AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಟ್ಟಿಗೆ ಕಾಣಿಸಿಕೊಂಡ ಸಮಂತಾ ಮತ್ತು ರಣವೀರ್ ಸಿಂಗ್​​; ವೈರಲ್ ಆಯ್ತು ಫೋಟೋ

ರಣವೀರ್ ಸಿಂಗ್ ಹಾಗೂ ಸಮಂತಾ ಜೊತೆಯಲ್ಲಿ ನಿಂತಿದ್ದಾರೆ. ಸಮಂತಾ ಏರ್​ಫೋರ್ಸ್​ ಡ್ರೆಸ್ ಧರಿಸಿದರೆ, ರಣವೀರ್ ಸಿಂಗ್ ನೀಲಿ ಬಣ್ಣದ ಶರ್ಟ್​ ಧರಿಸಿದ್ದಾರೆ.

ಒಟ್ಟಿಗೆ ಕಾಣಿಸಿಕೊಂಡ ಸಮಂತಾ ಮತ್ತು ರಣವೀರ್ ಸಿಂಗ್​​; ವೈರಲ್ ಆಯ್ತು ಫೋಟೋ
ಸಮಂತಾ-ರಣವೀರ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jun 06, 2022 | 4:49 PM

Share

ನಟಿ ಸಮಂತಾ ರುತ್ ಪ್ರಭು ಅವರು (Samantha) ಟಾಲಿವುಡ್​ನಿಂದ ಬಾಲಿವುಡ್​ಗೆ ಹಾರಿದ್ದಾರೆ. ‘ದಿ ಫ್ಯಾಮಿಲಿ ಮ್ಯಾನ್ 2’ ವೆಬ್​ ಸೀರಿಸ್​ನಲ್ಲಿ ನಟಿಸಿದ ನಂತರ ಅವರ ಖ್ಯಾತಿ ದುಪ್ಪಟ್ಟಾಗಿದೆ. ಈಗ ಅವರಿಗೆ ಹಿಂದಿ ಚಿತ್ರರಂಗದಿಂದ ಆಫರ್​ಗಳು ಬರುತ್ತಿವೆ. ಈ ಮಧ್ಯೆ ರಣವೀರ್ ಸಿಂಗ್ (Ranveer Singh) ಜತೆ ಸಮಂತಾ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ಸಮಂತಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ. ಈ ಫೋಟೋಗಳು ಸಖತ್ ವೈರಲ್ ಆಗುತ್ತಿವೆ.

ರಣವೀರ್ ಸಿಂಗ್ ಹಾಗೂ ಸಮಂತಾ ಜೊತೆಯಲ್ಲಿ ನಿಂತಿದ್ದಾರೆ. ಸಮಂತಾ ಏರ್​ಫೋರ್ಸ್​ ಡ್ರೆಸ್ ಧರಿಸಿದರೆ, ರಣವೀರ್ ಸಿಂಗ್ ನೀಲಿ ಬಣ್ಣದ ಶರ್ಟ್​ ಧರಿಸಿದ್ದಾರೆ. ಇವರ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ. ಯಾವ ಚಿತ್ರದಲ್ಲಿ ಇವರು ನಟಿಸುತ್ತಿದ್ದಾರೆ ಅನ್ನೋದನ್ನು ಕಾದು ನೋಡಬೇಕಿದೆ.

ರಣವೀರ್​ ಸಿಂಗ್ ನಟನೆಯ ‘ಜಯೇಶ್​ಭಾಯ್​ ಜೋರ್ದಾರ್​’ ಇತ್ತೀಚೆಗೆ ತೆರೆಗೆ ಬಂತು. ಈ ಸಿನಿಮಾ ಹೇಳ ಹೆಸರಿಲ್ಲದಂತೆ ಮಕಾಡೆ ಮಲಗಿತು. ಅವರ ‘83’ ಚಿತ್ರ ಕೂಡ ದೊಡ್ಡ ಯಶಸ್ಸು ಕಾಣಲಿಲ್ಲ. ಹೀಗಾಗಿ, ಅವರಿಗೆ ತುರ್ತಾಗಿ ಒಂದು ಗೆಲುವು ಬೇಕಿದೆ. ಹಲವು ಸಿನಿಮಾಗಳ ಕೆಲಸಗಳಲ್ಲಿ ರಣವೀರ್​ ಬ್ಯುಸಿ ಇದ್ದಾರೆ.

ಇದನ್ನೂ ಓದಿ
Image
‘ನೀವು ನಾಯಿ-ಬೆಕ್ಕುಗಳ ಜತೆ ಒಂಟಿಯಾಗಿ ಸಾಯುತ್ತೀರಿ’ ಎಂದ ಅಭಿಮಾನಿಗೆ ಸಮಂತಾ ಹೇಳಿದ್ದೇನು ನೋಡಿ
Image
‘ಸಮಂತಾ ಆಂಟಿ ನನ್ನ ಬೆಸ್ಟ್​ ಫ್ರೆಂಡ್​’ ಎಂದ ಮಹೇಶ್​ ಬಾಬು ಪುತ್ರಿ ಸಿತಾರಾ; ವಿಡಿಯೋ ವೈರಲ್​
Image
Happy Birthday Samantha: ಅಭಿಮಾನಿಗಳು ಸಮಂತಾಗೆ ಫಿದಾ ಆಗಲು ಈ ಚಿತ್ರಗಳೇ ಕಾರಣ..
Image
Samantha: ಸಮಂತಾ ಸ್ಟೈಲ್​ಗಿಲ್ಲ ಸರಿಸಾಟಿ; ಬಗೆಬಗೆಯ ಫ್ಯಾಶನ್ ಅವತಾರದಲ್ಲಿ ಮಿಂಚುವ ನಟಿ- ಫೋಟೋಗಳು ಇಲ್ಲಿವೆ

ಇದನ್ನೂ ಓದಿ: ರಿಲೀಸ್​ ಆದ ಕೆಲವೇ ಗಂಟೆಗಳಲ್ಲಿ ರಣವೀರ್​ ಸಿಂಗ್​ ಹೊಸ ಸಿನಿಮಾ ಲೀಕ್​; ‘ಜಯೇಶ್​ಭಾಯ್​’ಗೆ 2 ಆಘಾತ

ರಣವೀರ್ ಸಿಂಗ್​ ಅವರು ಸಮಂತಾ ​ಫ್ಯಾನ್

ರಣವೀರ್ ಸಿಂಗ್​ ಅವರು ಸಮಂತಾ ​ಫ್ಯಾನ್​. ಈ ಬಗ್ಗೆ ಅವರು ಹೇಳಿಕೊಂಡಿದ್ದರು. ಸಮಂತಾ ಹೆಜ್ಜೆ ಹಾಕಿದ ‘ಹೂ ಅಂತಿಯಾ ಮಾವ’ ಹಾಡು ಸೂಪರ್ ಹಿಟ್ ಆಯಿತು. ಈ ಹಾಡಿನ ಕೀರ್ತಿ ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿಲ್ಲ. ವಿದೇಶದ ಸೆಲೆಬ್ರಿಟಿಗಳು ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಬಾಲಿವುಡ್​ನ ಖ್ಯಾತ ನಟ ರಣವೀರ್ ಸಿಂಗ್ ಕೂಡ ಈ ಹಾಡಿನ ದೊಡ್ಡ ಫ್ಯಾನ್. ಅವರು ಈ ಬಗ್ಗೆ ಈ ಮೊದಲು ಮಾತನಾಡಿದ್ದರು.

‘ನನ್ನ ಫೇವರಿಟ್ ಹಾಡು ಊ ಅಂಟಾವ ಮಾವ. ಈ ಹಾಡನ್ನು ಕೇಳಿದರೆ ನಾನು ಕ್ರೇಜ್​​ಗೆ ಒಳಗಾಗುತ್ತೇನೆ. ನನಗೆ ಹಾಡು ಅರ್ಥವಾಗುವುದಿಲ್ಲ. ಆದರೆ ಮ್ಯೂಸಿಕ್ ನನಗೆ ಹತ್ತಿರವಾಗಿದೆ’ ಎಂದು ರಣವೀರ್ ಸಿಂಗ್ ಹೇಳಿದ್ದರು. ಈ ಹಾಡಿನಲ್ಲಿ ನಟಿ ಸಮಂತಾ ಹೆಜ್ಜೆ ಹಾಕಿದ್ದರು. ಈ ಹಾಡಿನಿಂದ ಸಿನಿಮಾಗೆ ಒಳ್ಳೆಯ ಮೈಲೇಜ್ ಸಿಕ್ಕಿತ್ತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:49 pm, Mon, 6 June 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ