ರ್ಯಾಂಪ್ವಾಕ್ ಮಧ್ಯೆ ಕಂಡ ದೀಪಿಕಾ, ಕರಣ್ ಜೋಹರ್ಗೆ ಮುತ್ತಿಟ್ಟ ರಣವೀರ್ ಸಿಂಗ್
ದೀಪಿಕಾ ಪಡುಕೋಣೆ ಅವರನ್ನು ಕಂಡರೆ ರಣವೀರ್ ಸಿಂಗ್ಗೆ ಎಲ್ಲಿಲ್ಲದ ಪ್ರೀತಿ. ಸಾರ್ವಜನಿಕವಾಗಿ ಅನೇಕ ಬಾರಿ ಅವರು ಪ್ರೀತಿ ವ್ಯಕ್ತಪಡಿಸುತ್ತಲೇ ಇರುತ್ತಾರೆ. ಇದಕ್ಕೆ ಹೊಸ ವಿಡಿಯೋ ಸಾಕ್ಷ್ಯ ಸಿಕ್ಕಿದೆ.
ರಣವೀರ್ ಸಿಂಗ್ (Ranveer Singh) ಅವರ ವ್ಯಕ್ತಿತ್ವ ತುಂಬಾನೇ ಭಿನ್ನವಾದುದು. ಅವರು ಯಾವುದಕ್ಕೂ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ. ಈ ಕಾರಣಕ್ಕೆ ಅವರು ಯಾವಾಗಲೂ ಚಿಲ್ ಆಗಿ ಕಾಣಿಸಿಕೊಳ್ಳುತ್ತಾರೆ. ಈಗ ರಣವೀರ್ ಸಿಂಗ್ ಅವರ ಹೊಸ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ರ‍್ಯಾಂಪ್ ವಾಕ್ ಮಾಡುತ್ತಿದ್ದಾರೆ. ಇದೇ ವೇಳೆ ಅವರು ದೀಪಿಕಾ ಪಡುಕೋಣೆ ಹಾಗೂ ಕರಣ್ ಜೋಹರ್ಗೆ ಕಿಸ್ ಮಾಡಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗಿದೆ.
ರಣವೀರ್ ಸಿಂಗ್ ಹಾಗೂ ದೀಪಿಕಾ ಮದುವೆ ಆಗಿ ಹಲವು ವರ್ಷ ಕಳೆದಿದೆ. ಇಬ್ಬರೂ ಹಾಯಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಾರೆ. ದೀಪಿಕಾ ಪಡುಕೋಣೆ ಅವರನ್ನು ಕಂಡರೆ ರಣವೀರ್ ಸಿಂಗ್ಗೆ ಎಲ್ಲಿಲ್ಲದ ಪ್ರೀತಿ. ಸಾರ್ವಜನಿಕವಾಗಿ ಅನೇಕ ಬಾರಿ ಅವರು ಪ್ರೀತಿ ವ್ಯಕ್ತಪಡಿಸುತ್ತಲೇ ಇರುತ್ತಾರೆ. ಇದಕ್ಕೆ ಹೊಸ ವಿಡಿಯೋ ಸಾಕ್ಷ್ಯ ಸಿಕ್ಕಿದೆ.
ರಣವೀರ್ ಸಿಂಗ್ ಅವರು ರ‍್ಯಾಂಪ್ ವಾಕ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ರ‍್ಯಾಂಪ್ ವಾಕ್ ಮಾಡುವ ವೇದಿಕೆ ಪಕ್ಕದಲ್ಲಿ ದೀಪಿಕಾ ಪಡುಕೋಣೆ, ಕರಣ್ ಜೋಹರ್ ಮೊದಲಾದವರು ಕುಳಿತಿದ್ದರು. ಮೊದಲು ರಣವೀರ್ ಸಿಂಗ್ ಅವರು ಪತ್ನಿ ದೀಪಿಕಾ ಪಡುಕೋಣೆ ಅವರನ್ನು ನೋಡಿದ್ದಾರೆ. ಈ ವೇಳೆ ಅವರು ಪತ್ನಿಯ ಕೆನ್ನೆಗೆ ಕಿಸ್ ಮಾಡಿದ್ದಾರೆ. ಪಕ್ಕದಲ್ಲೇ ಇದ್ದ ಕರಣ್ ಜೋಹರ್ ಕೆನ್ನೆಗೂ ರಣವೀರ್ ಸಿಂಗ್ ಕಿಸ್ ಕೊಟ್ಟಿದ್ದಾರೆ. ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ. ಅಭಿಮಾನಿಗಳು ಬಗೆಬಗೆಯಲ್ಲಿ ಇದಕ್ಕೆ ಕಮೆಂಟ್ ಮಾಡುತ್ತಿದ್ದಾರೆ.
View this post on Instagram
ಇದನ್ನೂ ಓದಿ: ವಿಶೇಷ ದಿನಕ್ಕೂ ಮುನ್ನ ‘ಪ್ರಾಜೆಕ್ಟ್ ಕೆ’ ಚಿತ್ರದಲ್ಲಿನ ದೀಪಿಕಾ ಪಡುಕೋಣೆ ಲುಕ್ ರಿವೀಲ್
ಕರಣ್ ಜೋಹರ್ ನಿರ್ದೇಶನದ, ರಣವೀರ್ ಸಿಂಗ್-ಆಲಿಯಾ ನಟನೆಯ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿ ಸದ್ದು ಮಾಡುತ್ತಿದೆ. ಈ ಸಿನಿಮಾ ಜುಲೈ 28ರಂದು ರಿಲೀಸ್ ಆಗಲಿದೆ. ಈ ಸಿನಿಮಾ ಎಷ್ಟು ಕಲೆಕ್ಷನ್ ಮಾಡಲಿದೆ ಎಂಬ ಕುತೂಹಲ ಮೂಡಿದೆ. ರಣವೀರ್ ಸಿಂಗ್ ನಟನೆಯ ಸಾಲು ಸಾಲು ಸಿನಿಮಾಗಳು ಫ್ಲಾಪ್ ಆಗಿವೆ. ಈ ಚಿತ್ರದ ಮೂಲಕ ಅವರಿಗೆ ಗೆಲುವು ಬೇಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ