AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧುರಂಧರ್ ಸೋತಿದ್ದರೆ ‘ಡಾನ್ 3’ ಸಿನಿಮಾ ಬಿಡುತ್ತಿರಲಿಲ್ಲ: ಕಡೆಗೂ ಒಪ್ಪಿಕೊಂಡ ರಣವೀರ್ ಸಿಂಗ್

ರಣವೀರ್ ಸಿಂಗ್ ಅವರು ಫರ್ಹಾನ್ ಅಖ್ತರ್ ಜೊತೆ ಮಾಡಿಕೊಂಡ ವಿವಾದವನ್ನು ಬಗೆಹರಿಸಲು ದೊಡ್ಡ ಮಟ್ಟದ ಸಭೆ ನಡೆದಿತ್ತು. ಈ ಹೈ-ಪ್ರೊಫೈಲ್ ಸಂಧಾನ ಸಭೆಗಳಲ್ಲಿ ಸಲ್ಮಾನ್ ಖಾನ್, ಹೃತಿಕ್ ರೋಷನ್, ಆಮಿರ್ ಖಾನ್, ಕರಣ್ ಜೋಹರ್, ರೋಹಿತ್ ಶೆಟ್ಟಿ ಸೇರಿದಂತೆ ಬಾಲಿವುಡ್‌ನ ಪ್ರಮುಖ ದಿಗ್ಗಜರು ಭಾಗವಹಿಸಿದ್ದರು ಎಂಬುದು ವಿಶೇಷ.

ಧುರಂಧರ್ ಸೋತಿದ್ದರೆ ‘ಡಾನ್ 3’ ಸಿನಿಮಾ ಬಿಡುತ್ತಿರಲಿಲ್ಲ: ಕಡೆಗೂ ಒಪ್ಪಿಕೊಂಡ ರಣವೀರ್ ಸಿಂಗ್
Ranveer Singh
ಮದನ್​ ಕುಮಾರ್​
|

Updated on: Jun 03, 2026 | 4:47 PM

Share

ಬಾಲಿವುಡ್‌ನ ಬಹುನಿರೀಕ್ಷಿತ ‘ಡಾನ್ 3’ (Don 3) ಚಿತ್ರದಿಂದ ನಟ ರಣವೀರ್ ಸಿಂಗ್ ದಿಢೀರ್ ಹೊರಬಂದಿರುವುದು ಮತ್ತು ನಿರ್ಮಾಪಕ ಫರ್ಹಾನ್ ಅಖ್ತರ್ ಅವರೊಂದಿಗಿನ ವಿವಾದ ಸದ್ಯ ಚಿತ್ರರಂಗದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚೆಗೆ ನಡೆದ ಸರಣಿ ಸಂಧಾನ ಸಭೆಗಳಲ್ಲಿ ರಣವೀರ್ ಸಿಂಗ್ (Ranveer Singh) ಈ ಪ್ರಾಜೆಕ್ಟ್‌ನಿಂದ ಹೊರಬರಲು ತಮಗಿದ್ದ ಅಸಮಾಧಾನಗಳನ್ನು ಬಿಚ್ಚಿಟ್ಟಿದ್ದಾರೆ ಎಂದು ‘ವೆರೈಟಿ’ ವರದಿ ಮಾಡಿದೆ. ಚಿತ್ರರಂಗದ ಹಿರಿಯರ ಸಮ್ಮುಖದಲ್ಲಿ ನಡೆದ ಈ ರಹಸ್ಯ ಸಭೆ ಹಲವು ವಿಷಯಗಳು ಹೊರಬಂದಿವೆ.

‘ಡಾನ್ 3’ ಚಿತ್ರದ ಫೈನಲ್ ಸ್ಕ್ರಿಪ್ಟ್ ತಮಗೆ ಸಂಪೂರ್ಣ ತೃಪ್ತಿ ನೀಡಿರಲಿಲ್ಲ. ಸಿನಿಮಾ ಶೂಟಿಂಗ್‌ಗೆ ಹೋಗುವ ಹಂತಕ್ಕೆ ಸ್ಕ್ರಿಪ್ಟ್ ಸಿದ್ಧವಾಗಿರಲಿಲ್ಲ ಎಂದು ರಣವೀರ್ ಹೇಳಿದ್ದಾರೆ. ಫರ್ಹಾನ್ ಅಖ್ತರ್ ಅವರು ಬೇರೆ ಪ್ರಾಜೆಕ್ಟ್‌ಗಳು ಹಾಗೂ ಮ್ಯೂಸಿಕ್ ಕನ್ಸರ್ಟ್‌ಗಳಲ್ಲಿ ಬ್ಯುಸಿಯಾಗಿದ್ದರಿಂದ ಚಿತ್ರಕ್ಕೆ ಸರಿಯಾಗಿ ಸಮಯ ನೀಡುತ್ತಿರಲಿಲ್ಲ ಎಂದು ರಣವೀರ್ ಆರೋಪಿಸಿದ್ದಾರೆ.

ಆರಂಭದಲ್ಲಿ ಚಿತ್ರಕ್ಕೆ 300ರಿಂದ 350 ಕೋಟಿ ರೂ. ಬಜೆಟ್ ಎಂದು ಚರ್ಚಿಸಲಾಗಿತ್ತು. ಆದರೆ ನಂತರ ಅದನ್ನು ಕೇವಲ 150 ಕೋಟಿ ರೂ.ಗೆ ಇಳಿಸಲಾಯಿತು ಎಂಬುದು ರಣವೀರ್ ವಾದ. ಬಜೆಟ್ ಕಮ್ಮಿ ಮಾಡಿದ ಬೆನ್ನಲ್ಲೇ ತಮ್ಮ ಸಂಭಾವನೆಯನ್ನೂ ಕಡಿತಗೊಳಿಸಲಾಯಿತು ಮತ್ತು ತಮಗೆ ಯಾವುದೇ ಅಡ್ವಾನ್ಸ್ ಅಥವಾ ಸೈನಿಂಗ್ ಅಮೌಂಟ್ ಸಿಕ್ಕಿರಲಿಲ್ಲ ಎಂದು ನಟ ಹೇಳಿಕೊಂಡಿದ್ದಾರೆ.

ರಣವೀರ್ ಸಿಂಗ್ ಅವರ ಈ ಆರೋಪಗಳಿಗೆ ನಿರ್ಮಾಪಕರಾದ ಫರ್ಹಾನ್ ಅಖ್ತರ್ ಮತ್ತು ರಿತೇಶ್ ಸಿಧ್ವಾನಿ ತಿರುಗೇಟು ನೀಡಿದ್ದಾರೆ. ರಣವೀರ್ ಸಿಂಗ್ ಈ ಹಿಂದೆ ಸ್ಕ್ರಿಪ್ಟ್ ಕೇಳಿ ಖುಷಿಪಟ್ಟಿದ್ದ ಹಳೆಯ ವಾಟ್ಸಾಪ್ ಚಾಟ್‌ಗಳನ್ನು ಸಭೆಯಲ್ಲಿ ನಿರ್ಮಾಪಕರು ಪ್ರದರ್ಶಿಸಿದ್ದಾರೆ. ಅಷ್ಟೇ ಅಲ್ಲದೆ, ಒಪ್ಪಂದವಾದ ಮೇಲೆ ಸಂಭಾವನೆ ಕಡಿತ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ‘ಡಾನ್ 3’ ವಿವಾದ: ಚಿತ್ರರಂಗದಿಂದ ಬ್ಯಾನ್ ಆದ ಬಳಿಕ ಮೌನ ಮುರಿದ ರಣವೀರ್ ಸಿಂಗ್‌

ಸಭೆಯಲ್ಲಿ ನಿರ್ಮಾಪಕ ರಿತೇಶ್ ಸಿಧ್ವಾನಿ ಅವರು ರಣವೀರ್‌ಗೆ ನೇರ ಪ್ರಶ್ನೆಯೊಂದನ್ನು ಕೇಳಿದ್ದರು. ‘ಒಂದು ವೇಳೆ ನಿಮ್ಮ ‘ಧುರಂಧರ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಬ್ಲಾಕ್‌ಬಸ್ಟರ್ ಹಿಟ್ ಆಗದೇ ಇದ್ದಿದ್ದರೆ ನೀವು ‘ಡಾನ್ 3’ ಬಿಟ್ಟು ಹೋಗುತ್ತಿದ್ದಿರಾ?’ ಎಂದು ಕೇಳಿದ್ದಕ್ಕೆ, ರಣವೀರ್ ಸಿಂಗ್ ‘ಇಲ್ಲ, ಆಗ ನಾನು ಸಿನಿಮಾ ಬಿಡುತ್ತಿರಲಿಲ್ಲ’ ಎಂದು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ಪ್ರೀ-ಪ್ರೊಡಕ್ಷನ್ ಹಂತದಲ್ಲಿ ತಮಗಾದ ನಷ್ಟಕ್ಕಾಗಿ ಎಕ್ಸೆಲ್ ಎಂಟರ್‌ಟೈನ್‌ಮೆಂಟ್ ಸಂಸ್ಥೆಯು ರಣವೀರ್ ಸಿಂಗ್ ಅವರಿಂದ 45 ಕೋಟಿ ರೂ. ಪರಿಹಾರ ಕೇಳಿದೆ. ಆದರೆ ರಣವೀರ್ ಸಿಂಗ್ ತಕ್ಷಣವೇ 10 ಕೋಟಿ ರೂ. ನೀಡಿ ಸೆಟಲ್ ಮಾಡಲು ಮುಂದಾಗಿದ್ದಾರೆ. ಜೊತೆಗೆ ಮುಂದಿನ ಸಿನಿಮಾಗಳಿಗೆ ತಮ್ಮ ಸಂಭಾವನೆಯಲ್ಲಿ ಶೇಕಡ 25ರಷ್ಟು ರಿಯಾಯಿತಿ ನೀಡುವುದಾಗಿ ಆಫರ್ ಕೊಟ್ಟಿದ್ದಾರೆ. ಆದರೆ ‘ಇನ್ಮುಂದೆ ನಿಮ್ಮ ಜೊತೆ ಸಿನಿಮಾ ಮಾಡುವ ಯೋಚನೆಯೇ ನಮಗಿಲ್ಲ. ಹಾಗಾಗಿ ನಿಮ್ಮ ಡಿಸ್ಕೌಂಟ್ ನಮಗೆ ಬೇಡ’ ಎಂದು ಫರ್ಹಾನ್ ಅಖ್ತರ್ ಈ ಆಫರ್ ಅನ್ನು ರಿಜೆಕ್ಟ್ ಮಾಡಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ