ದೊಡ್ಡ ಪರದೆಯಲ್ಲಿ ಮತ್ತೆ ‘ಪದ್ಮಾವತ್’ ದರ್ಶನ; ಅಭಿಮಾನಿಗಳಿಗೆ ಖುಷಿ

ಸೂಪರ್ ಹಿಟ್ ‘ಪದ್ಮಾವತ್’ ಸಿನಿಮಾ ರೀ-ರಿಲೀಸ್ ಆಗುತ್ತಿದೆ. ಫೆಬ್ರವರಿ 6ರಂದು ಈ ಚಿತ್ರ ರೀ-ರಿಲೀಸ್ ಆಗುತ್ತಿದೆ. ದೀಪಿಕಾ ಪಡುಕೋಣೆ, ರಣವೀರ್ ಸಿಂಗ್ ಮತ್ತು ಶಾಹಿದ್ ಕಪೂರ್​ ಅವರು ಮುಖ್ಯ ಪಾತ್ರಗಳಲ್ಲಿ ನಟಿಸಿದ ಈ ಚಿತ್ರಕ್ಕೆ ಸಂಜಯ್ ಲೀಲಾ ಬನ್ಸಾಲಿ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ.

ದೊಡ್ಡ ಪರದೆಯಲ್ಲಿ ಮತ್ತೆ ‘ಪದ್ಮಾವತ್’ ದರ್ಶನ; ಅಭಿಮಾನಿಗಳಿಗೆ ಖುಷಿ
Ranveer Singh
Follow us
ಮದನ್​ ಕುಮಾರ್​
|

Updated on: Jan 25, 2025 | 3:28 PM

ಕೆಲವು ಸಿನಿಮಾಗಳು ಎವರ್​ಗ್ರೀನ್ ಆಗಿರುತ್ತವೆ. ಮರು ಬಿಡುಗಡೆ ಆಗಲಿ ಎಂದು ಫ್ಯಾನ್ಸ್ ಕಾಯುವಂತಿರುತ್ತವೆ. ಬಾಲಿವುಡ್​ನ ‘ಪದ್ಮಾವತ್’ ಸಿನಿಮಾ ಕೂಡ ಅಂಥ ಚಾರ್ಮ್ ಉಳಿಸಿಕೊಂಡಿದೆ. 2028ರ ಜನವರಿ 25ರಂದು ‘ಪದ್ಮಾವತ್’ ಸಿನಿಮಾ ತೆರೆಕಂಡಿತ್ತು. ಆಗ ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಕಮಾಯಿ ಮಾಡಿತ್ತು. ಈಗ 7 ವರ್ಷಗಳ ಬಳಿಕ ಈ ಸಿನಿಮಾ ಮತ್ತೆ ದೊಡ್ಡ ಪರದೆಯಲ್ಲಿ ಪ್ರದರ್ಶನ ಕಾಣಲು ಸಜ್ಜಾಗಿದೆ. ಹೌದು, ಫೆಬ್ರವರಿ 6ರಂದು ‘ಪದ್ಮಾವತ್’ ಸಿನಿಮಾ ಮರು ಬಿಡುಗಡೆ ಆಗಲಿದೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.

‘ಪದ್ಮಾವತ್’ ಸಿನಿಮಾಗೆ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ರಣವೀರ್​ ಸಿಂಗ್, ದೀಪಿಕಾ ಪಡುಕೋಣೆ, ಶಾಹಿದ್ ಕಪೂರ್​ ಅವರು ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಐತಿಹಾಸಿಕ ಕಥಾಹಂದರ ಹೊಂದಿರುವ ಈ ಸಿನಿಮಾ ಸಖತ್ ಅದ್ದೂರಿಯಾಗಿ ಮೂಡಿಬಂದಿದೆ. ವಿಮರ್ಶಕರಿಂದ ಹಾಗೂ ಪ್ರೇಕ್ಷಕರಿಂದ ಭರಪೂರ ಮೆಚ್ಚುಗೆ ಪಡೆದುಕೊಂಡಿದೆ.

ರಣವೀರ್ ಸಿಂಗ್ ಅವರು ‘ಪದ್ಮಾವತ್’ ಸಿನಿಮಾದಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಪಾತ್ರವನ್ನು ಮಾಡಿದ್ದಾರೆ. ರಾಣಿ ಪದ್ಮಾವತಿ ಪಾತ್ರದಲ್ಲಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ರಾವಲ್ ರತನ್ ಸಿಂಗ್ ಪಾತ್ರದಲ್ಲಿ ಶಾಹಿದ್ ಕಪೂರ್​ ಕಾಣಿಸಿಕೊಂಡಿದ್ದಾರೆ. ಈ ಎಲ್ಲ ಕಲಾವಿದರ ನಟನೆ ಅತ್ಯುತ್ತಮವಾಗಿದೆ. ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರು ‘ಪದ್ಮಾವತ್’ ಮೂಲಕ ಬೇರೊಂದು ಲೋಕವನ್ನೇ ಕಟ್ಟಿಕೊಟ್ಟಿದ್ದಾರೆ.

ದೀಪಿಕಾಗೆ ರಣವೀರ್ ಸಿಂಗ್ ಕನ್ನಡದಲ್ಲಿ ಪ್ರಪೋಸ್ ಮಾಡಿದ ವಿಡಿಯೋ ನೋಡಿದ್ರಾ?

ಈ ಸಿನಿಮಾದಲ್ಲಿ ಎಲ್ಲರಿಗಿಂತ ಹೆಚ್ಚು ಹೈಲೈಟ್ ಆಗಿರುವುದು ರಣವೀರ್​ ಸಿಂಗ್ ನಿಭಾಯಿಸಿದ ಅಲ್ಲಾವುದ್ದೀನ್ ಖಿಲ್ಜಿ ಪಾತ್ರ. ಈ ನೆಗೆಟಿವ್ ಪಾತ್ರವನ್ನು ರಣವೀರ್ ಸಿಂಗ್ ಅವರು ಜೀವಿಸಿದ್ದಾರೆ. ಈ ಸಿನಿಮಾದ ಹಾಡುಗಳು ಇಂದಿಗೂ ಕೇಳುಗರ ಫೇವರಿಟ್ ಲಿಸ್ಟ್​ನಲ್ಲಿ ಇವೆ. ಸಿನಿಮಾ ರೀ-ರಿಲೀಸ್ ಆಗುತ್ತಿರುವುದಕ್ಕೆ ರಣವೀರ್​ ಸಿಂಗ್ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

‘ಅಲ್ಲಾವುದ್ದೀನ್ ಖಿಲ್ಜಿಯ ಕ್ರೌರ್ಯವನ್ನು ದೊಡ್ಡ ಪರದೆಯಲ್ಲಿ ನೋಡಿ. ಚಿತ್ರಮಂದಿರಗಳಲ್ಲಿ ಪದ್ಮಾವತ್ ಮತ್ತೆ ಬರುತ್ತಿದೆ. ಈ ಮರು ಬಿಡುಗಡೆಯನ್ನು ಮಿಸ್ ಮಾಡಿಕೊಳ್ಳಬೇಡಿ. ಫೆಬ್ರವರಿ 6ರಂದು ರೀ-ರಿಲೀಸ್ ಆಗಲಿದೆ’ ಎಂದು ರಣವೀರ್ ಸಿಂಗ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು
ಮಾಧ್ಯಮಗೋಷ್ಠಿಯಲ್ಲಿ ಲೈಮ್​ಲೈಟನ್ನು ತನ್ನ ಮೇಲೆ ಎಳೆದುಕೊಂಡಿದ್ದು ಹನುಮಂತು
ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್
ಬಿಬಿಎಲ್ ಫೈನಲ್‌ನಲ್ಲಿ ದಾಖಲೆಯ ಶತಕ ಸಿಡಿಸಿದ ಮಿಚೆಲ್ ಓವನ್
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಮಾಧ್ಯಮದವರು ಪ್ರಶ್ನೆ ಕೇಳಿದಾಗ ಹನುಮಂತನಿಂದ ಅದೇ ಮುಗ್ಧತೆಯ ಉತ್ತರ!
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ಫೈನಾನ್ಸ್ ಸಂಸ್ಥೆ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲು ಜಿಲ್ಲಾಡಳಿತಕ್ಕೆ ಸೂಚನೆ
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷನಾಗಿ ಮುಂದುವರಿಸಿದರೆ ಯತ್ನಾಳ್ ನಡೆ ಏನು?
ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್
ವೈಶಾಲಿ ಜೊತೆಗೆ ಕೈಕುಲುಕದಿರಲು ಕಾರಣ ತಿಳಿಸಿದ ಯಾಕುಬೊವ್
ಮಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಗೃಹ ಸಚಿವ ಅಮಿತ್ ಶಾ ತೀರ್ಥ ಸ್ನಾನ
ಮಹಾಕುಂಭದಲ್ಲಿ ತ್ರಿವೇಣಿ ಸಂಗಮದಲ್ಲಿ ಗೃಹ ಸಚಿವ ಅಮಿತ್ ಶಾ ತೀರ್ಥ ಸ್ನಾನ
ಯಾರೇ ಬಂದರೂ ನನ್ನನ್ನು ತುಳಿಯಲಾಗಲ್ಲ: ಸತೀಶ್ ಜಾರಕಿಹೊಳಿ, ಸಚಿವ
ಯಾರೇ ಬಂದರೂ ನನ್ನನ್ನು ತುಳಿಯಲಾಗಲ್ಲ: ಸತೀಶ್ ಜಾರಕಿಹೊಳಿ, ಸಚಿವ
ಶಿವಣ್ಣ ಶೀಘ್ರದಲ್ಲೇ ಶೂಟಿಂಗ್ ಮಾಡಬಹುದು: ಖುಷಿ ಹಂಚಿಕೊಂಡ ಡಾಲಿ
ಶಿವಣ್ಣ ಶೀಘ್ರದಲ್ಲೇ ಶೂಟಿಂಗ್ ಮಾಡಬಹುದು: ಖುಷಿ ಹಂಚಿಕೊಂಡ ಡಾಲಿ
ಸಿದ್ದರಾಮಯ್ಯ ಪಾದಗಳಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಶಿವಣ್ಣ
ಸಿದ್ದರಾಮಯ್ಯ ಪಾದಗಳಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಶಿವಣ್ಣ