‘83’ ಚಿತ್ರಕ್ಕಾಗಿ 20 ಕೋಟಿ ಸಂಭಾವನೆ, ಬಂದ ಲಾಭದಲ್ಲೂ ಇದೆ ಪಾಲು​; ಬದಲಾಯಿತು ರಣವೀರ್​ ಸಿಂಗ್​ ಅದೃಷ್ಟ

ರಣವೀರ್​ ಸಿಂಗ್​ ಚಿತ್ರರಂಗಕ್ಕೆ ಬಂದು ಒಂದು ದಶಕ ಕಳೆದಿದೆ. ಕಡಿಮೆ ಅವಧಿಯಲ್ಲಿ ಬೇಡಿಕೆಯ ನಟನಾಗಿ ಅವರು ಹೊರ ಹೊಮ್ಮಿದ್ದಾರೆ. ಪ್ರತಿ ಚಿತ್ರಕ್ಕೂ ಭಿನ್ನ ಪಾತ್ರ ಆಯ್ಕೆ ಮಾಡಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿದ್ದಾರೆ ಅವರು.

‘83’ ಚಿತ್ರಕ್ಕಾಗಿ 20 ಕೋಟಿ ಸಂಭಾವನೆ, ಬಂದ ಲಾಭದಲ್ಲೂ ಇದೆ ಪಾಲು​; ಬದಲಾಯಿತು ರಣವೀರ್​ ಸಿಂಗ್​ ಅದೃಷ್ಟ
‘83’ ಸಿನಿಮಾದಲ್ಲಿ ರಣವೀರ್ ಸಿಂಗ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Dec 21, 2021 | 7:30 PM

ರಣವೀರ್​ ಸಿಂಗ್​ ‘83’ ಚಿತ್ರದಲ್ಲಿ ಕಪಿಲ್​ ದೇವ್​​ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಡಿಸೆಂಬರ್​ 24ರಂದು ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರದ ಬಗ್ಗೆ ಒಳ್ಳೆಯ ಟಾಕ್​​ ಶುರುವಾಗಿದೆ. ಸಿನಿಮಾ ರಿಲೀಸ್​ಗೆ ಕೆಲವೇ ದಿನ ಬಾಕಿ ಇದ್ದು, ಚಿತ್ರತಂಡ ಭರ್ಜರಿಯಾಗಿ ಪ್ರಚಾರ ನಡೆಸುತ್ತಿದೆ. ಈ ಸಿನಿಮಾ ಬಗ್ಗೆ ದಿನಕ್ಕೊಂದು ಅಚ್ಚರಿಯ ಮಾಹಿತಿ ಹೊರ ಬರುತ್ತಲೇ ಇದೆ. ಕಥೆಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಲು ಕ್ರಿಕೆಟ್​ ತಂಡಕ್ಕೆ 15 ಕೋಟಿ ರೂಪಾಯಿ ನೀಡಲಾಗಿತ್ತು ಎನ್ನುವ ವಿಚಾರ ಇತ್ತೀಚೆಗೆ ಹೊರ ಬಿದ್ದಿತ್ತು. ಈಗ ರಣವೀರ್​ ಸಿಂಗ್​ ಸಂಭಾವನೆ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ರಣವೀರ್​ ಸಿಂಗ್​ ಈ ಸಿನಿಮಾಗೆ ಬರೋಬ್ಬರಿ 20 ಕೋಟಿ ರೂಪಾಯಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ! ಈ ವಿಚಾರ ಕೇಳಿ ಫ್ಯಾನ್ಸ್​ ಹುಬ್ಬೇರಿಸಿದ್ದಾರೆ.

ರಣವೀರ್​ ಸಿಂಗ್​ ಚಿತ್ರರಂಗಕ್ಕೆ ಬಂದು ಒಂದು ದಶಕ ಕಳೆದಿದೆ. ಕಡಿಮೆ ಅವಧಿಯಲ್ಲಿ ಬೇಡಿಕೆಯ ನಟನಾಗಿ ಅವರು ಹೊರ ಹೊಮ್ಮಿದ್ದಾರೆ. ಪ್ರತಿ ಚಿತ್ರಕ್ಕೂ ಭಿನ್ನ ಪಾತ್ರ ಆಯ್ಕೆ ಮಾಡಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿದ್ದಾರೆ ಅವರು. ತಾವು ಆಯ್ಕೆ ಮಾಡಿಕೊಂಡ ಪಾತ್ರಕ್ಕೆ ಸಂಪೂರ್ಣ ನ್ಯಾಯ ಒದಗಿಸುವ ಕೆಲಸವನ್ನು ಅವರು ಮಾಡುತ್ತಿದ್ದಾರೆ. ಈ ಕಾರಣಕ್ಕೆ ಬಾಲಿವುಡ್​ನಲ್ಲಿ ಅವರಿಗೆ ದೊಡ್ಡ ಬೇಡಿಕೆ ಸೃಷ್ಟಿ ಆಗಿದೆ.  ಈಗ ಅವರು ‘83’ ಚಿತ್ರಕ್ಕೆ ತೆಗೆದುಕೊಂಡ ಸಂಭಾವನೆ ವಿಚಾರ ಅಚ್ಚರಿ ಮೂಡಿಸಿದೆ.

1983ರಲ್ಲಿ ಟೀಂ ಇಂಡಿಯಾ ವಿಶ್ವಕಪ್​ ಗೆದ್ದ ಕಥೆಯನ್ನು ಆಧರಿಸಿ ‘83’ ಸಿನಿಮಾ ಸಿದ್ಧಗೊಂಡಿದೆ. ಕಪಿಲ್​ ದೇವ್​ ಆಗಿ ರಣವೀರ್​ ಸಿಂಗ್​ ಕಾಣಿಸಿಕೊಂಡಿದ್ದಾರೆ. ಈ ಪಾತ್ರವನ್ನು ರಣವೀರ್​ ಅದ್ಭುತವಾಗಿ ನಿರ್ವಹಿಸಿದ್ದಾರೆ ಎಂಬುದರ ಝಲಕ್​ ಟ್ರೇಲರ್​ ಮೂಲಕ ಸಿಕ್ಕಿದೆ. ಈ ಚಿತ್ರಕ್ಕಾಗಿ ಅವರು 20 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಇಷ್ಟಕ್ಕೇ ನಿಂತಿಲ್ಲ. ಸಿನಿಮಾದಲ್ಲಿ ಬಂದ ಲಾಭದಲ್ಲಿ ಒಂದಷ್ಟು ಪಾಲನ್ನು ತಮಗೆ ನೀಡಬೇಕು ಎನ್ನುವ ಷರತ್ತನ್ನು ಅವರು ಹಾಕಿದ್ದಾರೆ ಎನ್ನುವ ಮಾಹಿತಿ ಹೊರ ಬಿದ್ದಿದೆ.

1983ರ ವಿಶ್ವಕಪ್​ ವೇಳೆ ಏನೆಲ್ಲ ನಡೆಯಿತು ಎಂಬುದಕ್ಕೆ ಈಗ ಸೂಕ್ತ ದಾಖಲೆಗಳಿಲ್ಲ. ಈ ಘಟನೆಗಳಿಗೆ ಸಂಬಂಧಿಸಿದಂತೆ ವಿಡಿಯೋಗಳು ಕೂಡ ಹೆಚ್ಚು ಲಭ್ಯವಿಲ್ಲ. ಹಾಗಾಗಿ ಅಂದು ಭಾರತ ತಂಡದಲ್ಲಿ ಇದ್ದ ಆಟಗಾರರನ್ನೇ ಮಾತನಾಡಿಸಿ ವಿವರಗಳನ್ನು ಕಲೆ ಹಾಕಬೇಕಾಯಿತು. ಆ ವಿವರಗಳನ್ನು ಪಡೆಯಲು ‘83’ ನಿರ್ಮಾಪಕರು ಕೋಟ್ಯಂತರ ರೂಪಾಯಿ ವೆಚ್ಚ ಮಾಡಿದ್ದಾರೆ. ಟೀಮ್​ನಲ್ಲಿದ್ದ ಎಲ್ಲ ಆಟಗಾರರಿಗೂ ಸೇರಿ ಒಟ್ಟು 15 ಕೋಟಿ ರೂ.ಗಳನ್ನು ನೀಡಲಾಗಿದೆ. ಅದರಲ್ಲಿ ಕ್ಯಾಪ್ಟನ್​ ಕಪಿಲ್​ ದೇವ್​ ಅವರಿಗೆ ಬರೋಬ್ಬರಿ 5 ಕೋಟಿ ಕೊಡಲಾಗಿದೆ. ದೀಪಿಕಾ ಪಡುಕೋಣೆ, ಕಬೀರ್ ಖಾನ್, ವಿಷ್ಣು ವರ್ಧನ್ ಇಂದುರಿ, ಸಾಜಿದ್ ನಾಡಿಯದ್ವಾಲ, ಫಾಂಟಮ್ ಫಿಲ್ಮ್ಸ್ ಹಾಗೂ 83 ಫಿಲ್ಮ್ ಲಿಮಿಟೆಡ್ ಮೂಲಕ ಈ ಚಿತ್ರ ನಿರ್ಮಾಣ ಆಗಿದೆ.

ಇದನ್ನೂ ಓದಿ: ‘83’ ಸಿನಿಮಾ ವೇದಿಕೆಯಲ್ಲಿ ರಣವೀರ್​ ಸಿಂಗ್​ಗೆ ಕನ್ನಡ ಡೈಲಾಗ್​ ಹೇಳಿಕೊಟ್ಟ ಕಿಚ್ಚ ಸುದೀಪ್​

ಒಂದೇ ವೇದಿಕೆ ಮೇಲೆ ಸುದೀಪ್​, ರಣವೀರ್​, ಕಪಿಲ್​ ದೇವ್​; ‘83’ ಸುದ್ದಿಗೋಷ್ಠಿ ನೋಡಲು ಇಲ್ಲಿ ಕ್ಲಿಕ್​ ಮಾಡಿ

Published On - 7:30 pm, Tue, 21 December 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ