AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸ್ಟೇಜ್​ ಮೇಲೆ ನಿಲ್ಲಿಸಿ, ನನ್ನ ಕೈಗೆ ಮೈಕ್ ಕೊಡೋದು ನಿಜಕ್ಕೂ ಡೇಂಜರಸ್’; ರಣವೀರ್ ಸಿಂಗ್

ರಣವೀರ್ ಸಿಂಗ್ ಅವರ ಹಳೆಯ ಹೇಳಿಕೆ ವೈರಲ್ ಆಗಿದೆ. ‘ವೇದಿಕೆ ಮೇಲೆ ಮೈಕ್ ನನ್ನ ಕೈಗೆ ಕೊಡೋದು ನಿಜಕ್ಕೂ ಡೇಂಜರಸ್’ ಈಗ ಸತ್ಯವಾಗಿದೆ. ಗೋವಾ ಫಿಲ್ಮ್ ಫೆಸ್ಟಿವಲ್‌ನಲ್ಲಿ ದೈವಗಳ ಬಗ್ಗೆ ಕೀಳಾಗಿ ಮಾತನಾಡಿ ವಿವಾದಕ್ಕೆ ಸಿಲುಕಿದ ಅವರ ವರ್ತನೆ ವ್ಯಾಪಕ ಟೀಕೆಗೆ ಗುರಿಯಾಗಿದೆ. ಆ ಹಳೆಯ ವಿಡಿಯೋ ಈಗ ವೈರಲ್ ಆಗಿದ್ದು, ಅವರ ಮೇಲಿನ ಕೇಸ್ ಇನ್ನೂ ಜಾರಿಯಲ್ಲಿದೆ.

‘ಸ್ಟೇಜ್​ ಮೇಲೆ ನಿಲ್ಲಿಸಿ, ನನ್ನ ಕೈಗೆ ಮೈಕ್ ಕೊಡೋದು ನಿಜಕ್ಕೂ ಡೇಂಜರಸ್’; ರಣವೀರ್ ಸಿಂಗ್
ರಣವೀರ್ ಸಿಂಗ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 26, 2026 | 7:52 AM

Share

ರಣವೀರ್ ಸಿಂಗ್ ಅವರು (Ranveer Singh) ಇತ್ತೀಚೆಗೆ ಸುದ್ದಿ ಆಗಿದ್ದಾರೆ. ಅದಕ್ಕೆ ಕಾರಣ ಆಗಿರೋದು ಅವರು ನಡೆದುಕೊಂಡ ರೀತಿ. ರಣವೀರ್ ಸಿಂಗ್ ಅವರು ಗೋವಾ ಫಿಲ್ಮ್ ಫೆಸ್ಟಿವಲ್​​ನಲ್ಲಿ ಬಾಯಿಗೆ ಬಂದಂತೆ ಮಾತನಾಡಿದ್ದು, ನಡೆದುಕೊಂಡಿದ್ದು ಗೊತ್ತೇ ಇದೆ. ಈ ವಿಷಯ ಚರ್ಚೆ ಹುಟ್ಟುಹಾಕಿತ್ತು. ದೈವ ಅನುಕರಿಸಿ ಟೀಕೆಗೆ ಒಳಗಾದರು. ಈ ವಿಡಿಯೋ ಈಗಲೂ ವೈರಲ್ ಆಗುತ್ತದೆ ಮತ್ತು ಪ್ರಕರಣ ಇನ್ನೂ ಜಾರಿಯಲ್ಲಿದೆ. ಹೀಗಿರುವಾಗಲೇ ಅವರ ಹಳೆಯ ವಿಡಿಯೋ ವೈರಲ್ ಆಗಿದ್ದು, ಟೀಕೆ ಎದುರಿಸಿದ್ದಾರೆ.

ರಣವೀರ್ ಸಿಂಗ್ ಅವರು ಈ ಮೊದಲು ವೇದಿಕೆ ಮೇಲೆ ಮಾತನಾಡಿದ್ದರು. ಈ ವೇದಿಕೆ ಮೇಲೆ ಮಾತನಾಡುವಾಗ ಅವರು ಒಂದು ವಿಷಯವನ್ನು ಹೇಳಿದ್ದರು. ಅನಿರುದ್ಧ್ ಅವರು ಅದ್ಭುತ ಮ್ಯೂಸಿಕ್ ನೀಡುತ್ತಾರೆ. ಈ ವಿಷಯವಾಗಿ ಮಾತನಾಡುವಾಗ, ‘ನನ್ನ ಸಿನಿಮಾಗೆ ಅನಿರುದ್ಧ್ ಸಂಗೀತ ಸಂಯೋಜನೆ ಮಾಡೋದು ಯಾವಾಗ’ ಎಂದು ಕೇಳಿದ್ದರು. ಚೆನ್ನೈಗೆ ಬರುತ್ತೇನೆ ರ್ಯಾಪ್ ಸಾಂಗ್ ಮಾಡೋಣ ಎಂದು ಕೂಡ ಹೇಳಿದ್ದರು.

ಆ ಮೇಲೆ ಅವರು ನಿರಂತರವಾಗಿ ಮಾತನಾಡಲು ಆರಂಭಿಸಿದರು. ಆ ಬಳಿಕ ಅವರಿಗೆ ಏನನ್ನಿಸಿತೋ ಏನೋ, ‘ವೇದಿಕೆ ಮೇಲೆ ನಿಲ್ಲಿಸಿ, ನನ್ನ ಕೈಗೆ ಮೈಕ್ ಕೊಡೋದು ಅತ್ಯಂತ ಡೇಂಜರಸ್ ಕೆಲಸ’ ಎಂದು ರಣವೀರ್ ಸಿಂಗ್ ಈ ಮೊದಲೇ ಹೇಳಿದ್ದರು. ಅದು ನಿಜವಾಗಿ ಹೋಗಿದೆ ಎಂದೇ ಹೇಳಬಹುದು.

ಇದನ್ನೂ ಓದಿ: ಚಾವುಂಡಿ ದೇವಾಲಯದಲ್ಲಿ ರಣವೀರ್ ಸಿಂಗ್ ಕ್ಷಮೆ ಕೇಳಬೇಕು: ದೂರುದಾರರ ಒತ್ತಾಯ

ಗೋವಾ ಫಿಲ್ಮ್​ ಫೆಸ್ಟಿವಲ್​​​ನಲ್ಲಿ ರಣವೀರ್ ಸಿಂಗ್ ಅವರು ಮಾತನಾಡುವಾಗ ಅವರೇ ತೊಂದರೆ ಮಾಡಿಕೊಂಡಿದ್ದರು. ದೈವದ ಬಗ್ಗೆ ಕೀಳಾಗಿ ಮಾತನಾಡಿ ಟೀಕೆ ಎದುರಿಸಿದ್ದರು. ಇದು ನಿರಂತರವಾಗಿ ನಡೆದೇ ಇದೆ. ಈ ವಿಷಯದಲ್ಲಿ ಅವರು ಸಾಕಷ್ಟು ಟೀಕೆ ಎದುರಿಸಬೇಕಾಯಿತು. ರಣವೀರ್ ಸಿಂಗ್ ಅವರ ಮೇಲೆ ಈಗಲೂ ಕೇಸ್ ನಡೆಯುತ್ತಿದೆ. ಈ ಕೇಸ್​​ನಿಂದ ಅವರು ಯಾವಾಗ ಮುಕ್ತಿ ಪಡೆಯುತ್ತಾರೋ ಗೊತ್ತಿಲ್ಲ. ಅವರ ನಟನೆಯ ‘ಧುರಂದರ್ 2’ ಸಿನಿಮಾ ಸಾವಿರ ಕೋಟಿ ರೂಪಾಯಿ ಗಳಿಕೆ ಮಾಡಿ ದೊಡ್ಡ ಯಶಸ್ಸು ಕಂಡಿದೆ. ಈ ಚಿತ್ರ ಎಷ್ಟು ಗಳಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದ ಬಳಿ ಬೃಹತ್ ಮರ ಧರೆಗುರುಳಿ ಇಬ್ಬರಿಗೆ ಗಾಯ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ