ಫಿಫಾ ವಿಶ್ವಕಪ್​ ಫೈನಲ್​ ವೇಳೆ ರವಿ ಶಾಸ್ತ್ರಿಗೆ ಕಿಸ್ ಮಾಡಿದ ರಣವೀರ್ ಸಿಂಗ್; ಇಲ್ಲಿದೆ ವೈರಲ್ ವಿಡಿಯೋ

ಈ ಮ್ಯಾಚ್​ನಲ್ಲಿ ಟ್ರೋಫಿಯನ್ನು ಅನಾವರಣ ಮಾಡಿದ್ದು ದೀಪಿಕಾ ಪಡುಕೋಣೆ. ರಣವೀರ್ ಸಿಂಗ್ ಕೂಡ ಸ್ಟೇಡಿಯಂನಲ್ಲೇ ಇದ್ದರು. ಈ ಸಂದರ್ಭದಲ್ಲಿ ರವಿ ಶಾಸ್ತ್ರಿ ಹಾಗೂ ರಣವೀರ್ ಪರಸ್ಪರ ಭೇಟಿ ಆಗಿದ್ದಾರೆ.  

ಫಿಫಾ ವಿಶ್ವಕಪ್​ ಫೈನಲ್​ ವೇಳೆ ರವಿ ಶಾಸ್ತ್ರಿಗೆ ಕಿಸ್ ಮಾಡಿದ ರಣವೀರ್ ಸಿಂಗ್; ಇಲ್ಲಿದೆ ವೈರಲ್ ವಿಡಿಯೋ
ರಣವೀರ್​-ರವಿ ಶಾಸ್ತ್ರಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Dec 19, 2022 | 1:51 PM

ರಣವೀರ್ ಸಿಂಗ್ (Ranvir Singh) ಅವರು ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಯಶಸ್ಸು ಕಂಡಿದ್ದಾರೆ. ಅವರು ಸದಾ ಕ್ರೇಜಿ ಆಗಿ ನಡೆದುಕೊಳ್ಳುತ್ತಾರೆ. ಈ ಕಾರಣಕ್ಕೂ ಅವರು ಆಗಾಗ ಸುದ್ದಿ ಆಗುತ್ತಾರೆ. ಈಗ ರಣವೀರ್ ಸಿಂಗ್ ಅವರ ಜತೆ ಕಳೆದ ಕ್ಷಣದ ವಿಡಿಯೋ ಅನ್ನು ಟೀಂ ಇಂಡಿಯಾ ಮಾಜಿ ಕೋಚ್ ರವಿ ಶಾಸ್ತ್ರಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗಿದೆ. ಖುಷಿಯಿಂದ ರವಿ ಶಾಸ್ತ್ರಿ ಕೆನ್ನೆಗೆ ರಣವೀರ್ ಕಿಸ್ ಮಾಡಿದ್ದಾರೆ.

ಕತಾರ್‌ನ ಲುಸೇಲ್ ಕ್ರೀಡಾಂಗಣದಲ್ಲಿ ಫಿಫಾ ವಿಶ್ವಕಪ್ 2022ನ ಅಂತಿಮ ಪಂದ್ಯ ನಡೆಯಿತು. ಎರಡೂ ತಂಡಗಳು ತಲಾ ಮೂರು ಗೋಲ್ ಬಾರಿಸಿದರಿಂದ ಪೆನಾಲ್ಟಿ ಶೂಟ್-ಔಟ್‌ ನಡೆಸಲಾಯಿತು. ಈ ವೇಳೆ ಫ್ರಾನ್ಸ್ ತಂಡವನ್ನು 4-2 ಗೋಲುಗಳ ಅಂತರದಲ್ಲಿ ಅರ್ಜೆಂಟೀನಾ ಸೋಲಿಸಿದೆ. ಈ ಮೂಲಕ ಅರ್ಜೆಂಟೀನಾ ಮೂರನೇ ಬಾರಿಗೆ ವಿಶ್ವಕಪ್ ಎತ್ತಿಹಿಡಿದಿದೆ. ಈ ಮ್ಯಾಚ್​ನಲ್ಲಿ ಟ್ರೋಫಿಯನ್ನು ಅನಾವರಣ ಮಾಡಿದ್ದು ದೀಪಿಕಾ ಪಡುಕೋಣೆ. ರಣವೀರ್ ಸಿಂಗ್ ಕೂಡ ಸ್ಟೇಡಿಯಂನಲ್ಲೇ ಇದ್ದರು. ಈ ಸಂದರ್ಭದಲ್ಲಿ ರವಿ ಶಾಸ್ತ್ರಿ ಹಾಗೂ ರಣವೀರ್ ಪರಸ್ಪರ ಭೇಟಿ ಆಗಿದ್ದಾರೆ.

ಇದನ್ನೂ ಓದಿ
Image
Ranveer Singh: ಮತ್ತೆ ಬೆತ್ತಲಾಗುವಂತೆ ರಣವೀರ್​ ಸಿಂಗ್​ಗೆ ಬೇಡಿಕೆ; ಈ ಬಾರಿ ಆಹ್ವಾನ ಬಂದಿರೋದು ಪ್ರಾಣಿಗಳಿಗೋಸ್ಕರ
Image
Ranveer Singh: ಬೆತ್ತಲೆ ಫೋಟೋ ಹಂಚಿಕೊಂಡ ರಣವೀರ್​ ಸಿಂಗ್​ ವಿರುದ್ಧ ಕೇಸ್​ ದಾಖಲಿಸಿದ ಮುಂಬೈ ಪೊಲೀಸರು
Image
Alia Bhatt: ‘ರಣವೀರ್​ ಸಿಂಗ್​ ಜತೆ ಏನು ಬೇಕಾದ್ರೂ ಮಾತಾಡ್ತೀನಿ’; ಮದುವೆ ಬಳಿಕ ಆಲಿಯಾ ಭಟ್​ ಅಚ್ಚರಿಯ ಹೇಳಿಕೆ
Image
Ranveer Singh: ರಣವೀರ್​ ಸಿಂಗ್​ ಒಟ್ಟು ಆಸ್ತಿ ಎಷ್ಟು? 2 ಸಿನಿಮಾ ಸೋತ ಮಾತ್ರಕ್ಕೆ ಕರಗಿಲ್ಲ ಸ್ಟಾರ್​ ನಟನ ನೂರಾರು ಕೋಟಿ ಸಂಪತ್ತು

ರಣವೀರ್ ಸಿಂಗ್ ಅವರು ಫಿಫಾ ವರ್ಲ್ಡ್​​​ಕಪ್ ನೋಡುವಾಗ ಸಖತ್ ಎಗ್ಸೈಟ್ ಆಗಿದ್ದರು. ಇದು ಅವರ ಮುಖದಲ್ಲಿ ಎದ್ದು ಕಾಣುತ್ತಿತ್ತು. ಈ ವಿಡಿಯೋವನ್ನು ರವಿ ಶಾಸ್ತ್ರಿ ಅವರು ಹಂಚಿಕೊಂಡಿದ್ದಾರೆ. ಈ ವಿಡಿಯೋಗೆ ರಣವೀರ್ ಸಿಂಗ್ ಕಮೆಂಟ್ ಮಾಡಿದ್ದಾರೆ. ‘ರವಿ ಅವರೇ ಎಂತಹ ಕ್ರೇಜಿ ಅನುಭವ. ಇದನ್ನು ಮರೆಯಲು ಸಾಧ್ಯವಿಲ್ಲ’ ಎಂದು ಕಮೆಂಟ್ ಮಾಡಿದ್ದಾರೆ.

ರಣವೀರ್ ಸಿಂಗ್ ಅವರನ್ನು ಫಿಫಾ ವರ್ಲ್ಡ್ ​ಕಪ್​ನಲ್ಲಿ ನೋಡಿ ಎಲ್ಲರೂ ಅಚ್ಚರಿಗೊಂಡಿದ್ದಾರೆ. ಅವರು ಶನಿವಾರ (ಡಿಸೆಂಬರ್ 17) ನಡೆದ ಪ್ರೋ ಕಬ್ಬಡ್ಡಿ ಫೈನಲ್ ಆಟದಲ್ಲಿ ಭಾಗಿ ಆಗಿದ್ದರು. ಇದರ ಬೆನ್ನಲ್ಲೇ ಅವರು ಫಿಫಾ ವರ್ಲ್ಡ್ ಕಪ್​ನಲ್ಲಿ ಭಾಗಿ ಆಗಿರುವ ವಿಚಾರ ಕೆಲವರಿಗೆ ಸಾಕಷ್ಟು ಅಚ್ಚರಿ ಮೂಡಿಸಿದೆ. ‘ಹಿಂದಿನ ದಿನ ಪಿಕೆಎಲ್​ ಫೈನಲ್​ ಈಗ ವಿಶ್ವ ಕಪ್​ ಫೈನಲ್​. ನೀವು ಗ್ರೇಟ್​’ ಎಂದು ಕೆಲವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ವಿಚಿತ್ರ ವೇಷದಲ್ಲಿ ವಿದೇಶಿ ಸೆಲೆಬ್ರಿಟಿಗಳನ್ನು ಭೇಟಿ ಮಾಡಿದ ರಣವೀರ್ ಸಿಂಗ್; ವೈರಲ್ ಆಯ್ತು ಫೋಟೋ

ಸಿನಿಮಾ ವಿಚಾರಕ್ಕೆ ಬರೋದಾದರೆ ರಣವೀರ್ ಸಿಂಗ್ ಅವರು ‘ಸರ್ಕಸ್​’ ಚಿತ್ರವನ್ನು ಪ್ರಮೋಟ್ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಡಬಲ್ ಶೇಡ್​ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 1960ರಲ್ಲಿ ಸಿನಿಮಾದ ಕಥೆ ಸಾಗಲಿದೆ. ವರುಣ್ ಶರ್ಮಾ ಕೂಡ ಸಿನಿಮಾದಲ್ಲಿ ಡ್ಯುಯಲ್ ರೋಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:49 pm, Mon, 19 December 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ