AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣವೀರ್​ ಸಿಂಗ್​ಗೆ ಆರ್ಥಿಕ ಸಂಕಷ್ಟ? ಒಟ್ಟೊಟ್ಟಿಗೆ ಎರಡು ಫ್ಲಾಟ್ ಮಾರಿದ ನಟ

ರಣವೀರ್ ಸಿಂಗ್ ಅಭಿನಯದ ‘ಸರ್ಕಸ್’ ಸಿನಿಮಾ 2022ರಲ್ಲಿ ಬಿಡುಗಡೆಯಾಗಿತ್ತು. ಆದರೆ, ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ. ‘ಸರ್ಕಸ್’ ಹೀನಾಯವಾಗಿ ಸೋತಿತು. ನಿರ್ಮಾಪಕರು ನಷ್ಟ ಅನುಭವಿಸಿದರು. ರಣವೀರ್ ಸಿಂಗ್ ವೃತ್ತಿ ಜೀವನಕ್ಕೆ ಇದು ದೊಡ್ಡ ಹೊಡೆತ ನೀಡಿದೆ.

ರಣವೀರ್​ ಸಿಂಗ್​ಗೆ ಆರ್ಥಿಕ ಸಂಕಷ್ಟ? ಒಟ್ಟೊಟ್ಟಿಗೆ ಎರಡು ಫ್ಲಾಟ್ ಮಾರಿದ ನಟ
ರಣವೀರ್ ಸಿಂಗ್
TV9 Web
| Edited By: |

Updated on: Nov 12, 2023 | 3:15 PM

Share

ನಟ ರಣವೀರ್ ಸಿಂಗ್ ಸದಾ ಸುದ್ದಿಯಲ್ಲಿದ್ದಾರೆ. ರಣವೀರ್ ಸಿಂಗ್ (Ranveer Singh) ಅವರ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿಲ್ಲ. ಈ ಬಗ್ಗೆ ಅವರಿಗೆ ಬೇಸರ ಇದೆ. ಸದ್ಯ ‘ಡಾನ್ 3’ ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ. ರಣವೀರ್ ಸಿಂಗ್ ಆರ್ಥಿಕ ಸಂಕಷ್ಟದಲ್ಲಿದ್ದಾರೆಯೇ ಎಂಬ ಬಗ್ಗೆ ಚರ್ಚೆ ಜೋರಾಗಿದೆ. ಇದು ಮಾತ್ರವಲ್ಲದೆ ಇತ್ತೀಚೆಗೆ ರಣವೀರ್ ಸಿಂಗ್ ಬಹಳ ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ರಣವೀರ್ ಸಿಂಗ್ ಮುಂಬೈನಲ್ಲಿರುವ ಎರಡು ಅಪಾರ್ಟ್‌ಮೆಂಟ್‌ಗಳನ್ನು ಮಾರಾಟ ಮಾಡಿದ್ದಾರೆ.

ರಣವೀರ್ ಸಿಂಗ್ ಅಭಿನಯದ ‘ಸರ್ಕಸ್’ ಸಿನಿಮಾ 2022ರಲ್ಲಿ ಬಿಡುಗಡೆಯಾಗಿತ್ತು. ಆದರೆ, ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ. ‘ಸರ್ಕಸ್’ ಹೀನಾಯವಾಗಿ ಸೋತಿತು. ನಿರ್ಮಾಪಕರು ನಷ್ಟ ಅನುಭವಿಸಿದರು. ರಣವೀರ್ ಸಿಂಗ್ ವೃತ್ತಿ ಜೀವನಕ್ಕೆ ಇದು ದೊಡ್ಡ ಹೊಡೆತ ನೀಡಿದೆ. ರಣವೀರ್ ಅವರಿಗೆ ಹಣದ ತೊಂದರೆ ಎದುರಾಗಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ರಣವೀರ್ ಸಿಂಗ್ ಮುಂಬೈನ ಗೋರೆಗಾಂವ್ ಪ್ರದೇಶದಲ್ಲಿರುವ ಅಪಾರ್ಟ್​​ಮೆಂಟ್​ನಲ್ಲಿರವ ಎರಡು ಫ್ಲಾಟ್​​ಗಳನ್ನು ಮಾರಾಟ ಮಾಡಿದ್ದಾರೆ. 2014ರಲ್ಲಿ ರಣವೀರ್ ಸಿಂಗ್ ಅಪಾರ್ಟ್‌ಮೆಂಟ್ ಖರೀದಿಸಿದ್ದರು. ಈ ಫ್ಲಾಟ್​ನ ರಣವೀರ್ ಸಿಂಗ್ 15.25 ಕೋಟಿ ರೂಪಾಯಿಗೆ ಮಾರಾಟ ಮಾಡಿದ್ದಾರೆ ಎನ್ನಲಾಗಿದೆ. ಈ ಫ್ಲಾಟ್ 1,324 ಚದರ ಅಡಿ ಇತ್ತು. ಈ ಅಪಾರ್ಟ್ಮೆಂಟ್ ಒಟ್ಟು ಆರು ಪಾರ್ಕಿಂಗ್ ಸ್ಥಳಗಳನ್ನು ಹೊಂದಿದೆ.

ರಣವೀರ್ ಸಿಂಗ್ ಈ ಅಪಾರ್ಟ್‌ಮೆಂಟ್ ಅನ್ನು ಮಾರಾಟ ಮಾಡಿದ್ದರಿಂದ ಈಗ ನಾನಾ ರೀತಿಯ ಚರ್ಚೆಗಳು ನಡೆಯುತ್ತಿವೆ. ರಣವೀರ್ ಸಿಂಗ್ ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ ಎಂದೂ ಹಲವರು ಹೇಳಿದ್ದಾರೆ. ಆದರೆ, ರಣವೀರ್ ಸಿಂಗ್ ಅಪಾರ್ಟ್‌ಮೆಂಟ್ ಮಾರಾಟ ಮಾಡಲು ಕಾರಣವನ್ನು ಇನ್ನೂ ಬಹಿರಂಗಪಡಿಸಿಲ್ಲ.

ಇದನ್ನೂ ಓದಿ: ಟ್ರಯಾಂಗಲ್ ಲವ್ ಸ್ಟೋರಿ ಸಿನಿಮಾದಲ್ಲಿ ರಣಬೀರ್ ಕಪೂರ್​, ದೀಪಿಕಾ ಪಡುಕೋಣೆ, ರಣವೀರ್ ಸಿಂಗ್​?

ಕೆಲವೇ ದಿನಗಳ ಹಿಂದೆ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಶಾರುಖ್ ಖಾನ್ ಅವರ ಮನೆಯ ಸಮೀಪವೇ ಐಷಾರಾಮಿ ಅಪಾರ್ಟ್ಮೆಂಟ್ ಖರೀದಿಸಿದ್ದಾರೆ. ಈ ಕಾರಣಕ್ಕೆ ಅವರು ಹಳೆಯ ಫ್ಲಾಟ್​ನ ಮಾರಿದರೇ ಎನ್ನುವ ಪ್ರಶ್ನೆ ಮೂಡಿದೆ. ಇತ್ತೀಚೆಗೆ ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ದೀಪಿಕಾ ಹಾಗೂ ರಣವೀರ್ ಚರ್ಚೆಗೆ ಒಳಗಾಗಿದ್ದರು. ದೀಪಿಕಾ ಹಳೆಯ ರಿಲೇಶನ್​ಶಿಪ್ ಬಗ್ಗೆ ಮಾತನಾಡಿ ಸುದ್ದಿ ಆಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಬಿಗ್ ಬಾಸ್ ಮನೆಯಲ್ಲಿ ಮೊಟ್ಟೆ ಕಳ್ಳತನ: ಗಿಲ್ಲಿಯನ್ನೇ ಯಾಮಾರಿಸಿದ ಕಳ್ಳ ಯಾರು
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!