ನಟ ರಣವೀರ್ ಸಿಂಗ್ ಸದಾ ಸುದ್ದಿಯಲ್ಲಿದ್ದಾರೆ. ರಣವೀರ್ ಸಿಂಗ್ (Ranveer Singh) ಅವರ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿಲ್ಲ. ಈ ಬಗ್ಗೆ ಅವರಿಗೆ ಬೇಸರ ಇದೆ. ಸದ್ಯ ‘ಡಾನ್ 3’ ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಇದ್ದಾರೆ. ರಣವೀರ್ ಸಿಂಗ್ ಆರ್ಥಿಕ ಸಂಕಷ್ಟದಲ್ಲಿದ್ದಾರೆಯೇ ಎಂಬ ಬಗ್ಗೆ ಚರ್ಚೆ ಜೋರಾಗಿದೆ. ಇದು ಮಾತ್ರವಲ್ಲದೆ ಇತ್ತೀಚೆಗೆ ರಣವೀರ್ ಸಿಂಗ್ ಬಹಳ ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ರಣವೀರ್ ಸಿಂಗ್ ಮುಂಬೈನಲ್ಲಿರುವ ಎರಡು ಅಪಾರ್ಟ್‌ಮೆಂಟ್‌ಗಳನ್ನು ಮಾರಾಟ ಮಾಡಿದ್ದಾರೆ.
ರಣವೀರ್ ಸಿಂಗ್ ಅಭಿನಯದ ‘ಸರ್ಕಸ್’ ಸಿನಿಮಾ 2022ರಲ್ಲಿ ಬಿಡುಗಡೆಯಾಗಿತ್ತು. ಆದರೆ, ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ. ‘ಸರ್ಕಸ್’ ಹೀನಾಯವಾಗಿ ಸೋತಿತು. ನಿರ್ಮಾಪಕರು ನಷ್ಟ ಅನುಭವಿಸಿದರು. ರಣವೀರ್ ಸಿಂಗ್ ವೃತ್ತಿ ಜೀವನಕ್ಕೆ ಇದು ದೊಡ್ಡ ಹೊಡೆತ ನೀಡಿದೆ. ರಣವೀರ್ ಅವರಿಗೆ ಹಣದ ತೊಂದರೆ ಎದುರಾಗಿದೆಯೇ ಎನ್ನುವ ಪ್ರಶ್ನೆ ಮೂಡಿದೆ.
ರಣವೀರ್ ಸಿಂಗ್ ಮುಂಬೈನ ಗೋರೆಗಾಂವ್ ಪ್ರದೇಶದಲ್ಲಿರುವ ಅಪಾರ್ಟ್ಮೆಂಟ್ನಲ್ಲಿರವ ಎರಡು ಫ್ಲಾಟ್ಗಳನ್ನು ಮಾರಾಟ ಮಾಡಿದ್ದಾರೆ. 2014ರಲ್ಲಿ ರಣವೀರ್ ಸಿಂಗ್ ಅಪಾರ್ಟ್‌ಮೆಂಟ್ ಖರೀದಿಸಿದ್ದರು. ಈ ಫ್ಲಾಟ್ನ ರಣವೀರ್ ಸಿಂಗ್ 15.25 ಕೋಟಿ ರೂಪಾಯಿಗೆ ಮಾರಾಟ ಮಾಡಿದ್ದಾರೆ ಎನ್ನಲಾಗಿದೆ. ಈ ಫ್ಲಾಟ್ 1,324 ಚದರ ಅಡಿ ಇತ್ತು. ಈ ಅಪಾರ್ಟ್ಮೆಂಟ್ ಒಟ್ಟು ಆರು ಪಾರ್ಕಿಂಗ್ ಸ್ಥಳಗಳನ್ನು ಹೊಂದಿದೆ.
ರಣವೀರ್ ಸಿಂಗ್ ಈ ಅಪಾರ್ಟ್‌ಮೆಂಟ್ ಅನ್ನು ಮಾರಾಟ ಮಾಡಿದ್ದರಿಂದ ಈಗ ನಾನಾ ರೀತಿಯ ಚರ್ಚೆಗಳು ನಡೆಯುತ್ತಿವೆ. ರಣವೀರ್ ಸಿಂಗ್ ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ ಎಂದೂ ಹಲವರು ಹೇಳಿದ್ದಾರೆ. ಆದರೆ, ರಣವೀರ್ ಸಿಂಗ್ ಅಪಾರ್ಟ್‌ಮೆಂಟ್ ಮಾರಾಟ ಮಾಡಲು ಕಾರಣವನ್ನು ಇನ್ನೂ ಬಹಿರಂಗಪಡಿಸಿಲ್ಲ.
ಇದನ್ನೂ ಓದಿ: ಟ್ರಯಾಂಗಲ್ ಲವ್ ಸ್ಟೋರಿ ಸಿನಿಮಾದಲ್ಲಿ ರಣಬೀರ್ ಕಪೂರ್, ದೀಪಿಕಾ ಪಡುಕೋಣೆ, ರಣವೀರ್ ಸಿಂಗ್?
ಕೆಲವೇ ದಿನಗಳ ಹಿಂದೆ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಶಾರುಖ್ ಖಾನ್ ಅವರ ಮನೆಯ ಸಮೀಪವೇ ಐಷಾರಾಮಿ ಅಪಾರ್ಟ್ಮೆಂಟ್ ಖರೀದಿಸಿದ್ದಾರೆ. ಈ ಕಾರಣಕ್ಕೆ ಅವರು ಹಳೆಯ ಫ್ಲಾಟ್ನ ಮಾರಿದರೇ ಎನ್ನುವ ಪ್ರಶ್ನೆ ಮೂಡಿದೆ. ಇತ್ತೀಚೆಗೆ ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಮಾತನಾಡಿದ್ದ ದೀಪಿಕಾ ಹಾಗೂ ರಣವೀರ್ ಚರ್ಚೆಗೆ ಒಳಗಾಗಿದ್ದರು. ದೀಪಿಕಾ ಹಳೆಯ ರಿಲೇಶನ್ಶಿಪ್ ಬಗ್ಗೆ ಮಾತನಾಡಿ ಸುದ್ದಿ ಆಗಿದ್ದರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ