AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಡಾನ್ 3’ ವಿವಾದಕ್ಕೆ ಬಿಗ್ ಟ್ವಿಸ್ಟ್; ಚಿತ್ರರಂಗದ ಒಕ್ಕೂಟಕ್ಕೇ ಲೀಗಲ್ ನೋಟಿಸ್ ಕಳುಹಿಸಿದ ರಣವೀರ್ ಸಿಂಗ್

ರಣವೀರ್ ಸಿಂಗ್ 'ಡಾನ್ 3' ಚಿತ್ರದಿಂದ ಹೊರನಡೆದ ವಿವಾದ ಭುಗಿಲೆದ್ದಿದೆ. ಚಿತ್ರತಂಡ 45 ಕೋಟಿ ಪರಿಹಾರ ಕೇಳಿದ ಬೆನ್ನಲ್ಲೇ, FWICE ನಟನ ವಿರುದ್ಧ ನಿಷೇಧ ಹೇರಿತ್ತು. ಇದೀಗ ರಣವೀರ್ ಸಿಂಗ್ 'ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್' (FWICE) ಗೆ ಲೀಗಲ್ ನೋಟಿಸ್ ಕಳುಹಿಸುವ ಮೂಲಕ ತಿರುಗೇಟು ನೀಡಿದ್ದಾರೆ. ವೃತ್ತಿಪರ ಭಿನ್ನಾಭಿಪ್ರಾಯಗಳನ್ನು ಖಾಸಗಿಯಾಗಿ ಬಗೆಹರಿಸಲು ರಣವೀರ್ ಬಯಸುತ್ತಾರೆ.

‘ಡಾನ್ 3’ ವಿವಾದಕ್ಕೆ ಬಿಗ್ ಟ್ವಿಸ್ಟ್; ಚಿತ್ರರಂಗದ ಒಕ್ಕೂಟಕ್ಕೇ ಲೀಗಲ್ ನೋಟಿಸ್ ಕಳುಹಿಸಿದ ರಣವೀರ್ ಸಿಂಗ್
ಫರ್ಹಾನ್-ರಣವೀರ್
ರಾಜೇಶ್ ದುಗ್ಗುಮನೆ
|

Updated on:Jun 03, 2026 | 12:13 PM

Share

ಬಾಲಿವುಡ್ ಸ್ಟಾರ್ ನಟ ರಣವೀರ್ ಸಿಂಗ್ ಹಾಗೂ ‘ಡಾನ್ 3’ ಚಿತ್ರತಂಡದ ವಿವಾದ ದಿನ ಕಳೆದಂತೆ ದೊಡ್ಡದಾಗುತ್ತಲೇ ಇದೆ. ಸಿನಿಮಾ ಕೈಬಿಟ್ಟು, ನಷ್ಟ ಪರಿಹಾರಕ್ಕೆ ಒಪ್ಪದ ಬೆನ್ನಲ್ಲೇ ರಣವೀರ್ ಸಿಂಗ್ ವಿರುದ್ಧ ಚಿತ್ರರಂಗದ ಒಕ್ಕೂಟ ನಿಷೇಧ ಹೇರಿತ್ತು. ಇದೀಗ ನಟ ರಣವೀರ್ ಸಿಂಗ್ ಅವರು ತಮಗೆ ವಿಧಿಸಲಾಗಿರುವ ಅಸಹಕಾರ ಆದೇಶದ ವಿರುದ್ಧ ‘ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್’ (FWICE) ಸಂಸ್ಥೆಗೆ ನೋಟಿಸ್ ಕಳುಹಿಸುವ ಮೂಲಕ ತಿರುಗೇಟು ನೀಡಿದ್ದಾರೆ.

ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ರಣವೀರ್ ಸಿಂಗ್ ಮಂಗಳವಾರವೇ ಈ ಲೀಗಲ್ ನೋಟಿಸ್ ರವಾನಿಸಿದ್ದಾರೆ. ಆದರೆ, ನೋಟಿಸ್‌ನಲ್ಲಿ ಏನಿದೆ ಎಂಬ ಸಂಪೂರ್ಣ ವಿವರಗಳು ಇನ್ನು ಬಹಿರಂಗವಾಗಿಲ್ಲ. ಇತ್ತ FWICE ಒಕ್ಕೂಟ ಕೂಡ ಈ ನೋಟಿಸ್‌ಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.

ಏನಿದು ‘ಡಾನ್ 3’ ವಿವಾದ?

ಕೆಲವು ದಿನಗಳ ಹಿಂದೆ ನಿರ್ದೇಶಕ ಫರ್ಹಾನ್ ಅಖ್ತರ್ ಅವರ ಮಹತ್ವಾಕಾಂಕ್ಷೆಯ ‘ಡಾನ್ 3’ ಚಿತ್ರದಿಂದ ರಣವೀರ್ ಸಿಂಗ್ ಹಠಾತ್ತನೆ ಹೊರನಡೆದಿದ್ದರು. ಚಿತ್ರಕಥೆಯ ವಿಚಾರದಲ್ಲಿ ಮೂಡಿದ ಸೃಜನಶೀಲ ಭಿನ್ನಾಭಿಪ್ರಾಯಗಳು ಹಾಗೂ ಸ್ಕ್ರಿಪ್ಟ್ ಅಂತಿಮಗೊಳ್ಳದೆ ಶೂಟಿಂಗ್ ಸತತವಾಗಿ ವಿಳಂಬವಾಗುತ್ತಿದ್ದುದೇ ಇದಕ್ಕೆ ಮುಖ್ಯ ಕಾರಣ ಎನ್ನಲಾಗಿತ್ತು.

ಬಂಡಾಯ ಎದ್ದು ಹೊರನಡೆದ ನಟನ ನಡೆಗೆ ಚಿತ್ರದ ನಿರ್ಮಾಣ ಸಂಸ್ಥೆ ‘ಎಕ್ಸೆಲ್ ಎಂಟರ್‌ಟೈನ್‌ಮೆಂಟ್’ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಸಿನಿಮಾ ಅರ್ಧಕ್ಕೆ ನಿಂತಿದ್ದರಿಂದ ತಮಗಾದ ನಷ್ಟಕ್ಕೆ ಪ್ರತಿಯಾಗಿ ರಣವೀರ್ ಸಿಂಗ್ ಅವರಿಂದ ಬರೋಬ್ಬರಿ 45 ಕೋಟಿ ರೂಪಾಯಿ ಪರಿಹಾರ ಕೋರಿ ಸಂಸ್ಥೆ ಬೇಡಿಕೆ ಇಟ್ಟಿದೆ. ಇದರ ಬೆನ್ನಲ್ಲೇ FWICE ಒಕ್ಕೂಟವು ರಣವೀರ್ ಸಿಂಗ್ ಜೊತೆ ಚಿತ್ರರಂಗದ ಯಾರೂ ಸಹಕರಿಸಬಾರದು ಎಂದು ‘ಅಸಹಕಾರ ಆದೇಶ’ ಹೊರಡಿಸಿತ್ತು.

ಈ ಇಡೀ ವಿವಾದದ ಬಗ್ಗೆ ರಣವೀರ್ ಸಿಂಗ್ ಸದ್ಯ ಮೌನ ವಹಿಸಿದ್ದರೂ, ಅವರ ವಕ್ತಾರರು ಅಧಿಕೃತ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ. ‘ವೃತ್ತಿಪರ ಭಿನ್ನಾಭಿಪ್ರಾಯಗಳನ್ನು ಗೌರವ ಮತ್ತು ಪ್ರಬುದ್ಧತೆಯಿಂದ ಖಾಸಗಿಯಾಗಿ ಬಗೆಹರಿಸಿಕೊಳ್ಳಬೇಕು ಎಂದು ರಣವೀರ್ ನಂಬುತ್ತಾರೆ. ಹೀಗಾಗಿ ಅವರು ಈ ಊಹಾಪೋಹಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಮೌನವಾಗಿರಲು ನಿರ್ಧರಿಸಿದ್ದಾರೆ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಕಡಿಮೆ ಸಂಭಾವನೆ ಪಡೆದಿದ್ದ ರಣವೀರ್ ಸಿಂಗ್; ಆದ್ರೂ ಹರಿದುಬಂತು ಕೋಟಿ ಕೋಟಿ ಹಣ!

ಮುಂದಿನ ಸಿನಿಮಾ ‘ಪ್ರಳಯ್’ ಕಥೆ ಏನು?

FWICE ಹೇರಿರುವ ಈ ನಿಷೇಧದಿಂದಾಗಿ ರಣವೀರ್ ಅವರ ಮುಂದಿನ ಬಹುನಿರೀಕ್ಷಿತ ಚಿತ್ರ ‘ಪ್ರಳಯ್’ ಭವಿಷ್ಯದ ಬಗ್ಗೆ ಅಭಿಮಾನಿಗಳಲ್ಲಿ ಆತಂಕ ಮೂಡಿತ್ತು. ಆದರೆ, ವರದಿಗಳ ಪ್ರಕಾರ ಈ ವಿವಾದದಿಂದ ರಣವೀರ್ ಅವರ ಮುಂಬರುವ ಸಿನಿಮಾಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎನ್ನಲಾಗಿದೆ. ಜೈ ಮೆಹ್ತಾ ನಿರ್ದೇಶನದ ‘ಪ್ರಳಯ್’ ಚಿತ್ರದ ಶೂಟಿಂಗ್ ಅನ್ನು ನಿಗದಿಯಂತೆ ಈ ವರ್ಷದ ಆಗಸ್ಟ್ ತಿಂಗಳಿನಿಂದ ಆರಂಭಿಸಲು ಚಿಂತಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:12 pm, Wed, 3 June 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ