಿದ್ದಾರೆ.

ಕಪಿಲ್ ದೇವ್ ಪಾತ್ರ ನಿರ್ವಹಿಸಲು ಸಾಕಷ್ಟು ಶ್ರಮವಹಿಸಿರುವ ರಣವೀರ್ ಸಿಂಗ್: ರಣವೀರ್ ಸಿಂಗ್ ಕಪಿಲ್ ದೇವ್ ಪಾತ್ರ ನಿರ್ವಹಿಸಲು ಸಾಕಷ್ಟು ಶ್ರಮವಹಿಸಿದ್ದಾರೆ. ಈ ಕುರಿತು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಅವರು, ‘‘ಆರು ತಿಂಗಳ ಕಾಲ ಪ್ರತಿ ದಿನ ನಾಲ್ಕು ಗಂಟೆ ಕ್ರಿಕೆಟ್​​ ಆಡುತ್ತಾ ತರಬೇತಿಯಲ್ಲಿ ಕಳೆಯುತ್ತಿದ್ದೆ’’ ಎಂದಿದ್ದರು. ಅಲ್ಲದೇ ವಿಭಿನ್ನ ಬೌಲಿಂಗ್ ಆಕ್ಷನ್ ಹೊಂದಿದ್ದ ಕಪಿಲ್ ದೇವ್ ಅವರನ್ನು ಅನುಕರಿಸಲು ರಣವೀರ್ ಬಹಳ ಪ್ರಯಾಸ ಪಟ್ಟಿದ್ದರು. ಸತತ ಪ್ರಯತ್ನದಿಂದ ಕಪಿಲ್ ದೇವ್ ಮ್ಯಾನರಿಸಂಗಳನ್ನು ಅಳವಡಿಸಿಕೊಂಡರು.

‘83’ ಚಿತ್ರದಲ್ಲಿ, ಪಂಕಜ್ ತ್ರಿಪಾಠಿ, ತಾಹಿರ್ ರಾಜ್ ಭಾಸಿನ್, ಜೀವಾ, ಸಾಕಿಬ್ ಸಲೀಮ್, ಜತಿನ್ ಸರ್ನಾ, ಚಿರಾಗ್ ಪಾಟೀಲ್, ದಿನಕರ್ ಶರ್ಮಾ, ನಿಶಾಂತ್ ದಹಿಯಾ, ಸಾಹಿಲ್ ಖಟ್ಟರ್, ಆಮಿ ವಿರ್ಕ್, ಹಾರ್ಡಿ ಸಂಧು, ಅದ್ದಿನಾಥ್ ಕೊಠಾರೆ, ಧೈರ್ಯ ಕರ್ವಾ ಮತ್ತು ಆರ್ ಬದ್ರಿ ಸೇರಿದಂತೆ ಹಲವರು ಕಾಣಿಸಿಕೊಂಡಿದ್ದಾರೆ. ‘83’ ಡಿಸೆಂಬರ್ 24 ರಂದು ಚಿತ್ರಮಂದಿರಗಳಲ್ಲಿ ಹಿಂದಿ, ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ತೆರೆಕಾಣಲಿದೆ.

ಇದನ್ನೂ ಓದಿ:

ರಶ್ಮಿಕಾ ಮಂದಣ್ಣ ಖುಷಿಗೆ ಸಿಕ್ತು ಇನ್ನೊಂದು ಕಾರಣ; ‘ಕಿರಿಕ್​ ಬ್ಯೂಟಿ’ಯನ್ನು ಹಿಂಬಾಲಿಸ್ತಾರೆ 2.5 ಕೋಟಿ ಜನ

Pushpa The Rise: ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಅಲ್ಲು ಅರ್ಜುನ್; ‘ಪುಷ್ಪ’ ಚಿತ್ರದ ಬಾಕ್ಸಾಫೀಸ್ ಗಳಿಕೆ ಎಷ್ಟು ಗೊತ್ತಾ?

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ