‘ಧುರಂಧರ್ 2’ ಅತಿ ಕೆಟ್ಟ ಸಿನಿಮಾ ಎಂದ ಪಾಕ್ ಕುಟುಂಬ; ವಿಡಿಯೋ ವೈರಲ್

ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಚಿತ್ರ ವಿಶ್ವದಾದ್ಯಂತ ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸುತ್ತಿದೆ. ವಿದೇಶದಲ್ಲಿ ಸಿನಿಮಾ ವೀಕ್ಷಿಸಿದ ಪಾಕಿಸ್ತಾನಿ ಕುಟುಂಬವೊಂದು ಈ ಚಿತ್ರವನ್ನು ‘ಕಳಪೆ’ ಎಂದು ಹೇಳಿದೆ. ಆ ಕುಟುಂಬದವರ ವಿಡಿಯೋ ವೈರಲ್ ಆಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ಟ್ರೋಲ್ ಆಗುತ್ತಿದೆ.

‘ಧುರಂಧರ್ 2’ ಅತಿ ಕೆಟ್ಟ ಸಿನಿಮಾ ಎಂದ ಪಾಕ್ ಕುಟುಂಬ; ವಿಡಿಯೋ ವೈರಲ್
Pakistani Audience

Updated on: Mar 23, 2026 | 9:19 PM

ಆದಿತ್ಯ ಧರ್ ನಿರ್ದೇಶನದ ‘ಧುರಂಧರ್ 2’ (Dhurandhar 2) ಸಿನಿಮಾ ವಿಶ್ವಾದ್ಯಂತ 750 ಕೋಟಿ ರೂಪಾಯಿ ಗಳಿಸಿ ಮುನ್ನುಗ್ಗುತ್ತಿದೆ. ಇನ್ನೊಂದೆಡೆ ವಿದೇಶದಲ್ಲಿ ಈ ಚಿತ್ರದ ವಿರುದ್ಧ ಕಿಡಿಕಾರುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಯುನೈಟೆಡ್ ಕಿಂಗ್​ಡಮ್​ನ​​ ಚಿತ್ರಮಂದಿರವೊಂದರಿಂದ ಹೊರಬಂದ ಪಾಕಿಸ್ತಾನ (Pakistan) ಮೂಲದ ಕುಟುಂಬದವರು ಈ ಸಿನಿಮಾದ ವಿರುದ್ಧ ಅತ್ಯಂತ ಕಟುವಾದ ಪದಗಳನ್ನು ಬಳಸಿ ಚಿತ್ರದ ಬಗ್ಗೆ ವಿಮರ್ಶೆ ಹಂಚಿಕೊಂಡಿದ್ದಾರೆ. ಅವರ ವಿಡಿಯೋ ವೈರಲ್ ಆಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ, ಸಿನಿಮಾ ನೋಡಿ ಹೊರಬರುತ್ತಿರುವ ಪಾಕಿಸ್ತಾನಿ ವ್ಯಕ್ತಿಯೊಬ್ಬರು, ‘ಇದು ಥರ್ಡ್ ಕ್ಲಾಸ್ ಸಿನಿಮಾ. ನನ್ನ ಇಡೀ ಜೀವನದಲ್ಲಿ ಇಂತಹ ಕಳಪೆ ಚಿತ್ರವನ್ನು ನಾನು ನೋಡಿಲ್ಲ’ ಎಂದು ಕಿಡಿಕಾರಿದ್ದಾರೆ. ಅವರ ಜೊತೆಗಿದ್ದ ಮಹಿಳೆಯೊಬ್ಬರು, ‘ಕಳಪೆ ಎಂಬ ಪದಕ್ಕಿಂತಲೂ ಕೆಟ್ಟ ಪದ ಯಾವುದಾದರೂ ಇದ್ದರೆ ಅದು ಈ ಸಿನಿಮಾಗೆ ಒಪ್ಪುತ್ತದೆ’ ಎಂದು ಹೇಳಿದ್ದಾರೆ. ಇಡೀ ಗುಂಪು ಈ ಚಿತ್ರವನ್ನು ‘ಅಸಂಬದ್ಧ’ ಎಂದು ಕರೆದಿದೆ.

ಕೇವಲ ‘ಧುರಂಧರ್ 2’ ಸಿನಿಮಾವನ್ನು ಟೀಕಿಸುವುದು ಮಾತ್ರವಲ್ಲದೆ, ಚಿತ್ರಮಂದಿರದ ಹೊರಗೆ ಈ ಗುಂಪು ‘ಮೇಜರ್ ಇಕ್ಬಾಲ್ ಜಿಂದಾಬಾದ್’ ಮತ್ತು ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆಗಳನ್ನು ಕೂಗಿರುವುದು ವಿಡಿಯೋದಲ್ಲಿದೆ. ಒಟ್ಟಿನಲ್ಲಿ ಈ ಸಿನಿಮಾ ನೋಡಿದ ಪಾಕಿಸ್ತಾನಿ ಕುಟುಂಬದವರಿಗೆ ಕಿಂಚಿತ್ತೂ ಇಷ್ಟ ಆಗಿಲ್ಲ ಎಂಬುದು ಈ ವಿಡಿಯೋ ಮೂಲಕ ಸ್ಪಷ್ಟವಾಗಿದೆ.

ವೈರಲ್ ವಿಡಿಯೋ:

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಈ ಕುಟುಂಬವನ್ನು ಭಾರತೀಯ ಭರ್ಜರಿಯಾಗಿ ಟ್ರೋಲ್ ಮಾಡುತ್ತಿದ್ದಾರೆ. ‘ಪಾಕಿಸ್ತಾನಿಗಳಿಗೆ ಈ ಸಿನಿಮಾ ಇಷ್ಟವಾಗಿಲ್ಲ ಎಂದರೆ, ನಿರ್ದೇಶಕ ಆದಿತ್ಯ ಧರ್ ಸರಿಯಾದ ಹಾದಿಯಲ್ಲಿದ್ದಾರೆ ಎಂದೇ ಅರ್ಥ. ಅವರು ಭಯೋತ್ಪಾದನೆಯ ಸತ್ಯವನ್ನು ಬಯಲಿಗೆಳೆದಿದ್ದಾರೆ ಎಂಬುದು ಈ ಆಕ್ರೋಶದಿಂದಲೇ ತಿಳಿಯುತ್ತದೆ’ ಎಂದು ನೆಟ್ಟಿಗರೊಬ್ಬರು ಕಾಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: IMDb ಪಟ್ಟಿಯಲ್ಲಿ ‘ಧುರಂಧರ್ 2’ ಸಿನಿಮಾ ನಿರ್ದೇಶಕ ಆದಿತ್ಯ ಧರ್ ನಂಬರ್ ಒನ್

‘ISI ಮಾಡುವ ತಪ್ಪುಗಳನ್ನು ಸಿನಿಮಾದಲ್ಲಿ ತೋರಿಸಿದಾಗ ಅವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ’ ಎಂದು ಇನ್ನೊಬ್ಬರು ಕಿಡಿಕಾರಿದ್ದಾರೆ. ಒಟ್ಟಾರೆಯಾಗಿ, ಈ ಚಿತ್ರದಲ್ಲಿ ತೋರಿಸಲಾಗಿರುವ ಘಟನೆಗಳು ಮತ್ತು ಪಾಕಿಸ್ತಾನಿ ಪ್ರಾಯೋಜಿತ ಭಯೋತ್ಪಾದನೆಯ ವಿವರಗಳು ಅಲ್ಲಿನ ಜನರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದಂತಿದೆ ಎಂದು ಅನೇಕರು ಕಮೆಂಟ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us