‘ದಾದಾಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ’ ಪಡೆದ ‘ಪುಷ್ಪ’, ರಣವೀರ್ ಸಿಂಗ್​​; ಇಲ್ಲಿದೆ ಪೂರ್ತಿ ಲಿಸ್ಟ್​

ರಣವೀರ್​ ಸಿಂಗ್​ ಅವರಿಗೆ ‘ದಾದಾಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ’ ಸಿಕ್ಕಿರುವುದು ಅಭಿಮಾನಿಗಳಿಗೆ ಖುಷಿ ತಂದಿದೆ. ಬೇರೆ ಯಾರಿಗೆಲ್ಲ ಈ ಪ್ರಶಸ್ತಿ ಸಿಕ್ಕಿದೆ ಎಂಬುದರ ಪೂರ್ತಿ ಲಿಸ್ಟ್​ ಇಲ್ಲಿದೆ..

‘ದಾದಾಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ’ ಪಡೆದ ‘ಪುಷ್ಪ’, ರಣವೀರ್ ಸಿಂಗ್​​; ಇಲ್ಲಿದೆ ಪೂರ್ತಿ ಲಿಸ್ಟ್​
ರಣವೀರ್ ಸಿಂಗ್​. ಅಲ್ಲು ಅರ್ಜುನ್​
Follow us
TV9 Web
| Updated By: ಮದನ್​ ಕುಮಾರ್​

Updated on: Feb 21, 2022 | 8:51 AM

ಕಳೆದ ವರ್ಷ ಡಿ.17ರಂದು ತೆರೆಕಂಡ ‘ಪುಷ್ಪ’ ಸಿನಿಮಾ (Pushpa Movie) ಮಾಡಿರುವ ಸಾಧನೆ ಒಂದೆರಡಲ್ಲ. ಬಾಕ್ಸ್​ ಆಫೀಸ್​ನಲ್ಲಿ 350 ಕೋಟಿ ರೂಪಾಯಿಗಿಂತಲೂ ಅಧಿಕ ಹಣ ಗಳಿಸಿದ್ದು ಆ ಚಿತ್ರದ ಹೆಚ್ಚುಗಾರಿಕೆ. ಹಿಂದಿಗೆ ಡಬ್​ ಆಗಿ ಬಾಲಿವುಡ್​​ ಸಿನಿಮಾಗಳಿಗೂ ಭರ್ಜರಿ ಪೈಪೋಟಿ ನೀಡುವ ಮೂಲಕ ದೊಡ್ಡ ಮಟ್ಟದಲ್ಲಿ ಈ ಚಿತ್ರ ಗಮನ ಸೆಳೆಯಿತು. ಇದಿಷ್ಟು ಹಣಕಾಸಿನ ಸಾಧನೆಯಾದರೆ, ಪ್ರಶಸ್ತಿ ಪಡೆಯುವಲ್ಲಿಯೂ ‘ಪುಷ್ಪ’ ಸಿನಿಮಾ ಹಿಂದೆ ಬಿದ್ದಿಲ್ಲ. ಪ್ರತಿಷ್ಠಿತ ‘ದಾದಾಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ’ (Dadasaheb Phalke International Film Festival Awards) ಪಡೆದುಕೊಂಡು ಈ ಸಿನಿಮಾ ಬೀಗುತ್ತಿದೆ. ಅದೇ ರೀತಿ ಬಾಲಿವುಡ್​ನ ಖ್ಯಾತ ನಟ ರಣಬೀರ್​ ಸಿಂಗ್​ (Ranveer Singh) ಕೂಡ ಪ್ರಶಸ್ತಿ ಪಡೆದು ಸಂಭ್ರಮಿಸಿದ್ದಾರೆ. ಸಿದ್ದಾರ್ಥ್​ ಮಲ್ಹೋತ್ರ ನಟನೆಯ ‘ಶೇರ್​ಷಾ’, ವಿಕ್ಕಿ ಕೌಶಲ್​ ಅಭಿನಯದ ‘ಸರ್ದಾರ್​ ಉದ್ಧಮ್​’ ಸೇರಿದಂತೆ ಹಲವು ಸಿನಿಮಾಗಳು ಅವಾರ್ಡ್​ ಪಡೆದಿವೆ. ಜೊತೆಗೆ ವೆಬ್​ ಸಿರೀಸ್​ ಮತ್ತು ಧಾರಾವಾಹಿಗಳಿಗೂ ಮನ್ನಣೆ ಸಿಕ್ಕಿದೆ. 2022ರ ‘ದಾದಾಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ’ ಪಡೆದ ಎಲ್ಲರಿಗೂ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ.

ರಣವೀರ್​ ಸಿಂಗ್​ ಅವರು ನಟಿಸಿದ್ದ ‘83’ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆದರೆ ಬಾಕ್ಸ್​ ಆಫೀಸ್​ನಲ್ಲಿ ಅಂದುಕೊಂಡ ಮಟ್ಟಕ್ಕೆ ಈ ಚಿತ್ರ ಗಳಿಕೆ ಮಾಡಲಿಲ್ಲ. ವಿಮರ್ಶೆಯ ದೃಷ್ಟಿಯಿಂದ ‘83’ ಸಿನಿಮಾದ ಗೆಲುವು ದೊಡ್ಡದು. ಅದೇ ರೀತಿ ಕಪಿಲ್​ ದೇವ್​ ಪಾತ್ರದಲ್ಲಿ ರಣವೀರ್​ ಸಿಂಗ್​ ಅವರ ಅಭಿನಯಕ್ಕೆ ಜನರು ಬಹುಪರಾಕ್​ ಎಂದಿದ್ದಾರೆ. ಈಗ ಅವರಿಗೆ ‘ದಾದಾಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ’ ಕೂಡ ಸಿಕ್ಕಿರುವುದು ಅಭಿಮಾನಿಗಳಿಗೆ ಖುಷಿ ತಂದಿದೆ. ಬೇರೆ ಯಾರಿಗೆಲ್ಲ ಈ ಪ್ರಶಸ್ತಿ ಸಿಕ್ಕಿದೆ ಎಂಬುದರ ಪೂರ್ತಿ ಲಿಸ್ಟ್​ ಇಲ್ಲಿದೆ..

ವರ್ಷದ ಸಿನಿಮಾ: ಪುಷ್ಪ

ಅತ್ಯುತ್ತಮ ಸಿನಿಮಾ: ಶೇರ್​ಷಾ

ಅತ್ಯುತ್ತಮ ನಟ: ರಣವೀರ್​ ಸಿಂಗ್​

ಅತ್ಯುತ್ತಮ ನಟಿ ಕೃತಿ ಸನೋನ್​

ಅತ್ಯುತ್ತಮ ನಿರ್ದೇಶಕ: ಕೆನ್​ ಘೋಷ್​

ಚಿತ್ರರಂಗಕ್ಕೆ ಅಪಾರ ಕೊಡುಗೆ: ಆಶಾ ಪರೇಖ್​

ಅತ್ಯುತ್ತಮ ಪೋಷಕ ನಟ: ಸತೀಶ್​ ಕೌಶಿಕ್​

ಅತ್ಯುತ್ತಮ ಫೋಷಕ ನಟಿ: ಲಾರಾ ದತ್ತಾ

ಅತ್ಯುತ್ತಮ ಖಳ ನಟ: ಆಯುಷ್​ ಶರ್ಮಾ

ವಿಮರ್ಶಕರ ಆಯ್ಕೆಯ ಅತ್ಯುತ್ತಮ ಚಿತ್ರ: ಸರ್ದಾರ್​ ಉದ್ಧಮ್​

ವಿಮರ್ಶಕರ ಆಯ್ಕೆಯ ಅತ್ಯುತ್ತಮ ನಟ: ಸಿದ್ದಾರ್ಥ್​ ಮಲ್ಹೋತ್ರ

ವಿಮರ್ಶಕರ ಆಯ್ಕೆಯ ಅತ್ಯುತ್ತಮ ನಟಿ ಕಿಯಾರಾ ಅಡ್ವಾಣಿ

ಜನರ ಆಯ್ಕೆಯ ಅತ್ಯುತ್ತಮ ನಟ: ಅಭಿಮನ್ಯು ದಾಸಾನಿ

ಜನರ ಆಯ್ಕೆಯ ಅತ್ಯುತ್ತಮ ನಟಿ: ರಾಧಿಕಾ ಮದನ್​

ಅತ್ಯುತ್ತಮ ಹೊಸ ನಟ: ಅಹಾನ್​ ಶೆಟ್ಟಿ

ಅತ್ಯುತ್ತಮ ವಿದೇಶಿ ಸಿನಿಮಾ: ಅನದರ್​ ರೌಂಡ್​

ಅತ್ಯುತ್ತಮ ವೆಬ್​ ಸಿರೀಸ್​: ಕ್ಯಾಂಡಿ

ವೆಬ್​ ಸಿರೀಸ್​ನಲ್ಲಿ ಅತ್ಯುತ್ತಮ ನಟ: ಮನೋಜ್​ ಭಾಜಪೇಯಿ​

ವೆಬ್​ ಸಿರೀಸ್​ನಲ್ಲಿ ಅತ್ಯುತ್ತಮ ನಟಿ: ರವೀನಾ ಟಂಡನ್​

ವರ್ಷದ ಅತ್ಯುತ್ತಮ ಟಿವಿ ಧಾರಾವಾಹಿ: ಅನುಪಮಾ

ಕಿರುತೆರೆಯ ಅತ್ಯುತ್ತಮ ನಟ: ಶಾಹೀರ್​ ಶೇಖ್​

ಕಿರುತೆರೆಯ ಅತ್ಯುತ್ತಮ ನಟಿ: ಶ್ರದ್ಧಾ ಆರ್ಯ

ಕಿರುತೆರೆಯ ಭರವಸೆಯ ನಟ: ಧೀರಜ್​ ಧೂಪರ್​

ಕಿರುತೆರೆಯ ಭರವಸೆಯ ನಟಿ: ರೂಪಾಲಿ ಗಂಗೂಲಿ

ಅತ್ಯುತ್ತಮ ಕಿರುಚಿತ್ರ: ಪೌಲಿ

ಅತ್ಯುತ್ತಮ ಹಿನ್ನೆಲೆ ಗಾಯಕ: ವಿಶಾಲ್​ ಮಿಶ್ರಾ

ಅತ್ಯುತ್ತಮ ಹಿನ್ನೆಲೆ ಗಾಯಕಿ: ಕನಿಕಾ ಕಪೂರ್​

ಅತ್ಯುತ್ತಮ ಛಾಯಾಗ್ರಹಣ: ಜಯಕೃಷ್ಣ ಗುಮ್ಮಡಿ

ಇದನ್ನೂ ಓದಿ:

83 Movie Review: ಇದು ಬರೀ ಸಿನಿಮಾ ಅಲ್ಲ; ಕ್ರಿಕೆಟ್​ಪ್ರಿಯರ ಎಮೋಷನ್​, ವಿಶ್ವಕಪ್​ ಗೆಲುವಿನ ಹೊಸ ಸೆಲೆಬ್ರೇಷನ್​

Pushpa Movie Review: ‘ಪುಷ್ಪ’ ಅಂದ್ರೆ ಫ್ಲವರ್ ಅಲ್ಲ, ಅದೊಂದು ಶ್ರಮದಾಯಕ ದೀರ್ಘ ಪಯಣ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ