AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಕ್ಸ್ ಆಫೀಸ್‌ನಲ್ಲಿ ರಣವೀರ್ ಸಿಂಗ್ ಅಬ್ಬರ: ಬಿಡುಗಡೆಗೂ ಮುನ್ನವೇ ಇತಿಹಾಸ ಸೃಷ್ಟಿಸಿದ ‘ಧುರಂಧರ್ 2’

ಬಹುನಿರೀಕ್ಷಿತ ‘ಧುರಂಧರ್ 2’ ಸಿನಿಮಾ ಪೇಯ್ಡ್ ಪ್ರೀಮಿಯರ್ ಶೋಗಳಿಂದ ಕೋಟಿ ಕೋಟಿ ಲೂಟಿ ಮಾಡುತ್ತಿದೆ. ಇದೇ ಪ್ರಮಾಣದಲ್ಲಿ ಕ್ರೇಜ್ ಮುಂದುವರಿದರೆ ಮೊದಲ ವಾರಾಂತ್ಯದಲ್ಲೇ 100 ಕೋಟಿ ಕ್ಲಬ್ ಸೇರುವುದು ಖಚಿತ. ಈ ಸಿನಿಮಾದಿಂದ ರಣವೀರ್ ಸಿಂಗ್ ಅವರು ತಮ್ಮ ವೃತ್ತಿಜೀವನದ ಅತಿ ದೊಡ್ಡ ಸಕ್ಸಸ್ ಕಾಣಲಿದ್ದಾರೆ.

ಬಾಕ್ಸ್ ಆಫೀಸ್‌ನಲ್ಲಿ ರಣವೀರ್ ಸಿಂಗ್ ಅಬ್ಬರ: ಬಿಡುಗಡೆಗೂ ಮುನ್ನವೇ ಇತಿಹಾಸ ಸೃಷ್ಟಿಸಿದ ‘ಧುರಂಧರ್ 2’
Ranveer Singh
ಮದನ್​ ಕುಮಾರ್​
|

Updated on: Mar 09, 2026 | 9:53 PM

Share

ಬಾಲಿವುಡ್‌ ಸ್ಟಾರ್ ನಟ ರಣವೀರ್ ಸಿಂಗ್ ಅವರು ಈಗ ಭಾರತೀಯ ಚಿತ್ರರಂಗದ ಅತಿ ದೊಡ್ಡ ಬಾಕ್ಸ್ ಆಫೀಸ್ ಸುಲ್ತಾನ್ ಆಗಿ ಹೊರಹೊಮ್ಮಲು ಸಜ್ಜಾಗಿದ್ದಾರೆ. ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್ 2: ದ ರಿವೆಂಜ್’ (Dhurandhar 2: The Revenge) ಸಿನಿಮಾ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ದೇಶಾದ್ಯಂತ ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಈ ಸಿನಿಮಾ ಹೊಸ ದಾಖಲೆಗಳನ್ನು ಬರೆಯುತ್ತಿದೆ. ಮಾರ್ಚ್ 18ರಂದು ಸಂಜೆ 5 ಗಂಟೆಯಿಂದ ಪೇಯ್ಡ್ ಪ್ರಿವ್ಯೂಗಳು (Dhurandhar 2 Paid preview) ಆರಂಭವಾಗಲಿದ್ದು, ಮಾರ್ಚ್ 9ರ ಸಂಜೆ 4 ಗಂಟೆಯ ವೇಳೆಗೆ ಈ ಪ್ರಿವ್ಯೂಗಳಿಗಾಗಿ ಬರೋಬ್ಬರಿ 16 ಕೋಟಿ ರೂ. ಮೌಲ್ಯದ ಟಿಕೆಟ್‌ಗಳು ಮಾರಾಟವಾಗಿವೆ. ಇದು ಹಿಂದಿ ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಮೊತ್ತದ ಅಡ್ವಾನ್ಸ್ ಬುಕ್ಕಿಂಗ್ ಎನ್ನಲಾಗಿದೆ.

‘ಧುರಂಧರ್ 2’ ಚಿತ್ರಕ್ಕೆ ಅಡ್ವಾನ್ಸ್ ಟಿಕೆಟ್ ಬುಕಿಂಗ್ ಹೆಚ್ಚಾಗುತ್ತಲೇ ಇದ್ದು, ಕೇವಲ ಪ್ರಿವ್ಯೂಗಳಿಂದಲೇ ಈ ಚಿತ್ರ 30 ಕೋಟಿ ರೂ. ಗಳಿಸುವ ಸಾಧ್ಯತೆಯಿದೆ. ಪ್ರಮುಖ ಮಲ್ಟಿಪ್ಲೆಕ್ಸ್ಗಳಾದ ಪಿವಿಆರ್ ಐನಾಕ್ಸ್ ಮತ್ತು ಸಿನಿಪೊಲಿಸ್​ನಲ್ಲಿ ಈಗಾಗಲೇ 1.60 ಲಕ್ಷಕ್ಕೂ ಹೆಚ್ಚು ಟಿಕೆಟ್‌ಗಳು ಸೋಲ್ಡ್ ಔಟ್ ಆಗಿವೆ. ಈ ಹಿಂದೆ ‘ಸ್ತ್ರೀ 2’ ಸಿನಿಮಾ ಪೇಯ್ಡ್ ಪ್ರಿವ್ಯೂನಲ್ಲಿ 9 ಕೋಟಿ ರೂ. ಗಳಿಸಿ ದಾಖಲೆ ಬರೆದಿತ್ತು. ಆದರೆ ‘ಧುರಂಧರ್ 2’ ಬಿಡುಗಡೆಗೆ ಎಂಟು ದಿನಗಳ ಮುಂಚೆಯೇ ಆ ದಾಖಲೆಯನ್ನು ಧೂಳೀಪಟ ಮಾಡಿದೆ.

ಚಿತ್ರತಂಡ ಸದ್ಯಕ್ಕೆ ಕೇವಲ ಪೇಯ್ಡ್ ಪ್ರಿವ್ಯೂಗಳ ಬುಕ್ಕಿಂಗ್ ಮಾತ್ರ ಆರಂಭಿಸಿದೆ. ಮೊದಲ ವಾರಾಂತ್ಯದ ಬುಕ್ಕಿಂಗ್ ಇನ್ನೂ ಪೂರ್ಣ ಪ್ರಮಾಣದಲ್ಲಿ ಆರಂಭವಾಗಿಲ್ಲ. ಟ್ರೇಡ್ ವಿಶ್ಲೇಷಕರ ಪ್ರಕಾರ, ಬುಕ್ಕಿಂಗ್ ಟ್ರೆಂಡ್ ಇದೇ ರೀತಿ ಮುಂದುವರಿದರೆ, ಮೊದಲ ವಾರಾಂತ್ಯದ ಅಡ್ವಾನ್ಸ್ ಬುಕ್ಕಿಂಗ್​ನಿಂದಲೇ 100 ಕೋಟಿ ರೂ. ಗಡಿ ದಾಟುವ ಎಲ್ಲಾ ಲಕ್ಷಣಗಳಿವೆ.

ದೇಶಾದ್ಯಂತ ಒಟ್ಟು 7000 ಶೋಗಳು ನಡೆಯುವ ಸಾಧ್ಯತೆಯಿದ್ದು, ಕೇವಲ ಪ್ರಿವ್ಯೂಗಳಿಂದಲೇ 55 ಕೋಟಿ ರೂಪಾಯಿ ಗಳಿಸುವ ಸಾಧ್ಯತೆ ಇದೆ. ಇದು ಭಾರತೀಯ ಚಿತ್ರರಂಗದ ಮಟ್ಟಿಗೆ ಒಂದು ಐತಿಹಾಸಿಕ ಕ್ಷಣ ಆಗಲಿದೆ. ‘ಉರಿ: ದ ಸರ್ಜಿಕಲ್ ಸ್ಟ್ರೈಕ್’ ಖ್ಯಾತಿಯ ಆದಿತ್ಯ ಧಾರ್ ಅವರು ‘ಧುರಂಧರ್ 2’ ಸಿನಿಮಾಗೆ ನಿರ್ದೇಶನ ಮಾಡಿರುವುದರಿಂದ ಸಿನಿಮಾದ ಮೇಲೆ ಅಪಾರ ನಿರೀಕ್ಷೆಯಿದೆ.

ಇದನ್ನೂ ಓದಿ: ‘ಧುರಂಧರ್ 2’ ಅಡ್ವಾನ್ಸ್ ಬುಕಿಂಗ್: ಬೆಂಗಳೂರಿನಲ್ಲಿ ಗಗನಕ್ಕೇರಿದ ಟಿಕೆಟ್ ಬೆಲೆ

‘ಧುರಂಧರ್’ ಮೊದಲ ಭಾಗದ ಭರ್ಜರಿ ಯಶಸ್ಸಿನ ನಂತರ, ಸೀಕ್ವೆಲ್ ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಈ ಸಿನಿಮಾದಲ್ಲಿ ರಣವೀರ್ ಸಿಂಗ್ ಜೊತೆ ಸಾರಾ ಅರ್ಜುನ್, ಸಂಜಯ್ ದತ್, ಅರ್ಜುನ್ ರಾಮ್​ಪಾಲ್ ಮುಂತಾದವರು ನಟಿಸಿದ್ದಾರೆ. ಮಾರ್ಚ್ 19ರಂದು ಈ ಚಿತ್ರ ಬಿಡುಗಡೆ ಆಗಲಿದೆ. ಮಾರ್ಚ್ 18ರ ಸಂಜೆ ಪ್ರೇಯ್ಡ್ ಪ್ರೀಮಿಯರ್ ಶೋಗಳು ನಡೆಯಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ